AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿಲ್ ಗಿಲಕ್ಕು… ಒಂದೇ ಕೈಯಲ್ಲಿ ಅತ್ಯದ್ಭುತ ಕ್ಯಾಚ್..!

India vs Afghanistan: ಅಫ್ಘಾನಿಸ್ತಾನ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಈ ಮ್ಯಾಚ್​ನಲ್ಲಿ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ಹಿಡಿದ ಸ್ಟನ್ನಿಂಗ್ ಕ್ಯಾಚ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಗಿಲ್ ಗಿಲಕ್ಕು... ಒಂದೇ ಕೈಯಲ್ಲಿ ಅತ್ಯದ್ಭುತ ಕ್ಯಾಚ್..!
Shubman Gill Image Credit source: BCCI
ಝಾಹಿರ್ ಯೂಸುಫ್
|

Updated on:Jun 14, 2026 | 8:26 AM

Share

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡದ ನಾಯಕ ಶುಭ್​​ಮನ್ ಗಿಲ್ ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಮಳೆ ಬಾಧಿತ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 21.2 ಓವರ್​ಗಳಲ್ಲಿ 182 ರನ್​ಗಳಿಸಿ 7 ವಿಕೆಟ್ ಕಳೆದುಕೊಂಡಿತ್ತು.

ಈ ವೇಳೆ ಕ್ರೀಸ್​ಗೆ ಆಗಮಿಸಿದ ಅಲ್ಲಾ ಗಝನ್​ಫರ್ ಹರ್ಷ್ ದುಬೆ ಎಸೆದ ಎಸೆತವನ್ನು ಲೆಗ್-ಸೈಡ್ ಕಡೆಗೆ ಬಲವಾಗಿ ಬ್ಯಾಟ್ ಬೀಸಲು ಯತ್ನಿಸಿದರು. ಬ್ಯಾಟ್‌ನ ಮೇಲ್ಭಾಗದ ಅಂಚಿಗೆತಗುಲಿದ ಚೆಂಡು, ವಿಕೆಟ್ ಕೀಪರ್‌ನನ್ನೂ ಮೀರಿ ವೇಗವಾಗಿ ಹಿಂದಕ್ಕೆ ಹಾರಿತು.

ಮೊದಲ ಸ್ಲಿಪ್‌ನಲ್ಲಿ ನಿಂತಿದ್ದ ನಾಯಕ ಶುಭ್​ಮನ್ ಗಿಲ್, ಕ್ಷಣಾರ್ಧದಲ್ಲಿ ಗಾಳಿಯಲ್ಲಿ ಜಿಗಿದು ಕೇವಲ ತಮ್ಮ ಎಡಗೈಯಿಂದ  ಅದ್ಭುತವಾಗಿ ಚೆಂಡನ್ನು ಹಿಡಿದರು.  ಈ ಕ್ಯಾಚ್ ನೋಡಿ ಟೀಮ್ ಇಂಡಿಯಾ ಆಟಗಾರರು ಹಾಗೂ ಪ್ರೇಕ್ಷಕರು ಆಶ್ಚರ್ಯಚಕಿತರಾದರು.

ಇದೀಗ ಈ ಅಸಾಧಾರಣ ಕ್ಯಾಚ್ ವಿಡಿಯೋ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ಭಾರತೀಯ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಇದು ಅತ್ಯುತ್ತಮ ಸ್ಲಿಪ್ ಕ್ಯಾಚ್‌ಗಳಲ್ಲಿ ಒಂದಾಗಿದೆ ಎಂದು ಅಭಿಮಾನಿಗಳು ಮತ್ತು ವಿಶ್ಲೇಷಕರು ಶ್ಲಾಘಿಸುತ್ತಿದ್ದಾರೆ.

ಗೆದ್ದು ಬೀಗಿದ ಟೀಮ್ ಇಂಡಿಯಾ:

ಮಳೆಯ ಕಾರಣ 25 ಓವರ್​ಗಳಲ್ಲಿ ಸೀಮಿತವಾಗಿದ್ದ ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶುಭ್​​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ಪರ ಆರಂಭಿಕ ದಾಂಡಿಗ ರಹಮಾನುಲ್ಲಾ ಗುರ್ಬಾಝ್ (102) ಭರ್ಜರಿ ಶತಕ ಸಿಡಿಸಿದರು.

ಗುರ್ಬಾಝ್ ಔಟಾಗುತ್ತಿದ್ದಂತೆ ದಿಢೀರ್ ಕುಸಿತಕ್ಕೊಳಗಾದ ಅಫ್ಘಾನಿಸ್ತಾನ್ ತಂಡವು 24.5 ಓವರ್​ಗಳಲ್ಲಿ 194 ರನ್​ಗಳಿಸಿ ಸರ್ವಪತನ ಕಂಡಿತು.

ಇದನ್ನೂ ಓದಿ: ಕೆಎಲ್ ರಾಹುಲ್​ ಸಿಕ್ಸ್​ಗೆ ಬೆರಗಾದ ಗೌತಮ್ ಗಂಭೀರ್!

195 ರನ್​ಗಳ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಪರ ಶುಭ್​ಮನ್ ಗಿಲ್ ಅಜೇಯ 84 ರನ್ ಬಾರಿಸಿದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೆಎಲ್ ರಾಹುಲ್ ಕೇವಲ 19 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ ಸ್ಫೋಟಕ 39 ರನ್ ಚಚ್ಚಿದರು. ಈ ಮೂಲಕ ಟೀಮ್ ಇಂಡಿಯಾ 22.5 ಓವರ್​ಗಳಲ್ಲಿ 195 ರನ್​ಗಳಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

Published On - 8:25 am, Sun, 14 June 26

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