ಭಾರತ ಹಾಗೂ ಬಾಂಗ್ಲಾದೇಶ (India vs Bangladesh) ನಡುವಣ ಎರಡನೇ ಟೆಸ್ಟ್ ಪಂದ್ಯ ಆರಂಭಕ್ಕೆ ಎರಡು ದಿನವಷ್ಟೇ ಬಾಕಿಯಿದೆ. ಹೀಗಿರುವಾಗ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ತಂಡದಲ್ಲಿ ಕೆಲ ಬದಲಾವಣೆ ಮಾಡಿ ಹೊಸ ಟೀಮ್ ಪ್ರಕಟಿಸಿದೆ. ಎರಡನೇ ಟೆಸ್ಟ್ ವೇಳೆ ಟೀಮ್ ಇಂಡಿಯಾ ಸೇರಿಕೊಳ್ಳಲಿದ್ದಾರೆ ಎನ್ನಲಾಗಿದ್ದ ರೋಹಿತ್ ಶರ್ಮಾ (Rohit Sharma) ಇನ್ನೂ ಗುಣಮುಖರಾಗಿಲ್ಲ. ಹೀಗಾಗಿ ಇವರು ದ್ವಿತೀಯ ಟೆಸ್ಟ್ನಿಂದ ಕೂಡ ಹೊರಬಿದ್ದಿದ್ದಾರೆ. ಇದರ ಜೊತೆಗೆ ನವ್ದೀಪ್ ಸೈನಿ (Navdeep Saini) ಕೂಡ ಇಂಜುರಿಯಿಂದಾಗಿ ತಂಡದಿಂದ ಔಟಾಗಿದ್ದರೆ. ರೋಹಿತ್ ಅಲಭ್ಯತೆಯಲ್ಲಿ ಕೆಎಲ್ ರಾಹುಲ್ ಅವರೇ ತಂಡವನ್ನು ಮುನ್ನಡೆಸಲಿದ್ದಾರೆ. ಚೇತೇಶ್ವರ್ ಪೂಜಾರ ಉಪ ನಾಯಕನಾಗಿದ್ದಾರೆ.
ಬಾಂಗ್ಲಾ ಪ್ರವಾಸದ ಎರಡನೇ ಏಕದಿನ ಪಂದ್ಯದ ವೇಳೆ ಗಾಯ ಮಾಡಿಕೊಂಡಿದ್ದ ರೋಹಿತ್ ಹೆಬ್ಬೆರಳು ಸಂಪೂರ್ಣವಾಗಿ ಗುಣಮುಖವಾಗಿಲ್ಲ. ಹೀಗಾಗಿ ಮೊದಲ ಟೆಸ್ಟ್ ಬಳಿಕ ಇದೀಗ ದ್ವಿತೀಯ ಟೆಸ್ಟ್ ಪಂದ್ಯಕ್ಕೂ ಅಲಭ್ಯರಾಗಲಿದ್ದಾರೆ. ಭಾರತ ತಂಡದ ಮುಂದಿರುವ ಪ್ರಮುಖ ಸರಣಿಗಳನ್ನು ಪರಿಗಣಿಸಿ, ಬಿಸಿಸಿಐ ಆಯ್ಕೆ ಸಮಿತಿ ಮತ್ತು ತಂಡದ ಆಡಳಿತವು ಈ ಹಂತದಲ್ಲಿ ಅವರನ್ನು ಆಡಿಸದಿರಲು ಯೋಜಿಸಿದೆ. ಪ್ರಸ್ತುತ ಮುಂಬೈನಲ್ಲಿರುವ ರೋಹಿತ್ ಟೆಸ್ಟ್ ಮೂಲಕ ಬ್ಯಾಟಿಂಗ್ ಮಾಡುವಲ್ಲಿ ಯಶಸ್ವಿಯಾಗಿದ್ದರು ಆದರೆ ಫೀಲ್ಡಿಂಗ್ ಮಾಡುವಾಗ ಉಂಟಾಗುವ ಅಪಾಯದ ಬಗ್ಗೆ ಕಳವಳಗಳಿವೆ ಎಂದು ವರದಿಯಾಗಿದೆ.
