AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BPL 2025: 10 ಆಟಗಾರರು, 4 ತಂಡಗಳು: ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ನಲ್ಲಿ ಮ್ಯಾಚ್ ಫಿಕ್ಸಿಂಗ್?

BPL 2025: ಬಾಂಗ್ಲಾದೇಶ ಪ್ರೀಮಿಯರ್ ಲೀಗ್‌ನಲ್ಲಿ ಫಿಕ್ಸಿಂಗ್‌ಗೆ ಸಂಬಂಧಿಸಿದ ದೊಡ್ಡ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಲೀಗ್‌ನಲ್ಲಿ 10 ಆಟಗಾರರು ಮತ್ತು 4 ತಂಡಗಳು ಫಿಕ್ಸಿಂಗ್​ನಲ್ಲಿ ಭಾಗಿಯಾಗುವ ಶಂಕೆ ವ್ಯಕ್ತವಾಗಿದೆ. ಇದಕ್ಕೂ ಮುನ್ನ 2012 ರಲ್ಲಿ ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ನಲ್ಲಿ ಸ್ಪಾಟ್ ಫಿಕ್ಸಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಇದೀಗ ಮತ್ತೊಮ್ಮೆ ಬಿಪಿಎಲ್​ ಫಿಕ್ಸಿಂಗ್ ಆರೋಪಕ್ಕೆ ಗುರಿಯಾಗಿದೆ.

BPL 2025: 10 ಆಟಗಾರರು, 4 ತಂಡಗಳು: ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ನಲ್ಲಿ ಮ್ಯಾಚ್ ಫಿಕ್ಸಿಂಗ್?
ಸಾಂದರ್ಭಿಕ ಚಿತ್ರ
ಝಾಹಿರ್ ಯೂಸುಫ್
|

Updated on: Feb 01, 2025 | 1:01 PM

Share

ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ನಲ್ಲಿ ಮ್ಯಾಚ್ ಫಿಕ್ಸಿಂಗ್ ಆರೋಪ ಕೇಳಿ ಬಂದಿದೆ. ಈ ಬಾರಿಯ ಟೂರ್ನಿಯ 8 ಪಂದ್ಯಗಳಲ್ಲಿ ಫಿಕ್ಸಿಂಗ್ ನಡೆದಿರುವ ಸಂಶಯ ಮೂಡಿದ್ದು, ಹೀಗಾಗಿ 10 ಆಟಗಾರರನ್ನು ವಿಚಾರಣೆಗೆ ಒಳಪಡಿಸಲು ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​​ನ ಭ್ರಷ್ಟಾಚಾರ ನಿಗ್ರಹ ಘಟಕವು ನಿರ್ಧರಿಸಿದೆ. ಮಾಧ್ಯಮ ವರದಿಗಳ ಪ್ರಕಾರ, BCB ಯ ಭ್ರಷ್ಟಾಚಾರ ನಿಗ್ರಹ ಘಟಕವು ಸ್ಪಾಟ್ ಫಿಕ್ಸಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ ಶಂಕೆಯ ಅಡಿಯಲ್ಲಿ ಪಂದ್ಯಾವಳಿಯ ಎಂಟು ಪಂದ್ಯಗಳನ್ನು ಗುರುತಿಸಿದೆ. ಈ ಪಂದ್ಯಗಳಲ್ಲಿ ಕಣಕ್ಕಿಳಿದಿರುವ 10 ಆಟಗಾರರನ್ನು ವಿಚಾರಣೆಗೆ ಒಳಪಡಿಸಲಾಗುತ್ತದೆ.

ಈ 10 ಕ್ರಿಕೆಟಿಗರಲ್ಲಿ ಆರು ಮಂದಿ ಬಾಂಗ್ಲಾದೇಶ ರಾಷ್ಟ್ರೀಯ ತಂಡದಲ್ಲಿ ಆಡಿದವರು ಎಂಬುದು ಅಚ್ಚರಿ. ಇನ್ನುಳಿದ ಇಬ್ಬರು ಅನ್ ಕ್ಯಾಪ್ಡ್ ಬಾಂಗ್ಲಾದೇಶದ ಆಟಗಾರರು ಮತ್ತು ಇಬ್ಬರು ವಿದೇಶಿ ಕ್ರಿಕೆಟಿಗರು ಎಂದು ತಿಳಿದು ಬಂದಿದೆ. ಹಾಗೆಯೇ 4 ತಂಡಗಳ ಫ್ರಾಂಚೈಸಿಗಳ ಚಟುವಟಿಕೆಗಳ ಮೇಲೆ ನಿಕಟ ನಿಗಾ ಇರಿಸಲಾಗಿದ್ದು, ಈ ಫ್ರಾಂಚೈಸಿಗಳು ಕೂಡ ಫಿಕ್ಸಿಂಗ್​ನಲ್ಲಿ ಭಾಗಿಯಾಗಿರುವ ಬಗ್ಗೆ ಸುಳಿವುಗಳಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ನಲ್ಲಿ ಯಾವುದೇ ಕ್ರಿಕೆಟಿಗರು ಫಿಕ್ಸಿಂಗ್ ಮಾಡಿ ತಪ್ಪಿತಸ್ಥರೆಂದು ಕಂಡುಬಂದರೆ ಅವರ ವಿರುದ್ಧ ಮಂಡಳಿಯು ಕಠಿಣ ಕ್ರಮ ತೆಗೆದುಕೊಳ್ಳುತ್ತದೆ ಎಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಅಧ್ಯಕ್ಷ ಫಾರೂಕ್ ಅಹ್ಮದ್ ಹೇಳಿದ್ದಾರೆ.

