IPL 2024 Auction: ಆರ್​ಸಿಬಿ ಸೇರಿದ ತಕ್ಷಣ ಸ್ಫೋಟಕ ಆಲ್ರೌಂಡರ್ ಕ್ಯಾಮರೂನ್ ಗ್ರೀನ್ ಹೇಳಿದ್ದೇನು ಗೊತ್ತೇ?

Cameron Green in a video by RCB: ಐಪಿಎಲ್ 2024 ಹರಾಜಿಗು ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮುಂಬೈ ಇಂಡಿಯನ್ಸ್ ತಂಡದಿಂದ ಕ್ಯಾಮರೂನ್ ಗ್ರೀನ್ ಅವರನ್ನು ಖರೀದಿ ಮಾಡಿದೆ. ಇದರ ಬೆನ್ನಲ್ಲೇ ಆರ್​ಸಿಬಿ ತನ್ನ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಗ್ರೀನ್ ಮಾತನಾಡಿರುವ ವಿಡಿಯೋ ಹಂಚಿಕೊಂಡಿದೆ.

IPL 2024 Auction: ಆರ್​ಸಿಬಿ ಸೇರಿದ ತಕ್ಷಣ ಸ್ಫೋಟಕ ಆಲ್ರೌಂಡರ್ ಕ್ಯಾಮರೂನ್ ಗ್ರೀನ್ ಹೇಳಿದ್ದೇನು ಗೊತ್ತೇ?
Cameron Green RCB
Follow us
|

Updated on: Nov 28, 2023 | 7:23 AM

ಇಂಡಿಯನ್ ಪ್ರೀಮಿಯರ್ ಲೀಗ್ 2024 ಹರಾಜಿಗೂ (IPL 2024 Auction) ಮುನ್ನ ಮಹತ್ವದ ಬೆಳವಣಿಗೆಗಳು ನಡೆಯುತ್ತಿದೆ. ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಗುಜರಾತ್ ಟೈಟಾನ್ಸ್​ನಿಂದ ತನ್ನ ತೆಕ್ಕೆಗೆ ಸೇರಿಸಿಕೊಂಡಿದೆ. ಇದೀಗ ಜಿಟಿ ಶುಭ್​ಮನ್ ಗಿಲ್ ಅವರಿಗೆ ನಾಯಕತ್ವದ ಪಟ್ಟ ನೀಡಿದೆ. ಇದರ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮುಂಬೈ ತಂಡದಲ್ಲಿದ್ದ ಕ್ಯಾಮರೂನ್ ಗ್ರೀನ್ ಅವರನ್ನು ಖರೀದಿ ಮಾಡಿದೆ. ಇದರ ಬೆನ್ನಲ್ಲೇ ಆರ್​ಸಿಬಿ ಪರ ಆಡುವ ಉತ್ಸಾಹವನ್ನು ಆಸ್ಟ್ರೇಲಿಯಾದ ಸ್ಫೋಟಕ ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್ ವ್ಯಕ್ತಪಡಿಸಿದ್ದಾರೆ.

ಆರ್​ಸಿಬಿ ತನ್ನ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಕ್ಯಾಮರೂನ್ ಗ್ರೀನ್ ಮಾತನಾಡಿರುವ ವಿಡಿಯೋ ಹಂಚಿಕೊಂಡಿದೆ. “ಹೇ ಆರ್​ಸಿಬಿ ಅಭಿಮಾನಿಗಳೇ, ನಾನು ಕ್ಯಾಮ್ ಗ್ರೀನ್, ನಾನು ಆ್ಯಂಡಿ ಫ್ಲವರ್ (ತಂಡದ ಮುಖ್ಯ ಕೋಚ್) ಜೊತೆ ಆರ್​ಸಿಬಿ ತಂಡ ಸೇರಲು ಉತ್ಸುಕನಾಗಿದ್ದೇನೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಿಮ್ಮನ್ನು ನೋಡಲು ಕಾತುರನಾಗಿದ್ದೇನೆ, ಚೀಯರ್ಸ್,” ಎಂದು ಆರ್​ಸಿಬಿಯ ವಿಡಿಯೋದಲ್ಲಿ ಗ್ರೀನ್ ಹೇಳಿದ್ದಾರೆ.

ಇದನ್ನೂ ಓದಿ
Image
ಇಂದು IND vs AUS ತೃತೀಯ ಟಿ20 ಪಂದ್ಯ: ಸೂರ್ಯ ಪಡೆಯ ಟೀಮ್ ಬದಲಾಗುತ್ತಾ?
Image
3ನೇ ಟಿ20 ಪಂದ್ಯಕ್ಕೆ ತಂಡ ಬದಲಿಸ್ತಾರಾ ಸೂರ್ಯ? ಯಾರಿಗೆ ಅವಕಾಶ?
Image
ವಿವಾದಾತ್ಮಕ ಹೇಳಿಕೆ; ಕ್ರೀಡಾ ಸಚಿವರಿಗೆ ಗೇಟ್​ಪಾಸ್ ನೀಡಿದ ಲಂಕಾ ಸರ್ಕಾರ
Image
ರೆಡ್ ಆರ್ಮಿಗೆ ‘ಗ್ರೀನ್’ ಬಲ; ಆದರೂ ತಂಡದಲ್ಲಿದೆ ಅದೊಂದು ಕೊರತೆ..!

