AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCL 2025: ಸೆಮಿಫೈನಲ್‌ ಪಂದ್ಯಕ್ಕೂ ಮುನ್ನ ಕರ್ನಾಟಕ ತಂಡ ಸೇರಿಕೊಂಡ ಬಾಹುಬಲಿ

CCL 2025: ಮೈಸೂರಿನಲ್ಲಿ ನಡೆಯುತ್ತಿರುವ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್)ನ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳಿಗೆ ಕರ್ನಾಟಕ ಬುಲ್ಡೋಜರ್ಸ್ ತಂಡ ಸಜ್ಜಾಗಿದೆ. ಕಿಚ್ಚ ಸುದೀಪ್ ನೇತೃತ್ವದ ಈ ತಂಡವು ಲೀಗ್ ಹಂತದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದೆ. ಸೆಮಿಫೈನಲ್‌ನಲ್ಲಿ ತಮಿಳು ರೈನೋಸ್ ತಂಡವನ್ನು ಎದುರಿಸಲಿರುವ ಕರ್ನಾಟಕಕ್ಕೆ ಅರುಣ್ ಬಚ್ಚನ್ ಸೇರ್ಪಡೆಯಾಗಿದ್ದು, ತಂಡದ ಬ್ಯಾಟಿಂಗ್ ಶಕ್ತಿ ಹೆಚ್ಚಿದೆ.

CCL 2025: ಸೆಮಿಫೈನಲ್‌ ಪಂದ್ಯಕ್ಕೂ ಮುನ್ನ ಕರ್ನಾಟಕ ತಂಡ ಸೇರಿಕೊಂಡ ಬಾಹುಬಲಿ
Karnataka Bulldozers
ಪೃಥ್ವಿಶಂಕರ
|

Updated on: Feb 28, 2025 | 6:37 PM

Share

ಸೆಲೆಬ್ರಿಟಿ ಕ್ರಿಕೆಟ್​ ಲೀಗ್​ನ (Celebrity Cricket League) ಸೆಮಿಫೈನಲ್‌ ಹಾಗೂ ಫೈನಲ್ ಪಂದ್ಯಕ್ಕೆ ಮೈಸೂರು ಆತಿಥ್ಯ ನೀಡುತ್ತಿರುವ ಕಾರಣ ಅರಮನೆ ನಗರಿಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಅದರಲ್ಲೂ ಕಿಚ್ಚ ಸುದೀಪ್ (Kiccha Sudeep) ನಾಯಕತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಕೂಡ ನಿರೀಕ್ಷೆಯಂತೆ ಸೆಮಿಫೈನಲ್‌ ತಲುಪಿರುವುದು ಅಭಿಮಾನಿಗಳ ಸಂತಸವನ್ನು ಇಮ್ಮಡಿಗೊಳಿಸಿದೆ. ಇದೀಗ ಟೂರ್ನಿಯ ಸೆಮಿಫೈನಲ್‌ ಪಂದ್ಯ ಮಾರ್ಚ್​ 1 ರಂದು ನಡೆಯಲಿದೆ. ಈ ದಿನದಂದು ನಾಲ್ಕು ತಂಡಗಳು ಫೈನಲ್​ಗೆ ಟಿಕೆಟ್ ಪಡೆಯಲು ಸೆಣಸಾಟ ನಡೆಸಲಿವೆ. ಮೊದಲ ಸೆಮಿಫೈನಲ್​ನಲ್ಲಿ ಬೆಂಗಾಲ್ ಟೈಗರ್ಸ್​ ಹಾಗೂ ಪಂಜಾಬ್ ದಿ ಶೇರ್ ಮುಖಾಮುಖಿಯಾದರೆ, ಎರಡನೇ ಸೆಮಿಫೈನಲ್​ನಲ್ಲಿ ರ್ನಾಟಕ ಬುಲ್ಡೋಜರ್ಸ್ ಹಾಗೂ ತಮಿಳ್ ರೈನೋಸ್ ಎದುರುಬದುರಾಗಲಿವೆ. ಆದರೆ ಈ ಪಂದ್ಯಕ್ಕೂ ಮುನ್ನ ಕರ್ನಾಟಕ ತಂಡಕ್ಕೆ ಸಂತಸದ ಸುದ್ದಿಯೊಂದು ಸಿಕ್ಕಿದೆ.

