IND vs BAN Test: ಬಿಸಿಸಿಐಯಿಂದ ಬಂತು ಬಿಗ್ ನ್ಯೂಸ್: ದ್ವಿತೀಯ ಟೆಸ್ಟ್​ನಿಂದ ಇಬ್ಬರು ಸ್ಟಾರ್ ಪ್ಲೇಯರ್ಸ್ ಔಟ್

India vs Bangladesh Second Test: ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ವೇಳೆ ಭಾರತ ತಂಡ ಸೇರಿಕೊಳ್ಳಲಿದ್ದಾರೆ ಎನ್ನಲಾಗಿದ್ದ ರೋಹಿತ್ ಶರ್ಮಾ ಗುಣಮುಖರಾಗಿಲ್ಲ. ಹೀಗಾಗಿ ಇವರು ತಂಡದಿಂದ ಹೊರಬಿದ್ದಿದ್ದಾರೆ. ಜೊತೆಗೆ ನವ್​ದೀಪ್ ಸೈನಿ ಕೂಡ ಔಟಾಗಿದ್ದರೆ.

IND vs BAN Test: ಬಿಸಿಸಿಐಯಿಂದ ಬಂತು ಬಿಗ್ ನ್ಯೂಸ್: ದ್ವಿತೀಯ ಟೆಸ್ಟ್​ನಿಂದ ಇಬ್ಬರು ಸ್ಟಾರ್ ಪ್ಲೇಯರ್ಸ್ ಔಟ್
Team India
Follow us
TV9 Web
| Updated By: Vinay Bhat

Updated on: Dec 20, 2022 | 2:28 PM

ಭಾರತ ಹಾಗೂ ಬಾಂಗ್ಲಾದೇಶ (India vs Bangladesh) ನಡುವಣ ಎರಡನೇ ಟೆಸ್ಟ್ ಪಂದ್ಯ ಆರಂಭಕ್ಕೆ ಎರಡು ದಿನವಷ್ಟೇ ಬಾಕಿಯಿದೆ. ಹೀಗಿರುವಾಗ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ತಂಡದಲ್ಲಿ ಕೆಲ ಬದಲಾವಣೆ ಮಾಡಿ ಹೊಸ ಟೀಮ್ ಪ್ರಕಟಿಸಿದೆ. ಎರಡನೇ ಟೆಸ್ಟ್ ವೇಳೆ ಟೀಮ್ ಇಂಡಿಯಾ ಸೇರಿಕೊಳ್ಳಲಿದ್ದಾರೆ ಎನ್ನಲಾಗಿದ್ದ ರೋಹಿತ್ ಶರ್ಮಾ (Rohit Sharma) ಇನ್ನೂ ಗುಣಮುಖರಾಗಿಲ್ಲ. ಹೀಗಾಗಿ ಇವರು ದ್ವಿತೀಯ ಟೆಸ್ಟ್​ನಿಂದ ಕೂಡ ಹೊರಬಿದ್ದಿದ್ದಾರೆ. ಇದರ ಜೊತೆಗೆ ನವ್​ದೀಪ್ ಸೈನಿ (Navdeep Saini) ಕೂಡ ಇಂಜುರಿಯಿಂದಾಗಿ ತಂಡದಿಂದ ಔಟಾಗಿದ್ದರೆ. ರೋಹಿತ್ ಅಲಭ್ಯತೆಯಲ್ಲಿ ಕೆಎಲ್ ರಾಹುಲ್ ಅವರೇ ತಂಡವನ್ನು ಮುನ್ನಡೆಸಲಿದ್ದಾರೆ. ಚೇತೇಶ್ವರ್ ಪೂಜಾರ ಉಪ ನಾಯಕನಾಗಿದ್ದಾರೆ.

ಬಾಂಗ್ಲಾ ಪ್ರವಾಸದ ಎರಡನೇ ಏಕದಿನ ಪಂದ್ಯದ ವೇಳೆ ಗಾಯ ಮಾಡಿಕೊಂಡಿದ್ದ ರೋಹಿತ್ ಹೆಬ್ಬೆರಳು ಸಂಪೂರ್ಣವಾಗಿ ಗುಣಮುಖವಾಗಿಲ್ಲ. ಹೀಗಾಗಿ ಮೊದಲ ಟೆಸ್ಟ್ ಬಳಿಕ ಇದೀಗ ದ್ವಿತೀಯ ಟೆಸ್ಟ್ ಪಂದ್ಯಕ್ಕೂ ಅಲಭ್ಯರಾಗಲಿದ್ದಾರೆ. ಭಾರತ ತಂಡದ ಮುಂದಿರುವ ಪ್ರಮುಖ ಸರಣಿಗಳನ್ನು ಪರಿಗಣಿಸಿ, ಬಿಸಿಸಿಐ ಆಯ್ಕೆ ಸಮಿತಿ ಮತ್ತು ತಂಡದ ಆಡಳಿತವು ಈ ಹಂತದಲ್ಲಿ ಅವರನ್ನು ಆಡಿಸದಿರಲು ಯೋಜಿಸಿದೆ. ಪ್ರಸ್ತುತ ಮುಂಬೈನಲ್ಲಿರುವ ರೋಹಿತ್ ಟೆಸ್ಟ್ ಮೂಲಕ ಬ್ಯಾಟಿಂಗ್ ಮಾಡುವಲ್ಲಿ ಯಶಸ್ವಿಯಾಗಿದ್ದರು ಆದರೆ ಫೀಲ್ಡಿಂಗ್ ಮಾಡುವಾಗ ಉಂಟಾಗುವ ಅಪಾಯದ ಬಗ್ಗೆ ಕಳವಳಗಳಿವೆ ಎಂದು ವರದಿಯಾಗಿದೆ.

