AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL Points Table 2023: ಟೂರ್ನಿಯಿಂದ ಹೊರಬೀಳುವ ಭೀತಿಯಲ್ಲಿ ಪಂಜಾಬ್: ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿಯಿದೆ?

IPL 2023 Orange-Purple Cap: ಐಪಿಎಲ್ 2023 ಪಾಯಿಂಟ್ಸ್ ಟೇಬಲ್​ ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.

IPL Points Table 2023: ಟೂರ್ನಿಯಿಂದ ಹೊರಬೀಳುವ ಭೀತಿಯಲ್ಲಿ ಪಂಜಾಬ್: ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿಯಿದೆ?
IPL 2023 Points Table
Vinay Bhat
|

Updated on:May 18, 2023 | 10:28 AM

Share

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್​ ಲೀಗ್ (IPL 2023) ಟೂರ್ನಿಯಲ್ಲಿ 64 ಪಂದ್ಯಗಳು ಮುಕ್ತಾಯಗೊಂಡಿದೆ. ಮಹತ್ವದ ಘಟ್ಟದತ್ತ ಟೂರ್ನಿ ಸಾಗುತ್ತಿದ್ದು ಪ್ಲೇ ಆಫ್ ಗೇರಲು ಕೆಲವು ತಂಡಗಳು ಹರಸಾಹಸ ಪಡುತ್ತಿದೆ. ಇದರ ನಡುವೆ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡ ಟೂರ್ನಿಯಿಂದ ಹೊರಬಿದ್ದಿದೆ. ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಎಸ್​ಆರ್​ಹೆಚ್ (SRH vs RCB) ನಡುವೆ ಪಂದ್ಯ ನಡೆಯಲಿದೆ. ಬುಧವಾರ ಡೆಲ್ಲಿ ವಿರುದ್ಧ ಪಂಜಾಬ್ ಕಿಂಗ್ಸ್ ಸೋತ ಪರಿಣಾಮ ಧವನ್ ಪಡೆಯ ಪ್ಲೇ ಆಫ್ ಕನಸು ಕೂಡ ಬಹುತೇಕ ಕಮರಿ ಹೋಗಿದೆ. ಹಾಗಾದರೆ ಸದ್ಯ ಐಪಿಎಲ್ 2023 ಪಾಯಿಂಟ್ಸ್ ಟೇಬಲ್​ ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.