ವಾಸ್ತವವಾಗಿ ಕರ್ನಾಟಕ ಬುಲ್ಡೋಜರ್ಸ್ ತಂಡ ಈ ಟೂರ್ನಿಯ ಲೀಗ್ ಹಂತದಲ್ಲಿ ಆಡಿದ 4 ಪಂದ್ಯಗಳಲ್ಲಿ ಮೂರರಲ್ಲಿ ಗೆದ್ದು 1 ಪಂದ್ಯದಲ್ಲಿ ಸೋಲು ಕಾಣಬೇಕಾಯಿತು. ಹೀಗಾಗಿ ಅಂಕಪಟ್ಟಿಯಲ್ಲಿ 2ನೇ ಸ್ಥಾನ ಪಡೆದಿರುವ ಕರ್ನಾಟಕ ಬುಲ್ಡೋಜರ್ಸ್ ತಂಡ ಸೆಮಿಫೈನಲ್​ನಲ್ಲಿ ಮೂರನೇ ಸ್ಥಾನ ಪಡೆದಿರುವ ತಮಿಳ್ ರೈನೋಸ್ ತಂಡವನ್ನು ಎದುರಿಸಲಿದೆ.

ಕರ್ನಾಟಕ ತಂಡಕ್ಕೆ ಬಚ್ಚನ್ ಎಂಟ್ರಿ

ಇನ್ನು ತಂಡದ ಬ್ಯಾಟಿಂಗ್ ಬಗ್ಗೆ ಹೇಳುವುದಾದರೆ.. ಟೂರ್ನಿಯೂದ್ದಕ್ಕೂ ಕರ್ನಾಟಕ ತಂಡಕ್ಕೆ ಡಾರ್ಲಿಂಗ್ ಕೃಷ್ಣ ಹಾಗೂ ರಾಜೀವ್ ಹನು ತಂಡದ ಬ್ಯಾಟಿಂಗ್ ಜೀವಾಳವಾಗಿದ್ದರು. ಈ ಇಬ್ಬರನ್ನು ಬಿಟ್ಟರೆ ಕರಣ್ ಆರ್ಯನ್ ಮಾತ್ರ ಹೇಳಿಕೊಳ್ಳುವಂತಹ ಕೆಲವು ಇನ್ನಿಂಗ್ಸ್ ಆಡಿದ್ದರು. ಹೀಗಾಗಿ ಕರ್ನಾಟಕ ತಂಡ ಬ್ಯಾಟಿಂಗ್ ವಿಭಾಗದಲ್ಲಿ ಕೊಂಚ ದುರ್ಬಲವಾಗಿದೆ ಎಂದು ತೊರುತ್ತಿತ್ತು. ಇದಕ್ಕೆ ಕಾರಣ ತಂಡದ ಆರಂಭಿಕ ಆಟಗಾರ ಪ್ರದೀಪ್ ಈ ಬಾರಿಯ ಸಿಸಿಎಲ್​ನಿಂದ ಹಿಂದೆ ಸರಿದಿದ್ದು, ಪ್ರದೀಪ್ ಅಲಭ್ಯತೆ ತಂಡಕ್ಕೆ ಇದುವರೆಗೆ ಕಾಡಿಲ್ಲವಾದರೂ ಸೆಮಿಫೈನಲ್‌ ಹಾಗೂ ಫೈನಲ್ ಪಂದ್ಯಗಳಿಗೆ ಬ್ಯಾಟಿಂಗ್ ವಿಭಾಗ ಬಲಿಷ್ಠವಾಗಬೇಕಿತ್ತು. ಇದೀಗ ಅದಕ್ಕೆ ಪೂರಕವಾಗಿ ಕರ್ನಾಟಕ ತಂಡಕ್ಕೆ ಸ್ಫೋಟಕ ಬ್ಯಾಟರ್​ನ ಆಗಮನವಾಗಿದೆ. ಹೊಡಿಬಡಿ ದಾಂಡಿಗ ಅರುಣ್ ಬಚ್ಚನ್ ಸೆಮಿಫೈನಲ್‌ ಪಂದ್ಯಕ್ಕೂ ಮುನ್ನ ತಂಡವನ್ನು ಸೇರಿಕೊಂಡಿರುವುದು ಕಿಚ್ಚನ ಪಡೆಯ ಆತ್ಮಸ್ಥೈರ್ಯವನ್ನು ಇನ್ನಷ್ಟು ಹೆಚ್ಚಿಸಿದೆ.

