AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ನೋ ಬಾಲ್ ಎಸೆದು, ನೋ ಬಾಲ್ ಎಸೆಯುವುದು ಅಪರಾಧ ಎಂದ ಹಾರ್ದಿಕ್ ಪಾಂಡ್ಯ

IPL 2025 MI vs GT: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 56ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 156 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡಕ್ಕೆ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ 147 ರನ್​ಗಳ ಗುರಿ ನೀಡಲಾಗಿತ್ತು.

2 ನೋ ಬಾಲ್ ಎಸೆದು, ನೋ ಬಾಲ್ ಎಸೆಯುವುದು ಅಪರಾಧ ಎಂದ ಹಾರ್ದಿಕ್ ಪಾಂಡ್ಯ
Hardik Pandya
ಝಾಹಿರ್ ಯೂಸುಫ್
|

Updated on:May 07, 2025 | 10:55 AM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 56ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ವಿರುದ್ಧ ಗುಜರಾತ್ ಟೈಟಾನ್ಸ್ (GT) ತಂಡವು ರೋಚಕ ಜಯ ಸಾಧಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಖಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 155 ರನ್ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ಇನಿಂಗ್ಸ್​ಗೆ ಮಳೆ ಅಡಚಣೆಯನ್ನುಂಟು ಮಾಡಿದ ಪರಿಣಾಮ ಡಕ್​ವರ್ತ್ ಲೂಯಿಸ್ ಪ್ರಕಾರ, 19 ಓವರ್​ಗಳಲ್ಲಿ 147 ರನ್​ಗಳ ಗುರಿ ನೀಡಲಾಯಿತು. 19ನೇ ಓವರ್​ನ ಅಂತಿಮ ಎಸೆತದಲ್ಲಿ ಈ ಗುರಿಯನ್ನು ಮುಟ್ಟುವ ಮೂಲಕ ಗುಜರಾತ್ ಟೈಟಾನ್ಸ್ ತಂಡವು 3 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ.

ಈ ಸೋಲಿನ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ, ಟಿ20 ಕ್ರಿಕೆಟ್​ನಲ್ಲಿ ನೋ ಬಾಲ್ ಎಸೆಯುವುದು ಪರಮ ಅಪರಾಧ ಎಂದು ಬಣ್ಣಿಸಿದರು. ಏಕೆಂದರೆ ಈ ಪಂದ್ಯದ ಕೊನೆಯ ಓವರ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡಕ್ಕೆ 15 ರನ್​ಗಳ ಅವಶ್ಯಕತೆಯಿತ್ತು. ಈ ನಿರ್ಣಾಯಕ ಓವರ್​ನಲ್ಲಿ ದೀಪಕ್ ಚಹರ್ ನೋ ಬಾಲ್ ಎಸೆಯುವ ಮೂಲಕ ಹೆಚ್ಚುವರಿ ರನ್​ಗಳನ್ನು ಬಿಟ್ಟು ಕೊಟ್ಟಿದ್ದರು. ಇದನ್ನೆ ಪರೋಕ್ಷವಾಗಿ ಹಾರ್ದಿಕ್ ಪಾಂಡ್ಯ ನೋ ಬಾಲ್ ಎಸೆಯುವುದು ಅಪರಾಧ ಎಂದು ಬಣ್ಣಿಸಿದ್ದಾರೆ.

ಇದನ್ನೂ ಓದಿ
Image
ಬೋಲ್ಡ್ ಫೋಟೋಗೆ ಬೌಲ್ಡ್ ಆಗಿ ಸ್ಪಷ್ಟನೆ ನೀಡಿದ ವಿರಾಟ್ ಕೊಹ್ಲಿ
Image
IPL 2025: ಪ್ಲೇಆಫ್​ ಆಡಲಿರುವ 4 ತಂಡಗಳನ್ನು ಹೆಸರಿಸಿದ ಅಂಬಾಟಿ ರಾಯುಡು
Image
IPL 2025: ಕರುಣ್ ನಾಯರ್ ಡಕೌಟ್: ಈ ಬಾರಿ ಮುಂಬೈ ಇಂಡಿಯನ್ಸ್ ಚಾಂಪಿಯನ್ಸ್?
Image
IPL ನಲ್ಲಿ ಬದಲಾವಣೆ: ರೌಂಡ್ ರಾಬಿನ್ ಸ್ವರೂಪ, ಒಂದು ತಂಡಕ್ಕೆ 18 ಪಂದ್ಯ