  • ಗುಜರಾತ್ ಟೈಟಾನ್ಸ್ ತಂಡ ಅಗ್ರಸ್ಥಾನದಲ್ಲಿ ಭದ್ರವಾಗಿದ್ದು ಪ್ಲೇ ಆಫ್​ಗೆ ಕಾಲಿಟ್ಟಿದೆ. ಆಡಿದ 13 ಪಂದ್ಯಗಳಲ್ಲಿ 9 ಗೆಲುವು, ನಾಲ್ಕು ಸೋಲುಂಡು +0.835 ರನ್​ರೇಟ್​ನೊಂದಿಗೆ 18 ಅಂಕ ಸಂಪಾದಿಸಿದೆ.
  • ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಎರಡನೇ ಸ್ಥಾನದಲ್ಲಿದ್ದು ಪ್ಲೇ ಆಫ್​ಗೆ ಹತ್ತಿರದಲ್ಲಿದೆ. ಆಡಿದ 13 ಪಂದ್ಯಗಳ ಪೈಕಿ ಏಳರಲ್ಲಿ ಗೆಲುವು ಐದರಲ್ಲಿ ಸೋಲು ಕಂಡು ಒಟ್ಟು 15 ಅಂಕ ಸಂಪಾದಿಸಿದೆ. +0.381 ರನ್​ರೇಟ್ ಹೊಂದಿದೆ.
  • ಲಖನೌ ಸೂಪರ್ ಜೇಂಟ್ಸ್ ತಂಡ ಮೂರನೇ ಸ್ಥಾನದಲ್ಲಿದೆ. ಆಡಿದ 13 ಪಂದ್ಯಗಳಲ್ಲಿ ಏಳು ಗೆಲುವು, ಐದು ಸೋಲು ಕಂಡು 15 ಅಂಕ ಸಂಪಾದಿಸಿ +0.304 ರನ್​ರೇಟ್​ ಹೊಂದಿದೆ.
  • ಮುಂಬೈ ಇಂಡಿಯನ್ಸ್ ತಂಡ ನಾಲ್ಕನೇ ಸ್ಥಾನದಲ್ಲಿದೆ. ಇವರು ಆಡಿದ 13 ಪಂದ್ಯದಲ್ಲಿ 6 ಸೋಲು, ಏಳು ಗೆಲುವು ಕಂಡು 14 ಅಂಕ ಸಂಪಾದಿಸಿ -0.128 ರನ್​ರೇಟ್ ಹೊಂದಿದೆ.
  • ರಾಯಲ್ ಚಾಲೆಂಜರ್ಸ್ ಬೆಂಗಳೂರು ಐದನೇ ಸ್ಥಾನದಲ್ಲಿದೆ. ಆಡಿದ ಹನ್ನೆರಡು ಪಂದ್ಯಗಳ ಪೈಕಿ ಆರರಲ್ಲಿ ಗೆಲುವು ಆರರಲ್ಲಿ ಸೋಲು ಕಂಡು 12 ಅಂಕ ಸಂಪಾದಿಸಿ +0.166 ರನ್​ರೇಟ್ ಹೊಂದಿದೆ.
  • ರಾಜಸ್ಥಾನ್ ರಾಯಲ್ಸ್ ತಂಡ ಪಾಯಿಂಟ್ ಟೇಬಲ್​ನಲ್ಲಿ ಆರನೇ ಸ್ಥಾನಕ್ಕೆ ಕುಸಿದಿದೆ. ಆಡಿದ 13 ಪಂದ್ಯಗಳಲ್ಲಿ ಆರು ಗೆಲುವು, ಏಳು ಸೋಲುಂಡು +0.140ರನ್​ರೇಟ್​ನೊಂದಿಗೆ 12 ಅಂಕ ಸಂಪಾದಿಸಿದೆ.
  • ಕೆಕೆಆರ್ ಪಾಯಿಂಟ್ ಟೇಬಲ್​ನಲ್ಲಿ ಏಳನೇ ಸ್ಥಾನದಲ್ಲಿದೆ. ಆಡಿದ 13 ಪಂದ್ಯಗಳಲ್ಲಿ ಆರು ಗೆಲುವು, ಏಳು ಪಂದ್ಯಗಳಲ್ಲಿ ಸೋಲುಂಡು -0.256ರನ್​ರೇಟ್​ನೊಂದಿಗೆ 12 ಅಂಕ ಸಂಪಾದಿಸಿದೆ.
  • ಡೆಲ್ಲಿ ವಿರುದ್ಧ ಸೋತ ಪಂಜಾಬ್ ಕಿಂಗ್ಸ್ ಆಡಿದ 13 ಪಂದ್ಯಗಳಲ್ಲಿ ಏಳು ಸೋಲು- ಆರು ಜಯ ಕಂಡು 12 ಅಂಕ ಹೊಂದಿ -0.308ರನ್​ರೇಟ್​ನೊಂದಿಗೆ ಎಂಟನೇ ಸ್ಥಾನಕ್ಕೇರಿದೆ.
  • ಡೆಲ್ಲಿ ಕ್ಯಾಪಿಟಲ್ಸ್ ಟೂರ್ನಿಯಿಂದ ಔಟ್ ಆಗಿದೆ. ಆಡಿದ 13 ಪಂದ್ಯಗಳ ಪೈಕಿ ಐದರಲ್ಲಿ ಜಯ ಸಾಧಿಸಿ, ಎಂಟು ಪಂದ್ಯಗಳಲ್ಲಿ ಸೋಲುಂಡು 10 ಅಂಕ ಸಂಪಾದಿಸಿ -0.572 ರನ್​ರೇಟ್ ಹೊಂದಿದೆ.
  • ಸನ್​ರೈಸರ್ಸ್ ಹೈದರಾಬಾದ್ ತಂಡ ಕೊನೆಯ ಸ್ಥಾನದಲ್ಲಿದೆ. ಆಡಿದ 12 ಪಂದ್ಯದಲ್ಲಿ ಎಂಟರಲ್ಲಿ ಸೋಲು ನಾಲ್ಕರಲ್ಲಿ ಜಯ ಕಂಡು 8 ಅಂಕ ಸಂಪಾದಿಸಿ -0575 ರನ್​ರೇಟ್ ಹೊಂದಿದೆ.