ಇದನ್ನೂ ಓದಿ
Image
Kylian Mbappe: 24ನೇ ವಯಸ್ಸಿಗೆ ಜಗತ್ತಿನ ಶ್ರೇಷ್ಠ ಫುಟ್ಬಾಲ್ ಆಟಗಾರ ಎನಿಸಿಕೊಂಡ ಕೈಲಿಯನ್‌ ಎಂಬಾಪೆಗೆ ಜನ್ಮದಿನದ ಸಂಭ್ರಮ
Image
Virat Kohli: ಕೊಹ್ಲಿ, ಕೆಎಸ್ ಭರತ್ ನೆಟ್​ನಲ್ಲಿ ಭರ್ಜರಿ ಅಭ್ಯಾಸ: 2ನೇ ಟೆಸ್ಟ್​ಗೆ ಬದಲಾವಣೆ ನಿರೀಕ್ಷೆ
Image
IND vs BAN 2nd test: ಭಾರತ-ಬಾಂಗ್ಲಾದೇಶ ದ್ವಿತೀಯ ಟೆಸ್ಟ್ ಯಾವಾಗ?: ತಂಡದಲ್ಲಿ ಯಾರಿಗೆ ಸ್ಥಾನ?, ಇಲ್ಲಿದೆ ಮಾಹಿತಿ
Image
Karim Benzema Retired: ಫ್ರಾನ್ಸ್​ನ​ ಸ್ಟಾರ್ ಆಟಗಾರ ಕರೀಂ ಬೆಂಜೆಮಾ ಅಂತಾರಾಷ್ಟ್ರೀಯ ಫುಟ್ಬಾಲ್​ಗೆ ಗುಡ್​ ಬೈ

ಇತ್ತ ಕಿಬ್ಬೊಟ್ಟೆಯ ಸ್ನಾಯು ಸೆಳೆತದಿಂದಾಗಿ ನವದೀಪ್ ಸೈನಿ ಕೂಡ ಎರಡನೇ ಟೆಸ್ಟ್​ನಿಂದ ಹೊರಗುಳಿದಿದ್ದು, ವೇಗದ ಬೌಲರ್ ಈಗ ತನ್ನ ಗಾಯದ ಹೆಚ್ಚಿನ ನಿರ್ವಹಣೆಗಾಗಿ ಎಸ್​ಸಿಎಗೆ ವರದಿ ಮಾಡಲಿದ್ದಾರೆ. ಈಗಾಗಲೇ ಭಾರತದ ಸ್ಟಾರ್ ಆಟಗಾರರಾದ ಜಸ್​ಪ್ರೀತ್ ಬುಮ್ರ, ಮೊಹಮ್ಮದ್ ಶಮಿ ಹಾಗೂ ರವೀಂದ್ರ ಜಡೇಜಾ ಗಾಯಕ್ಕೆ ತುತ್ತಾದ ಪರಿಣಾಮ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

Karim Benzema Retired: ಫ್ರಾನ್ಸ್​ನ​ ಸ್ಟಾರ್ ಆಟಗಾರ ಕರೀಂ ಬೆಂಜೆಮಾ ಅಂತಾರಾಷ್ಟ್ರೀಯ ಫುಟ್ಬಾಲ್​ಗೆ ಗುಡ್​ ಬೈ

ಭಾರತ ಹಾಗೂ ಬಾಂಗ್ಲಾದೇಶ ನಡುವಣ ಎರಡನೇ ಟೆಸ್ಟ್ ಪಂದ್ಯ ಡಿಸೆಂಬರ್ 22 ರಿಂದ ಡಿಸೆಂಬರ್ 26ರ ವರೆಗೆ ನಡೆಯಲಿದೆ. ಇದನ್ನು ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಬೆಳಗ್ಗೆ 9 ಗಂಟೆಗೆ ಶುರುವಾಗಲಿದೆ. 8:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಸೋನಿ ಸ್ಪೋರ್ಟ್ಸ್​ ನೆಟ್​ವರ್ಕ್​ನಲ್ಲಿ ನೇರಪ್ರಸಾರ ವೀಕ್ಷಿಸಬಹುದು. ಸೋನಿ ಲಿವ್​ನಲ್ಲಿ ಲೈವ್ ಸ್ಟ್ರೀಮ್ ಕಾಣಲಿದೆ.

ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ಕೆಎಸ್ ಭರತ್, ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಅಭಿಮನ್ಯು ಈಶ್ವರನ್, ಸೌರಬ್ ಕುಮಾರ್, ಜಯದೇವ್ ಉನಾದ್ಕಟ್.

ಬಾಂಗ್ಲಾದೇಶ ತಂಡ: ಜಾಕಿರ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ, ಲಿಟ್ಟನ್ ದಾಸ್, ಶಕಿಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್, ಯಾಸಿರ್ ಅಲಿ, ನೂರುಲ್ ಹಸನ್ (ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ಖಲೀದ್ ಅಹ್ಮದ್, ನಸುಮ್ ಅಹ್ಮದ್, ಮಹ್ಮುದುಲ್ ಹಸನ್ ಪ್ಲೆಷರ್, ಮೊಮಿನುಲ್ ಹಕ್, ರೆಹಮಾನ್ ರಾಜಾ, ತಸ್ಕಿನ್ ಅಹ್ಮದ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