Viral Video: ಅತ್ಯಾಧ್ಭುತ ಕ್ಯಾಚ್ ಹಿಡಿದು ನಿಬ್ಬೆರಗಾಗಿ ನಿಂತ ಗ್ಲೆನ್ ಮ್ಯಾಕ್ಸ್​ವೆಲ್

Glenn Maxwell Catch: ಈ ಪಂದ್ಯದಲ್ಲಿ ಬ್ರಿಸ್ಬೇನ್ ಹೀಟ್ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 149 ರನ್​ ಕಲೆಹಾಕಿತು. 150 ರನ್​ಗಳ ಗುರಿ ಬೆನ್ನತ್ತಿದ ಮೆಲ್ಬೋರ್ನ್​ ಸ್ಟಾರ್ಸ್​ ಪರ ಜೋ ಕ್ಲಾರ್ಕ್​ ಕೇವಲ 36 ಎಸೆತಗಳಲ್ಲಿ 62 ರನ್ ಬಾರಿಸಿದರು.

Viral Video: ಅತ್ಯಾಧ್ಭುತ ಕ್ಯಾಚ್ ಹಿಡಿದು ನಿಬ್ಬೆರಗಾಗಿ ನಿಂತ ಗ್ಲೆನ್ ಮ್ಯಾಕ್ಸ್​ವೆಲ್
Glenn Maxwell
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 16, 2022 | 5:53 PM

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್​ನಲ್ಲಿ ಭರ್ಜರಿ ಪೈಪೋಟಿ ಮುಂದುವರೆದಿದೆ. ಅದರಲ್ಲೂ ಕೆಲ ತಂಡಗಳು ಅತ್ಯುತ್ತಮ ಫೀಲ್ಡಿಂಗ್ ಮೂಲಕ ಪಂದ್ಯದ ಫಲಿತಾಂಶವನ್ನೇ ಬದಲಿಸುತ್ತಿರುವುದು ವಿಶೇಷ. ಈ ಪಟ್ಟಿಗೆ ಹೊಸ ಸೇರ್ಪಡೆ ಗ್ಲೆನ್ ಮ್ಯಾಕ್ಸ್​ವೆಲ್ ಹಿಡಿದ ಅತ್ಯಾಧ್ಭುತ ಕ್ಯಾಚ್. ಬಿಬಿಎಲ್​ನ 51ನೇ ಪಂದ್ಯದಲ್ಲಿ ಮೆಲ್ಬೋರ್ನ್ ಸ್ಟಾರ್ಸ್ ಹಾಗೂ ಬ್ರಿಸ್ಬೇನ್ ಹೀಟ್ ತಂಡಗಳು ಮುಖಾಮುಖಿಯಾಗಿತ್ತು. ಟಾಸ್ ಗೆದ್ದ ಬಿಸ್ಬೇನ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಬ್ರಿಸ್ಬೇನ್​ಗೆ ಕ್ರಿಸ್ ಲಿನ್ ಉತ್ತಮ ಆರಂಭ ಒದಗಿಸಿದ್ದರು.

ಬಿರುಸಿನ ಆರಂಭ ಪಡೆದ ಬ್ರಿಸ್ಬೇನ್ ಹೀಟ್​ ತಂಡ ಮೊತ್ತ ಪವರ್​ಪ್ಲೇನಲ್ಲಿ 50 ರ ಗಡಿ ಮುಟ್ಟಿತು. ಈ ಹಂತದಲ್ಲಿ ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿ ಮೇಲುಗೈ ಸಾಧಿಸಿದ ಮೆಲ್ಬೋರ್ನ್​ ತಂಡಕ್ಕೆ ಸ್ಯಾಮ್ ಹೆಜ್ಲೆಟ್ ವಿಕೆಟ್ ಅನಿವಾರ್ಯವಾಗಿತ್ತು. ಏಕೆಂದರೆ ಅಂತಿಮ ಹಂತದಲ್ಲಿ ಬಿರುಸಿನ ಬ್ಯಾಟಿಂಗ್ ಮೂಲಕ ಪಂದ್ಯದ ಗತಿ ಬದಲಿಸಬಲ್ಲ ಆಟಗಾರನಾಗಿದ್ದ ಹೆಜ್ಲೆಟ್ ವಿಕೆಟ್ ಪಡೆಯಲು ನಾಯಕ ಗ್ಲೆನ್ ಮ್ಯಾಕ್ಸ್​ವೆಲ್ ಫೀಲ್ಡಿಂಗ್​ನಲ್ಲಿ ಬದಲಾವಣೆ ಮಾಡಿಕೊಂಡಿದ್ದರು.

ಅದರಂತೆ 16ನೇ ಓವರ್‌ನ 5ನೇ ಎಸೆತದಲ್ಲಿ ಸ್ಯಾಮ್ ಹೆಜ್ಲೆಟ್ ನಾಥನ್ ಕೌಲ್ಟರ್ ನೈಲ್​ ಎಸೆತದಲ್ಲಿ ಲಾಂಗ್ ಶಾಟ್ ಹೊಡೆದರು. ಆದರೆ 30 ಯಾರ್ಡ್​ ಸರ್ಕಲ್ ಒಳಗೆ ನಿಂತಿದ್ದ ಗ್ಲೆನ್ ಮ್ಯಾಕ್ಸ್ ವೆಲ್ ಹಿಮ್ಮುಖವಾಗಿ ಓಡಲಾರಂಭಿಸಿದರು. ಅಷ್ಟೇ ಅಲ್ಲದೆ ಒಂದು ಕೈಯಿಂದ ಅದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದರು. ಹೀಗೆ ನಂಬಲಾಸಾಧ್ಯವಾದ ಕ್ಯಾಚ್ ಹಿಡಿದು ಮ್ಯಾಕ್ಸ್​ವೆಲ್ ಕೂಡ ಅಚ್ಚರಿ ವ್ಯಕ್ತಪಡಿಸಿದರು. ಇದೀಗ ಅತ್ಯಾಧ್ಭುತ ಕ್ಯಾಚ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ನು ಈ ಪಂದ್ಯದಲ್ಲಿ ಬ್ರಿಸ್ಬೇನ್ ಹೀಟ್ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 149 ರನ್​ ಕಲೆಹಾಕಿತು. 150 ರನ್​ಗಳ ಗುರಿ ಬೆನ್ನತ್ತಿದ ಮೆಲ್ಬೋರ್ನ್​ ಸ್ಟಾರ್ಸ್​ ಪರ ಜೋ ಕ್ಲಾರ್ಕ್​ ಕೇವಲ 36 ಎಸೆತಗಳಲ್ಲಿ 62 ರನ್ ಬಾರಿಸುವ ಮೂಲಕ 13.5 ಓವರ್​ನಲ್ಲಿ ತಂಡವನ್ನು ಗುರಿ ಮುಟ್ಟಿಸಿದರು.

ಇದನ್ನೂ ಓದಿ: ಅಫ್ಘಾನಿಸ್ತಾನದಿಂದ ಐರ್ಲೆಂಡ್‌ಗೆ: 8 ಸಾವಿರ ಕಿ.ಮೀ ನಡೆದು ಕ್ರಿಕೆಟ್​ಗೆ ಎಂಟ್ರಿ ಕೊಟ್ಟ ಯುವ ಬೌಲರ್..!

ಇದನ್ನೂ ಓದಿ:  ಈ ಫೋಟೋದಲ್ಲಿರುವ ಇಬ್ಬರು ಸ್ಟಾರ್ ಆಟಗಾರರನ್ನು ಗುರುತಿಸಬಲ್ಲಿರಾ?

ಇದನ್ನೂ ಓದಿ: IPL 2022 Mega Auction: ಐಪಿಎಲ್ ಮೆಗಾ ಹರಾಜು ಡೇಟ್ ಫಿಕ್ಸ್..!

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

(Big Bash League: Glenn Maxwell caught astonishing catch)

ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