AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCL 2025: 38 ಎಸೆತಗಳಲ್ಲಿ 80 ರನ್; ಮೊದಲ ಪಂದ್ಯದಲ್ಲೇ ಸುನಾಮಿ ಎಬ್ಬಿಸಿದ ಡಾರ್ಲಿಂಗ್ ಕೃಷ್ಣ

CCL 2025: ತೆಲುಗು ವಾರಿಯರ್ಸ್​ ತಂಡದ ವಿರುದ್ಧ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 11ನೇ ಆವೃತ್ತಿಯ ಸೆಲೆಬ್ರಿಟಿ ಕ್ರಿಕೆಟ್ ಲೀಗ್​ನ ಮೊದಲ ದಿನದ ಎರಡನೇ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡದ ಸ್ಫೋಟಕ ಆರಂಭಿಕ ಬ್ಯಾಟ್ಸ್​ಮನ್ ಡಾರ್ಲಿಂಗ್ ಕೃಷ್ಣ ಕೇವಲ 38 ಎಸೆತಗಳಲ್ಲಿ ಅಜೇಯ 80 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ್ದಾರೆ.

CCL 2025: 38 ಎಸೆತಗಳಲ್ಲಿ 80 ರನ್; ಮೊದಲ ಪಂದ್ಯದಲ್ಲೇ ಸುನಾಮಿ ಎಬ್ಬಿಸಿದ ಡಾರ್ಲಿಂಗ್ ಕೃಷ್ಣ
ಡಾರ್ಲಿಂಗ್ ಕೃಷ್ಣ
ಪೃಥ್ವಿಶಂಕರ
|

Updated on:Feb 08, 2025 | 8:18 PM

Share

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 11ನೇ ಆವೃತ್ತಿಯ ಸೆಲೆಬ್ರಿಟಿ ಕ್ರಿಕೆಟ್ ಲೀಗ್​ನ ಮೊದಲ ದಿನದ ಎರಡನೇ ಪಂದ್ಯದಲ್ಲಿ ಕಿಚ್ಚ ಸುದೀಪ್ ನಾಯಕತ್ವದ ಕರ್ನಾಟಕ ಬುಲ್ಡೋಜರ್ಸ್​ ಹಾಗೂ ಅಖೀಲ್ ಅಕ್ಕಿನೇನಿ ನಾಯಕತ್ವದ ತೆಲುಗು ವಾರಿಯರ್ಸ್​ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲ ಇನ್ನಿಂಗ್ಸ್ ಆರಂಭಿಸಿರುವ ಕರ್ನಾಟಕ ಬುಲ್ಡೋಜರ್ಸ್ ತಂಡದ ಪರ ಆರಂಭಿಕ ಡಾರ್ಲಿಂಗ್ ಕೃಷ್ಣ ಸ್ಫೋಟಕ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಕೃಷ್ಣರ ಈ ಸ್ಫೋಟಕ ಆಟದಿಂದಾಗಿ ಕರ್ನಾಟಕ ತಂಡ ಮೊದಲ 10 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 113 ರನ್ ಕಲೆಹಾಕಿದೆ.

