ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಟೂರ್ನಿ ಎಂಬ ಹೆಗ್ಗಳಿಕೆ ಪಡೆದುಕೊಂಡಿರುವ ಇಂಡಿಯನ್ ಪ್ರೀಮಿಯರ್ (IPL 2022) ಲೀಗ್ನಲ್ಲಿ ಅಕ್ರಮ ಎಸಗಲಾಗಿದೆ ಎಂದು ಹಿರಿಯ ಬಿಜೆಪಿ ಸದಸ್ಯ ಸುಬ್ರಮಣಿಯನ್ ಸ್ವಾಮಿ (Subramanian Swamy) ಟ್ವೀಟ್ ಮಾಡಿದ್ದಾರೆ. ಟಾಟಾ ಐಪಿಎಲ್‍ನಲ್ಲಿ ಕಳ್ಳಾಟ ನಡೆದಿದೆ ಎಂಬ ಮಾಹಿತಿ ಗುಪ್ತಚರ ಸಂಸ್ಥೆಗಳಿಂದ ಹರಿದಾಡುತ್ತಿದೆ. ಅಮಿತ್ ಶಾ (Amit Shah) ಪುತ್ರ ಜಯ್ ಶಾ ಬಿಸಿಸಿಐನ ಸರ್ವಾಧಿಕಾರಿಯಾಗಿರುವುದರಿಂದ ಈ ಬಗ್ಗೆ ಸರ್ಕಾರ ತನಿಖೆ ನಡೆಸುವುದು ಅನುಮಾನ ಹಾಗಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸುವ ಅಗತ್ಯ ಬರಬಹುದು ಎಂದು ಸುಬ್ರಮಣಿಯನ್ ಸ್ವಾಮಿ ಬಾಂಬ್ ಸಿಡಿಸಿದ್ದಾರೆ.
ಈ ಬಗ್ಗೆ ಗುರುವಾರ ಬೆಳಗ್ಗೆ ಟ್ವೀಟ್ ಮಾಡಿರುವ ಸ್ವಾಮಿ, ‘ಟಾಟಾ ಐಪಿಎಲ್ ಕ್ರಿಕೆಟ್ ಫಲಿತಾಂಶದಲ್ಲಿ ಮೋಸವಾಗಿದೆ ಎಂದು ಗುಪ್ತಚರ ಸಂಸ್ಥೆಗಳಲ್ಲಿ ವ್ಯಾಪಕವಾದ ಚರ್ಚೆ ನಡೆದಿದೆ. ಈ ಅನುಮಾನದ ನಿವಾರಣೆಗೆ ತನಿಖೆ ನಡೆಯಬೇಕಾಗಬಹುದು. ಆದರೆ, ಅಮಿತ್ ಶಾ ಅವರ ಪುತ್ರನೇ ಬಿಸಿಸಿಐನ ವಾಸ್ತವ ಸರ್ವಾಧಿಕಾರಿಯಾಗಿರುವುದರಿಂದ ಸರ್ಕಾರ ತನಿಖೆ ನಡೆಸುವುದಿಲ್ಲ. ಹಾಗಾಗಿ ಪಿಐಎಲ್ ಅಗತ್ಯವಾಗಬಹುದು’ ಎಂದು ಅವರು ಹೇಳಿದ್ದಾರೆ.
IND vs SA: ಕೆಎಲ್, ಕೋಚ್ ದ್ರಾವಿಡ್ಗೆ ಶುರುವಾಗಿದೆ ಒಂದಲ್ಲ ಎರಡಲ್ಲ ಮೂರು ಹೊಸ ಟೆನ್ಶನ್
There is widespread feeling in intelligence agencies that the Tata IPL Cricket outcomes were rigged. It may require a probe to clear the air for which PIL may be necessary since Govt will not do it as Amit Shah’s son is defacto dictator of BCCI
— Subramanian Swamy (@Swamy39) June 2, 2022
ಮೇ 29ರಂದು ಗುಜರಾತ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆಲುವು ಸಾಧಿಸಿದ್ದ ಹಾರ್ದಿಕ್ ಪಾಂಡ್ಯ ನೇತೃತ್ವದ ‘ಗುಜರಾತ್ ಟೈಟನ್ಸ್’ ಕಪ್ ತನ್ನದಾಗಿಸಿಕೊಂಡಿತ್ತು. ಗುಜರಾತ್ ಟೈಟನ್ಸ್ ಇದೇ ಮೊದಲ ಬಾರಿಗೆ ಐಪಿಎಲ್‌ನಲ್ಲಿ ಕಣಕ್ಕಿಳಿದಿತ್ತು. ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಬದಲು ಬ್ಯಾಟಿಂಗ್ ಸೆಲೆಕ್ಟ್ ಮಾಡಿದರು. ಗುಜರಾತ್ ಚೇಸಿಂಗ್ನಲ್ಲಿ ಕಿಂಗ್ ಎಂದು ತಿಳಿದಿದ್ದರೂ ಆರ್ ಆರ್ ತೆಗೆದುಕೊಂಡ ಈ ನಿರ್ಧಾರ ಎಲ್ಲರ ಅಚ್ಚರಿಗೆ ಕಾರಣವಾಗಿತ್ತು. ಫೈನಲ್ ಪಂದ್ಯ ವೀಕ್ಷಣೆಗಾಗಿ ಸ್ಟೇಡಿಯಂಗೆ ಅಮಿತ್ ಶಾ ದಂಪತಿ ಆಗಮಿಸಿದ್ದರು.
ಈ ಬಾರಿಯ ಕೂಟದಲ್ಲಿ ಫಿಕ್ಸಿಂಗ್ ನಡೆದಿರಬಹುದು ಎಂಬ ಅನುಮಾನಗಳು ಈಗಾಗಲೇ ವ್ಯಾಪಕವಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲೂ ಕಾವೇರಿದ ಚರ್ಚೆ ನಡೆದಿದೆ. ಹೀಗಿರುವಾಗಲೇ ಸುಬ್ರಮಣಿಯನ್ ಸ್ವಾಮಿ ಅವರು ಮಾಡಿರುವ ಟ್ವೀಟ್ ಅನುಮಾನಗಳನ್ನು ಮತ್ತಷ್ಟು ಹೆಚ್ಚಿಸಿದೆ. ಇದಕ್ಕೆಲ್ಲ ಸದ್ಯದಲ್ಲೇ ಸ್ಪಷ್ಟ ಉತ್ತರ ಸಿಗುವ ನಿರೀಕ್ಷೆಯಿದೆ.
ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 12:31 pm, Fri, 3 June 22