Asia Cup 2022: ಏಷ್ಯಾಕಪ್ನ ಸೂಪರ್-4 ಹಂತದ ಮೊದಲೆರಡು ಪಂದ್ಯಗಳಲ್ಲಿ ಟೀಮ್ ಇಂಡಿಯಾ (Team India) ಸೋತಿದೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ದ 5 ವಿಕೆಟ್ಗಳಿಂದ ಪರಾಜಯಗೊಂಡಿದ್ದ ಟೀಮ್ ಇಂಡಿಯಾ, 2ನೇ ಪಂದ್ಯದಲ್ಲಿ ಶ್ರೀಲಂಕಾ ವಿರುದ್ದ ಸೋಲನುಭವಿಸಿತು. ಇದರೊಂದಿಗೆ ಏಷ್ಯಾಕಪ್ ಫೈನಲ್ಗೇರುವ ಭಾರತ ತಂಡದ ಕನಸು ಬಹುತೇಕ ಕಮರಿದೆ. ಏಕೆಂದರೆ ಟೀಮ್ ಇಂಡಿಯಾಗೆ ಇನ್ನು ಏಕೈಕ ಪಂದ್ಯ ಮಾತ್ರ ಉಳಿದಿದ್ದು, ಅದರಲ್ಲಿ ಗೆದ್ದರೂ ಉಳಿದ ತಂಡಗಳ ಫಲಿತಾಂಶವನ್ನು ಅವಲಂಭಿಸಬೇಕಾಗುತ್ತದೆ.
ಅಂದರೆ ಟೀಮ್ ಇಂಡಿಯಾ ಮುಂದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ್ ವಿರುದ್ದ ಗೆದ್ದರೆ, ಪಾಕಿಸ್ತಾನ್ ತಂಡವು ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ್ ತಂಡಗಳ ವಿರುದ್ಧ ಸೋಲಬೇಕು. ಇಲ್ಲಿ ಶ್ರೀಲಂಕಾ ತಂಡವು ಈಗಾಗಲೇ 2 ಪಂದ್ಯಗಳನ್ನು ಗೆದ್ದಿರುವ ಕಾರಣ ಫೈನಲ್ಗೇರುವುದನ್ನು ಬಹುತೇಕ ಖಚಿತಪಡಿಸಿಕೊಂಡಿದೆ. ಹೀಗಾಗಿ ಪಾಕಿಸ್ತಾನ್ ವಿರುದ್ಧ ಲಂಕಾ ಗೆದ್ದರೆ ಟೀಮ್ ಇಂಡಿಯಾಗೆ ಯಾವುದೇ ಸಮಸ್ಯೆಯಾಗುವುದಿಲ್ಲ.
ಬದಲಾಗಿ ಪಾಯಿಂಟ್ ಟೇಬಲ್ನಲ್ಲಿ 2ನೇ ಸ್ಥಾನದಲ್ಲಿರುವ ಪಾಕಿಸ್ತಾನ್ ತಂಡವು ಮುಂದಿನ ಪಂದ್ಯಗಳಲ್ಲಿ ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ್ ವಿರುದ್ದ ಹೀನಾಯವಾಗಿ ಸೋಲನುಭವಿಸಬೇಕು. ಇದರಿಂದ ಭಾರತ ಹಾಗೂ ಪಾಕಿಸ್ತಾನ್ ತಂಡಗಳ ಪಾಯಿಂಟ್ ಸಮಗೊಳ್ಳಲಿದೆ. ಈ ವೇಳೆ ಉತ್ತಮ ನೆಟ್ ರನ್ ರೇಟ್ ಹೊಂದಿದ್ದರೆ ಟೀಮ್ ಇಂಡಿಯಾ ಫೈನಲ್ಗೇರಬಹುದು.
ಒಂದು ವೇಳೆ ಪಾಕಿಸ್ತಾನ್ ತಂಡವು ಮುಂದಿನ 2 ಪಂದ್ಯಗಳಲ್ಲಿ ಒಂದನ್ನು ಗೆದ್ದರೂ ಟೀಮ್ ಇಂಡಿಯಾ ಏಷ್ಯಾಕಪ್ನಿಂದ ಅಧಿಕೃತವಾಗಿ ಹೊರಬೀಳಲಿದೆ. ಹೀಗಾಗಿ ಭಾರತ ತಂಡವು ಏಷ್ಯಾಕಪ್ ಫೈನಲ್ಗೇರಬೇಕಿದ್ದರೆ ಅಫ್ಘಾನಿಸ್ತಾನ್ ವಿರುದ್ದ ಭರ್ಜರಿ ಜಯ ಸಾಧಿಸಬೇಕು. ಜೊತೆಗೆ ಮುಂದಿನ 2 ಪಂದ್ಯಗಳಲ್ಲಿ ಪಾಕಿಸ್ತಾನ್ ತಂಡವು ಸೋಲಬೇಕಿದೆ. ಅಂದರೆ ಪಾಕಿಸ್ತಾನ್ ತಂಡದ ಫಲಿತಾಂಶದ ಮೇಲೆ ಟೀಮ್ ಇಂಡಿಯಾದ ಏಷ್ಯಾಕಪ್ ಫೈನಲ್ ಭವಿಷ್ಯ ನಿಂತಿದೆ.
ಈ ಬಾರಿಯ ಏಷ್ಯಾಕಪ್ ರೌಂಡ್ ರಾಬಿನ್ ಫಾರ್ಮಾಟ್ನಲ್ಲಿ ನಡೆಯುತ್ತಿದೆ. ಅದರಂತೆ ಸೂಪರ್-4 ಹಂತದ ಪಾಯಿಂಟ್ ಟೇಬಲ್ನಲ್ಲಿ ಮೊದಲ ಎರಡು ಸ್ಥಾನಗಳನ್ನು ಪಡೆಯುವ ತಂಡಗಳು ಫೈನಲ್ ಪ್ರವೇಶಿಸಲಿದೆ. ಇದೀಗ ಪಾಯಿಂಟ್ ಟೇಬಲ್ನಲ್ಲಿ ಶ್ರೀಲಂಕಾ ತಂಡವು 2 ಗೆಲುವಿನೊಂದಿಗೆ ಅಗ್ರಸ್ಥಾನದಲ್ಲಿದೆ. ಇನ್ನು ಪಾಕಿಸ್ತಾನ್ ತಂಡವು ಆಡಿರುವ 1 ಪಂದ್ಯದಲ್ಲಿ ಗೆಲುವು ದಾಖಲಿಸಿ 2ನೇ ಸ್ಥಾನದಲ್ಲಿದೆ. ಹೀಗಾಗಿ ಪಾಕ್ ತಂಡದ ಮುಂದಿನ 2 ಪಂದ್ಯಗಳ ಫಲಿತಾಂಶ ಟೀಮ್ ಇಂಡಿಯಾದ ಏಷ್ಯಾಕಪ್ ಭವಿಷ್ಯ ನಿರ್ಧರಿಸಲಿದೆ.
ಟೀಮ್ ಇಂಡಿಯಾ ಹೀಗಿದೆ:
ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ರಿಷಭ್ ಪಂತ್ (ವಿಕೆಟ್‌ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ದೀಪಕ್ ಚಹರ್, ಯುಜ್ವೇಂದ್ರ ಚಹಲ್, ಆರ್ ಅಶ್ವಿನ್, ರವಿ ಬಿಷ್ಣೋಯ್.
ಮೀಸಲು ಆಟಗಾರರು: ಶ್ರೇಯಸ್ ಅಯ್ಯರ್.