Boxing Day Test: ಇಂದಿನಿಂದ ಬಾಕ್ಸಿಂಗ್ ಡೇ ಟೆಸ್ಟ್ ಆರಂಭ; ಏನಿದರ ಇತಿಹಾಸ? ಇಲ್ಲಿದೆ ಪೂರ್ಣ ವಿವರ

Boxing Day Test: ನಿಗದಿಯಂತೆ ಪ್ರತಿ ವರ್ಷ ಡಿಸೆಂಬರ್ 26 ರಿಂದ ಪ್ರಾರಂಭವಾಗುವ ಟೆಸ್ಟ್ ಪಂದ್ಯವನ್ನು ಬಾಕ್ಸಿಂಗ್ ಡೇ ಟೆಸ್ಟ್ ಎಂದು ಕರೆಯಲಾಗುತ್ತದೆ.

Boxing Day Test: ಇಂದಿನಿಂದ ಬಾಕ್ಸಿಂಗ್ ಡೇ ಟೆಸ್ಟ್ ಆರಂಭ; ಏನಿದರ ಇತಿಹಾಸ? ಇಲ್ಲಿದೆ ಪೂರ್ಣ ವಿವರ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಪೃಥ್ವಿಶಂಕರ

Updated on:Dec 26, 2022 | 10:57 AM

ನಿಗದಿಯಂತೆ ಪ್ರತಿ ವರ್ಷ ಡಿಸೆಂಬರ್ 26 ರಿಂದ ಪ್ರಾರಂಭವಾಗುವ ಟೆಸ್ಟ್ ಪಂದ್ಯವನ್ನು ಬಾಕ್ಸಿಂಗ್ ಡೇ ಟೆಸ್ಟ್ (Boxing Day Test) ಎಂದು ಕರೆಯಲಾಗುತ್ತದೆ. ಈ ಟೆಸ್ಟ್ ಪಂದ್ಯವನ್ನು ವಿಶ್ವದ ಯಾವುದೇ ಭಾಗದಲ್ಲಾದರೂ ಆಡಲಾಗುತ್ತದೆ. ಆದರೆ, ಪ್ರಶ್ನೆ ಏನೆಂದರೆ, ಬಾಕ್ಸಿಂಗ್ ಡೇ ಎಂದರೇನು? ಡಿಸೆಂಬರ್ 26 ರಿಂದ ಪ್ರಾರಂಭವಾಗುವ ಟೆಸ್ಟ್ ಪಂದ್ಯವನ್ನು ಬಾಕ್ಸಿಂಗ್ ಡೇ ಎಂದು ಏಕೆ ಕರೆಯುತ್ತಾರೆ? ಎಂಬುದಾಗಿದೆ. ಇದೀಗ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ (Melbourne Cricket Ground) ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ (Australia and South Africa) ನಡುವೆ ನಡೆಯುತ್ತಿರುವ ಟೆಸ್ಟ್ ಕೂಡ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವಾಗಿದೆ. ಹಾಗದರೆ ಈ ಬಾಕ್ಸಿಂಡ್​ ಡೇ ಟೆಸ್ಟ್​ ಪಂದ್ಯದ ಇತಿಹಾಸವೇನು?ಇಲ್ಲಿದೆ ವಿವರ.

ಸಾಮಾನ್ಯವಾಗಿ ಕ್ರಿಸ್​ಮಸ್ ಮುಗಿದ ಮರುದಿನವನ್ನು ಬಾಕ್ಸಿಂಗ್ ಡೇ ಎಂದು ಕರೆಯಲಾಗುತ್ತದೆ. ಡಿ.25 ರಂದು ಕ್ರಿಸ್​ಮಸ್ ಮುಗಿದರೆ, ಡಿಸೆಂಬರ್ 26 ಅನ್ನು ಬಾಕ್ಸಿಂಗ್ ಡೇ ಎಂದು ಕರೆಯಲಾಗುತ್ತದೆ. ಇದನ್ನು ಗ್ರೇಟ್ ಬ್ರಿಟನ್, ಆಸ್ಟ್ರೇಲಿಯಾ, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ, ಕೆನಡಾದಂತಹ ಎಲ್ಲಾ ಕಾಮನ್‌ವೆಲ್ತ್ ದೇಶಗಳಲ್ಲಿ ಆಚರಿಸಲಾಗುತ್ತದೆ. ಹಾಗೆಯೇ ಈ ದಿನದಿಂದ ಪ್ರಾರಂಭವಾಗುವ ಟೆಸ್ಟ್ ಪಂದ್ಯವನ್ನು ಬಾಕ್ಸಿಂಗ್ ಡೇ ಟೆಸ್ಟ್ ಎಂದು ಕರೆಯಲಾಗುತ್ತದೆ.