IPL 2023: ನವೀನ್ ಉಲ್​ ಹಕ್​ಗೆ ಬಿಸಿ ಮುಟ್ಟಿಸಿದ ವಿರಾಟ್ ಕೊಹ್ಲಿ ಫ್ಯಾನ್ಸ್

ಆರೆಂಜ್ ಕ್ಯಾಪ್:

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡುಪ್ಲೆಸಿಸ್ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿದ 12 ಪಂದ್ಯಗಳಲ್ಲಿ ಏಳು ಅರ್ಧಶತಕ ಸಿಡಿಸಿ ಒಟ್ಟು 631 ರನ್ ಗಳಿಸಿದ್ದಾರೆ. ಗುಜರಾತ್ ತಂಡದ ಶುಭ್​ಮನ್ ಗಿಲ್ ಎರಡನೇ ಸ್ಥಾನಕ್ಕೆ ಜಿಗಿದಿದ್ದು 13 ಪಂದ್ಯಗಳಿಂದ 576 ರನ್ ಗಳಿಸಿದ್ದಾರೆ. ರಾಜಸ್ಥಾನ್ ತಂಡದ ಯಶಸ್ವಿ ಜೈಸ್ವಾಲ್ ಆಡಿದ 13 ಪಂದ್ಯಗಳಲ್ಲಿ ನಾಲ್ಕು ಅರ್ಧಶತಕ, 1 ಶತಕ ಸಿಡಿಸಿ ಒಟ್ಟು 575 ರನ್ ಕಲೆಹಾಕಿ ಮೂರನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ
Image
SRH vs RCB: ಆರ್​ಸಿಬಿ ಟಾಸ್ ಗೆದ್ದರೆ ಏನು ಆಯ್ಕೆ ಮಾಡಿಕೊಳ್ಳಬೇಕು?: ಹೈದರಾಬಾದ್ ಪಿಚ್ ಹೇಗಿದೆ?
Image
SRH vs RCB, IPL 2023: ಐಪಿಎಲ್​ನಲ್ಲಿಂದು ಆರ್​ಸಿಬಿ ಪಂದ್ಯ: ಹೈದರಾಬಾದ್ ವಿರುದ್ಧ ಗೆಲ್ಲಲೇ ಬೇಕಿದೆ ಫಾಫ್ ಪಡೆ
Image
IPL 2023: ಬೌಲಿಂಗ್ ಅಭ್ಯಾಸ ನಡೆಸಿದ ವಿರಾಟ್ ಕೊಹ್ಲಿ: SRH ವಿರುದ್ಧ ಬೌಲ್ ಮಾಡ್ತಾರಾ?
Image
IPL 2023: ಸಿಕ್ಸ್ ಸಿಡಿಸುವುದರಲ್ಲಿ RCB ಬ್ಯಾಟರ್​ಗಳೇ ಮುಂದು..!

ಪರ್ಪಲ್ ಕ್ಯಾಪ್:

ಗುಜರಾತ್ ಟೈಟಾನ್ಸ್ ತಂಡದ ಮೊಹಮ್ಮದ್ ಶಮಿ ಪರ್ಪಲ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿದ 13 ಪಂದ್ಯಗಳಲ್ಲಿ 23 ವಿಕೆಟ್ ಪಡೆದುಕೊಂಡಿದ್ದಾರೆ. ಇದೇ ತಂಡದ ರಶೀದ್ ಖಾನ್ ಕೂಡ 13 ಪಂದ್ಯಗಳಲ್ಲಿ 23 ವಿಕೆಟ್ ಪಡೆದು ದ್ವಿತೀಯ ಸ್ಥಾನದಲ್ಲಿದ್ದಾರೆ. ರಾಜಸ್ಥಾನ್ ರಾಯಲ್ಸ್ ತಂಡದ ಸ್ಪಿನ್ನರ್ ಯುಜ್ವೇಂದ್ರ ಚಹಲ್ 13 ಪಂದ್ಯಗಳಿಂದ 21 ವಿಕೆಟ್ ಪಡೆದು ತೃತೀಯ ಸ್ಥಾನದಲ್ಲಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:28 am, Thu, 18 May 23