Brett Lee: ನಿಮ್ಮನ್ನೆಲ್ಲಾ ನೋಡಿದ್ರೆ ನಗು ಬರುತ್ತೆ: ಕೊಹ್ಲಿಯನ್ನು ಟೀಕಿಸಿದವರಿಗೆ ಬ್ರೇಟ್ ಲೀ ತಿರುಗೇಟು

Virat Kohli: ಪಾಕಿಸ್ತಾನ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ವಿರಾಟ್ ಕೊಹ್ಲಿ, ಅಂತಿಮ ಮೂರು ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ್ದರು. ಕೊನೆಯ 18 ಎಸೆತಗಳಲ್ಲಿ 48 ರನ್​ಗಳ ಟಾರ್ಗೆಟ್ ಪಡೆದಿದ್ದ ಟೀಮ್ ಇಂಡಿಯಾ ಗೆಲ್ಲುವುದು ಕಷ್ಟಸಾಧ್ಯ ಎನ್ನಲಾಗಿತ್ತು.

Brett Lee: ನಿಮ್ಮನ್ನೆಲ್ಲಾ ನೋಡಿದ್ರೆ ನಗು ಬರುತ್ತೆ: ಕೊಹ್ಲಿಯನ್ನು ಟೀಕಿಸಿದವರಿಗೆ ಬ್ರೇಟ್ ಲೀ ತಿರುಗೇಟು
Brett lee - Virat kohli
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 25, 2022 | 2:59 PM

T20 World Cup 2022: ಈಗ ನಿಮ್ಮನ್ನೆಲ್ಲಾ ನೋಡಿದಾಗ ನನಗೆ ನಗು ಬರುತ್ತಿದೆ…ಇಂತಹದೊಂದು ಹೇಳಿಕೆ ಬಂದಿರುವುದು ಆಸ್ಟ್ರೇಲಿಯಾದ ಮಾಜಿ ವೇಗಿ ಬ್ರೇಟ್ ಲೀ (Brett Lee)  ಕಡೆಯಿಂದ. ಅದು ಕೂಡ ವಿರಾಟ್ ಕೊಹ್ಲಿಯ (Virat Kohli) ಭರ್ಜರಿ ಬ್ಯಾಟಿಂಗ್ ಬಳಿಕ ಎಂಬುದು ವಿಶೇಷ. ಆದರೆ ಈ ವ್ಯಂಗ್ಯಭರಿತ ಹೇಳಿಕೆಯ ಮೂಲಕ ಬ್ರೇಟ್ ಲೀ ನೇರವಾಗಿ ಮಾತಿನಿಂದ ಚುಚ್ಚಿರುವುದು ಟೀಕಾಗಾರರಿಗೆ ಎಂಬುದು ಇಲ್ಲಿ ಮತ್ತೊಂದು ವಿಶೇಷ.

ಮೆಲ್ಬೋರ್ನ್​ನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ರೋಚಕ ಜಯ ಸಾಧಿಸಿತ್ತು. ಇಂತಹದೊಂದು ಅಮೋಘ ಗೆಲುವಿನ ರೂವಾರಿ ವಿರಾಟ್ ಕೊಹ್ಲಿ. 53 ಎಸೆತಗಳಲ್ಲಿ ಅಜೇಯ 82 ರನ್ ಬಾರಿಸುವ ಮೂಲಕ ಕಿಂಗ್ ಕೊಹ್ಲಿ ಭಾರತ ತಂಡಕ್ಕೆ ಜಯ ತಂದುಕೊಟ್ಟಿದ್ದರು.

ಈ ಗೆಲುವಿನ ಬಳಿಕ ವಿರಾಟ್ ಕೊಹ್ಲಿಯನ್ನು ಗುಣಗಾನ ಮಾಡಿದ್ದ ಬ್ರೇಟ್ ಲೀ, ಈ ಹಿಂದೆ ಟೀಕೆ ಮಾಡಿದವರಿಗೆಲ್ಲಾ ಕೊಹ್ಲಿ ಬ್ಯಾಟ್ ಮೂಲಕವೇ ಉತ್ತರ ನೀಡಿದ್ದಾರೆ. ಎಲ್ಲಾ ಆಟಗಾರರಿಗೆ ಕೆಟ್ಟ ಸಮಯ ಎಂಬುದು ಇದ್ದೇ ಇರುತ್ತದೆ. ಆದರೆ ಆ ಅವಧಿಯಲ್ಲಿ ಎಲ್ಲರೂ ಅವರನ್ನು ಟೀಕಿಸಿದ್ದರು. ಇದೆಲ್ಲವೂ ನನಗೆ ತಮಾಷೆಯಾಗಿ ಕಾಣುತ್ತಿತ್ತು. ಏಕೆಂದರೆ ಅವರ್ಯಾರು  ಕೂಡ ಕೊಹ್ಲಿಯ ದಾಖಲೆಯನ್ನು ಮತ್ತು ಹಿಂದಿನ ಪ್ರದರ್ಶನವನ್ನು ನೋಡಿರಲಿಲ್ಲ ಅನಿಸುತ್ತದೆ ಎಂದು ಬ್ರೇಟ್ ಲೀ ಹೇಳಿದ್ದಾರೆ.

