AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hardik Pandya: ಟಿ20 ವಿಶ್ವಕಪ್​ಗೆ ಹಾರ್ದಿಕ್ ಪಾಂಡ್ಯ ಆಯ್ಕೆ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಬೌಲಿಂಗ್ ಕೋಚ್

Team India: ಬೆನ್ನು ನೋವಿನಿಂದ ಬಳಲುತ್ತಿರುವ ಹಾರ್ದಿಕ್ ಪಾಂಡ್ಯ 2019 ರ ವಿಶ್ವಕಪ್ ಬಳಿಕ ಬೌಲಿಂಗ್ ಮಾಡುತ್ತಿರಲಿಲ್ಲ. ಇದಾಗ್ಯೂ ಆಸ್ಟ್ರೇಲಿಯಾ ಪ್ರವಾಸದ ವೇಳೆ ಒಂದೆರೆಡು ಓವರ್​ಗಳನ್ನು ಎಸೆದಿದ್ದರು.

Hardik Pandya: ಟಿ20 ವಿಶ್ವಕಪ್​ಗೆ ಹಾರ್ದಿಕ್ ಪಾಂಡ್ಯ ಆಯ್ಕೆ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಬೌಲಿಂಗ್ ಕೋಚ್
Hardik Pandya
TV9 Web
| Edited By: |

Updated on:Aug 22, 2021 | 5:58 PM

Share

ವಿರಾಟ್ ಕೊಹ್ಲಿ (Virat Kohli) ನೇತೃತ್ವದ ಟೀಮ್ ಇಂಡಿಯಾ (Team India) ಆಟಗಾರರು ಪ್ರಸ್ತುತ ಇಂಗ್ಲೆಂಡ್ (England) ಪ್ರವಾಸದಲ್ಲಿದ್ದಾರೆ. ಈ ಸರಣಿ ಬೆನ್ನಲ್ಲೇ ಐಪಿಎಲ್ (IPL 2021) ಆಟಗಾರರು ಯುಎಇಗೆ ಪ್ರಯಾಣ ಬೆಳೆಸಲಿದ್ದಾರೆ. ಇದರ ಬೆನ್ನಲ್ಲೇ ಟಿ20 ವಿಶ್ವಕಪ್ (T20 World Cup)​ ಕೂಡ ಆರಂಭವಾಗಲಿದೆ. ಹೀಗಾಗಿ ತಂಡದ ಪ್ರಮುಖ ಆಟಗಾರರು ಫಿಟ್​ನೆಸ್​ ಮೇಲೆ ಗಮನಹರಿಸಿದ್ದಾರೆ. ಇನ್ನು ವಿಶ್ವಕಪ್​ಗಾಗಿ ಆಯ್ಕೆ ಮಾಡಲಾಗುವ 18 ಸದಸ್ಯರ ಟೀಮ್ ಇಂಡಿಯಾದಲ್ಲಿ ಯಾರಿಗೆಲ್ಲಾ ಸ್ಥಾನ ಸಿಗಲಿದೆ ಎಂಬುದು ಕೂಡ ಈಗ ಚರ್ಚಾ ವಿಷಯವಾಗಿದೆ. ಏಕೆಂದರೆ ಒಂದೆಡೆ ಶ್ರೇಯಸ್ ಅಯ್ಯರ್ (Shreyas Iyer) ಗಾಯದಿಂದ ಈಗಷ್ಟೇ ಚೇತರಿಸಿಕೊಂಡಿದ್ದರೆ, ಮತ್ತೊಂದೆಡೆ ಹಾರ್ದಿಕ್ ಪಾಂಡ್ಯ (Hardik Pandya) ಫಿಟ್​ನೆಸ್ ಮೇಲೆ ಅನುಮಾನಗಳಿವೆ. ಅದರಲ್ಲೂ ಪಾಂಡ್ಯ ಶ್ರೀಲಂಕಾ ವಿರುದ್ದದ ಸರಣಿಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳಲು ಸಹ ಸಾಧ್ಯವಾಗಿರಲಿಲ್ಲ. ಇದಾಗ್ಯೂ ಟೀಮ್ ಇಂಡಿಯಾ ಟಿ20 ತಂಡಕ್ಕೆ ಆಲ್​ರೌಂಡರ್ ಸ್ಥಾನದಲ್ಲಿ ಪಾಂಡ್ಯ ಅನಿವಾರ್ಯ.

ಇತ್ತ ಹಾರ್ದಿಕ್ ಪಾಂಡ್ಯ ಕೂಡ ತಂಡದಲ್ಲಿ ಸ್ಥಾನ ಪಡೆಯಲು ಕಸರತ್ತನ್ನು ಆರಂಭಿಸಿದ್ದಾರೆ. ಅದರಂತೆ ಲಂಕಾ ಪ್ರವಾಸದಲ್ಲಿ ಟೀಮ್ ಇಂಡಿಯಾ ಬೌಲಿಂಗ್ ಕೋಚ್ ಆಗಿದ್ದ ಪರಸ್ ಮಾಂಬ್ರೆ ಸಲಹೆಯಂತೆ ಬೌಲಿಂಗ್ ಅಭ್ಯಾಸ ನಡೆಸುತ್ತಿದ್ದಾರೆ. ವಿಶ್ವಕಪ್​ಗೆ ಇನ್ನೂ ಕೂಡ ದಿನಗಳಿದ್ದು, ಇದೀಗ ಪಾಂಡ್ಯ ಬ್ಯಾಟಿಂಗ್ ಜೊತೆ ಬೌಲಿಂಗ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಇದಾಗ್ಯೂ ಅವರ ಓವರ್‌ಗಳ ಸಂಖ್ಯೆಯಲ್ಲಿ ಯಾವುದೇ ಒತ್ತಡ ಹೇರಲಾಗುತ್ತಿಲ್ಲ ಎಂದು ಮಾಂಬ್ರೆ ತಿಳಿಸಿದ್ದಾರೆ.

