Buchi Babu Tournament: ಮೊದಲ ಪಂದ್ಯದಲ್ಲೇ ಮುಗ್ಗರಿಸಿದ ಸೂರ್ಯ- ಶ್ರೇಯಸ್

Buchi Babu Tournament: ಮುಂಬೈ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ಶ್ರೇಯಸ್ ಸಂಪೂರ್ಣ ವಿಫಲರಾಗಿ ಕೇವಲ 3 ಎಸೆತಗಳಲ್ಲಿ 2 ರನ್ ಬಾರಿಸಿ ಪೆವಿಲಿಯನ್‌ಗೆ ಮರಳಿದರು. ಆ ನಂತರ ಕ್ರೀಸ್​ಗೆ ಬಂದ ಸೂರ್ಯ ತಮ್ಮದೇ ಶೈಲಿಗೆ ಬಂದ ತಕ್ಷಣ ವೇಗದ ಬ್ಯಾಟಿಂಗ್ ಆರಂಭಿಸಿದರು. ಸೂರ್ಯ 38 ಎಸೆತಗಳಲ್ಲಿ 30 ರನ್‌ಗಳ ಇನಿಂಗ್ಸ್‌ ಆಡಿದರು. ಇವರಲ್ಲದೆ ಯುವ ಬ್ಯಾಟ್ಸ್ ಮನ್ ಮುಶೀರ್ ಖಾನ್ ಕೂಡ 16 ರನ್ ಗಳಿಸಲಷ್ಟೇ ಶಕ್ತರಾದರು.

Buchi Babu Tournament: ಮೊದಲ ಪಂದ್ಯದಲ್ಲೇ ಮುಗ್ಗರಿಸಿದ ಸೂರ್ಯ- ಶ್ರೇಯಸ್
ಸೂರ್ಯ- ಶ್ರೇಯಸ್
Follow us
ಪೃಥ್ವಿಶಂಕರ
|

Updated on: Aug 28, 2024 | 8:22 PM

ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ಮುಂದಿನ ತಿಂಗಳು ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿಗಾಗಿ ಇನ್ನು ಟೀಂ ಇಂಡಿಯಾವನ್ನು ಪ್ರಕಟಿಸಿಲ್ಲ. ಆದಾಗ್ಯೂ ಕೆಲವು ಆಟಗಾರರು ಭಾರತ ಟೆಸ್ಟ್ ತಂಡದಲ್ಲಿ ಅವಕಾಶ ಪಡೆಯುವ ಸಲುವಾಗಿ ವಿವಿಧ ದೇಶೀ ಟೂರ್ನಿಗಳಲ್ಲಿ ಆಡುತ್ತಿದ್ದಾರೆ. ಈ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿ ಭಾರತ ಟೆಸ್ಟ್ ತಂಡದಲ್ಲಿ ಅವಕಾಶ ಪಡೆಯುವ ಇರಾದೆ ಈ ಆಟಗಾರರಿಗಿದೆ. ಅದರಂತೆ ಈ ಮೊದಲು ಬುಚ್ಚಿ ಬಾಬು ಟೂರ್ನಿಯಲ್ಲಿ ಆಡಿದ್ದ ಇಶಾನ್ ಕಿಶನ್, ಮೊದಲ ಪಂದ್ಯದಲ್ಲಿ ಅಬ್ಬರಿಸಿದ್ದರೆ, ಎರಡನೇ ಪಂದ್ಯದಲ್ಲಿ ಫ್ಲಾಫ್ ಆಗಿದ್ದರು. ಇದೀಗ ಮುಂಬೈನ ಸ್ಟಾರ್ ಬ್ಯಾಟ್ಸ್​ಮನ್​ಗಳಾದ ಶ್ರೇಯಸ್ ಅಯ್ಯರ್ ಮತ್ತು ಸೂರ್ಯಕುಮಾರ್ ಯಾದವ್ ಅವರ ಸರದಿಯಾಗಿದೆ.