IND vs BAN: ಬಾಂಗ್ಲಾ ವಿರುದ್ಧ ಟೆಸ್ಟ್ ಸರಣಿ ಗೆದ್ದ ಭಾರತ ಡಬ್ಲ್ಯುಟಿಸಿ ಫೈನಲ್ ಆಡಲು ಇನ್ನೇಷ್ಟು ಪಂದ್ಯ ಗೆಲ್ಲಬೇಕು?

ಬಾಕ್ಸಿಂಗ್ ಡೇ ಟೆಸ್ಟ್ ಎಂದರೇನು?

ಬಾಕ್ಸಿಂಗ್ ಡೇ ಬಗ್ಗೆ ಹಲವು ಕಥೆಗಳಿದ್ದು ಒಂದು ಕಥೆಯ ಪ್ರಕಾರ, ಚರ್ಚ್‌ನಲ್ಲಿ ಇರಿಸಲಾದ ಬಾಕ್ಸ್​ಗಳನ್ನು ಕ್ರಿಸ್​ಮಸ್​ನ ಮರುದಿನ ತೆರೆಯಲಾಗುತ್ತದೆ. ಆದ್ದರಿಂದ ಈ ದಿನವನ್ನು ಬಾಕ್ಸಿಂಗ್ ಡೇ ಎಂದು ಕರೆಯಲಾಗುತ್ತದೆ. ಮತ್ತೊಂದು ಕಥೆಯ ಪ್ರಕಾರ, ಕ್ರಿಸ್‌ಮಸ್ ದಿನ ರಜೆ ಪಡೆಯದೆ ಕೆಲಸ ಮಾಡುವ ನೌಕರರಿಗೆ ಮರುದಿನ ಬಾಕ್ಸ್​ ರೂಪದಲ್ಲಿ ಉಡುಗೊರೆಯನ್ನು ನೀಡಲಾಗುತ್ತದೆ. ಹಾಗೆಯೇ ಅವರಿಗೆ ಈ ದಿನ ರಜೆ ಕೂಡ ನೀಡಲಾಗುತ್ತದೆ. ಅದಕ್ಕಾಗಿಯೇ ಇದನ್ನು ಬಾಕ್ಸಿಂಗ್ ಡೇ ಎಂದು ಕರೆಯಲಾಗುತ್ತದೆ ಎಂಬುದು ಒಂದು ಕಥೆಯಾಗಿದೆ.

ಬಾಕ್ಸಿಂಗ್ ಡೇ ಟೆಸ್ಟ್ ಇತಿಹಾಸ

ಬಾಕ್ಸಿಂಗ್-ಡೇ ಟೆಸ್ಟ್ ಪಂದ್ಯವನ್ನು ಮೊದಲ ಬಾರಿಗೆ 1950 ರಲ್ಲಿ ಪ್ರಾರಂಭಿಸಲಾಯಿತು. ಆರಂಭದಲ್ಲಿ ಇದನ್ನು ಪ್ರತಿ ವರ್ಷ ಆಡಲಾಗುತ್ತಿರಲಿಲ್ಲ. ಕಾಲನಂತರ ಈ ಟೆಸ್ಟ್ ಪಂದ್ಯವನ್ನು ಪ್ರತಿ ವರ್ಷ ನಡೆಸಲು ತೀರ್ಮಾನಿಸಲಾಯಿತು. ಈ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವನ್ನು ಮೊದಲ ಬಾರಿಗೆ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಆಡಲಾಯಿತು. ಆ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆಲುವು ಸಾಧಿಸಿತ್ತು. 1952 ರಲ್ಲಿ ಮೊದಲ ಬಾರಿಗೆ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವನ್ನು ಆಡಿದ್ದ ದಕ್ಷಿಣ ಆಫ್ರಿಕಾ, ಆ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಮಣಿಸುವಲ್ಲಿ ಯಶಸ್ವಿಯಾಗಿತ್ತು. ನಂತರ 1968 ರಲ್ಲಿ ಈ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವನ್ನು ಆಡಲಾಯಿತು. ಬಳಿಕ 1980 ರಿಂದ ಪ್ರತಿ ವರ್ಷ ಈ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವನ್ನು ಆಯೋಜಿಸಲು ತೀರ್ಮಾನಿಸಲಾಯಿತು. ಅಂದಿನಿಂದ ಆಸ್ಟ್ರೇಲಿಯಾ, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ ತಂಡಗಳು ನಿರಂತರವಾಗಿ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಗಳನ್ನು ಆಡುತ್ತಿವೆ. ಟೀಂ ಇಂಡಿಯಾ ಕೂಡ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಆಡಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:54 am, Mon, 26 December 22

ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