Virat Kohli: ‘ಕೊಹ್ಲಿಗೆ ಭಾರತ ರತ್ನ ನೀಡಿ…’: ಇದು ಕ್ರಿಕೆಟ್ ಲೋಕದಿಂದಲೇ ಕೇಳಿಬರುತ್ತಿರುವ ಧ್ವನಿ, ನಿಮ್ಮ ಅಭಿಪ್ರಾಯವೇನು?
Bharat Ratna Award to Virat Kohli: ಭಾರತೀಯ ಕ್ರಿಕೆಟ್ ಅನ್ನು ಎತ್ತರಕ್ಕೆ ಕೊಂಡೊಯ್ದ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ತಂದ ಕೀರ್ತಿಗಾಗಿ ದಂತಕಥೆ ಬ್ಯಾಟ್ಸ್‌ಮನ್ ವಿರಾಟ್ ಭಾರತ ರತ್ನಕ್ಕೆ ಅರ್ಹರು ಎಂದು ರೈನಾ ಹೇಳಿದ್ದಾರೆ. ಅಂದಹಾಗೆ ಕೊಹ್ಲಿ ಇತ್ತೀಚೆಗೆ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು.

ಬೆಂಗಳೂರು (ಮೇ. 18): ಭಾರತೀಯ ಕ್ರೀಡಾ ಇತಿಹಾಸದಲ್ಲಿ, ಇಲ್ಲಿಯವರೆಗೆ ಒರ್ವ ಆಟಗಾರನಿಗೆ ಮಾತ್ರ ದೇಶದ ಅತ್ಯುನ್ನತ ನಾಗರಿಕ ಗೌರವ ಭಾರತ ರತ್ನ ಪ್ರಶಸ್ತಿ ನೀಡಲಾಗಿದೆ, ಅವರು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್. ಫೆಬ್ರವರಿ 2014 ರಲ್ಲಿ, ಆಗಿನ ಸರ್ಕಾರದ ಶಿಫಾರಸಿನ ಮೇರೆಗೆ, ಅಂದಿನ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಸಚಿನ್ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ನೀಡಿದರು. ಅಂದಿನಿಂದ ಯಾವುದೇ ಆಟಗಾರನಿಗೆ ಈ ಗೌರವ ದೊರೆತಿಲ್ಲ. ಇದೀಗ ಭಾರತದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ, ಟೀಮ್ ಇಂಡಿಯಾದ ದಂತಕಥೆ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿಗೆ (Virat Kohli) ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಿ ಗೌರವಿಸಬೇಕೆಂದು ಒತ್ತಾಯಿಸಿದ್ದಾರೆ.
ಭಾರತೀಯ ಕ್ರಿಕೆಟ್ ಅನ್ನು ಎತ್ತರಕ್ಕೆ ಕೊಂಡೊಯ್ದ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ತಂದ ಕೀರ್ತಿಗಾಗಿ ವಿರಾಟ್ ಭಾರತ ರತ್ನಕ್ಕೆ ಅರ್ಹರು ಎಂದು ರೈನಾ ಹೇಳಿದ್ದಾರೆ. ಅಂದಹಾಗೆ ಕೊಹ್ಲಿ ಇತ್ತೀಚೆಗೆ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು.
ವಿರಾಟ್ ಕೊಹ್ಲಿ ಭಾರತ ರತ್ನಕ್ಕೆ ಅರ್ಹರು
ಭಾರತ ಮತ್ತು ಭಾರತೀಯ ಕ್ರಿಕೆಟ್‌ಗಾಗಿ ವಿರಾಟ್ ಕೊಹ್ಲಿ ಅನೇಕ ಸಾಧನೆ ಮಾಡಿದ್ದಾರೆ, ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದು ಸ್ಟಾರ್ ಸ್ಪೋರ್ಟ್ಸ್ ಕಾರ್ಯಕ್ರಮದ ಸಂದರ್ಭದಲ್ಲಿ ಸುರೇಶ್ ರೈನಾ ಹೇಳಿದರು. ಭಾರತ ಸರ್ಕಾರ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದರು. ರೈನಾ ಅವರ ಈ ಹೇಳಿಕೆಯ ನಂತರ, ವಿರಾಟ್ ಕೊಹ್ಲಿ ಭಾರತೀಯ ಕ್ರೀಡಾ ಇತಿಹಾಸದಲ್ಲಿ ಭಾರತ ರತ್ನ ಪ್ರಶಸ್ತಿ ಪಡೆದ ಎರಡನೇ ಆಟಗಾರನಾಗಬಹುದೇ ಎಂಬ ಚರ್ಚೆ ಸಾಮಾಜಿಕ ಮಾಧ್ಯಮದಲ್ಲಿ ತೀವ್ರಗೊಂಡಿದೆ.