ಈ ಇಬ್ಬರು ಆಟಗಾರರು ಬುಚ್ಚಿ ಬಾಬು ಟೂರ್ನಿಯಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಆದರೆ ಈ ಪಂದ್ಯದಲ್ಲಿ ದಯನೀಯವಾಗಿ ವಿಫಲರಾದರು. ಈ ಇಬ್ಬರನ್ನೂ ಹೊರತುಪಡಿಸಿ, ಮುಂಬೈ ತಂಡದ ಉಳಿದ ಬ್ಯಾಟ್ಸ್ಮನ್​ಗಳು ವೈಫಲ್ಯ ಅನುಭವಿಸಿದ್ದರಿಂದ ತಂಡ ಮೊದಲ ಇನಿಂಗ್ಸ್​ನಲ್ಲಿ 8 ವಿಕೆಟ್ ಕಳೆದುಕೊಂಡು ಕೇವಲ 181 ರನ್ ಗಳಿಸಿದೆ.ವಾಸ್ತವವಾಗಿ ಆಗಸ್ಟ್ 27 ರಿಂದ ಕೊಯಮತ್ತೂರಿನಲ್ಲಿ ಆರಂಭವಾದ ಈ ಪಂದ್ಯದಲ್ಲಿ ಮುಂಬೈ ಮತ್ತು TNCA-XI ಮುಖಾಮುಖಿಯಾಗಿವೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ TNCA-XI ಮೊದಲ ಇನ್ನಿಂಗ್ಸ್‌ನಲ್ಲಿ 379 ರನ್ ಗಳಿಸಿತು. ಇದಕ್ಕೆ ಪ್ರತಿಕ್ರಿಯೆಯಾಗಿ ಬ್ಯಾಟಿಂಗ್ ಆರಂಭಿಸಿದ ಮುಂಬೈ ಪರ ಆರಂಭಿಕ ದಿವ್ಯಾಂಶ್ ಸಕ್ಸೇನಾ ಹೊರತುಪಡಿಸಿ, ಯಾವುದೇ ಬ್ಯಾಟ್ಸ್‌ಮನ್ ಪರಿಣಾಮಕಾರಿ ಪ್ರದರ್ಶನ ನೀಡಲಿಲ್ಲ. ಟಿಎನ್‌ಸಿಎ ಸ್ಪಿನ್‌ ದಾಳಿಗೆ ನಲುಗಿದ ಮುಂಬೈ ದಿನದಾಟದ ಅಂತ್ಯಕ್ಕೆ 8 ವಿಕೆಟ್‌ಗಳನ್ನು ಕಳೆದುಕೊಂಡು ಕೇವಲ 181 ರನ್ ಗಳಿಸಿದೆ.

ಶ್ರೇಯಸ್, ಸೂರ್ಯ ಫೇಲ್

ಇನ್ನು ಈ ಪಂದ್ಯದಲ್ಲಿ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನಕ್ಕಾಗಿ ಪ್ರಬಲ ಸ್ಪರ್ಧಿಯಾಗಿರುವ ಸ್ಟಾರ್ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಮೇಲೆ ಹೆಚ್ಚಿನ ನಿರೀಕ್ಷೆಗಳಿದ್ದವು. ಮುಂಬೈ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ಶ್ರೇಯಸ್ ಸಂಪೂರ್ಣ ವಿಫಲರಾಗಿ ಕೇವಲ 3 ಎಸೆತಗಳಲ್ಲಿ 2 ರನ್ ಬಾರಿಸಿ ಪೆವಿಲಿಯನ್‌ಗೆ ಮರಳಿದರು. ಆ ನಂತರ ಕ್ರೀಸ್​ಗೆ ಬಂದ ಸೂರ್ಯ ತಮ್ಮದೇ ಶೈಲಿಗೆ ಬಂದ ತಕ್ಷಣ ವೇಗದ ಬ್ಯಾಟಿಂಗ್ ಆರಂಭಿಸಿದರು. ಅವರ ಮತ್ತು ದಿವ್ಯಾಂಶ್ ನಡುವೆ 40 ರನ್‌ಗಳ ಜೊತೆಯಾಟವಿತ್ತು. ಅದರಲ್ಲಿ 30 ರನ್‌ಗಳು ಸೂರ್ಯ ಅವರದ್ದಾಗಿದ್ದವು. ಆದರೆ ಲಯ ಕಳೆದುಕೊಂಡ ಸೂರ್ಯ, ಶ್ರೇಯಸ್ ಅವರಂತೆ ಎಡಗೈ ಸ್ಪಿನ್ನರ್ ಅಜಿತ್ ರಾಮ್ ಅವರ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು. ಸೂರ್ಯ 38 ಎಸೆತಗಳಲ್ಲಿ 30 ರನ್‌ಗಳ ಇನಿಂಗ್ಸ್‌ ಆಡಿದರು. ಇವರಲ್ಲದೆ ಯುವ ಬ್ಯಾಟ್ಸ್ ಮನ್ ಮುಶೀರ್ ಖಾನ್ ಕೂಡ 16 ರನ್ ಗಳಿಸಲಷ್ಟೇ ಶಕ್ತರಾದರು.

