CEAT Awards: ಸಿಯೆಟ್ ಪ್ರಶಸ್ತಿ ಗೆದ್ದ ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ರೋಹಿತ್ ಶರ್ಮಾ

CEAT Awards: ಸಿಯೆಟ್ ಕಂಪೆನಿಯು ಆಗಸ್ಟ್ 21 ರಂದು ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ 26ನೇ ಆವೃತ್ತಿಯ ಕ್ರಿಕೆಟ್ ರೇಟಿಂಗ್ (ಸಿಸಿಆರ್) ಪ್ರಶಸ್ತಿಗಳನ್ನು ಪ್ರಧಾನ ಮಾಡಿದೆ. ಈ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್, ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಮ್ಯಾಥ್ಯೂ ಹೇಡನ್, ಇಂಗ್ಲೆಂಡ್ ಆಟಗಾರ ಫಿಲ್ ಸಾಲ್ಟ್ ಹಾಗೂ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಕಾಣಿಸಿಕೊಂಡಿದ್ದರು.

CEAT Awards: ಸಿಯೆಟ್ ಪ್ರಶಸ್ತಿ ಗೆದ್ದ ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ರೋಹಿತ್ ಶರ್ಮಾ
Virat Kohli - Phil Salt
Follow us
ಝಾಹಿರ್ ಯೂಸುಫ್
|

Updated on:Aug 22, 2024 | 8:06 AM

ಭಾರತದ ಟೈರ್ ತಯಾರಿಕಾ ಕಂಪನಿ ಸಿಯೆಟ್ ವರ್ಷದ ಕ್ರಿಕೆಟಿಂಗ್ ಪ್ರಶಸ್ತಿಗಳನ್ನು ಪ್ರಧಾನ ಮಾಡಿದೆ. ಈ ಬಾರಿ ಪುರುಷರ ವರ್ಷದ ಅಂತಾರಾಷ್ಟ್ರೀಯ ಕ್ರಿಕೆಟಿಗ ಪ್ರಶಸ್ತಿ ಟೀಮ್ ಇಂಢಿಯಾ ನಾಯಕ ರೋಹಿತ್ ಶರ್ಮಾಗೆ ಒಲಿದರೆ, ಒಡಿಐ ಬ್ಯಾಟರ್ ಆಫ್ ದಿ ಇಯರ್ ಪ್ರಶಸ್ತಿಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಹಾಗೆಯೇ ವರ್ಷದ ಟಿ20 ಬ್ಯಾಟರ್ ಆಫ್ ದಿ ಇಯರ್ ಪ್ರಶಸ್ತಿಯು ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ಫಿಲ್ ಸಾಲ್ಟ್ ಪಾಲಾಗಿದೆ.

ಇನ್ನು ಟೀಮ್ ಇಂಡಿಯಾ ಬೌಲರ್ ಮೊಹಮ್ಮದ್ ಶಮಿ ಏಕದಿನ ಬೌಲರ್ ಪ್ರಶಸ್ತಿ ಪಡೆದರೆ, ಯುವ ದಾಂಡಿಗ ಯಶಸ್ವಿ ಜೈಸ್ವಾಲ್ ವರ್ಷದ ಟೆಸ್ಟ್ ಬ್ಯಾಟರ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಹಾಗೆಯೇ ವರ್ಷದ ಟೆಸ್ಟ್ ಬೌಲರ್ ಪ್ರಶಸ್ತಿಯು ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರಿಗೆ ನೀಡಲಾಗಿದೆ.

ಇದನ್ನೂ ಓದಿ: IPL 2025: ಧೋನಿ RCB ತಂಡದ ನಾಯಕರಾಗಿದ್ದರೆ 3 ಟ್ರೋಫಿ ಗೆದ್ದಿರುತ್ತಿತ್ತು..!

ಮಹಿಳಾ ವಿಭಾಗದಲ್ಲಿ ಟೀಮ್ ಇಂಡಿಯಾ ಆಟಗಾರ್ತಿಯರಾದ ಹರ್ಮನ್​ಪ್ರೀತ್ ಕೌರ್, ಶಫಾಲಿ ವರ್ಮಾ, ದೀಪ್ತಿ ಶರ್ಮಾ ಹಾಗೂ ಸ್ಮೃತಿ ಮಂಧಾನ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದಾರೆ.