ಸದ್ಯ ತನಿಖೆಯ ಹಂತದಲ್ಲಿದ್ದೇವೆ. ತನಿಖೆ ಪೂರ್ಣಗೊಳ್ಳುವವರೆಗೆ, ಈ ವಿಷಯದಲ್ಲಿ ನಾನು ಯಾವುದೇ ಅಧಿಕೃತ ಪ್ರತಿಕ್ರಿಯೆಯನ್ನು ನೀಡಲು ಸಾಧ್ಯವಿಲ್ಲ, ಏಕೆಂದರೆ ನಾವು ಅನುಸರಿಸಬೇಕಾದ ಪ್ರೋಟೋಕಾಲ್ ಇದೆ.

ತನಿಖೆಯ ಸಮಯದಲ್ಲಿ ಏನಾದರೂ ಬೆಳಕಿಗೆ ಬಂದರೆ, ಶಿಕ್ಷೆಯು ತುಂಬಾ ಕಠಿಣವಾಗಿರುತ್ತದೆ. ಹೀಗೆ ಫಿಕ್ಸಿಂಗ್​ನಲ್ಲಿ ಭಾಗಿಯಾಗಿರುವುದು ಕಂಡುಕೊಂಡರೆ, ಅವರ ವೃತ್ತಿಜೀವನವೇ ಕೊನೆಗೊಳ್ಳಬಹುದು. ಈ ಮೂಲಕ ಮ್ಯಾಚ್ ಫಿಕ್ಸಿಂಗ್​ನಲ್ಲಿ ಭಾಗಿಯಾದ ಯಾರನ್ನು ಸಹ ಬಿಡುವುದಿಲ್ಲ ಫಾರೂಕ್ ಅಹ್ಮದ್ ಕ್ರಿಕ್​ಬಝ್​ಗೆ ತಿಳಿಸಿದ್ದಾರೆ.

8 ಮ್ಯಾಚ್​ಗಳ ಮೇಲೆ ಡೌಟ್:

BCBಯ ಭ್ರಷ್ಟಾಚಾರ ನಿಗ್ರಹ ಘಟಕವು ಅನುಮಾನಾಸ್ಪದವಾಗಿ ಪರಿಗಣಿಸಿರುವ ಎಂಟು ಪಂದ್ಯಗಳೆಂದರೆ ಫಾರ್ಚೂನ್ ಬಾರಿಶಾಲ್ vs ರಾಜ್‌ಶಾಹಿ (ಜನವರಿ 6), ರಂಗ್‌ಪುರ್ ರೈಡರ್ಸ್ vs ಢಾಕಾ (ಜನವರಿ 7), ಢಾಕಾ vs ಸಿಲ್ಹೆಟ್ (ಜನವರಿ 10), ರಾಜ್‌ಶಾಹಿ vs ಢಾಕಾ (ಜನವರಿ 12), (13 ಜನವರಿ), ಬಾರಿಶಾಲ್ vs ಖುಲ್ನಾ ಟೈಗರ್ಸ್ (22 ಜನವರಿ), ಮತ್ತು ಚಿತ್ತಗಾಂಗ್ vs ಸಿಲ್ಹೆಟ್.

ಈ ಪಂದ್ಯಗಳಲ್ಲಿ ಬೌಲರ್‌ಗಳು ಸತತ ಮೂರು ವೈಡ್‌ಗಳು ಮತ್ತು ನೋ-ಬಾಲ್‌ಗಳನ್ನು ಬೌಲ್ ಮಾಡಿದ್ದರು. ಅಲ್ಲದೆ ಪ್ಲೇಯಿಂಗ್ ಇಲೆವೆನ್​ ಆಯ್ಕೆ ಕೂಡ ಅನುಮಾನಾಸ್ಪದವಾಗಿದೆ.

ಇದನ್ನೂ ಓದಿ: ಹಾರ್ದಿಕ್ ಪಾಂಡ್ಯ ಪವರ್​ಗೆ ವಿರಾಟ್ ಕೊಹ್ಲಿಯ ದಾಖಲೆ ಉಡೀಸ್

ಇನ್ನು ದೊಡ್ಡ ಸ್ಕೋರ್‌ಗಳನ್ನು ಬೆನ್ನಟ್ಟುತ್ತಿರುವಾಗ ಮಧ್ಯಮ ಓವರ್‌ಗಳಲ್ಲಿ ನಿಧಾನಗತಿಯ ಬ್ಯಾಟಿಂಗ್ ಮಾಡಿದ್ದರು. ಹೀಗಾಗಿಯೇ ಎಲ್ಲಾ ರೀತಿಯಲ್ಲೂ ಈ ಪಂದ್ಯಗಳ ಇದೀಗ ಮ್ಯಾಚ್ ಫಿಕ್ಸಿಂಗ್ ಆರೋಪಗಳು ಕೇಳಿ ಬಂದಿವೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