ಇದನ್ನೂ ಓದಿ
Image
Virat Kohli: ಒಂದಲ್ಲ, ಎರಡಲ್ಲ…ಹಲವು ವಿಶ್ವ ದಾಖಲೆಗಳನ್ನು ಉಡೀಸ್ ಮಾಡಿದ ಕಿಂಗ್ ಕೊಹ್ಲಿ
Image
India vs Pakistan: ಪಾಕ್​ನ ಬಗ್ಗು ಬಡಿದು ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
Image
IND vs PAK: ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ರೋಹಿತ್ ಶರ್ಮಾ
Image
India vs Pakistan: ಹೊಸ ದಾಖಲೆ ನಿರ್ಮಿಸಿದ ದಿನೇಶ್ ಕಾರ್ತಿಕ್

ಏಕೆಂದರೆ ಏಷ್ಯಾಕಪ್​ಗೂ ಮುನ್ನ ಕೊಹ್ಲಿಯನ್ನು ಗುರಿಯಾಗಿಸಲಾಗಿತ್ತು. ಆದರೆ ಮಾನಸಿಕವಾಗಿ ಕುಗಿಸಿದರೂ ಅವರು ಭರ್ಜರಿ ಪ್ರದರ್ಶನದ ಮೂಲಕ ಉತ್ತರ ನೀಡಿದ್ದರು. ಕೊಹ್ಲಿ ಅವರಂಥ ಆಟಗಾರನನ್ನು ಹೆಚ್ಚು ದಿನಗಳ ಕಾಲ ಕೆಳಗಿಸಲು ಸಾಧ್ಯವಿಲ್ಲ. ಇದೀಗ ಅವರನ್ನು ಟೀಕಿಸಿದವರನ್ನು ನೋಡಿದ್ರೆ ನಿಜಕ್ಕೂ ನಗು ಬರುತ್ತಿದೆ ಎಂದು ಬ್ರೇಟ್ ಲೀ ಹೇಳಿದ್ದಾರೆ.

ಇದನ್ನೂ ಓದಿ: India vs Pakistan: ಕ್ಲೀನ್ ಬೌಲ್ಡ್, 3 ರನ್​: ಐಸಿಸಿ ನಿಯಮ ಮತ್ತು ವಿವಾದ

ಪಾಕಿಸ್ತಾನ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ವಿರಾಟ್ ಕೊಹ್ಲಿ, ಅಂತಿಮ ಮೂರು ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ್ದರು. ಕೊನೆಯ 18 ಎಸೆತಗಳಲ್ಲಿ 48 ರನ್​ಗಳ ಟಾರ್ಗೆಟ್ ಪಡೆದಿದ್ದ ಟೀಮ್ ಇಂಡಿಯಾ ಗೆಲ್ಲುವುದು ಕಷ್ಟಸಾಧ್ಯ ಎನ್ನಲಾಗಿತ್ತು. ಆದರೆ ಶಾಹೀನ್ ಅಫ್ರಿದಿ ಎಸೆದ 18ನೇ ಓವರ್​ನಲ್ಲಿ ಮೂರು ಬೌಂಡರಿಯೊಂದಿಗೆ ವಿರಾಟ್ ಕೊಹ್ಲಿ 17 ರನ್​ ಚಚ್ಚಿದ್ದರು.

ಅಲ್ಲದೆ 19ನೇ ಓವರ್​ನಲ್ಲಿ ಹ್ಯಾರಿಸ್ ರೌಫ್​ಗೆ 2 ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ 15 ರನ್ ಕಲೆಹಾಕಿದ್ದರು. ಇನ್ನು ಅಂತಿಮ ಓವರ್​ನಲ್ಲಿ ಸಿಕ್ಸ್ ಬಾರಿಸುವ ಮೂಲಕ ಟೀಮ್ ಇಂಡಿಯಾ ಗೆಲುವನ್ನು ಖಚಿತಪಡಿಸಿದರು. ಅದರಂತೆ ಕೊನೆಯ ಓವರ್​ನ ಅಂತಿಮ ಎಸೆತದಲ್ಲಿ ಅಶ್ವಿನ್ 1 ರನ್​ ಕಲೆಹಾಕುವ ಮೂಲಕ ಭಾರತ ತಂಡಕ್ಕೆ ಜಯ ತಂದುಕೊಟ್ಟರು.

ಇನ್ನು 53 ಎಸೆತಗಳಲ್ಲಿ 82 ರನ್​ಗಳನ್ನು ಬಾರಿಸಿ ಅಜೇಯರಾಗಿ ಉಳಿದ ವಿರಾಟ್ ಕೊಹ್ಲಿ ಗೆಲುವಿನ ರೂವಾರಿಯಾಗಿ ಹೊರಹೊಮ್ಮಿದರು. ಅಲ್ಲದೆ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆಯುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಗೌರವಕ್ಕೆ ಪಾತ್ರರಾಗಿ ಹೊಸ ಇತಿಹಾಸ ಬರೆದರು.

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