KKR: ಭಾರಿ ಮೊತ್ತದ ಹಣ ಪಡೆದು ಫ್ಲಾಪ್: ಮುಂದಿನ ಸೀಸನ್ಗೆ ಕೆಕೆಆರ್ನಿಂದ ಈ 5 ಆಟಗಾರರು ಔಟ್
ಟೆಸ್ಟ್ ಕ್ರಿಕೆಟ್‌ಗೆ ವಿದಾಯ
ಇತ್ತೀಚೆಗಷ್ಟೆ ವಿರಾಟ್ ಕೊಹ್ಲಿ ಇತ್ತೀಚೆಗೆ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದರು. ರೋಹಿತ್ ಶರ್ಮಾ ಟೆಸ್ಟ್ ನಿವೃತ್ತಿಯ ಐದು ದಿನಗಳ ನಂತರ, ಅವರು ಟೆಸ್ಟ್ ಸ್ವರೂಪದಿಂದ ನಿವೃತ್ತರಾದರು. ಕೊಹ್ಲಿ 123 ಟೆಸ್ಟ್ ಪಂದ್ಯಗಳಲ್ಲಿ 30 ಶತಕ ಮತ್ತು 31 ಅರ್ಧಶತಕಗಳೊಂದಿಗೆ 46.85 ಸ್ಟ್ರೈಕ್ ರೇಟ್‌ನಲ್ಲಿ 9230 ರನ್ ಗಳಿಸಿದ್ದಾರೆ. ಅವರು ಕಳೆದ ವರ್ಷ ಟಿ20ಐ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದರು. ಈಗ ಅವರು ಏಕದಿನ ಕ್ರಿಕೆಟ್ ಮಾತ್ರ ಆಡಲಿದ್ದಾರೆ.
ವಿರಾಟ್ ಕೊಹ್ಲಿ ಕ್ರಿಕೆಟ್‌ನ ಪ್ರತಿಯೊಂದು ಸ್ವರೂಪದಲ್ಲೂ ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ ಮತ್ತು ಅನೇಕ ಐತಿಹಾಸಿಕ ದಾಖಲೆಗಳನ್ನು ತಮ್ಮ ಹೆಸರಿನಲ್ಲಿ ನಿರ್ಮಿಸಿದ್ದಾರೆ ಎಂಬುದು ಗಮನಾರ್ಹ. ಅವರ ನಾಯಕತ್ವದಲ್ಲಿ, ಭಾರತ ತಂಡವು ಟೆಸ್ಟ್ ಕ್ರಿಕೆಟ್‌ನಲ್ಲಿ ಉತ್ತುಂಗಕ್ಕೆ ಹೋಯಿತು ಮತ್ತು ಏಕದಿನ ಪಂದ್ಯಗಳಲ್ಲಿ ಮಾತ್ರವಲ್ಲದೆ T20I ಗಳಲ್ಲಿಯೂ ಅದ್ಭುತ ಪ್ರದರ್ಶನ ನೀಡಿತು. ಈಗ ಕೊಹ್ಲಿ ಐಪಿಎಲ್ 2025 ರಲ್ಲಿ ಪ್ರಶಸ್ತಿ ಗೆಲ್ಲುವತ್ತ ಚಿತ್ತ ನೆಟ್ಟಿದ್ದಾರೆ. ಅವರ ತಂಡ ಆರ್‌ಸಿಬಿ ಪ್ಲೇಆಫ್ ಟಿಕೆಟ್ ಪಡೆಯುವ ಹತ್ತಿರದಲ್ಲಿದೆ. ಈ ಋತುವಿನಲ್ಲಿ ತಂಡವು ಮೊದಲ ಬಾರಿಗೆ ಪ್ರಶಸ್ತಿ ಗೆಲ್ಲುವ ಉತ್ತಮ ಅವಕಾಶವನ್ನು ಹೊಂದಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




