IND vs AUS: ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಭಾರತದ ದಾಖಲೆ ಹೇಗಿದೆ? ಇದುವರೆಗೆ ಯಾರ್ಯಾರು ಶತಕ ಸಿಡಿಸಿದ್ದಾರೆ?
IND vs AUS: ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವನ್ನು ಪ್ರತಿ ವರ್ಷ ಡಿಸೆಂಬರ್ 26 ರಂದು ಆಡಲಾಗುತ್ತದೆ. ಟೀಂ ಇಂಡಿಯಾ 1985 ರಲ್ಲಿ ಮೊದಲ ಬಾರಿಗೆ ಬಾಕ್ಸಿಂಗ್ ಡೇ ಟೆಸ್ಟ್ ಆಡಿತು ಆದರೆ ತನ್ನ ಮೊದಲ ಗೆಲುವಿಗಾಗಿ 25 ವರ್ಷಗಳ ಕಾಲ ಕಾಯಬೇಕಾಯಿತು. ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಟೀಂ ಇಂಡಿಯಾದ ದಾಖಲೆ ಏನು ಮತ್ತು ಈ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಯಾವ್ಯಾವ ಆಟಗಾರರು ಶತಕ ಸಿಡಿಸಿದ್ದಾರೆ ಎಂಬುದರ ವಿವರ ಇಲ್ಲಿದೆ.
ಡಿಸೆಂಬರ್ 26 ರಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯ ನಡೆಯಲಿದೆ. ಪ್ರತಿ ವರ್ಷ ಕ್ರಿಸ್‌ಮಸ್ ನಂತರದ ದಿನದಂದು ಆಸ್ಟ್ರೇಲಿಯಾ ಮೆಲ್ಬೋರ್ನ್‌ನಲ್ಲಿ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವನ್ನು ಆಯೋಜಿಸಲಾಗುತ್ತದೆ. ಅದರಂತೆ ಈ ಬಾರಿ ಆಸ್ಟ್ರೇಲಿಯಾ ಹಾಗೂ ಟೀಂ ಇಂಡಿಯಾ ನಡುವೆ ಬಾಕ್ಸಿಂಗ್ ಡೇ ಟೆಸ್ಟ್ ಪೈಪೋಟಿ ನಡೆಸಲಿದೆ. 1950 ರಿಂದ ಪ್ರಾರಂಭವಾದ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಟೀಂ ಇಂಡಿಯಾ 1985 ರಿಂದ ಇದರ ಭಾಗವಾಗಿದೆ. ಇನ್ನು ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಟೀಂ ಇಂಡಿಯಾದ ದಾಖಲೆ ಹೇಗಿದೆ? ಮತ್ತು ಇದುವರೆಗೆ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಭಾರತದ ಯಾವ ಆಟಗಾರರು ಶತಕ ಗಳಿಸಿದ್ದಾರೆ ಎಂಬುದರ ವಿವರ ಇಲ್ಲಿದೆ.
ಟೀಂ ಇಂಡಿಯಾದ ದಾಖಲೆ
ಟೀಂ ಇಂಡಿಯಾ ತನ್ನ ಮೊದಲ ಬಾಕ್ಸಿಂಗ್ ಡೇ ಟೆಸ್ಟ್ ಅನ್ನು ಆಸ್ಟ್ರೇಲಿಯಾ ವಿರುದ್ಧ 1985 ರಲ್ಲಿ ಮೆಲ್ಬೋರ್ನ್‌ನಲ್ಲಿ ಆಡಿತು. ಆದರೆ ಆ ಪಂದ್ಯ ಡ್ರಾದಲ್ಲಿ ಅಂತ್ಯ ಆಗಿತ್ತು. ಇದರ ನಂತರ, 1987 ರಲ್ಲಿ ಕೋಲ್ಕತ್ತಾದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ಬಾಕ್ಸಿಂಗ್ ಡೇ ಟೆಸ್ಟ್ ಕೂಡ ಡ್ರಾದಲ್ಲಿ ಕೊನೆಗೊಂಡಿತು. ಟೀಂ ಇಂಡಿಯಾ ಇದುವರೆಗೆ ವಿವಿಧ ದೇಶಗಳ ವಿರುದ್ಧ 17 ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಗಳನ್ನು ಆಡಿದೆ. ಇದರಲ್ಲಿ 5 ಪಂದ್ಯಗಳನ್ನು ಗೆದ್ದಿರುವ ಭಾರತ ಮೂರು ಪಂದ್ಯಗಳನ್ನು ಡ್ರಾ ಮಾಡಿಕೊಂಡಿದೆ.
