ಬ್ರಿಸ್ಬೇನ್ ಹೀಟ್ ತಂಡಕ್ಕೆ ಬಿಗ್ ಬ್ಯಾಷ್ ಲೀಗ್‌ ಕಿರೀಟ; ಫೈನಲ್​ನಲ್ಲಿ ಮಿಂಚಿದ ಗುಜರಾತ್ ಟೈಟಾನ್ಸ್ ವೇಗಿ

Big Bash League 2024: ಆಸ್ಟ್ರೇಲಿಯಾದಲ್ಲಿ ನಡೆದ 13ನೇ ಆವೃತ್ತಿಯ ಬಿಗ್ ಬ್ಯಾಷ್ ಲೀಗ್‌ನ ಫೈನಲ್ ಪಂದ್ಯದಲ್ಲಿ ಸಿಡ್ನಿ ಸಿಕ್ಸರ್ಸ್ ತಂಡವನ್ನು ಮಣಿಸಿದ ಬ್ರಿಸ್ಬೇನ್ ಹೀಟ್ ತಂಡ ಎರಡನೇ ಬಾರಿಗೆ ಬಿಗ್ ಬ್ಯಾಷ್ ಲೀಗ್ ಪ್ರಶಸ್ತಿಗೆ ಮುತ್ತಿಟ್ಟಿದೆ. ಹಾಗೆಯೇ ಕಳೆದ 12 ವರ್ಷಗಳ ಪ್ರಶಸ್ತಿ ಬರವನ್ನು ನೀಗಿಸಿಕೊಂಡಿದೆ.

ಬ್ರಿಸ್ಬೇನ್ ಹೀಟ್ ತಂಡಕ್ಕೆ ಬಿಗ್ ಬ್ಯಾಷ್ ಲೀಗ್‌ ಕಿರೀಟ; ಫೈನಲ್​ನಲ್ಲಿ ಮಿಂಚಿದ ಗುಜರಾತ್ ಟೈಟಾನ್ಸ್ ವೇಗಿ
ಬ್ರಿಸ್ಬೇನ್ ಹೀಟ್ ತಂಡ
Follow us
ಪೃಥ್ವಿಶಂಕರ
|

Updated on:Jan 24, 2024 | 7:01 PM

ಆಸ್ಟ್ರೇಲಿಯಾದಲ್ಲಿ ನಡೆದ 13ನೇ ಆವೃತ್ತಿಯ ಬಿಗ್ ಬ್ಯಾಷ್ ಲೀಗ್‌ನ (Big Bash League 2024) ಫೈನಲ್ ಪಂದ್ಯದಲ್ಲಿ ಸಿಡ್ನಿ ಸಿಕ್ಸರ್ಸ್ ತಂಡವನ್ನು ಮಣಿಸಿದ ಬ್ರಿಸ್ಬೇನ್ ಹೀಟ್ ತಂಡ (Brisbane Heat vs Sydney Sixers) ಎರಡನೇ ಬಾರಿಗೆ ಬಿಗ್ ಬ್ಯಾಷ್ ಲೀಗ್ ಪ್ರಶಸ್ತಿಗೆ ಮುತ್ತಿಟ್ಟಿದೆ. ಹಾಗೆಯೇ ಕಳೆದ 12 ವರ್ಷಗಳ ಪ್ರಶಸ್ತಿ ಬರವನ್ನು ನೀಗಿಸಿಕೊಂಡಿದೆ. ಈ ಪಂದ್ಯದಲ್ಲಿ ಸಿಡ್ನಿ ಸಿಕ್ಸರ್ಸ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಬ್ರಿಸ್ಬೇನ್ ಹೀಟ್ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 166 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಸಿಡ್ನಿ ಸಿಕ್ಸರ್ಸ್ ತಂಡ 17.3 ಓವರ್‌ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 112 ರನ್‌ ಕಲೆಹಾಕಲಷ್ಟೇ ಶಕ್ತವಾಯಿತು. ಇದರೊಂದಿಗೆ ಬ್ರಿಸ್ಬೇನ್ ತಂಡ 54 ರನ್ ಗಳಿಂದ ಪಂದ್ಯವನ್ನು ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿತು.

166 ರನ್​ಗಳ ಟಾರ್ಗೆಟ್

ಮೇಲೆ ಹೇಳಿದಂತೆ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಬ್ರಿಸ್ಬೇನ್ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ತಂಡದ ಮೊತ್ತ 5 ರನ್​ಗಳಿರುವಾಗ ಜಿಮ್ಮಿ ಪೀರ್ಸನ್ ರೂಪದಲ್ಲಿ ಮೊದಲ ವಿಕೆಟ್ ಪತನವಾಯಿತು. ಆ ಬಳಿಕ ಜೊತೆಯಾದ ಜೋಶ್ ಬ್ರೌನ್ ಹಾಗೂ ನಾಥನ್ ಮೆಕ್‌ಸ್ವೀನಿ 85 ರನ್​ಗಳ ಜೊತೆಯಾಟ ಹಂಚಿಕೊಂಡರು. ಈ ವೇಳೆ ಜೋಶ್ 53 ರನ್​ಗಳ ಇನ್ನಿಂಗ್ಸ್ ಅಡಿದರೆ, ನಾಥನ್ 33 ರನ್​ಗಳ ಕೊಡುಗೆ ನೀಡಿದರು. ಮ್ಯಾಟ್ ರೆನ್ಶಾ 40 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡುವ ಮೂಲಕ ತಂಡವನ್ನು 166 ರನ್​ಗಳ ಸ್ಪರ್ಧಾತ್ಮಕ ಮೊತ್ತದ ಕೊಂಡೊಯ್ದರು. ಸಿಡ್ನಿ ಸಿಕ್ಸರ್ಸ್ ಪರ ಸೀನ್ ಅಬಾಟ್ 4 ವಿಕೆಟ್ ಪಡೆದು ಮಿಂಚಿದರು.

