AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಭಾರತ ತಂಡವನ್ನು ಬಗ್ಗು ಬಡಿದ ಆಸ್ಟ್ರೇಲಿಯಾ

India vs Australia: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 184 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಇದಕ್ಕೂ ಮುನ್ನ ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ 295 ರನ್​​ಗಳ ಜಯ ಸಾಧಿಸಿತ್ತು. ಇದಾದ ಬಳಿಕ ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್​ಗಳ ವಿಜಯ ದಾಖಲಿಸಿತು. ಇನ್ನು ಮೂರನೇ ಪಂದ್ಯ ಡ್ರಾನಲ್ಲಿ ಕೊನೆಗೊಂಡರೆ, ಇದೀಗ ನಾಲ್ಕನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿದೆ.

IND vs AUS: ಭಾರತ ತಂಡವನ್ನು ಬಗ್ಗು ಬಡಿದ ಆಸ್ಟ್ರೇಲಿಯಾ
Ind Vs Aus
ಝಾಹಿರ್ ಯೂಸುಫ್
|

Updated on:Dec 30, 2024 | 12:00 PM

Share

ಮೆಲ್ಬೋರ್ನ್​ನ ಎಂಸಿಜಿ ಮೈದಾನದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಈ ಜಯದೊಂದಿಗೆ 5 ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ 2-1 ಅಂತರದಿಂದ ಮುನ್ನಡೆ ಸಾಧಿಸಿದೆ. ಇದಕ್ಕೂ ಮುನ್ನ ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ಪರ ಸ್ಯಾಮ್​ ಕೊನ್​ಸ್ಟಾಸ್ (60), ಉಸ್ಮಾನ್ ಖ್ವಾಜಾ (57), ಮಾರ್ನಸ್ ಲಾಬುಶೇನ್ (72) ಅರ್ಧಶತಕ ಬಾರಿಸಿದರು. ಇನ್ನು 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸ್ಟೀವ್ ಸ್ಮಿತ್ (140) ಭರ್ಜರಿ ಶತಕ ಸಿಡಿಸಿದರು. ಈ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್​ನಲ್ಲಿ 474 ರನ್ ಕಲೆಹಾಕಿತು. ಟೀಮ್ ಇಂಡಿಯಾ ಪರ ಬುಮ್ರಾ 4 ವಿಕೆಟ್ ಪಡೆದರೆ, ಜಡೇಜಾ 3 ವಿಕೆಟ್ ಕಬಳಿಸಿದರು.

ಇದರ ಬೆನ್ನಲ್ಲೇ ಮೊದಲ ಇನಿಂಗ್ಸ್ ಶುರು ಮಾಡಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಇದಾಗ್ಯೂ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿತೀಶ್ ಕುಮಾರ್ ರೆಡ್ಡಿ ಹಾಗೂ ವಾಷಿಂಗ್ಟನ್ ಸುಂದರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಮೂಲಕ ಶತಕದ  ಜೊತೆಯಾಟದೊಂದಿಗೆ ತಂಡದ ಮೊತ್ತವನ್ನು 300ರ ಗಡಿದಾಟಿಸಿದರು. ಅಂತಿಮವಾಗಿ 114 ರನ್​ ಬಾರಿಸಿ ಮಿಂಚಿದ ನಿತೀಶ್ ಕುಮಾರ್ ರೆಡ್ಡಿ ಔಟಾಗುವುದರೊಂದಿಗೆ 369 ರನ್​ಗಳಿಗೆ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್ ಅಂತ್ಯಗೊಳಿಸಿತು. ಆಸ್ಟ್ರೇಲಿಯಾ ಪರ ಕಮಿನ್ಸ್, ಬೋಲ್ಯಾಂಡ್ ಹಾಗೂ ನಾಥನ್ ಲಿಯಾನ್ ತಲಾ 3 ವಿಕೆಟ್ ಪಡೆದರು.

ದ್ವಿತೀಯ ಇನಿಂಗ್ಸ್​:

ಪ್ರಥಮ ಇನಿಂಗ್ಸ್​ನಲ್ಲಿ 105 ರನ್​​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡದ ಪರ ಮಾರ್ನಸ್ ಲಾಬುಶೇನ್ (70) ಅರ್ಧಶತಕ ಬಾರಿಸಿದರು. ಮತ್ತೊಂದೆಡೆ ಕರಾರುವಾಕ್ ದಾಳಿ ಸಂಘಟಿಸಿದ ಜಸ್​ಪ್ರೀತ್ ಬುಮ್ರಾ 5 ವಿಕೆಟ್ ಕಬಳಿಸಿದರು. ಬುಮ್ರಾಗೆ ಉತ್ತಮ ಸಾಥ್ ನೀಡಿದ ಮೊಹಮ್ಮದ್ ಸಿರಾಜ್ 3 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಪರಿಣಾಮ ಆಸ್ಟ್ರೇಲಿಯಾ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 234 ರನ್​ಗಳಿಗೆ ಆಲೌಟ್ ಆಯಿತು.

