IPL 2022: ಐಪಿಎಲ್ 2022 ರಲ್ಲಿ ಮೋಸ ನಡೆದಿದೆ ಎಂದು ಸುಬ್ರಮಣಿಯನ್ ಸ್ವಾಮಿ ಗಂಭೀರ ಆರೋಪ

IPL 2022 Match Fixing: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅಕ್ರಮ ಎಸಗಲಾಗಿದೆ ಎಂದು ಹಿರಿಯ ಬಿಜೆಪಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ. ಟಾಟಾ ಐಪಿಎಲ್‍ನಲ್ಲಿ ಕಳ್ಳಾಟ ನಡೆದಿದೆ ಎಂಬ ಮಾಹಿತಿ ಗುಪ್ತಚರ ಸಂಸ್ಥೆಗಳಿಂದ ಹರಿದಾಡುತ್ತಿದೆ. ಈ ಬಗ್ಗೆ ಪಿಐಎಲ್ ಸಲ್ಲಿಸುವ ಅಗತ್ಯ ಬರಬಹುದು ಎಂದು ಹೇಳಿದ್ದಾರೆ.

IPL 2022: ಐಪಿಎಲ್ 2022 ರಲ್ಲಿ ಮೋಸ ನಡೆದಿದೆ ಎಂದು ಸುಬ್ರಮಣಿಯನ್ ಸ್ವಾಮಿ ಗಂಭೀರ ಆರೋಪ
Subramanian Swamy and Hardik Pandya
Follow us
| Updated By: Vinay Bhat

Updated on:Jun 03, 2022 | 12:31 PM

ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಟೂರ್ನಿ ಎಂಬ ಹೆಗ್ಗಳಿಕೆ ಪಡೆದುಕೊಂಡಿರುವ ಇಂಡಿಯನ್ ಪ್ರೀಮಿಯರ್ (IPL 2022) ಲೀಗ್​ನಲ್ಲಿ ಅಕ್ರಮ ಎಸಗಲಾಗಿದೆ ಎಂದು ಹಿರಿಯ ಬಿಜೆಪಿ ಸದಸ್ಯ ಸುಬ್ರಮಣಿಯನ್ ಸ್ವಾಮಿ (Subramanian Swamy) ಟ್ವೀಟ್ ಮಾಡಿದ್ದಾರೆ. ಟಾಟಾ ಐಪಿಎಲ್‍ನಲ್ಲಿ ಕಳ್ಳಾಟ ನಡೆದಿದೆ ಎಂಬ ಮಾಹಿತಿ ಗುಪ್ತಚರ ಸಂಸ್ಥೆಗಳಿಂದ ಹರಿದಾಡುತ್ತಿದೆ. ಅಮಿತ್ ಶಾ (Amit Shah) ಪುತ್ರ ಜಯ್ ಶಾ ಬಿಸಿಸಿಐನ ಸರ್ವಾಧಿಕಾರಿಯಾಗಿರುವುದರಿಂದ ಈ ಬಗ್ಗೆ ಸರ್ಕಾರ ತನಿಖೆ ನಡೆಸುವುದು ಅನುಮಾನ ಹಾಗಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸುವ ಅಗತ್ಯ ಬರಬಹುದು ಎಂದು ಸುಬ್ರಮಣಿಯನ್ ಸ್ವಾಮಿ ಬಾಂಬ್ ಸಿಡಿಸಿದ್ದಾರೆ.

