IND vs AUS, 4th Test Live Streaming: ಗೆದ್ದರೆ ನಿರಾಳ, ಸೋತರೆ ಸಂಕಷ್ಟ! ಕೊನೆಯ ಟೆಸ್ಟ್ ಪಂದ್ಯದ ಪೂರ್ಣ ಮಾಹಿತಿ ಇಲ್ಲಿದೆ
IND vs AUS, 4th Test Live Streaming: ಟೀಂ ಇಂಡಿಯಾ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ನೇರವಾಗಿ ಪ್ರವೇಶಿಸಬೇಕಾದರೆ ಅಹಮದಾಬಾದ್‌ನಲ್ಲಿ ನಡೆಯಲಿರುವ ಸರಣಿಯ ನಾಲ್ಕನೇ ಟೆಸ್ಟ್‌ನಲ್ಲಿ ಗೆಲ್ಲಲೇಬೇಕಾಗಿದೆ.
ಬಾರ್ಡರ್ ಗವಾಸ್ಕರ್ ಟ್ರೋಫಿ (Border Gavaskar Trophy ) ಟೆಸ್ಟ್ ಸರಣಿಯ ಅಂತಿಮ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ICC World Test Championship) ದೃಷ್ಟಿಕೋನದಿಂದ ಈ ಟೆಸ್ಟ್ ಟೀಂ ಇಂಡಿಯಾಕ್ಕೆ ಮಹತ್ವದಾಗಿದ್ದು, ಗೆಲ್ಲಲೇಬೇಕಾದ ಒತ್ತಡದಲ್ಲಿ ಟೀಂ ಇಂಡಿಯಾ ಇದೆ. ನಾಗ್ಪುರ ಮತ್ತು ದೆಹಲಿ ಟೆಸ್ಟ್‌ಗಳನ್ನು ಗೆದ್ದ ನಂತರ, ಇಂದೋರ್‌ನಲ್ಲಿ ನಡೆದ ಸರಣಿಯ ಮೂರನೇ ಟೆಸ್ಟ್‌ನಲ್ಲಿ ಭಾರತ ಸೋತಿತ್ತು. ಇಂದೋರ್‌ನಲ್ಲಿ ರೋಹಿತ್ ಶರ್ಮಾ (Rohit Sharma) ಬಳಗವನ್ನು ಸೋಲಿಸಿದ ಆಸ್ಟ್ರೇಲಿಯಾ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅರ್ಹತೆ ಗಳಿಸಿದೆ. ಇದೀಗ ಸೋಲಿನ ಆಘಾತ ಎದುರಿಸುತ್ತಿರುವ ಟೀಂ ಇಂಡಿಯಾ (Team India) ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ನೇರವಾಗಿ ಪ್ರವೇಶಿಸಬೇಕಾದರೆ ಅಹಮದಾಬಾದ್‌ನಲ್ಲಿ ನಡೆಯಲಿರುವ ಸರಣಿಯ ನಾಲ್ಕನೇ ಟೆಸ್ಟ್‌ನಲ್ಲಿ ಗೆಲ್ಲಲೇಬೇಕಾಗಿದೆ. ಒಂದು ವೇಳೆ ಈ ಟೆಸ್ಟ್ ಸೋತರೆ, ಇತರ ತಂಡಗಳ ಫಲಿತಾಂಶಗಳ ಮೇಲೆ ಅವಲಂಬನೆಯಾಗಬೇಕಾಗುತ್ತದೆ. ಪ್ರಸ್ತುತ ಭಾರತ 4 ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ.