ಕ್ಯಾಮರೂನ್ ಗ್ರೀನ್ ಮಾತನಾಡಿರುವ ವಿಡಿಯೋ ಇಲ್ಲಿದೆ:

ಕಳೆದ ಡಿಸೆಂಬರ್‌ನಲ್ಲಿ ನಡೆದ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ಕ್ಯಾಮರೂನ್ ಗ್ರೀನ್ ಅವರನ್ನು ಬರೋಬ್ಬರಿ 17.5 ಕೋಟಿ ರೂಪಾಯಿಗೆ ಖರೀದಿಸಿತ್ತು. ಐಪಿಎಲ್ 2023 ರಲ್ಲಿ 16 ಪಂದ್ಯಗಳನ್ನು ಆಡಿದ ಆಸ್ಟ್ರೇಲಿಯ ಆಟಗಾರ ಭರ್ಜರಿ ಪ್ರದರ್ಶನ ತೋರಿದ್ದರಯ. 452 ರನ್ ಗಳಿಸಿದ್ದಲ್ಲದೆ, ಅಜೇಯ ಶತಕ ಮತ್ತು ಎರಡು ಅರ್ಧ ಶತಕಗಳನ್ನು ಬಾರಿಸಿದ್ದರು. ಜೊತೆಗೆ ಆರು ವಿಕೆಟ್‌ಗಳನ್ನು ಪಡೆದಿದ್ದರು.

IPL 2024: ಮುಂಬೈಗೆ ಹಾರಿದ ಹಾರ್ದಿಕ್; ಗುಜರಾತ್ ತಂಡದ ನೂತನ ನಾಯಕ ಯಾರು ಗೊತ್ತಾ?

ಒಟ್ಟಾರೆಯಾಗಿ ಗ್ರೀನ್ ಅವರು 37 ಟಿ20I ಪಂದ್ಯಗಳನ್ನು ಆಡಿದ್ದು, 29.04 ರ ಸರಾಸರಿಯಲ್ಲಿ 697 ರನ್ ಗಳಿಸಿದ್ದಾರೆ, 151 ಕ್ಕಿಂತ ಹೆಚ್ಚಿನ ಸ್ಟ್ರೈಕ್ ರೇಟ್‌ ಇದೆ. 100* ರ ಅತ್ಯುತ್ತಮ ಸ್ಕೋರ್‌ನೊಂದಿಗೆ ಒಂದು ಶತಕ ಮತ್ತು ನಾಲ್ಕು ಅರ್ಧಶತಕಗಳನ್ನು ಗಳಿಸಿದ್ದಾರೆ. 2/16 ರ ಅತ್ಯುತ್ತಮ ಅಂಕಿಅಂಶಗಳೊಂದಿಗೆ 11 ವಿಕೆಟ್‌ಗಳನ್ನು ಪಡೆದಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಹರಾಜಿಗೂ ಮುನ್ನ ಶ್ರೀಲಂಕಾದ ಸ್ಪಿನ್ನರ್ ವನಿಂದು ಹಸರಂಗ, ಆಸ್ಟ್ರೇಲಿಯಾದ ವೇಗಿ ಜೋಶ್ ಹೇಜಲ್‌ವುಡ್ ಮತ್ತು ಭಾರತದ ವೇಗಿ ಹರ್ಷಲ್ ಪಟೇಲ್ ಅವರನ್ನು ಬಿಡುಗಡೆ ಮಾಡಿದೆ. ಬಿಡುಗಡೆಯಾದ ಇತರ ಆಟಗಾರರಲ್ಲಿ ನ್ಯೂಝಿಲೆಂಡ್ ಆಟಗಾರರಾದ ಫಿನ್ ಅಲೆನ್, ಮೈಕಲ್ ಬ್ರೇಸ್‌ವೆಲ್, ದಕ್ಷಿಣ ಆಫ್ರಿಕಾದ ಆಲ್‌ರೌಂಡರ್ ವೇಯ್ನ್ ಪಾರ್ನೆಲ್, ಇಂಗ್ಲೆಂಡ್‌ನ ಡೇವಿಡ್ ವಿಲ್ಲಿ ಮತ್ತು ಭಾರತದ ಆಟಗಾರರಾದ ಸೋನು ಯಾದವ್, ಅವಿನಾಶ್ ಸಿಂಗ್, ಸಿದ್ಧಾರ್ಥ್ ಕೌಲ್ ಮತ್ತು ಕೇದಾರ್ ಜಾಧವ್ ಕೂಡ ಸೇರಿದ್ದಾರೆ. ಇದರ ಜೊತೆಗೆ ಆರ್​ಸಿಬಿ ಫ್ರಾಂಚೈಸಿ ಆಲ್‌ರೌಂಡರ್ ಮಯಾಂಕ್ ದಾಗರ್‌ಗೆ ಬದಲಾಗಿ ಸನ್‌ರೈಸರ್ಸ್ ಹೈದರಾಬಾದ್‌ಗೆ ತಮ್ಮ ಆಲ್‌ರೌಂಡರ್ ಶಹಬಾಜ್ ಅಹ್ಮದ್ ಅನ್ನು ವ್ಯಾಪಾರ ಮಾಡಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!