ಈ ಬಗ್ಗೆ ಗುರುವಾರ ಬೆಳಗ್ಗೆ ಟ್ವೀಟ್‌ ಮಾಡಿರುವ ಸ್ವಾಮಿ, ‘ಟಾಟಾ ಐಪಿಎಲ್ ಕ್ರಿಕೆಟ್ ಫಲಿತಾಂಶದಲ್ಲಿ ಮೋಸವಾಗಿದೆ ಎಂದು ಗುಪ್ತಚರ ಸಂಸ್ಥೆಗಳಲ್ಲಿ ವ್ಯಾಪಕವಾದ ಚರ್ಚೆ ನಡೆದಿದೆ. ಈ ಅನುಮಾನದ ನಿವಾರಣೆಗೆ ತನಿಖೆ ನಡೆಯಬೇಕಾಗಬಹುದು. ಆದರೆ, ಅಮಿತ್ ಶಾ ಅವರ ಪುತ್ರನೇ ಬಿಸಿಸಿಐನ ವಾಸ್ತವ ಸರ್ವಾಧಿಕಾರಿಯಾಗಿರುವುದರಿಂದ ಸರ್ಕಾರ ತನಿಖೆ ನಡೆಸುವುದಿಲ್ಲ. ಹಾಗಾಗಿ ಪಿಐಎಲ್‌ ಅಗತ್ಯವಾಗಬಹುದು’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
Lionel Messi: ಫೈನಲಿಸಿಮಾ ಕಪ್ ಗೆದ್ದುಕೊಂಡ ಅರ್ಜೆಂಟಿನಾ: ಲಿಯೊನೆಲ್ ಮೆಸ್ಸಿ ವಿಶೇಷ ಸಾಧನೆ
Image
ENG vs NZ, 1st Test: ಲಾರ್ಡ್​​ನಲ್ಲಿ ವಿಕೆಟ್​ಗಳ ಸುರಿಮಳೆ: ಮೊದಲ ದಿನವೇ ಪತನಗೊಂಡವು 17 ವಿಕೆಟ್ಸ್
Image
ಕಳಪೆ ಫಾರ್ಮ್​, ತಂಡದಿಂದ ಕೋಕ್.. ಐಪಿಎಲ್‌ನಲ್ಲೂ ಸೈಲೆಂಟ್, ಈಗ ಗಾಯದ ಸಮಸ್ಯೆ; ರಹಾನೆ ತಂಡಕ್ಕೆ ಮರಳುವುದು ಯಾವಾಗ?
Image
ಉಮ್ರಾನ್ ಭಾರತೀಯ ಕ್ರಿಕೆಟ್‌ನ ಅದ್ಭುತ ಆವಿಷ್ಕಾರ! ಮುಂದೊಂದು ದಿನ ಅಖ್ತರ್ ದಾಖಲೆ ಮುರಿಯುತ್ತಾನೆ; ಬ್ರೆಟ್ ಲೀ

IND vs SA: ಕೆಎಲ್, ಕೋಚ್ ದ್ರಾವಿಡ್​ಗೆ ಶುರುವಾಗಿದೆ ಒಂದಲ್ಲ ಎರಡಲ್ಲ ಮೂರು ಹೊಸ ಟೆನ್ಶನ್

ಮೇ 29ರಂದು ಗುಜರಾತ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಫೈನಲ್‌ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್‌ ವಿರುದ್ಧ ಗೆಲುವು ಸಾಧಿಸಿದ್ದ ಹಾರ್ದಿಕ್‌ ಪಾಂಡ್ಯ ನೇತೃತ್ವದ ‘ಗುಜರಾತ್‌ ಟೈಟನ್ಸ್‌’ ಕಪ್‌ ತನ್ನದಾಗಿಸಿಕೊಂಡಿತ್ತು. ಗುಜರಾತ್ ಟೈಟನ್ಸ್‌ ಇದೇ ಮೊದಲ ಬಾರಿಗೆ ಐಪಿಎಲ್‌ನಲ್ಲಿ ಕಣಕ್ಕಿಳಿದಿತ್ತು. ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಬದಲು ಬ್ಯಾಟಿಂಗ್ ಸೆಲೆಕ್ಟ್ ಮಾಡಿದರು. ಗುಜರಾತ್ ಚೇಸಿಂಗ್​ನಲ್ಲಿ ಕಿಂಗ್ ಎಂದು ತಿಳಿದಿದ್ದರೂ ಆರ್ ಆರ್ ತೆಗೆದುಕೊಂಡ ಈ ನಿರ್ಧಾರ ಎಲ್ಲರ ಅಚ್ಚರಿಗೆ ಕಾರಣವಾಗಿತ್ತು. ಫೈನಲ್ ಪಂದ್ಯ ವೀಕ್ಷಣೆಗಾಗಿ ಸ್ಟೇಡಿಯಂಗೆ ಅಮಿತ್ ಶಾ ದಂಪತಿ ಆಗಮಿಸಿದ್ದರು.

ಈ ಬಾರಿಯ ಕೂಟದಲ್ಲಿ ಫಿಕ್ಸಿಂಗ್‌ ನಡೆದಿರಬಹುದು ಎಂಬ ಅನುಮಾನಗಳು ಈಗಾಗಲೇ ವ್ಯಾಪಕವಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲೂ ಕಾವೇರಿದ ಚರ್ಚೆ ನಡೆದಿದೆ. ಹೀಗಿರುವಾಗಲೇ ಸುಬ್ರಮಣಿಯನ್‌ ಸ್ವಾಮಿ ಅವರು ಮಾಡಿರುವ ಟ್ವೀಟ್‌ ಅನುಮಾನಗಳನ್ನು ಮತ್ತಷ್ಟು ಹೆಚ್ಚಿಸಿದೆ. ಇದಕ್ಕೆಲ್ಲ ಸದ್ಯದಲ್ಲೇ ಸ್ಪಷ್ಟ ಉತ್ತರ ಸಿಗುವ ನಿರೀಕ್ಷೆಯಿದೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:31 pm, Fri, 3 June 22

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು