CCL 2023: ಕರ್ನಾಟಕ ಬುಲ್ಡೋಜರ್ಸ್ ತಂಡಕ್ಕೆ ಸತತ 2ನೇ ಗೆಲುವು! ಪಾಯಿಂಟ್ ಪಟ್ಟಿಯಲ್ಲಿ ಯಾವ ಸ್ಥಾನ?

CCL 2023: ಸೆಲೆಬ್ರಿಟಿ ಕ್ರಿಕೆಟ್ ಲೀಗ್‌ನ  ಮೊದಲ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡ ಲೀಗ್​ನಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ. ಇದರೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಕರ್ನಾಟಕ ತಂಡ 2ನೇ ಸ್ಥಾನ ಪಡೆದುಕೊಂಡಿದೆ.

CCL 2023: ಕರ್ನಾಟಕ ಬುಲ್ಡೋಜರ್ಸ್ ತಂಡಕ್ಕೆ ಸತತ 2ನೇ ಗೆಲುವು! ಪಾಯಿಂಟ್ ಪಟ್ಟಿಯಲ್ಲಿ ಯಾವ ಸ್ಥಾನ?
ಕರ್ನಾಟಕ ಬುಲ್ಡೋಜರ್ಸ್ ತಂಡಕ್ಕೆ ಸತತ 2ನೇ ಗೆಲುವು
Follow us
ಪೃಥ್ವಿಶಂಕರ
|

Updated on:Feb 27, 2023 | 12:59 PM

ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್‌ನ (Cricket Celebrity League)  ಮೊದಲ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡ ಲೀಗ್​ನಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ. ಇದರೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಕರ್ನಾಟಕ ತಂಡ 2ನೇ ಸ್ಥಾನ ಪಡೆದುಕೊಂಡಿದೆ. ತನ್ನ ಎರಡನೇ ಪಂದ್ಯದಲ್ಲಿ ಕೇರಳ ಸ್ಟ್ರೈಕರ್ಸ್ ತಂಡವನ್ನು ಎದುರಿಸಿದ್ದ ಕರ್ನಾಟಕ ತಂಡ ( Kerala Strikers and Karnataka Bulldozers) ಈ ಪಂದ್ಯವನ್ನು 8 ವಿಕೆಟ್‌ಗಳಿಂದ ಗೆದ್ದುಕೊಂಡಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಕೇರಳ ಸ್ಟ್ರೈಕರ್ಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಎರಡು ಇನಿಂಗ್ಸ್‌ಗಳಲ್ಲಿ ಕೇರಳ ತಂಡ ನೂರು ರನ್​ಗಳ ಗಡಿ ದಾಟಿತ್ತಾದರೂ, ಕರ್ನಾಟಕ ತಂಡ ಸುಲಭವಾಗಿ ಗುರಿ ದಾಟಿತು. ಈ ಪಂದ್ಯದಲ್ಲಿ ಕೇರಳ ಪರ ರಾಜೀವ್ ಅರ್ಧಶತಕ ಬಾರಿಸಿದರೆ, ಕರ್ನಾಟಕ ತಂಡದ ನಾಯಕ ಪ್ರದೀಪ್ (Pradeep Bogadi) ಅರ್ಧಶತಕ ಗಳಿಸಿ ಮಿಂಚಿದರು.

ಕೇರಳದ ರಾಜೀವ್ ಅರ್ಧಶತಕ

ಟಾಸ್ ಗೆದ್ದು ಮೊದಲ ಇನಿಂಗ್ಸ್ ಆಡಿದ ಕೇರಳ 5 ವಿಕೆಟ್ ನಷ್ಟಕ್ಕೆ 101 ರನ್ ಗಳಿಸಿತ್ತು. ಆರಂಭಿಕರಾಗಿ ಕಣಕ್ಕಿಳಿದ ನಂದನ್‌ಕುಮಾರ್ ಮತ್ತು ರಾಜೀವ್ ಪಿಳ್ಳೈ ಒಟ್ಟಾಗಿ 14 ರನ್‌ಗಳಿಸಿದರು. ಮೊದಲ ವಿಕೆಟ್ ಪತನದ ಬಳಿಕ ತಂಡದ ಜವಬ್ದಾರಿವಹಿಸಕೊಂಡ ರಾಜೀವ್, ಏಕಾಂಗಿಯಾಗಿ ಹೋರಾಟ ಮುಂದುವರೆಸಿ, 32 ಎಸೆತಗಳಲ್ಲಿ 3 ಬೃಹತ್ ಸಿಕ್ಸರ್ ಮತ್ತು 4 ಬೌಂಡರಿಗಳ ಸಹಿತ 54 ರನ್ ಗಳಿಸಿದರು. ಇನ್ನುಳಿದಂತೆ ಮಣಿಕುಟ್ಟನ್ 1 ರನ್ ಮತ್ತು ನಾಯಕ ಉನ್ನಿ ಮುಕುಂದ್ 10 ಎಸೆತಗಳಲ್ಲಿ 19 ರನ್ ಗಳಿಸಿದರು. ಸಿದ್ಧಾರ್ಥ್ ಮಾನ್ 3 ಎಸೆತಗಳಲ್ಲಿ 3 ರನ್ ಗಳಿಸಿದರೆ, ಜಿ ವಿವೇಕ್ ಗೋಪನ್ 6 ರನ್ ಗಳಿಸಿ ಅಜೇಯರಾಗಿ ಉಳಿದರು.

