ಕೇರಳದ ಕೊಚ್ಚಿಯಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) ಟೂರ್ನಿಯ ಮಿನಿ ಹರಾಜು ಪ್ರಕ್ರಿಯೆ ಸಾಕಷ್ಟು ರೋಚಕತೆ ಸೃಷ್ಟಿಸಿದೆ. ಐಪಿಎಲ್ ಇತಿಹಾಸದಲ್ಲೇ ನೂತನ ದಾಖಲೆ ನಿರ್ಮಾಣವಾಗಿದೆ. ಇಂಗ್ಲೆಂಡ್ನ ಸ್ಟಾರ್ ಆಲ್ರೌಂಡರ್ ಸ್ಯಾಮ್ ಕರನ್ (Sam Curren) ಅವರನ್ನು ಬರೋಬ್ಬರಿ 15 ಕೋಟಿ ನೀಡಿ ಪಂಜಾಬ್ ಕಿಂಗ್ಸ್ ಖರೀದಿಸಿದೆ. ಮತ್ತೊಬ್ಬ ಆಲ್ರೌಂಡರ್ ಬೆನ್ ಸ್ಟೋಕ್ಸ್ ಅವರನ್ನು ಸಿಎಸ್ಕೆ ದಾಖಲೆಯ 16.25 ಕೋಟಿ ಮೊತ್ತಕ್ಕೆ ಪಡೆದುಕೊಂಡಿದೆ. ಇದರ ನಡುವೆ ಆಸ್ಟ್ರೇಲಿಯಾದ ಕ್ಯಾಮ್ರೊನ್ ಗ್ರೀನ್ (Cameron Green) ಭರ್ಜರಿ ಮೊತ್ತಕ್ಕೆ ಮರಾಟ ಆಗಿದ್ದಾರೆ.
ಗ್ರೀನ್ ಖರೀದಿಗೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಕಠಿಣ ಪೈಪೋಟಿ ನಡೆದವು. 17.5 ಕೋಟಿ ನೀಡಿ ರೋಹಿತ್ ಶರ್ಮಾ ತಂಡ ಗ್ರೀನ್ ಅವರಿಗೆ ಮಣೆ ಹಾಕಿದೆ. ಇದಕ್ಕೂ ಮುನ್ನ ಇಂಗ್ಲೆಂಡ್ ಸ್ಟಾರ್ ಆಟಗಾರ ಹ್ಯಾರಿ ಬ್ರೂಕ್ ಕೂಡ ಕೋಟಿ ಮೊತ್ತಕ್ಕೆ ಹರಾಜಾದರು. 1.50 ಕೋಟಿ ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ 23 ವರ್ಷದ ಯುವ ಸ್ಪೋಟಕ ದಾಂಡಿಗನನ್ನು ಸನ್ರೈಸರ್ಸ್ ಹೈದರಾಬಾದ್ ತಂಡವು ಬರೋಬ್ಬರಿ 13.25 ಕೋಟಿ ರೂ. ನೀಡಿ ಖರೀದಿಸಿತು.
ಇನ್ನು ಒಡೆನ್ ಸ್ಮಿತ್ 50 ಲಕ್ಷಕ್ಕೆ ಗುಜರಾತ್ ಪಾಲಾದರೆ, ಸಿಖಂದರ್ ರಾಜಾ ಕೂಡ 50 ಲಕ್ಷಕ್ಕೆ ಪಂಜಾಬ್ ಸೇರಿದರು. ಜೇಸನ್ ಹೋಲ್ಡರ್ 5.75 ಲಕ್ಷಕ್ಕೆ ರಾಜಸ್ಥಾನ್ ರಾಯಲ್ಸ್ ಪಾಲಾದರು. ಇದರ ನಡುವೆ ಶಕಿಬ್ ಅಲ್ ಹಸನ್ ಅನ್ಸೋಲ್ಡ್ ಆದರು. ಕೇನ್ ವಿಲಿಯಮ್ಸನ್ ಅವರನ್ನು ಮೂಲಬೆಲೆಗೆ ಗುಜರಾತ್ ಟೈಟಾನ್ಸ್ ಖರೀದಿಸಿತು. ಬಳಿಕ 1 ಕೋಟಿ ಮೂಲಬೆಲೆ ಹೊಂದಿರುವ ಮಯಾಂಕ್ ಅಗರ್ವಾಲ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಖರೀದಿ ಮಾಡಲು ಮುಂದಾಯಿತು. ಆದರೆ, ಅಂತಿಮವಾಗಿ ಮಯಾಂಕ್ ಅವರನ್ನು 8.25 ಕೋಟಿಗೆ ಹೈದರಬಾದ್ ಖರೀದಿಸಿತು.
ಐಪಿಎಲ್ 2023 ಮಿನಿ ಹರಾಜಿನಲ್ಲಿ 2 ಕೋಟಿ ರೂ. ಮೂಲಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಸ್ಯಾಮ್ ಕರನ್ ಖರೀದಿಗೆ ಚೆನ್ನೈ ಸೂಪರ್ ಕಿಂಗ್ಸ್, ಎಸ್ಆರ್ಹೆಚ್, ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಭರ್ಜರಿ ಪೈಪೋಟಿ ಕಂಡು ಬಂತು. ಆದರೆ, ಅಂತಿಮವಾಗಿ ಪಂಜಾಬ್ ಕಿಂಗ್ಸ್ ತಂಡವು 18.50 ಕೋಟಿ ರೂ. ನೀಡುವ ಮೂಲಕ ಸ್ಯಾಮ್ ಕುರ್ರನ್ ಅವರನ್ನು ತಮ್ಮದಾಗಿಸಿಕೊಂಡಿದೆ. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಮೊತ್ತಕ್ಕೆ ಹರಾಜಾದ ಆಟಗಾರ ಎಂಬ ದಾಖಲೆ ಸ್ಯಾಮ್ ಪಾಲಾಗಿದೆ.
ಐಪಿಎಲ್ ಮಿನಿಹರಾಜು ಪ್ರಕ್ರಿಯೆ ಲೈವ್
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:58 pm, Fri, 23 December 22