AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಭಯಂಕರ ಬ್ರಿಯಾನ್… ವಾಟ್ ಎ ಕ್ಯಾಚ್

T20 World Cup 2026: ಒಮಾನ್ ವಿರುದ್ಧದ ಪಂದ್ಯದಲ್ಲಿ ಝಿಂಬಾಬ್ವೆ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಒಮಾನ್ ತಂಡವು 103 ರನ್​ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನತ್ತಿದ ಝಿಂಬಾಬ್ವೆ ತಂಡ 13.3 ಓವರ್​ಗಳಲ್ಲಿ 106 ರನ್​ಗಳಿಸಿ 8 ವಿಕೆಟ್​ಗಳ ಗೆಲುವು ದಾಖಲಿಸಿದೆ. ಇನ್ನು ಝಿಂಬಾಬ್ವೆ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ.

VIDEO: ಭಯಂಕರ ಬ್ರಿಯಾನ್... ವಾಟ್ ಎ ಕ್ಯಾಚ್
Brian Bennett
ಝಾಹಿರ್ ಯೂಸುಫ್
|

Updated on: Feb 10, 2026 | 11:55 AM

Share

T20 World Cup 2026: ಟಿ20 ವಿಶ್ವಕಪ್​ನ 8ನೇ ಪಂದ್ಯದಲ್ಲಿ ಝಿಂಬಾಬ್ವೆ ಆಟಗಾರ ಬ್ರಿಯಾನ್ ಬೆನೆಟ್ ಅದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಕೊಲಂಬೊದ ಸಿಂಹಳೀಸ್ ಸ್ಪೋರ್ಟ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಒಮಾನ್ ಹಾಗೂ ಝಿಂಬಾಬ್ವೆ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಝಿಂಬಾಬ್ವೆ ತಂಡದ ನಾಯಕ ಸಿಕಂದರ್ ರಾಝ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಒಮಾನ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಕೇವಲ 27 ರನ್​ಗಳಿಸುವಷ್ಟರಲ್ಲಿ ಅಗ್ರ ಕ್ರಮಾಂಕದ ಐವರು ಬ್ಯಾಟರ್​ಗಳನ್ನು ಕಳೆದುಕೊಂಡಿದ್ದರು. ಈ ಹಂತದಲ್ಲಿ ಕಣಕ್ಕಿಳಿದ ನದೀಮ್ ಖಾನ್ 18 ಎಸೆತಗಳಲ್ಲಿ 20 ರನ್ ಬಾರಿಸಿದರು.

ಆದರೆ ಕೊನೆಯ ಓವರ್​ನಲ್ಲಿ ನದೀಮ್ ಖಾನ್ ಅವರ ವಿಕೆಟ್ ಪಡೆಯುವಲ್ಲಿ ಬ್ರಾಡ್ ಇವನ್ಸ್ ಯಶಸ್ವಿಯಾದರು. ಅದು ಕೂಡ ಬ್ರಿಯಾನ್ ಬೆನೆಟ್ ಹಿಡಿದ ಅತ್ಯದ್ಭುತ ಕ್ಯಾಚ್ ಮೂಲಕ ಎಂಬುದು ವಿಶೇಷ.

20ನೇ ಓವರ್​ನ ಐದನೇ ಎಸೆತದಲ್ಲಿ ನದೀಮ್ ಖಾನ್ ಡೀಪ್ ಮಿಡ್ ವಿಕೆಟ್​ನತ್ತ ಬಾರಿಸಿದ್ದರು. ಅತ್ತ ಬೌಂಡರಿ ಲೈನ್​ನಿಂದ ಓಡಿ ಬಂದ ಬ್ರಿಯಾನ್ ಬೆನೆಟ್ ಅದ್ಭುತ ಡೈವಿಂಗ್ ಮೂಲಕ ಚೆಂಡನ್ನು ಬಂಧಿಸಿದರು.

ಬ್ರಿಯಾನ್ ಬೆನೆಟ್ ಹಿಡಿದ ಈ ಅದ್ಭುತ ಕ್ಯಾಚ್ ನೋಡಿ ಪ್ರೇಕ್ಷಕರು ನಿಬ್ಬೆರಗಾದರು. ಇದೀಗ ಈ ಕ್ಯಾಚ್ ಅನ್ನು 2026 ಟಿ20 ವಿಶ್ವಕಪ್​ನ ಬೆಸ್ಟ್ ಕ್ಯಾಚ್ ಎಂದು ಬಣ್ಣಿಸಲಾಗುತ್ತಿದೆ. ಇನ್ನು ಮುಂಬರುವ ಪಂದ್ಯಗಳಲ್ಲಿ ಇದಕ್ಕಿಂತ ಉತ್ತಮ ಕ್ಯಾಚ್ ಹಿಡಿಯುವವರು ಯಾರು ಎಂಬ ಕುತೂಹಲ ಕೂಡ ಕ್ರಿಕೆಟ್ ಪ್ರೇಮಿಗಳಲ್ಲಿ ಮೂಡಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಒಮಾನ್ ತಂಡವು 19.5 ಓವರ್​ಗಳಲ್ಲಿ 103 ರನ್​ ಬಾರಿಸಿ ಆಲೌಟ್ ಆಗಿದ್ದರು. ಈ ಗುರಿಯನ್ನು ಬೆನ್ನತ್ತಿದ ಝಿಂಬಾಬ್ವೆ ಪರ ಆರಂಭಿಕನಾಗಿ ಕಣಕ್ಕಿಳಿದ ಬ್ರಿಯಾನ್ ಬೆನೆಟ್ 36 ಎಸೆತಗಳಲ್ಲಿ 7 ಫೋರ್​ಗಳೊಂದಿಗೆ ಅಜೇಯ 48 ರನ್ ಬಾರಿಸಿದರು.

ಬೆನೆಟ್ ಅವರ ಈ ಜವಾಬ್ದಾರಿಯುತ ಇನಿಂಗ್ಸ್​ನೊಂದಿಗೆ ಝಿಂಬಾಬ್ವೆ ತಂಡವು 13.3 ಓವರ್​ಗಳಲ್ಲಿ 106 ರನ್ ಬಾರಿಸಿ 8 ವಿಕೆಟ್​ಗಳ ಜಯ ಸಾಧಿಸಿದೆ. ಇನ್ನು ಝಿಂಬಾಬ್ವೆ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದ್ದು, ಈ ಪಂದ್ಯವು ಫೆಬ್ರವರಿ 13 ರಂದು ನಡೆಯಲಿದೆ.

ಇದನ್ನೂ ಓದಿ: IPL 2026: ಬೆಂಗಳೂರು ಯುನೈಟೆಡ್ ಆಗಲಿದೆಯಾ RCB?

ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ ಬಳಿಕ ಝಿಂಬಾಬ್ವೆ ಐರ್ಲೆಂಡ್ ಹಾಗೂ ಶ್ರೀಲಂಕಾ ತಂಡಗಳನ್ನು ಎದುರಿಸಲಿದೆ. ಅಂದರೆ ಝಿಂಬಾಬ್ವೆ ಆಸೀಸ್ ಪಡೆ ವಿರುದ್ಧ ಸೋತರೂ ಶ್ರೀಲಂಕಾ ಮತ್ತು ಐರ್ಲೆಂಡ್ ತಂಡಗಳನ್ನು ಮಣಿಸಿ ಸೂಪರ್-8 ಹಂತಕ್ಕೇರಲು ಉತ್ತಮ ಅವಕಾಶವಿದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲೂ ಝಿಂಬಾಬ್ವೆ ಕಡೆಯಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