ಶ್ರೇಯಸ್ ಹಾಡಿದ ಹಾಡಿಗೆ ಮಡದಿಯೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾರ್ದೂಲ್; ವಿಡಿಯೋ

ಕರ್ನಾಟಕದ ನಾಯಕ ಪ್ರದೀಪ್ ಅರ್ಧಶತಕ

ಮೊದಲ ಇನಿಂಗ್ಸ್‌ನಲ್ಲಿ ಆಕ್ರಮಣಕಾರಿ ಆಟವಾಡಿದ ನಾಯಕ ಪ್ರದೀಪ್ ಬೋಗಾದಿ 29 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 7 ಬೌಂಡರಿ ಸಹಿತ 59 ರನ್ ಗಳಿಸಿದರು. ಬೋಗಾದಿ ಅವರ ಆಟದ ಹಿನ್ನಲೆಯಲ್ಲಿ ಕರ್ನಾಟಕ ಮೊದಲ ಇನಿಂಗ್ಸ್​ನಲ್ಲಿ ಮುನ್ನಡೆ ಸಾಧಿಸಿತ್ತು. ಇವರನ್ನು ಹೊರತುಪಡಿಸಿ ಆರಂಭಿಕ ಕೃಷ್ಣ 13 ಎಸೆತಗಳಲ್ಲಿ 20 ರನ್ ಗಳಿಸಿದರೆ, ನಿರೂಪ್ ಭಂಡಾರಿ 7 ರನ್ ಮತ್ತು ರಾಜೀವ್ ಹನು 13 ರನ್ ಗಳಿಸಿದರು. ಬಚ್ಚನ್ ಶೂನ್ಯ ರನ್‌ಗಳಿಗೆ ವಿಕೆಟ್ ಕಳೆದುಕೊಂಡರೆ, ಕರಣ್ ಆರ್ಯನ್ 5 ಎಸೆತಗಳಲ್ಲಿ 13 ರನ್ ಗಳಿಸುವಷ್ಟರಲ್ಲಿ ವಿಕೆಟ್ ಕಳೆದುಕೊಂಡರು. ಹೀಗಾಗಿ ಕರ್ನಾಟಕ ಮೊದಲ ಇನಿಂಗ್ಸ್​ನಲ್ಲಿ 5 ವಿಕೆಟ್ ನಷ್ಟಕ್ಕೆ 124 ರನ್ ಗಳಿಸಿತು.

ಕೇರಳದ 2ನೇ ಇನ್ನಿಂಗ್ಸ್

ಎರಡನೇ ಇನಿಂಗ್ಸ್​ನಲ್ಲೂ ಅಬ್ಬರಿಸಿದ ರಾಜೀವ್ ಪಿಳ್ಳೈ 18 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 3 ಬೌಂಡರಿ ಸಹಿತ 43 ರನ್ ಗಳಿಸಿ ಅಜೇಯರಾಗಿ ಉಳಿದರು. ಇನ್ನು ಎರಡನೇ ಇನ್ನಿಂಗ್ಸ್‌ನಲ್ಲಿ ಆರಂಭಿಕರಾಗಿ ಬಂದ ಸಿದ್ಧಾರ್ಥ್ ಮಾನ್ 12 ಎಸೆತಗಳಲ್ಲಿ 20 ರನ್ ಗಳಿಸಿದರು. ಉನ್ನಿ ಮುಕುಂದನ್ 13 ರನ್ ಗಳಿಸಿದರು. ವಿಜಯ್ ಯೇಸುದಾಸ್ ಶೂನ್ಯ ರನ್‌ಗಳಿಗೆ ವಿಕೆಟ್ ಕಳೆದುಕೊಂಡರು. ಹೀಗಾಗಿ ಎರಡನೇ ಇನಿಂಗ್ಸ್‌ನಲ್ಲಿ ಕೇರಳ ತಂಡ 5 ವಿಕೆಟ್ ಕಳೆದುಕೊಂಡು 105 ರನ್‌ ಗಳಿಸಿತು.

6.4 ಓವರ್‌ಗಳಲ್ಲಿ ಗೆಲುವು ಸಾಧಿಸಿದ ಕರ್ನಾಟಕ

ಎರಡನೇ ಇನಿಂಗ್ಸ್‌ನಲ್ಲಿ ಗುರಿ ಬೆನ್ನತ್ತಿದ ಕರ್ನಾಟಕ ತಂಡ 6.4 ಓವರ್‌ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು ಗೆಲುವಿನ ಗುರಿ ತಲುಪಿತು. ತಂಡದ ಪರ ಸ್ಫೋಟಕ ಬ್ಯಾಟಿಂಗ್ ಮಾಡಿದ ರಾಜೀವ್ ಹನು 13 ಎಸೆತಗಳಲ್ಲಿ 31 ರನ್ ಮತ್ತು ಕಾರ್ತಿಕ್ 13 ಎಸೆತಗಳಲ್ಲಿ 31 ರನ್ ಗಳಿಸಿದರು. ಆರಂಭಿಕರಿಬ್ಬರೂ ತಲಾ ಒಂದು ಸಿಕ್ಸರ್ ಬಾರಿಸಿದರು. ಚಂದನ್ ಕುಮಾರ್ ಔಟಾಗದೆ 10 ಹಾಗೂ ಕೃಷ್ಣ 10 ರನ್ ಗಳಿಸಿ ತಂಡಕ್ಕೆ ಜಯ ತಂದುಕೊಟ್ಟರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:34 pm, Mon, 27 February 23

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್