ಬೌಲಿಂಗ್​ನಲ್ಲಿ ಪಾಂಡ್ಯ ನಿಧಾನವಾಗಿ ಟ್ರ್ಯಾಕ್​ಗೆ ಮರಳುತ್ತಿದ್ದು, ಬ್ಯಾಟಿಂಗ್ ಜೊತೆ ಬೌಲಿಂಗ್ ಪ್ರದರ್ಶನ ಸೇರಿದರೆ ಆತ ಬೇರೆ ಮಟ್ಟ ಆಟಗಾರನಾಗುತ್ತಾನೆ. ಹೀಗಾಗಿ ಪ್ರತಿಯೊಂದು ಅಂಶವನ್ನು ಇಲ್ಲಿ ಕೇಂದ್ರಿಕರಿಸಿ ಅಭ್ಯಾಸ ನಡೆಸಲಾಗುತ್ತಿದೆ. ಖಂಡಿತವಾಗಿಯೂ ಹಾರ್ದಿಕ್ ಪಾಂಡ್ಯ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವ ವಿಶ್ವಾಸವಿದೆ ಎಂದು ಮಾಂಬ್ರೆ ತಿಳಿಸಿದ್ದಾರೆ.

ಬೆನ್ನು ನೋವಿನಿಂದ ಬಳಲುತ್ತಿರುವ ಹಾರ್ದಿಕ್ ಪಾಂಡ್ಯ 2019 ರ ವಿಶ್ವಕಪ್ ಬಳಿಕ ಬೌಲಿಂಗ್ ಮಾಡುತ್ತಿರಲಿಲ್ಲ. ಇದಾಗ್ಯೂ ಆಸ್ಟ್ರೇಲಿಯಾ ಪ್ರವಾಸದ ವೇಳೆ ಒಂದೆರೆಡು ಓವರ್​ಗಳನ್ನು ಎಸೆದಿದ್ದರು. ಇದೀಗ ಬೌಲಿಂಗ್ ಮಾಡದ ಕಾರಣ ಟೆಸ್ಟ್ ತಂಡದಿಂದ ಪಾಂಡ್ಯ ಸ್ಥಾನ ಕಳೆದುಕೊಂಡಿದ್ದಾರೆ. ಇದರ ಬೆನ್ನಲ್ಲೇ ಶ್ರೀಲಂಕಾ ಪ್ರವಾಸದಲ್ಲಿ ಏಕದಿನ ಸರಣಿಯಲ್ಲಿ 3 ಪಂದ್ಯಗಳಲ್ಲಿ ಮಾಡಿದ್ದು ಕೇವಲ 14 ಓವರ್ ಮಾತ್ರ. ಹಾಗೆಯೇ ಟಿ20ಯಲ್ಲಿ  ಬೌಲಿಂಗ್ ಮಾಡಿದರೂ, ಸಂಪೂರ್ಣ 4 ಓವರ್ ಎಸೆಯುವ ಪ್ರಯತ್ನ ಮಾಡಿರಲಿಲ್ಲ. ಇದೀಗ ಟಿ20 ವಿಶ್ವಕಪ್​ ತಂಡಕ್ಕೆ ಪಾಂಡ್ಯ ಆಯ್ಕೆ ಆಗಬೇಕಿದ್ದರೆ ಆಲ್​ರೌಂಡರ್ ಪ್ರದರ್ಶನ ನೀಡಲೇಬೇಕು. ಹೀಗಾಗಿ ಮತ್ತೆ ಬೌಲಿಂಗ್​ನತ್ತ ಹೆಚ್ಚು ಗಮನಹರಿಸುತ್ತಿದ್ದು, ಈ ಮೂಲಕ ಆಲ್​ರೌಂಡರ್ ಆಗಿ ಮತ್ತೆ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದಾ ಹಾರ್ದಿಕ್ ಪಾಂಡ್ಯ.

ಇದನ್ನೂ ಓದಿ:Afghanistan Crisis: ತಾಲಿಬಾನ್ ಗ್ಯಾಂಗ್​ ಜೊತೆ ಕಾಣಿಸಿಕೊಂಡ ಅಫ್ಘಾನಿಸ್ತಾನ್ ಕ್ರಿಕೆಟಿಗ 

ಇದನ್ನೂ ಓದಿ: 17 ವರ್ಷದ ಹುಡುಗಿಗೆ 35 ವರ್ಷದವನ ಜೊತೆ ಲವ್ವಿ-ಡವ್ವಿ: ಲಾಡ್ಜ್​ನಲ್ಲಿ ಇಬ್ಬರನ್ನು ನೋಡಿ ಬೆಚ್ಚಿಬಿದ್ದ ಸಿಬ್ಬಂದಿ

ಇದನ್ನೂ ಓದಿ: Tim David: Rcb ತಂಡ ಸಿಂಗಾಪೂರ್ ಕ್ರಿಕೆಟಿಗನನ್ನು ಆಯ್ಕೆ ಮಾಡಿದ್ದು ಯಾಕೆ? ಇಲ್ಲಿದೆ ಉತ್ತರ

Published On - 5:55 pm, Sun, 22 August 21

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