ಭಾರತ- ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಸರಣಿಯ ರೋಚಕತೆ ನವೆಂಬರ್ 22 ರಿಂದ ಪ್ರಾರಂಭವಾಗಲಿದೆ. ವೇಗದ ಬೌಲರ್‌ಗಳ ಸ್ವರ್ಗವೆಂದೇ ಕರೆಯಲ್ಪಡುವ ಪರ್ತ್‌ನಲ್ಲಿ ಸರಣಿಯ ಮೊದಲ ಪಂದ್ಯ ನಡೆಯಲಿದೆ. ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲು ಕಂಡಿರುವ ಟೀಂ ಇಂಡಿಯಾ ಕಾಂಗರೂ ನೆಲದಲ್ಲಿ ಅಬ್ಬರಿಸಲು ಹಾತೊರೆಯುತ್ತಿದೆ. ಆದಾಗ್ಯೂ, ಮೊದಲ ಟೆಸ್ಟ್‌ನಲ್ಲಿ ತಂಡವು ನಿಯಮಿತ ನಾಯಕ ರೋಹಿತ್ ಶರ್ಮಾ ಮತ್ತು ಶುಭ್ಮನ್ ಗಿಲ್ ಇಲ್ಲದೆ ಕಣಕ್ಕಿಳಿಯಬೇಕಿದೆ. ರೋಹಿತ್-ಗಿಲ್ ಅನುಪಸ್ಥಿತಿಯಿಂದ ಭಾರತ ತಂಡದ ಬ್ಯಾಟಿಂಗ್ ಕ್ರಮಾಂಕ ಕೊಂಚ ದುರ್ಬಲವಾಗಿ ಕಾಣುತ್ತಿದೆ. ಆದಾಗ್ಯೂ ಪ್ರತಿಭಾವಂತ ಯುವ ಪಡೆಯನ್ನು ಕಟ್ಟಿಕೊಂಡು, ಬಲಿಷ್ಠ ಕಾಂಗರೂಗಳನ್ನು ಹಣಿಯಲು ಜಸ್ಪ್ರೀತ್ ಬುಮ್ರಾ ಪಡೆ ಕಣಕ್ಕಿಳಿಯಲಿದೆ.
ಪರ್ತ್‌ನ ಆಪ್ಟಸ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾದ ದಾಖಲೆ ಅದ್ಭುತವಾಗಿದೆ. ಕಾಂಗರೂಗಳು ಈ ಮೈದಾನದಲ್ಲಿ ಇದುವರೆಗೆ ನಾಲ್ಕು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಇಲ್ಲಿಯವರೆಗೂ ಈ ಮೈದಾನದಲ್ಲಿ ಆಸ್ಟ್ರೇಲಿಯಾ ಸೋಲನ್ನು ಎದುರಿಸಿಲ್ಲ ಎಂಬುದು ಭಾರತ ತಂಡದ ಚಿಂತೆಗೆ ಕಾರಣವಾಗಿದೆ. ಆತಿಥೇಯ ತಂಡ ಆಪ್ಟಸ್ ಸ್ಟೇಡಿಯಂನಲ್ಲಿ ಒಟ್ಟು ನಾಲ್ಕು ಟೆಸ್ಟ್ ಪಂದ್ಯಗಳನ್ನು ಆಡಿದ್ದು, ನಾಲ್ಕರಲ್ಲಿಯೂ ಗೆಲುವು ಸಾಧಿಸಿದೆ. ಈ ಮೈದಾನದಲ್ಲಿ ಆಸ್ಟ್ರೇಲಿಯಾ ತನ್ನ ಮೊದಲ ಟೆಸ್ಟ್ ಪಂದ್ಯವನ್ನು ಭಾರತದ ವಿರುದ್ಧ ಆಡಿತ್ತು. ಅಲ್ಲಿ ಕಾಂಗರೂಗಳು 146 ರನ್‌ಗಳ ಭರ್ಜರಿ ಜಯ ಸಾಧಿಸಿತ್ತು.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯ ನವೆಂಬರ್ 22 ರಿಂದ 26 ರವರೆಗೆ ನಡೆಯಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯ ಪರ್ತ್‌ನ ಆಪ್ಟಸ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯವು ನವೆಂಬರ್ 22 ರಂದು (ಶುಕ್ರವಾರ) ಭಾರತೀಯ ಕಾಲಮಾನ ಬೆಳಿಗ್ಗೆ 7:50 ರಿಂದ ಆರಂಭವಾಗಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯದ ನೇರ ಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದು.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯವನ್ನು ನೀವು ಡಿಜಿಟಲ್ ಪ್ಲಾಟ್‌ಫಾರ್ಮ್‌ನಲ್ಲಿ ‘ಡಿಸ್ನಿ + ಹಾಟ್‌ಸ್ಟಾರ್’ ನಲ್ಲಿ ವೀಕ್ಷಿಸಬಹುದು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