ಮೊದಲ ಇನಿಂಗ್ಸ್​ನಲ್ಲಿನ 105 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ 84 ರನ್​ಗಳಿಸಿದ್ದು ಬಿಟ್ಟರೆ, ಉಳಿದ ಬ್ಯಾಟರ್​​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಭಾರತ ತಂಡವು ದ್ವಿತೀಯ ಇನೀಂಗ್ಸ್​ನಲ್ಲಿ ಕೇವಲ 155 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಆಸ್ಟ್ರೇಲಿಯಾ ತಂಡ 184 ರನ್​ಗಳ ಅಮೋಘ ಗೆಲುವು ಸಾಧಿಸಿ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಸಾಧಿಸಿದೆ.

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಉಸ್ಮಾನ್ ಖ್ವಾಜಾ , ಸ್ಯಾಮ್ ಕೊನ್​ಸ್ಟಾಸ್ , ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್ , ಟ್ರಾವಿಸ್ ಹೆಡ್ , ಮಿಚೆಲ್ ಮಾರ್ಷ್ , ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) , ಪ್ಯಾಟ್ ಕಮ್ಮಿನ್ಸ್ (ನಾಯಕ) , ಮಿಚೆಲ್ ಸ್ಟಾರ್ಕ್ , ನಾಥನ್ ಲಿಯಾನ್ , ಸ್ಕಾಟ್ ಬೋಲ್ಯಾಂಡ್.

ಇದನ್ನೂ ಓದಿ: ಛೇ ಇದೆಂತಾ ನೀಚತನ… ವಿರಾಟ್ ಕೊಹ್ಲಿ ತಂದೆ ವಿಷಯದಲ್ಲಿ ಕ್ಷುದ್ರತೆ ಮೆರೆದ ಆಸ್ಟ್ರೇಲಿಯಾ ಪತ್ರಿಕೆ..!

ಭಾರತ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್ , ಕೆಎಲ್ ರಾಹುಲ್ , ರೋಹಿತ್ ಶರ್ಮಾ (ನಾಯಕ) , ವಿರಾಟ್ ಕೊಹ್ಲಿ , ರಿಷಬ್ ಪಂತ್ (ವಿಕೆಟ್ ಕೀಪರ್) , ರವೀಂದ್ರ ಜಡೇಜಾ , ನಿತೀಶ್ ಕುಮಾರ್ ರೆಡ್ಡಿ , ವಾಷಿಂಗ್ಟನ್ ಸುಂದರ್ , ಜಸ್​ಪ್ರೀತ್ ಬುಮ್ರಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್.

Published On - 11:54 am, Mon, 30 December 24

Follow Us
ಅಶ್ಲೀಲ ಕಮೆಂಟ್ ಮಾಡಿದವರಿಗೆ 7 ವರ್ಷ ಜೈಲು ಶಿಕ್ಷೆ ಸಾಧ್ಯತೆ: ಶಾಕಿಂಗ್ ವಿಷಯ
ಅಶ್ಲೀಲ ಕಮೆಂಟ್ ಮಾಡಿದವರಿಗೆ 7 ವರ್ಷ ಜೈಲು ಶಿಕ್ಷೆ ಸಾಧ್ಯತೆ: ಶಾಕಿಂಗ್ ವಿಷಯ
ಒಳಮೀಸಲಾತಿ ಜಟಾಪಟಿ: ಸಭೆಯಲ್ಲಿ ಮಹತ್ವದ ತೀರ್ಮಾನ
ಒಳಮೀಸಲಾತಿ ಜಟಾಪಟಿ: ಸಭೆಯಲ್ಲಿ ಮಹತ್ವದ ತೀರ್ಮಾನ
ಅಶ್ಲೀಲ ಕಮೆಂಟ್ ಪ್ರಕರಣ: ರಮ್ಯಾ ಹಠ ಹಿಡಿದು ಕೇಸ್ ಹಾಕಿದ್ದಕ್ಕೆ ಇದೇ ಕಾರಣ
ಅಶ್ಲೀಲ ಕಮೆಂಟ್ ಪ್ರಕರಣ: ರಮ್ಯಾ ಹಠ ಹಿಡಿದು ಕೇಸ್ ಹಾಕಿದ್ದಕ್ಕೆ ಇದೇ ಕಾರಣ
ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ
ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ
ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!
ಚಿನ್ನದ ಸರ ಕಸಿದು ಪರಾರಿಯಾಗಲು ಯತ್ನಿಸಿದ ಕಳ್ಳ; ಮುಂದೇನಾಯಿತು ನೋಡಿ
ಚಿನ್ನದ ಸರ ಕಸಿದು ಪರಾರಿಯಾಗಲು ಯತ್ನಿಸಿದ ಕಳ್ಳ; ಮುಂದೇನಾಯಿತು ನೋಡಿ