ಹೀಗಾಗಿ ಅಹಮದಾಬಾದ್‌ನಲ್ಲಿ ಗೆದ್ದರೆ ಟೀಂ ಇಂಡಿಯಾ ಸರಣಿ ಗೆಲ್ಲಲಿದೆ. ಇತ್ತ ನಾಯಕ ಪ್ಯಾಟ್ ಕಮಿನ್ಸ್ ಇಲ್ಲದೆ ಕಣಕ್ಕಿಳಿಯುತ್ತಿರುವ ಆಸೀಸ್ ತಂಡದಲ್ಲೂ ಕೆಲವು ಪ್ರಮುಖ ಮುಖಗಳಿಲ್ಲ. ತನ್ನ ತಾಯಿಯ ಅನಾರೋಗ್ಯದ ಕಾರಣ ಮೂರನೇ ಟೆಸ್ಟ್‌ಗೆ ಮೊದಲು ಮನೆಗೆ ಮರಳಿದ್ದ ಕಮಿನ್ಸ್, ನಾಲ್ಕನೇ ಟೆಸ್ಟ್ನಿಂದಲೂ ಹೊರಗುಳಿದಿದ್ದಾರೆ. ಹೀಗಾಗಿ ಅವರ ಬದಲಿಗೆ ಸ್ಟೀವ್ ಸ್ಮಿತ್ ನಾಲ್ಕನೇ ಟೆಸ್ಟ್ನಲ್ಲೂ ತಂಡವನ್ನು ಮುನ್ನಡೆಸಲಿದ್ದಾರೆ. ಇದರಿಂದಾಗಿ ಸ್ಟೀವ್ ಸ್ಮಿತ್ ಸತತ ಎರಡು ಟೆಸ್ಟ್‌ಗಳಲ್ಲಿ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಲಿದ್ದಾರೆ. ಅಲ್ಲದೆ ಕೊನೆಯ ಟೆಸ್ಟ್ ಪಂದ್ಯಕ್ಕೆ ಭಾರತ ತಂಡ ಆಡುವ XI ನಲ್ಲಿ ಹಲವು ಬದಲಾವಣೆಗಳನ್ನು ಮಾಡುವ ಸಾಧ್ಯತೆಯಿದೆ. ಇಶಾನ್ ಕಿಸಾನ್ ಪಾದಾರ್ಪಣೆ ಮಾಡಬಹುದಾಗಿದ್ದು, ಮೊಹಮ್ಮದ್ ಸಿರಾಜ್ ಬದಲಿಗೆ ಮೊಹಮ್ಮದ್ ಶಮಿ ಕಣಕ್ಕಿಳಿಯುವ ಸಾಧ್ಯತೆಗಳಿವೆ.
Holi 2023: ಮದುವೆ ಬಳಿಕ ಟೀಂ ಇಂಡಿಯಾದ ಈ ನಾಲ್ವರು ಕ್ರಿಕೆಟಿಗರಿಗೆ ಇದು ಮೊದಲ ಹೋಳಿ ಸಂಭ್ರಮ
ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನೆ 4 ನೇ ಟೆಸ್ಟ್ ಪಂದ್ಯ ಯಾವಾಗ ಆರಂಭವಾಗಲಿದೆ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ನಾಳೆ (ಮಾರ್ಚ್ 9) ಗುರುವಾರದಿಂದ ಆರಂಭವಾಗಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ನೇ ಟೆಸ್ಟ್ ಪಂದ್ಯ ಎಲ್ಲಿ ನಡೆಯಲಿದೆ?
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ 4ನೇ ಟೆಸ್ಟ್ ಪಂದ್ಯ ನಡೆಯಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ನೇ ಟೆಸ್ಟ್ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ಬೆಳಗ್ಗೆ 9.30 ಕ್ಕೆ ಆರಂಭವಾಗಲಿದೆ. ಪಂದ್ಯಕ್ಕೂ ಮುನ್ನ 9 ಗಂಟೆಗೆ ಟಾಸ್ ನಡೆಯಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ನೇ ಟೆಸ್ಟ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೇ ಟೆಸ್ಟ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೋಡಬಹುದಾಗಿದೆ. ಅಲ್ಲದೆ ಮೊಬೈಲ್‌ನಲ್ಲಿ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ವೀಕ್ಷಿಸಬಹುದಾಗಿದೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 4:36 pm, Wed, 8 March 23