NEWS – Rohit Sharma and Navdeep Saini ruled out of second Test against Bangladesh.
More details here – https://t.co/CkMPsYkvFQ #BANvIND pic.twitter.com/qmVmyU5bQ6
— BCCI (@BCCI) December 20, 2022
ಇತ್ತ ಕಿಬ್ಬೊಟ್ಟೆಯ ಸ್ನಾಯು ಸೆಳೆತದಿಂದಾಗಿ ನವದೀಪ್ ಸೈನಿ ಕೂಡ ಎರಡನೇ ಟೆಸ್ಟ್ನಿಂದ ಹೊರಗುಳಿದಿದ್ದು, ವೇಗದ ಬೌಲರ್ ಈಗ ತನ್ನ ಗಾಯದ ಹೆಚ್ಚಿನ ನಿರ್ವಹಣೆಗಾಗಿ ಎಸ್ಸಿಎಗೆ ವರದಿ ಮಾಡಲಿದ್ದಾರೆ. ಈಗಾಗಲೇ ಭಾರತದ ಸ್ಟಾರ್ ಆಟಗಾರರಾದ ಜಸ್ಪ್ರೀತ್ ಬುಮ್ರ, ಮೊಹಮ್ಮದ್ ಶಮಿ ಹಾಗೂ ರವೀಂದ್ರ ಜಡೇಜಾ ಗಾಯಕ್ಕೆ ತುತ್ತಾದ ಪರಿಣಾಮ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
Karim Benzema Retired: ಫ್ರಾನ್ಸ್ನ ಸ್ಟಾರ್ ಆಟಗಾರ ಕರೀಂ ಬೆಂಜೆಮಾ ಅಂತಾರಾಷ್ಟ್ರೀಯ ಫುಟ್ಬಾಲ್ಗೆ ಗುಡ್ ಬೈ
ಭಾರತ ಹಾಗೂ ಬಾಂಗ್ಲಾದೇಶ ನಡುವಣ ಎರಡನೇ ಟೆಸ್ಟ್ ಪಂದ್ಯ ಡಿಸೆಂಬರ್ 22 ರಿಂದ ಡಿಸೆಂಬರ್ 26ರ ವರೆಗೆ ನಡೆಯಲಿದೆ. ಇದನ್ನು ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಬೆಳಗ್ಗೆ 9 ಗಂಟೆಗೆ ಶುರುವಾಗಲಿದೆ. 8:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಸೋನಿ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ನೇರಪ್ರಸಾರ ವೀಕ್ಷಿಸಬಹುದು. ಸೋನಿ ಲಿವ್ನಲ್ಲಿ ಲೈವ್ ಸ್ಟ್ರೀಮ್ ಕಾಣಲಿದೆ.
ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ಕೆಎಸ್ ಭರತ್, ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಅಭಿಮನ್ಯು ಈಶ್ವರನ್, ಸೌರಬ್ ಕುಮಾರ್, ಜಯದೇವ್ ಉನಾದ್ಕಟ್.
ಬಾಂಗ್ಲಾದೇಶ ತಂಡ: ಜಾಕಿರ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ, ಲಿಟ್ಟನ್ ದಾಸ್, ಶಕಿಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್, ಯಾಸಿರ್ ಅಲಿ, ನೂರುಲ್ ಹಸನ್ (ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ಖಲೀದ್ ಅಹ್ಮದ್, ನಸುಮ್ ಅಹ್ಮದ್, ಮಹ್ಮುದುಲ್ ಹಸನ್ ಪ್ಲೆಷರ್, ಮೊಮಿನುಲ್ ಹಕ್, ರೆಹಮಾನ್ ರಾಜಾ, ತಸ್ಕಿನ್ ಅಹ್ಮದ್.