ರಾಹುಲ್ ದ್ರಾವಿಡ್​ಗೆ ಗೌರವ:

ಜೀವಮಾನದ ಸರ್ವಶ್ರೇಷ್ಠ ಸಾಧನೆಗಾಗಿ ಟೀಮ್ ಇಂಡಿಯಾದ ಮಾಜಿ ಆಟಗಾರ ರಾಹುಲ್ ದ್ರಾವಿಡ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಸಿಯೆಟ್ ಕಂಪೆನಿ ಗೌರವಿಸಿದೆ. ಹಾಗೆಯೇ ಶ್ರೇಷ್ಠ ಕ್ರೀಡಾ ಆಡಳಿತಕ್ಕಾಗಿ ಜಯ್ ಶಾ ಅವರಿಗೂ ವಿಶೇಷ ಪ್ರಶಸ್ತಿ ನೀಡಲಾಗಿದೆ. ಅದರಂತೆ ಈ ಬಾರಿಯ ಸಿಯೆಟ್​ ಪ್ರಶಸ್ತಿ ಪಡೆದವರ ಪಟ್ಟಿ ಈ ಕೆಳಗಿನಂತಿದೆ.

ಸಿಯೆಟ್ ಪ್ರಶಸ್ತಿ ವಿಜೇತರ ಸಂಪೂರ್ಣ ಪಟ್ಟಿ:

ಸಂಖ್ಯೆ ಪ್ರಶಸ್ತಿ ಪ್ರಶಸ್ತಿ ಪಡೆದವರು
1 ಜೀವಮಾನ ಸಾಧನೆ ಪ್ರಶಸ್ತಿ ರಾಹುಲ್ ದ್ರಾವಿಡ್
2 ವರ್ಷದ ಅಂತಾರಾಷ್ಟ್ರೀಯ ಕ್ರಿಕೆಟಿಗ ರೋಹಿತ್ ಶರ್ಮಾ
3 ವರ್ಷದ ಏಕದಿನ ಬ್ಯಾಟರ್ ವಿರಾಟ್ ಕೊಹ್ಲಿ
4 ವರ್ಷದ ಏಕದಿನ ಬೌಲರ್ ಮೊಹಮ್ಮದ್ ಶಮಿ
5 ವರ್ಷದ ಟೆಸ್ಟ್ ಬ್ಯಾಟರ್ ಯಶಸ್ವಿ ಜೈಸ್ವಾಲ್
6 ವರ್ಷದ ಟೆಸ್ಟ್ ಬೌಲರ್ ರವಿಚಂದ್ರನ್ ಅಶ್ವಿನ್
7 ವರ್ಷದ ಟಿ20 ಬ್ಯಾಟರ್ ಫಿಲ್ ಸಾಲ್ಟ್
8 ವರ್ಷದ ಟಿ20 ಬೌಲರ್ ಟಿಮ್ ಸೌಥಿ
9 ವರ್ಷದ ದೇಶೀಯ ಕ್ರಿಕೆಟಿಗ ಸಾಯಿ ಕಿಶೋರ್
10 ವರ್ಷದ ಮಹಿಳಾ ಬ್ಯಾಟರ್ ಸ್ಮೃತಿ ಮಂಧಾನ
11 ವರ್ಷದ ಮಹಿಳಾ ಬೌಲರ್ ದೀಪ್ತಿ ಶರ್ಮಾ
12 ಹೆಚ್ಚು ಟಿ20 ಪಂದ್ಯಗಳನ್ನಾಡಿದ ನಾಯಕಿ ಹರ್ಮನ್‌ಪ್ರೀತ್ ಕೌರ್
13 ಐಪಿಎಲ್​ನ ಅತ್ಯುತ್ತಮ ನಾಯಕ ಶ್ರೇಯಸ್ ಅಯ್ಯರ್
14 ಮಹಿಳಾ ಟೆಸ್ಟ್‌ನಲ್ಲಿ ವೇಗದ ದ್ವಿಶತಕ ಬಾರಿಸಿದ ಬ್ಯಾಟರ್ ಶಫಾಲಿ ವರ್ಮಾ
15 ಶ್ರೇಷ್ಠ ಕ್ರೀಡಾ ಆಡಳಿತ ಜಯ್ ಶಾ

Published On - 8:05 am, Thu, 22 August 24

ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