ಇನ್ನೂ ಇದೇ ಅವಕಾಶ

ಆದರೂ ಇದು ಮೊದಲ ಇನ್ನಿಂಗ್ಸ್ ಆಗಿದ್ದು, ಎರಡನೇ ಇನ್ನಿಂಗ್ಸ್​ನಲ್ಲಿ ಲಯ ಕಂಡುಕೊಳ್ಳುವ ಅವಕಾಶ ಇವರಿಗಿದೆ. ಜೊತೆಗೆ ಮುಂದಿನ ದಿನಗಳಲ್ಲಿ ದುಲೀಪ್ ಟ್ರೋಫಿಯಲ್ಲೂ ಆಡಲಿದ್ದಾರೆ. ಅಂದರೆ ಆಯ್ಕೆ ಸಮಿತಿಯನ್ನು ಮೆಚ್ಚಿಸಲು ಇವರಿಗೆ ಇನ್ನೂ ಸಾಕಷ್ಟು ಅವಕಾಶವಿದೆ. ಆದರೆ ಈ ಇಬ್ಬರು ಸ್ಪಿನ್ನರ್​ಗಳಿಗೆ ವಿಕೆಟ್ ಒಪ್ಪಿಸಿರುವುದು ಕಳವಳಕಾರಿ ಸಂಗತಿಯಾಗಿದೆ. ಪ್ರಸ್ತುತ ಭಾರತ ತಂಡದಲ್ಲಿ ಸ್ಪಿನ್ನರ್‌ಗಳ ವಿರುದ್ಧ ಶ್ರೇಯಸ್ ಅತ್ಯುತ್ತಮವಾಗಿ ಆಡುತ್ತಾರೆ ಎಂಬ ಮಾತಿದೆ. ಆದರೆ ಶ್ರೇಯಸ್ ಈ ಪಂದ್ಯದಲ್ಲಿ ಸ್ಪಿನ್ನರ್ ವಿರುದ್ಧವೇ ಮಂಕಾದರು. ಹೀಗಾಗಿ ಮುಂಬರು ಟೆಸ್ಟ್ ಸರಣಿಯಲ್ಲಿ ಶ್ರೇಯಸ್ ಬಾಂಗ್ಲಾದೇಶದ ಸ್ಪಿನ್ನರ್‌ಗಳನ್ನು ಹೇಗೆ ಎದುರಿಸುತ್ತಾರೆ ಎಂಬುದು ಪ್ರಶ್ನೆಯಾಗಿದೆ. ಇತ್ತ ಸೂರ್ಯ ಇದುವರೆಗೆ ಒಂದೇ ಒಂದು ಟೆಸ್ಟ್ ಪಂದ್ಯವನ್ನಾಡಿದ್ದು, ಆ ಬಳಿಕ ಮತ್ತೆ ಟೆಸ್ಟ್ ತಂಡದಲ್ಲಿ ಅವಕಾಶ ಪಡೆದಿಲ್ಲ. ಹೀಗಾಗಿ ಸೂರ್ಯನಿಗೆ ಬಾಂಗ್ಲಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸ್ಥಾನ ಸಿಗುವ ಸಾಧ್ಯತೆಗಳು ಸದ್ಯ ದಟ್ಟವಾಗಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