ವಿಶೇಷ ಎಂದರೆ ಇದೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಒಂದೇ ಓವರ್​ನಲ್ಲಿ ಎರಡು ನೋ ಬಾಲ್ ಮಾಡಿದ್ದರು. ಈ ನೋ ಬಾಲ್​ ಮೂಲಕ ನೀಡಲಾದ ಫ್ರೀ ಹಿಟ್ ಎಸೆತದಲ್ಲಿ ಶುಭ್​ಮನ್ ಗಿಲ್ ಭರ್ಜರಿ ಸಿಕ್ಸ್ ಸಿಡಿಸಿದ್ದರು. ಇದಾಗ್ಯೂ ಮುಂಬೈ ಇಂಡಿಯನ್ಸ್ ತಂಡದ ನಾಯಕ ಕೊನೆಯ ನೋ ಬಾಲ್ ಅನ್ನು ಪ್ರಸ್ತಾಪಿಸಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ.

ಇನ್ನು ಈ ಪಂದ್ಯದ ಸೋಲನ್ನು ವಿಮರ್ಶಿಸಿದ ಹಾರ್ದಿಕ್ ಪಾಂಡ್ಯ, ಕಡಿಮೆ ಸ್ಕೋರ್​ಗಳಿಸಿದರೂ ನಾವು ಉತ್ತಮ ಪೈಪೋಟಿ ನೀಡಿದ್ದೇವೆ ಎಂದು ಭಾವಿಸುತ್ತೇನೆ. ಏಕೆಂದರೆ 150 ರನ್​ಗಳು ಕಠಿಣ ಸಾವಾಲಾಗಿರಲಿಲ್ಲ. ನಾವು ಇನ್ನೂ 25 ರನ್​ಗಳನ್ನು ಹೆಚ್ಚು ಗಳಿಸಬೇಕಿತ್ತು. ಇದಾಗ್ಯೂ ನಮ್ಮ ಬೌಲರ್​ಗಳು ಅತ್ಯುತ್ತಮ ಪ್ರದರ್ಶನ ನೀಡಿದರು. ಕೊನೆಯವರೆಗೆ ಹೋರಾಟ ಮುಂದುವರೆಸುವ ಮೂಲಕ ಪಂದ್ಯ ಗೆಲ್ಲಲು ಶ್ರಮಿಸಿದ್ದರು. ಹೀಗಾಗಿ ನಮ್ಮ ಬೌಲರ್​ಗಳು ಅಭಿನಂದನೆಗೆ ಅರ್ಹರು ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.

ಇದನ್ನೂ ಓದಿ: IPL 2025: ಹೀಗಾದ್ರೆ RCB ಐಪಿಎಲ್​ನಿಂದ ಹೊರಬೀಳುತ್ತೆ..!

ಇದೀಗ ಗುಜರಾತ್ ಟೈಟಾನ್ಸ್ ವಿರುದ್ಧ ಸೋತಿರುವ ಮುಂಬೈ ಇಂಡಿಯನ್ಸ್ ತಂಡವು ಅಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಕುಸಿದಿದೆ. ಇದಾಗ್ಯೂ ಮುಂಬೈ ಪಡೆಗೆ ಇನ್ನೂ 2 ಪಂದ್ಯಗಳಿದ್ದು, ಈ ಪಂದ್ಯಗಳಲ್ಲಿ ಜಯ ಗಳಿಸುವ ಮೂಲಕ ಪ್ಲೇಆಫ್​ನಲ್ಲಿ ತನ್ನ ಸ್ಥಾನ ಭದ್ರಪಡಿಸಿಕೊಳ್ಳಲು ಉತ್ತಮ ಅವಕಾಶವಿದೆ.

Published On - 10:55 am, Wed, 7 May 25

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಅಶ್ವಿನಿ ಗೌಡಗೆ ಮಾತಿನ ಮೂಲಕವೇ ಬುದ್ಧಿ ಕಲಿಸಿದ ಗಿಲ್ಲಿ ನಟ
ಅಶ್ವಿನಿ ಗೌಡಗೆ ಮಾತಿನ ಮೂಲಕವೇ ಬುದ್ಧಿ ಕಲಿಸಿದ ಗಿಲ್ಲಿ ನಟ
ILT20: ಮತ್ತೊಮ್ಮೆ ಫೈನಲ್​ಗೇರಿದ MI ಪಡೆ
ILT20: ಮತ್ತೊಮ್ಮೆ ಫೈನಲ್​ಗೇರಿದ MI ಪಡೆ