IND vs SA: ಹರಿಣಗಳ ವಿರುದ್ಧದ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಟೀಂ ಇಂಡಿಯಾ ಬೌಲರ್​ಗಳಿವರು

IND vs SA: ಇಂದು ಕೇರಳದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿರುವುದರಿಂದ ಈ ಪಂದ್ಯದ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಹೆಚ್ಚಿದೆ.

IND vs SA: ಹರಿಣಗಳ ವಿರುದ್ಧದ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಟೀಂ ಇಂಡಿಯಾ ಬೌಲರ್​ಗಳಿವರು
ಟೀಂ ಇಂಡಿಯಾ
Follow us
TV9 Web
| Updated By: ಪೃಥ್ವಿಶಂಕರ

Updated on:Sep 28, 2022 | 2:33 PM

ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಇಂದು ತಿರುವನಂತಪುರಂನಲ್ಲಿರುವ ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ (South Africa and India) ನಡುವೆ ನಡೆಯಲಿದೆ. ಹೀಗಾಗಿ ಎರಡೂ ತಂಡಗಳು ಕೇರಳ ತಲುಪಿದ್ದು, ಇಂದು ಕೇರಳದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿರುವುದರಿಂದ ಈ ಪಂದ್ಯದ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಭಾರತ-ಆಫ್ರಿಕಾ T20 ಪಂದ್ಯದ ಎಲ್ಲಾ ಟಿಕೆಟ್‌ಗಳು ಬಹುತೇಕ ಮಾರಾಟವಾಗಿದ್ದು, ಪಂದ್ಯದ ರೋಚಕತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಅದಕ್ಕೂ ಮುನ್ನ ಈ ಎರಡು ತಂಡಗಳು ಹಲವು ಬಾರಿ ಮುಖಾಮುಖಿಯಾಗಿದ್ದು, ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಭರ್ಜರಿ ಪ್ರದರ್ಶನವನ್ನೇ ನೀಡಿದೆ. ಅದರಲ್ಲೂ ಬೌಲಿಂಗ್ ವಿಭಾಗದಲ್ಲಿ ವೇಗಿ ಭುವನೇಶ್ವರ್ ಕುಮಾರ್ (Bhuvneshwar Kumar) ಆಫ್ರಿಕಾ ವಿರುದ್ಧ ಹೆಚ್ಚು ವಿಕೆಟ್ ಪಡೆದ ಸಾಧನೆಯನ್ನು ಸಹ ಮಾಡಿದ್ದಾರೆ.

ಹರಿಣಗಳ ವಿರುದ್ಧ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್​ಗಳಿವರು

  1. ಭುವನೇಶ್ವರ್ ಕುಮಾರ್ ಹರಿಣಗಳ ವಿರುದ್ಧ ಆಡಿರುವ 10 ಪಂದ್ಯಗಳಲ್ಲಿ ಪ್ರಮುಖ 14 ವಿಕೆಟ್ ಪಡೆದಿದ್ದಾರೆ. ಜೊತೆಗೆ ಭುವನೇಶ್ವರ್ ಕುಮಾರ್ ಒಂದೇ ಪಂದ್ಯದಲ್ಲಿ 5 ವಿಕೆಟ್ ಪಡೆದ ಸಾಧನೆಯನ್ನು ಸಹ ಮಾಡಿದ್ದಾರೆ.
  2. ಭುವಿಯ ನಂತರದ ಸ್ಥಾನ ಟೀಂ ಇಂಡಿಯಾದ ಸ್ಟಾರ್ ಸ್ಪಿನ್ನರ್​ ಆರ್ ಅಶ್ವಿನ್ ಪಾಲಾಗಿದ್ದು, ಇದುವರೆಗೆ ಈ ಕ್ಯಾರಂ ಸ್ಪಿನ್ನರ್ ದಕ್ಷಿಣ ಆಫ್ರಿಕಾ ವಿರುದ್ಧ 6 ಪಂದ್ಯಗಳನ್ನು ಆಡಿ 10 ವಿಕೆಟ್ ಪಡೆದಿದ್ದಾರೆ.
  3. ಇದನ್ನೂ ಓದಿ
    Image
    IND vs SA: ಏಕದಿನ- ಟಿ20 ಸರಣಿಗಾಗಿ ಭಾರತಕ್ಕೆ ಕಾಲಿಟ್ಟ ದಕ್ಷಿಣ ಆಫ್ರಿಕಾ ಪಡೆ; ಮೊದಲ ಪಂದ್ಯ ಯಾವಾಗ?
    Image
    IND vs SA: ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಟೀಂ ಇಂಡಿಯಾದಲ್ಲಿದ್ದ ಸಮಸ್ಯೆಗಳಿಗೆ ಸಿಕ್ಕ ಪರಿಹಾರಗಳಿವು
    Image
    IND vs SA: ಇದೇನ ಸಭ್ಯತೆ? ಸೆಲ್ಫಿ ಕೇಳಿದ ಗ್ರೌಂಡ್ಸ್‌ಮನ್ ಜೊತೆ ರುತುರಾಜ್ ಅನುಚಿತ ವರ್ತನೆ..! ವಿಡಿಯೋ ನೋಡಿ
  4. ಅಶ್ವಿನ್ ನಂತರ ಯುಜುವೇಂದ್ರ ಚಹಲ್ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಒಟ್ಟು 6 ಪಂದ್ಯಗಳನ್ನಾಡಿರುವ ಚಹಲ್ 7 ವಿಕೆಟ್ ಪಡೆದಿದ್ದಾರೆ.
  5. ಈ ಮೂವರ ಬಳಿಕ ಸ್ಥಾನ ಪಡೆದಿರುವ ಹರ್ಷಲ್ ಪಟೇಲ್ ನಾಲ್ಕು ಪಂದ್ಯಗಳಲ್ಲಿ 7 ವಿಕೆಟ್ ಪಡೆದಿದ್ದಾರೆ.
  6. ಟೀಂ ಇಂಡಿಯಾದ ವೇಗಿ ಜಹೀರ್ ಖಾನ್ ಕೂಡ ಮೂರು ಪಂದ್ಯಗಳಲ್ಲಿ 6 ವಿಕೆಟ್ ಪಡೆದಿದ್ದು, ಹರಿಣಗಳ ವಿರುದ್ಧ ಮಾರಕ ಬೌಲಿಂಗ್ ಮಾಡಿದ ಟಾಪ್ 5 ಬೌಲರ್​ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಉಭಯ ತಂಡಗಳು ಹೀಗಿವೆ

ಟಿ20 ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ಕೀಪರ್), ದಿನೇಶ್ ಕಾರ್ತಿಕ್ (ಕೀಪರ್), ಆರ್ ಅಶ್ವಿನ್, ಯುಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ, ಶಹಬಾಜ್ ಅಹ್ಮದ್, ಶ್ರೇಯಸ್ ಅಯ್ಯರ್.

ದಕ್ಷಿಣ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ಹೆನ್ರಿಕ್ ಕ್ಲಾಸೆನ್, ರೀಜಾ ಹೆಂಡ್ರಿಕ್ಸ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಆನ್ರಿಕ್ ನೋಕಿಯಾ, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕಗಿಸೊ ರಬಾಡ, ರಿಲಿ ರೊಸೊ, ತಬ್ರೇಝ್ ಶಂಸಿ, ಟ್ರಿಸ್ಟಾನ್ ಸ್ಟಬ್ಸ್.

Published On - 2:33 pm, Wed, 28 September 22

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್