ಇದನ್ನೂ ಓದಿ: CCL 2025: ಮೈಸೂರಿನಲ್ಲಿ ಸಿಸಿಎಲ್ ಸೆಮಿಫೈನಲ್; ಕಿಚ್ಚನ ತಂಡಕ್ಕೆ ಎದುರಾಳಿ ಯಾರು? ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ

ಸಿಸಿಎಲ್​ನಲ್ಲಿ ಕರ್ನಾಟಕದ ಪ್ರದರ್ಶನ

ಇಲ್ಲಿಯವರೆಗೆ ಸೆಲೆಬ್ರಿಟಿ ಕ್ರಿಕೆಟ್ ಲೀಗ್​ನಲ್ಲಿ 10 ಆವೃತ್ತಿಗಳು ನಡೆದಿವೆ. ಈ 10 ಆವೃತ್ತಿಗಳಲ್ಲಿ ಅತ್ಯಂತ ಯಶಸ್ವಿ ತಂಡವೆಂದರೆ ತೆಲುಗು ವಾರಿಯರ್ಸ್​. ಈ ತಂಡ ಇದುವರೆಗೆ 4 ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಎರಡನೇ ಸ್ಥಾನದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡವಿದೆ. ಇದುವರೆಗೆ ಈ ಲೀಗ್​ನಲ್ಲಿ ಕರ್ನಾಟಕ 2 ಬಾರಿ ಚಾಂಪಿಯನ್ ಆಗಿದೆ. ಅಚ್ಚರಿಯ ಸಂಗತಿಯೆಂದರೆ ಇದುವರೆಗೆ ನಡೆದಿರುವ 10 ಆವೃತ್ತಿಗಳಲ್ಲಿ ಕರ್ನಾಟಕ ತಂಡ 7 ಬಾರಿ ಫೈನಲ್​ಗೇರಿದೆ. ಆದರೆ 2 ಬಾರಿ ಮಾತ್ರ ಚಾಂಪಿಯನ್ ಕಿರೀಟ ತೊಟ್ಟಿದ್ದು, ಉಳಿದಂತೆ 5 ಬಾರಿ ರನ್ನರ್ ಅಪ್​ಸ್ಥಾನಕ್ಕೆ ತೃಪ್ತಿಪಡಬೇಕಾಯಿತು. ಕಳೆದ ಬಾರಿಯೂ ಕರ್ನಾಟಕ ಫೈನಲ್ ತಲುಪಿತ್ತು. ಆದರೆ ಫೈನಲ್ ಹಣಾಹಣಿಯಲ್ಲಿ ಬೆಂಗಾಲ್ ಟೈಗರ್ಸ್​ ವಿರುದ್ಧ ಮುಗ್ಗರಿಸಿತ್ತು. ಇದೀಗ ಕರ್ನಾಟಕ ತಂಡ ಮತ್ತೊಮ್ಮೆ ಫೈನಲ್​ಗೇರಿ ಟ್ರೊಫಿ ಎತ್ತಿಹಿಡಿಯಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