54 ರನ್​ಗಳ ಹೀನಾಯ ಸೋಲು

ಈ ಗುರಿ ಬೆನ್ನಟ್ಟಿದ ಸಿಡ್ನಿ ಸಿಕ್ಸರ್ಸ್ ತಂಡಕ್ಕೂ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ಡೇನಿಯಲ್ ಹ್ಯೂಸ್ 1 ರನ್​ಗಳಿಗೆ ವಿಕೆಟ್ ಒಪ್ಪಿಸಿದರೆ, ಮತ್ತೊಬ್ಬ ಆರಂಭಿಕ ಜ್ಯಾಕ್ ಎಡ್ವರ್ಡ್ಸ್ 16 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರು. ನಂತರ ಜೊತೆಯಾದ ಜೋಶ್ ಫಿಲಿಫ್ ಹಾಗೂ ಮೋಸೆಸ್ ಹೆನ್ರಿಕ್ಸ್ ಕ್ರಮವಾಗಿ 23 ರನ್ ಹಾಗೂ 25 ರನ್ ಕಲೆಹಾಕಿ ತಂಡದ ಇನ್ನಿಂಗ್ಸ್ ನಿಭಾಯಿಸಲು ಯತ್ನಿಸಿದರು. ಆದರೆ ಇಬ್ಬರಿಗೂ ಬಿಗ್ ಇನ್ನಿಂಗ್ಸ್ ಆಡಲು ಸಾಧ್ಯವಾಗಲಿಲ್ಲ. ಈ ಇಬ್ಬರನ್ನು ಹೊರತುಪಡಿಸಿ ತಂಡದ ಉಳಿದ ಆಟಗಾರರು ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡರು. ಹೀಗಾಗಿ ತಂಡ 54 ರನ್​ಗಳ ಸೋಲು ಅನುಭವಿಸಿತು.

ಸ್ಪೆನ್ಸರ್ ಜಾನ್ಸನ್ ಫೈನಲ್‌ ಹೀರೋ

ಈ ಪಂದ್ಯದಲ್ಲಿ ಬ್ರಿಸ್ಬೇನ್ ಹೀಟ್ ಪರ ಸ್ಪೆನ್ಸರ್ ಜಾನ್ಸನ್ ಅತ್ಯಂತ ಮಾರಕ ಬೌಲಿಂಗ್ ಮಾಡಿದರು. ತಮ್ಮ ಖೋಟಾದ 4 ಓವರ್​ಗಳಲ್ಲಿ ಕೇವಲ 26 ರನ್ ನೀಡಿ 4 ಪ್ರಮುಖ ವಿಕೆಟ್ ಪಡೆದರು.  ಈ ಮೂಲಕ ತಂಡ ಚಾಂಪಿಯನ್ ಆಗುವಲ್ಲಿ ಪ್ರಮುಖ ಕೊಡುಗೆ ನೀಡಿದರು. ವಾಸ್ತವವಾಗಿ ಫೈನಲ್​​ನಲ್ಲಿ ಪಂದ್ಯ ವಿಜೇತ ಪ್ರದರ್ಶನ ನೀಡಿದ ಸ್ಪೆನ್ಸರ್ ಜಾನ್ಸನ್​ರನ್ನು ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಗುಜರಾತ್ ಟೈಟಾನ್ಸ್ ತಂಡ ಖರೀದಿಸಿದೆ. ಹೀಗಾಗಿ ಐಪಿಎಲ್ ಆರಂಭಕ್ಕೂ ಮುನ್ನ ಗುಜರಾತ್ ತಂಡಕ್ಕೆ ಆನೆ ಬಲ ಬಂದಂತ್ತಾಗಿದೆ.

ಎರಡನೇ ಬಾರಿಗೆ ಚಾಂಪಿಯನ್

ಬ್ರಿಸ್ಬೇನ್ ಹೀಟ್ ತಂಡವು 2012 ರಲ್ಲಿ ಮೊದಲ ಬಾರಿಗೆ ಬಿಗ್ ಬ್ಯಾಷ್ ಲೀಗ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಇದೀಗ ಬಹಳ ಸಮಯದ ನಂತರ ಎರಡನೇ ಬಾರಿಗೆ ಬಿಗ್ ಬ್ಯಾಷ್ ಲೀಗ್‌ನ ಚಾಂಪಿಯನ್ ಆಗುವಲ್ಲಿ ತಂಡ ಯಶಸ್ವಿಯಾಗಿದೆ. ಮತ್ತೊಂದೆಡೆ, ಮೂರು ಬಾರಿಯ ಚಾಂಪಿಯನ್ ಸಿಡ್ನಿ ಸಿಕ್ಸರ್ಸ್ ನಾಲ್ಕನೇ ಬಾರಿಗೆ ಚಾಂಪಿಯನ್ ಆಗುವ ಅವಕಾಶವನ್ನು ಕಳೆದುಕೊಂಡಿದೆ. ಸಿಡ್ನಿ ಸಿಕ್ಸರ್ಸ್ ತಂಡವು 2011, 2019 ಮತ್ತು 2020 ರಲ್ಲಿ ಬಿಗ್ ಬ್ಯಾಷ್ ಲೀಗ್ ಟ್ರೋಫಿಯನ್ನು ಗೆದ್ದಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:00 pm, Wed, 24 January 24

ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು