BBL 2021 Video: ಅದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಜೇಕ್..!
Big Bash League: ಮೊದಲ 5 ಓವರ್ನಲ್ಲೇ ತಂಡದ ಮೊತ್ತವನ್ನು 50ರ ಗಡಿ ತಲುಪಿಸಿದ ಈ ಜೋಡಿ ತಂಡಕ್ಕೆ ಉತ್ತಮ ಓಪನಿಂಗ್ ನೀಡಿದ್ದರು. ಆದರೆ ಈ ವೇಳೆ ದಾಳಿಗಿಳಿದ ಜಹೀರ್ ಖಾನ್ ಎಸೆತದಲ್ಲಿ ಎಡಗೈ ದಾಂಡಿಗ ವೆಥರಾಲ್ಡ್ ಭರ್ಜರಿ ಹೊಡೆತ ಬಾರಿಸಿದ್ದರು.
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್ನಲ್ಲಿ (BBL 2021) ಭರ್ಜರಿ ಪೈಪೋಟಿ ಕಂಡು ಬರುತ್ತಿದೆ. ಒಂದೆಡೆ ಬ್ಯಾಟರ್ಗಳ ಅಬ್ಬರವಾದರೆ, ಮತ್ತೊಂದೆಡೆ ಬೌಲರುಗಳು ಕೂಡ ಯಶಸ್ಸು ಸಾಧಿಸುತ್ತಿದ್ದಾರೆ. ಇದರ ನಡುವೆ ಫೀಲ್ಡಿಂಗ್ ಮೂಲಕ ಯುವ ಆಟಗಾರ ಜೇಕ್ ಪ್ರೇಸರ್ ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಮೆಲ್ಬೋರ್ನ್ ರೆನೆಗೇಡ್ಸ್ ಹಾಗೂ ಅಡಿಲೇಡ್ ಸ್ಟ್ರೈಕರ್ಸ್ ನಡುವಣ ಪಂದ್ಯದಲ್ಲಿ ಟಾಸ್ ಗೆದ್ದ ಮೆಲ್ಬೋರ್ನ್ ಮೊದಲು ಬ್ಯಾಟ್ ಮಾಡಿತು. ಆರಂಭಿಕ ಆಟಗಾರ ಮೆಕಾನ್ಝಿ ಹಾರ್ವೆ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ ಮೆಲ್ಬೋರ್ನ್ ರೆನೆಗೇಡ್ಸ್ ತಂಡವು ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 153 ರನ್ ಕಲೆಹಾಕಿತು. ಈ ಸ್ಪರ್ಧಾತ್ಮಕ ಮೊತ್ತವನ್ನು ಬೆನ್ನತ್ತಿದ ಅಡಿಲೇಡ್ ಸ್ಟ್ರೈಕರ್ಸ್ ತಂಡಕ್ಕೆ ಮ್ಯಾಥ್ಯೂ ಶಾರ್ಟ್ ಹಾಗೂ ವೆಥರಾಲ್ಡ್ ಅತ್ಯುತ್ತಮ ಆರಂಭ ಒದಗಿಸಿದ್ದರು.
ಮೊದಲ 5 ಓವರ್ನಲ್ಲೇ ತಂಡದ ಮೊತ್ತವನ್ನು 50ರ ಗಡಿ ತಲುಪಿಸಿದ ಈ ಜೋಡಿ ತಂಡಕ್ಕೆ ಉತ್ತಮ ಓಪನಿಂಗ್ ನೀಡಿದ್ದರು. ಆದರೆ ಈ ವೇಳೆ ದಾಳಿಗಿಳಿದ ಜಹೀರ್ ಖಾನ್ ಎಸೆತದಲ್ಲಿ ಎಡಗೈ ದಾಂಡಿಗ ವೆಥರಾಲ್ಡ್ ಭರ್ಜರಿ ಹೊಡೆತ ಬಾರಿಸಿದ್ದರು. ಇನ್ನೇನು ಚೆಂಡು ಡೀಪ್ ಮಿಡ್ ವಿಕೆಟ್ ಬೌಂಡರಿ ಮೂಲಕ ಸಿಕ್ಸ್ ಆಗಲಿದೆ ಅನ್ನುವಷ್ಟರಲ್ಲಿ 19 ವರ್ಷದ ಯುವ ಆಟಗಾರ ಜೇಕ್ ಫ್ರೇಸರ್ ಎಲ್ಲರ ಲೆಕ್ಕಚಾರಗಳನ್ನು ತಲೆಕೆಳಗಾಗಿಸಿದರು.
ಬೌಂಡರಿ ಲೈನ್ನಲ್ಲಿ ಅದ್ಭುತವಾಗಿ ಜಿಗಿದ ಫ್ರೇಸರ್ ಒಂದೇ ಕೈಯಲ್ಲಿ ಚೆಂಡನ್ನು ಬಂಧಿಸಿದರು. ಇತ್ತ ಈ ಫೆಂಟಾಸ್ಟಿಕ್ ಕ್ಯಾಚ್ ನೋಡಿದ ಕಾಮೆಂಟೇಟರ್ಸ್ ಕಡೆಯಿಂದ ಕೇಳಿಬಂದಿದ್ದು ಒಂದೇ ಮಾತು…ವಾಟ್ ಎ ಕ್ಯಾಚ್… ಹೌದು, ರಾಕೆಟ್ ವೇಗದಲ್ಲಿದ್ದ ಚೆಂಡನ್ನು ಅತ್ಯುತ್ತಮ ಟೈಮಿಂಗ್ ಮೂಲಕ ಒಂದೇ ಕೈಯಲ್ಲಿ ಜೇಕ್ ಫ್ರೇಸರ್ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ್ದರು. ಇದೀಗ ಈ ಅತ್ಯುತ್ತಮ ಫೀಲ್ಡಿಂಗ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Jake Fraser-McGurk plucks an INSANE grab!! #BBL11 pic.twitter.com/YT18EE0BBR
— KFC Big Bash League (@BBL) December 7, 2021
ಇನ್ನು ಈ ಪಂದ್ಯದಲ್ಲಿ ಮೆಲ್ಬೋರ್ನ್ ರೆನೆಗೇಡ್ಸ್ ನೀಡಿದ 153 ರನ್ಗಳ ಟಾರ್ಗೆಟ್ ಬೆನ್ನತ್ತಿದ ಅಡಿಲೇಡ್ ಸ್ಟ್ರೈಕರ್ಸ್ 8 ವಿಕೆಟ್ ಕಳೆದುಕೊಂಡು 151 ರನ್ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಮೆಲ್ಬೋರ್ನ್ ರೆನೆಗೇಡ್ಸ್ ತಂಡವು 2 ರನ್ಗಳ ರೋಚಕ ಜಯವನ್ನು ತನ್ನದಾಗಿಸಿಕೊಂಡಿತು.
ಇದನ್ನೂ ಓದಿ: World Record: ಬರೋಬ್ಬರಿ 15 ಸಿಕ್ಸ್: ಕ್ರಿಕೆಟ್ ಇತಿಹಾಸದ ಅತೀ ವೇಗದ ಶತಕ
ಇದನ್ನೂ ಓದಿ: IPL 20222: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್ಸಿಬಿ ನಾಯಕ
ಇದನ್ನೂ ಓದಿ: Aakash Chopra: ಚಹಲ್ ಬದಲಿಗೆ RCB ಇವರನ್ನು ಟಾರ್ಗೆಟ್ ಮಾಡಲಿದೆ..!
ಇದನ್ನೂ ಓದಿ: IPL 2022: RCB ಅಭಿಮಾನಿಗಳಿಗೆ ಗುಡ್ ನ್ಯೂಸ್: ಮತ್ತೆ ಬರ್ತಾರಂತೆ ABD
(Big Bash stunned by epic one-handed catch)