25 ವರ್ಷಗಳ ನಂತರ ಗೆಲುವು
ಬಾಕ್ಸಿಂಗ್ ಡೇ ಟೆಸ್ಟ್ ಗೆಲ್ಲಲು ಟೀಂ ಇಂಡಿಯಾ 25 ವರ್ಷ ಕಾಯಬೇಕಾಯಿತು. 2010 ರಲ್ಲಿ ನಡೆದಿದ್ದ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಮಣಿಸುವ ಮೂಲಕ ಭಾರತ ಮೊದಲ ಗೆಲುವು ದಾಖಲಿಸಿತ್ತು. ಆ ನಂತರ ನಡೆದ 2021 ಮತ್ತು 2024 ರ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿಯೂ ಟೀಂ ಇಂಡಿಯಾ ಆಫ್ರಿಕಾವನ್ನು ಸೋಲಿಸಿದೆ. ಇದರ ಜೊತೆಗೆ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಎರಡು ಬಾರಿ ಆಸ್ಟ್ರೇಲಿಯಾವನ್ನು ಸಹ ಸೋಲಿಸಿದೆ. 2018 ರಲ್ಲಿ ಮೆಲ್ಬೋರ್ನ್‌ನಲ್ಲಿ ನಡೆದಿದ್ದ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಭಾರತವು ಮೊದಲ ಬಾರಿಗೆ ಆಸ್ಟ್ರೇಲಿಯಾವನ್ನು 137 ರನ್‌ಗಳಿಂದ ಸೋಲಿಸಿತ್ತು. ಇದರ ನಂತರ, 2020 ರಲ್ಲಿ ಮೆಲ್ಬೋರ್ನ್‌ನಲ್ಲಿ ನಡೆದ್ದ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಸತತ ಎರಡನೇ ಬಾರಿಗೆ 8 ವಿಕೆಟ್‌ಗಳಿಂದ ಆಸ್ಟ್ರೇಲಿಯಾವನ್ನು ಸೋಲಿಸಿತ್ತು. ಇದೀಗ ಮತ್ತೊಮ್ಮೆ ಎರಡೂ ತಂಡಗಳು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಮುಖಾಮುಖಿಯಾಗಲಿವೆ.
ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಶತಕ ವೀರರು
ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಶತಕ ಬಾರಿಸಿದ ಭಾರತೀಯ ಆಟಗಾರರಲ್ಲಿ ಅನೇಕ ದೊಡ್ಡ ಹೆಸರುಗಳು ಸೇರಿವೆ. 1987ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ದಿಲೀಪ್ ವೆಂಗ್‌ಸರ್ಕರ್, 1992ರಲ್ಲಿ ನ್ಯೂಜಿಲೆಂಡ್ ವಿರುದ್ಧ ಕಪಿಲ್ ದೇವ್, 1998ರಲ್ಲಿ ನ್ಯೂಜಿಲೆಂಡ್ ವಿರುದ್ಧ ಮೊಹಮ್ಮದ್ ಅಜರುದ್ದೀನ್, 1998ರಲ್ಲಿ ನ್ಯೂಜಿಲೆಂಡ್ ವಿರುದ್ಧ ಸಚಿನ್ ತೆಂಡೂಲ್ಕರ್ ಮತ್ತು 1999ರಲ್ಲಿ ಆಸ್ಟ್ರೇಲಿಯಾ ವಿರುದ್ಧ ವೀರೇಂದ್ರ ಸೆಹ್ವಾಗ್, 2004ರಲ್ಲಿ ಆಸ್ಟ್ರೇಲಿಯಾ ವಿರುದ್ಧ ವಿರಾಟ್, ಅಜಿಂಕ್ಯ ರಹಾನೆ 2014 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಮತ್ತು 2020ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಚೇತೇಶ್ವರ ಪೂಜಾರ, 2018ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಚೇತೇಶ್ವರ ಪೂಜಾರ ಶತಕ, 2021ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕೆಎಲ್ ರಾಹುಲ್ ಶತಕ ಬಾರಿಸಿದ್ದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