ಕರ್ನಾಟಕ ತಂಡಕ್ಕೆ ಆರಂಭಿಕ ಆಘಾತ

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕರಾಗಿ ಕಣಕ್ಕಿಳಿದಿದ್ದ ರಾಜೀವ್ ಹಾಗೂ ಡಾರ್ಲಿಂಗ್ ಕೃಷ್ಣಗೆ ಬೃಹತ್ ಜೊತೆಯಾಟ ನಡೆಸಲು ಸಾಧ್ಯವಾಗಲಿಲ್ಲ. ಸ್ಫೋಟಕ ದಾಂಡಿಗ ರಾಜೀವ್ ಮೊದಲ ಓವರ್​ನ ಕೊನೆಯ ಎಸೆತದಲ್ಲಿ ವಿಕೆಟ್​ ಕೀಪರ್​ಗೆ ಕ್ಯಾಚಿತ್ ಔಟಾದರು. ಆ ಬಳಿಕ ಬಂದ ಮತ್ತೊಬ್ಬ ಅನುಭವಿ ಆಲ್​ರೌಂಡರ್ ಜಯರಾಂ ಕಾರ್ತಿಕ್ ಕೂಡ ಹೆಚ್ಚು ಹೊತ್ತು ಮೈದಾನದಲ್ಲಿ ನಿಲ್ಲಲಿಲ್ಲ. ಹೀಗಾಗಿ ಕರ್ನಾಟಕ ತಂಡ ಆರಂಭದಲ್ಲೇ ಒತ್ತಡಕ್ಕೆ ಸಿಲುಕಿತು.

ಕೃಷ್ಣ ಸ್ಫೋಟಕ ಅರ್ಧಶತಕ

ನಾಲ್ಕನೇ ಕ್ರಮಾಂಕದಲ್ಲಿ ಬಂದ ಮಂಜುನಾಥ್ ಗೌಡ ಕೂಡ ಒಂದಂಕಿಗೆ ಸುಸ್ತಾದರು. ಇದು ತಂಡವನ್ನು ಇನ್ನಷ್ಟು ಒತ್ತಡಕ್ಕೆ ಸಿಲುಕಿಸಿತು. ಹೀಗಾಗಿ ಮೊದಲ ಐದು ಓವರ್ ಮುಗಿದ ತಂಡದ ಮೊತ್ತ ಕೇವಲ 41 ರನ್​​ಗಳಿದ್ದವು. ಆದರೆ ಆ ಬಳಿಕ ಜೊತೆಯಾದ ಕರಣ್ ಹಾಗೂ ಕೃಷ್ಣ ತಾಳ್ಮೆಯ ಜೊತೆಯಾಟ ಕಟ್ಟಿದರು. 7ನೇ ಓವರ್​ನಿಂದ ಹೊಡಿಬಡಿ ಆಟಕ್ಕೆ ಮುಂದಾದ ಕೃಷ್ಣ ಪ್ರತಿ ಓವರ್​ನಲ್ಲೂ ಬೌಂಡರಿ ಹಾಗೂ ಸಿಕ್ಸರ್ ಕಲೆಹಾಕಲು ಆರಂಭಿಸಿದರು. ಹೀಗಾಗಿ ಕರ್ನಾಟಕ ತಂಡ 8 ಓವರ್ ಅಂತ್ಯಕ್ಕೆ 86 ರನ್ ಕಲೆಹಾಕಿತು. ಇದೇ ವೇಳೆಗೆ ಕೃಷ್ಣ ಕೂಡ ತಮ್ಮ ಅರ್ಧಶತಕ ಪೂರೈಸಿದರು.

38 ಎಸೆತಗಳಲ್ಲಿ  80 ರನ್

ಕೊನೆಯ 2 ಓವರ್​ಗಳಲ್ಲಿ ಇನ್ನಷ್ಟು ಉಗ್ರರೂಪ ತಾಳಿದ ಕೃಷ್ಣ ಕೊನೆಯ 12 ಎಸೆತಗಳಲ್ಲಿ 28 ರನ್ ಕಲೆಹಾಕಿದರು. ಆರಂಭಿಕರಾಗಿ ಕಣಕ್ಕಿಳಿದು ಕೊನೆಯವರೆಗೂ ಅಜೇಯರಾಗಿ ಉಳಿದ ಕೃಷ್ಣ ಕೇವಲ 38 ಎಸೆತಗಳಲ್ಲಿ ಸ್ಫೋಟಕ 80 ರನ್ ಕಲೆಹಾಕಿ ತಂಡವನ್ನು ಮೊದಲ 10 ಓವರ್​ಗಳಲ್ಲಿ 113 ರನ್​ಗಳಿಗೆ ಕೊಂಡೊಯ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:02 pm, Sat, 8 February 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