Legends League Cricket: ಕ್ರಿಕೆಟ್ ಅಖಾಡಕ್ಕೆ ಮತ್ತೆ ಎಂಟ್ರಿಕೊಟ್ಟ ಬಿಜೆಪಿ ಸಂಸದ ಗೌತಮ್ ಗಂಭೀರ್..!

| Updated By: ಪೃಥ್ವಿಶಂಕರ

Updated on: Aug 20, 2022 | 3:18 PM

Gautam Gambhir: ಈ ವಿಷಯವನ್ನು ಗಂಭೀರ್ ಖಚಿತಪಡಿಸಿದ್ದು, ಮತ್ತೆ ಕ್ರಿಕೆಟ್ ಕ್ಷೇತ್ರಕ್ಕೆ ಪ್ರವೇಶಿಸಲು ಕಾತರದಿಂದ ಕಾಯುತ್ತಿದ್ದೇನೆ. ಲೆಜೆಂಡ್ಸ್ ಲೀಗ್ ಕ್ರಿಕೆಟ್‌ನಲ್ಲಿ ದಿಗ್ಗಜ ಆಟಗಾರರೊಂದಿಗೆ ಆಡುವ ಅವಕಾಶ ಸಿಕ್ಕಿರುವುದಕ್ಕೆ ತುಂಬಾ ಖುಷಿಯಾಗುತ್ತಿದೆ ಎಂದು ಗೌತಿ ಹೇಳಿದ್ದಾರೆ.

Legends League Cricket: ಕ್ರಿಕೆಟ್ ಅಖಾಡಕ್ಕೆ ಮತ್ತೆ ಎಂಟ್ರಿಕೊಟ್ಟ ಬಿಜೆಪಿ ಸಂಸದ ಗೌತಮ್ ಗಂಭೀರ್..!
Follow us on

ಗೌತಮ್ ಗಂಭೀರ್ (Gautam Gambhir) ಕ್ರಿಕೆಟಿಗರಾಗಿ ಭಾರತ ತಂಡಕ್ಕೆ ಏಕಾಂಗಿಯಾಗಿ ಹಲವು ವಿಜಯಗಳನ್ನು ನೀಡಿದ್ದಾರೆ. 2007ರ ಟಿ20 ವಿಶ್ವಕಪ್ (T20 World Cup), 2011ರ ಏಕದಿನ ವಿಶ್ವಕಪ್ (2011 World Cup) ಫೈನಲ್‌ನಲ್ಲಿ ಅವರು ಆಡಿದ ಇನ್ನಿಂಗ್ಸ್‌ಗಳನ್ನು ಯಾರೂ ಮರೆಯುವಂತಿಲ್ಲ. ಈ ಎಡಗೈ ಬ್ಯಾಟ್ಸ್‌ಮನ್ ಐಪಿಎಲ್‌ನಲ್ಲಿ ಎರಡು ಬಾರಿ ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ತಂಡವನ್ನು ಚಾಂಪಿಯನ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಭಾರತೀಯ ಕ್ರಿಕೆಟ್‌ನಲ್ಲಿ ಹೆಸರು ಮಾಡಿದ ಗೌತಿ 2018 ರಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತರಾದರು. ನಂತರ ರಾಜಕೀಯ ಪ್ರವೇಶಿಸಿ ಸಂಸದರಾಗಿ ಸಂಸತ್ ಪ್ರವೇಶಿಸಿದರು.

ಈಗ ಮತ್ತೊಮ್ಮೆ ಕ್ರಿಕೆಟ್ ಕ್ಷೇತ್ರಕ್ಕೆ ಗೌತಿ ಕಾಲಿಡಲಿದ್ದು, ಲೆಜೆಂಡ್ಸ್ ಲೀಗ್ ಕ್ರಿಕೆಟ್‌ನ ಎರಡನೇ ಸೀಸನ್‌ನಲ್ಲಿ ಇಂಡಿಯಾ ಮಹರಾಜಸ್ ತಂಡದಲ್ಲಿ ಆಡಲಿದ್ದಾರೆ. ಈ ಲೀಗ್​ನಲ್ಲಿ ಮಾಜಿ ಭಾರತೀಯ ಕೋಚ್ ರವಿಶಾಸ್ತ್ರಿ ಕಮಿಷನರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಶುಕ್ರವಾರ ಈ ವಿಷಯವನ್ನು ಗಂಭೀರ್ ಖಚಿತಪಡಿಸಿದ್ದು, ಮತ್ತೆ ಕ್ರಿಕೆಟ್ ಕ್ಷೇತ್ರಕ್ಕೆ ಪ್ರವೇಶಿಸಲು ಕಾತರದಿಂದ ಕಾಯುತ್ತಿದ್ದೇನೆ. ಲೆಜೆಂಡ್ಸ್ ಲೀಗ್ ಕ್ರಿಕೆಟ್‌ನಲ್ಲಿ ದಿಗ್ಗಜ ಆಟಗಾರರೊಂದಿಗೆ ಆಡುವ ಅವಕಾಶ ಸಿಕ್ಕಿರುವುದಕ್ಕೆ ತುಂಬಾ ಖುಷಿಯಾಗುತ್ತಿದೆ ಎಂದು ಗೌತಿ ಹೇಳಿದ್ದಾರೆ.

ಇದನ್ನೂ ಓದಿ
Lucknow Super Giants Report Card: ಕಳಪೆ ಮಧ್ಯಮ ಕ್ರಮಾಂಕ, ಬಲಿಷ್ಠ ಬೌಲಿಂಗ್; ಇದು ಲಕ್ನೋ ತಂಡದ ರಿಪೋರ್ಟ್​ ಕಾರ್ಡ್
ಹರ್ಭಜನ್ ರಾಜ್ಯಸಭೆಗೆ? ಕರ್ಣಿ ಸಿಂಗ್‌ರಿಂದ ಹಿಡಿದು ಗಂಭೀರ್‌ವರೆಗೆ; ಕ್ರೀಡೆಯಲ್ಲಿ ಮಿಂಚಿ ಸಂಸದರಾದ ಕ್ರೀಡಾಪಟುಗಳಿವರು
Rishabh Pant: ಅಂದು ಧೋನಿಯ 90 ರನ್ ವಿಶ್ವಕಪ್ ಗೆಲ್ಲಿಸಿತು: ಪಂತ್ 96 ರನ್​ಗೆ ಔಟಾದ ಬಗ್ಗೆ ಗಂಭೀರ್ ಮಾತು

ಏತನ್ಮಧ್ಯೆ, ಲೆಜೆಂಡ್ಸ್ ಲೀಗ್ ಕ್ರಿಕೆಟ್-2022 ಸೀಸನ್ ಸೆಪ್ಟೆಂಬರ್ 17 ರಿಂದ ಪ್ರಾರಂಭವಾಗಲಿದೆ. ಈ ಟೂರ್ನಿಯಲ್ಲಿ ದಿಗ್ಗಜ ಆಟಗಾರರಿರುವ ಒಟ್ಟು ಆರು ತಂಡಗಳು ಭಾಗವಹಿಸಲಿವೆ. ಏತನ್ಮಧ್ಯೆ, ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಸೆಪ್ಟೆಂಬರ್ 16 ರಂದು ಈಡನ್ ಗಾರ್ಡನ್‌ನಲ್ಲಿ ಇಂಡಿಯಾ ಮಹಾರಾಜಸ್ ಮತ್ತು ವಿಶ್ವ ಜೈಂಟ್ಸ್ ನಡುವೆ ಚಾರಿಟಿ ಪಂದ್ಯ ನಡೆಯಲಿದೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಇಂಡಿಯಾ ಮಹಾರಾಜಸ್ ತಂಡವನ್ನು ಮುನ್ನಡೆಸಲಿದ್ದಾರೆ.ವಿಶ್ವ ದೈತ್ಯ ತಂಡವನ್ನು ಇಂಗ್ಲೆಂಡ್ ಮಾಜಿ ನಾಯಕ ಇಯಾನ್ ಮಾರ್ಗನ್ ಮುನ್ನಡೆಸಲಿದ್ದಾರೆ.