ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಇಂದು ತಿರುವನಂತಪುರಂನಲ್ಲಿರುವ ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ (South Africa and India) ನಡುವೆ ನಡೆಯಲಿದೆ. ಹೀಗಾಗಿ ಎರಡೂ ತಂಡಗಳು ಕೇರಳ ತಲುಪಿದ್ದು, ಇಂದು ಕೇರಳದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿರುವುದರಿಂದ ಈ ಪಂದ್ಯದ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಭಾರತ-ಆಫ್ರಿಕಾ T20 ಪಂದ್ಯದ ಎಲ್ಲಾ ಟಿಕೆಟ್‌ಗಳು ಬಹುತೇಕ ಮಾರಾಟವಾಗಿದ್ದು, ಪಂದ್ಯದ ರೋಚಕತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಅದಕ್ಕೂ ಮುನ್ನ ಈ ಎರಡು ತಂಡಗಳು ಹಲವು ಬಾರಿ ಮುಖಾಮುಖಿಯಾಗಿದ್ದು, ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಭರ್ಜರಿ ಪ್ರದರ್ಶನವನ್ನೇ ನೀಡಿದೆ. ಅದರಲ್ಲೂ ಬೌಲಿಂಗ್ ವಿಭಾಗದಲ್ಲಿ ವೇಗಿ ಭುವನೇಶ್ವರ್ ಕುಮಾರ್ (Bhuvneshwar Kumar) ಆಫ್ರಿಕಾ ವಿರುದ್ಧ ಹೆಚ್ಚು ವಿಕೆಟ್ ಪಡೆದ ಸಾಧನೆಯನ್ನು ಸಹ ಮಾಡಿದ್ದಾರೆ.
ಹರಿಣಗಳ ವಿರುದ್ಧ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ಗಳಿವರು
ಉಭಯ ತಂಡಗಳು ಹೀಗಿವೆ
ಟಿ20 ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ಕೀಪರ್), ದಿನೇಶ್ ಕಾರ್ತಿಕ್ (ಕೀಪರ್), ಆರ್ ಅಶ್ವಿನ್, ಯುಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ, ಶಹಬಾಜ್ ಅಹ್ಮದ್, ಶ್ರೇಯಸ್ ಅಯ್ಯರ್.
ದಕ್ಷಿಣ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ಹೆನ್ರಿಕ್ ಕ್ಲಾಸೆನ್, ರೀಜಾ ಹೆಂಡ್ರಿಕ್ಸ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಆನ್ರಿಕ್ ನೋಕಿಯಾ, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕಗಿಸೊ ರಬಾಡ, ರಿಲಿ ರೊಸೊ, ತಬ್ರೇಝ್ ಶಂಸಿ, ಟ್ರಿಸ್ಟಾನ್ ಸ್ಟಬ್ಸ್.
Published On - 2:33 pm, Wed, 28 September 22