AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CEAT Awards: ಸಿಯೆಟ್ ಪ್ರಶಸ್ತಿ ಪಡೆದ ಆಟಗಾರರ ಪಟ್ಟಿ ಇಲ್ಲಿದೆ

CEAT Awards Lists: ಸಿಯೆಟ್ ಕಂಪೆನಿಯು ಅಕ್ಟೋಬರ್ 7 ರಂದು ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ 27ನೇ ಆವೃತ್ತಿಯ ಕ್ರಿಕೆಟ್ ರೇಟಿಂಗ್ (ಸಿಸಿಆರ್) ಪ್ರಶಸ್ತಿಗಳನ್ನು ಪ್ರಧಾನ ಮಾಡಿದೆ. ಈ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ವೆಸ್ಟ್ ಇಂಡೀಸ್​ನ ಬ್ರಿಯಾನ್ ಲಾರಾ ಸೇರಿದಂತೆ ಅನೇಕರು ಕಾಣಿಸಿಕೊಂಡಿದ್ದರು.

CEAT Awards: ಸಿಯೆಟ್ ಪ್ರಶಸ್ತಿ ಪಡೆದ ಆಟಗಾರರ ಪಟ್ಟಿ ಇಲ್ಲಿದೆ
Root - Temba - Sanju
ಝಾಹಿರ್ ಯೂಸುಫ್
|

Updated on:Oct 08, 2025 | 8:03 AM

Share

ಭಾರತದ ಟೈರ್ ತಯಾರಿಕಾ ಕಂಪನಿ ಸಿಯೆಟ್ ವರ್ಷದ ಕ್ರಿಕೆಟಿಂಗ್ ಪ್ರಶಸ್ತಿಗಳನ್ನು ಪ್ರಧಾನ ಮಾಡಿದೆ. ಈ ಬಾರಿ ಪುರುಷರ ವರ್ಷದ ಅಂತಾರಾಷ್ಟ್ರೀಯ ಕ್ರಿಕೆಟಿಗ ಪ್ರಶಸ್ತಿ ಇಂಗ್ಲೆಂಡ್ ತಂಡದ ಟೆಸ್ಟ್ ಸ್ಪೆಷಲಿಸ್ಟ್ ಜೋ ರೂಟ್ ಪಾಲಾಗಿದೆ. ಹಾಗೆಯೇ ಒಡಿಐ ಬ್ಯಾಟರ್ ಆಫ್ ದಿ ಇಯರ್ ಪ್ರಶಸ್ತಿಯನ್ನು ನ್ಯೂಝಿಲೆಂಡ್​ನ ಕೇನ್ ವಿಲಿಯಮ್ಸನ್ ತಮ್ಮದಾಗಿಸಿಕೊಂಡಿದ್ದಾರೆ. ಹಾಗೆಯೇ ವರ್ಷದ ಟಿ20 ಬ್ಯಾಟರ್ ಆಫ್ ದಿ ಇಯರ್ ಪ್ರಶಸ್ತಿಯು ಟೀಮ್ ಇಂಡಿಯಾದ ಸಂಜು ಸ್ಯಾಮ್ಸನ್ ಪಾಲಾಗಿದೆ.

ಇನ್ನು ಟೀಮ್ ಇಂಡಿಯಾ ಬೌಲರ್ ವರುಣ್ ಚಕ್ರವರ್ತಿ ಟಿ20 ಬೌಲರ್ ಪ್ರಶಸ್ತಿ ಪಡೆದರೆ, ಯುವ ದಾಂಡಿಗ ಹ್ಯಾರಿ ಬ್ರೂಕ್ ಟೆಸ್ಟ್ ಕ್ರಿಕೆಟ್ ಆಫ್ ದಿ ಇಯರ್ ಪ್ರಶಸ್ತಿಯನ್ನ ತಮ್ಮದಾಗಿಸಿಕೊಂಡಿದ್ದಾರೆ. ಹಾಗೆಯೇ ವರ್ಷದ ಟೆಸ್ಟ್ ಬೌಲರ್ ಪ್ರಶಸ್ತಿಯು ಶ್ರೀಲಂಕಾ ಸ್ಪಿನ್ನರ್ ಪ್ರಭಾತ್ ಜಯಸೂರ್ಯ ಅವರಿಗೆ ನೀಡಲಾಗಿದೆ.

ಮಹಿಳಾ ವಿಭಾಗದಲ್ಲಿ ಟೀಮ್ ಇಂಡಿಯಾ ಆಟಗಾರ್ತಿಯರಾದ ದೀಪ್ತಿ ಶರ್ಮಾ ಹಾಗೂ ಸ್ಮೃತಿ ಮಂಧಾನ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದಾರೆ.

ಇದನ್ನೂ ಓದಿ: 22 ಫೋರ್, 3 ಭರ್ಜರಿ ಸಿಕ್ಸ್: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಪೃಥ್ವಿ ಶಾ

ಬ್ರಿಯಾನ್ ಲಾರಾಗೆ ವಿಶೇಷ ಗೌರವ:

ಜೀವಮಾನದ ಸರ್ವಶ್ರೇಷ್ಠ ಸಾಧನೆಗಾಗಿ ವೆಸ್ಟ್ ಇಂಡೀಸ್ ತಂಡದ ಮಾಜಿ ನಾಯಕ ಬ್ರಿಯಾನ್ ಲಾರಾ ಹಾಗೂ ಭಾರತದ ಬಿ.ಎಸ್​ ಚಂದ್ರಶೇಖರ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಸಿಯೆಟ್ ಕಂಪೆನಿ ಗೌರವಿಸಿದೆ. ಹಾಗೆಯೇ ಭಾರತ ತಂಡಕ್ಕೆ ಚಾಂಪಿಯನ್ಸ್ ಟ್ರೋಫಿ ಗೆದ್ದು ಕೊಟ್ಟ ನಾಯಕ ರೋಹಿತ್ ಶರ್ಮಾ ಅವರಿಗೂ ವಿಶೇಷ ಸ್ಮರಣಿಕೆ ನೀಡಲಾಗಿದೆ. ಅದರಂತೆ ಈ ಬಾರಿಯ ಸಿಯೆಟ್ ಪ್ರಶಸ್ತಿ ಪಡೆದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ…

  • ಜೀವಮಾನ ಸಾಧನೆ ಪ್ರಶಸ್ತಿ: ಬ್ರಿಯಾನ್ ಲಾರಾ (ವೆಸ್ಟ್ ಇಂಡೀಸ್)
  • ಜೀವಮಾನ ಸಾಧನೆ ಪ್ರಶಸ್ತಿ: ಬಿ.ಎಸ್. ಚಂದ್ರಶೇಖರ್ (ಭಾರತ)
  • ಚಾಂಪಿಯನ್ಸ್ ಟ್ರೋಫಿ ಗೆದ್ದ ವಿಶೇಷ ಸ್ಮರಣಿಕೆ: ರೋಹಿತ್ ಶರ್ಮಾ (ಭಾರತ)
  • ವರ್ಷದ ಅಂತರರಾಷ್ಟ್ರೀಯ ಕ್ರಿಕೆಟಿಗ: ಜೋ ರೂಟ್ (ಇಂಗ್ಲೆಂಡ್)
  • ವರ್ಷದ ಟಿ20 ಅಂತರರಾಷ್ಟ್ರೀಯ ಬ್ಯಾಟ್ಸ್‌ಮನ್: ಸಂಜು ಸ್ಯಾಮ್ಸನ್ (ಭಾರತ)
  • ವರ್ಷದ ಟಿ20 ಅಂತರರಾಷ್ಟ್ರೀಯ ಬೌಲರ್: ವರುಣ್ ಚಕ್ರವರ್ತಿ (ಭಾರತ)
  • ಸಿಯೆಟ್ ಜಿಯೋಸ್ಟಾರ್ ಪ್ರಶಸ್ತಿ: ಶ್ರೇಯಸ್ ಅಯ್ಯರ್ (ಭಾರತ)
  • ವರ್ಷದ ಪುರುಷರ ಏಕದಿನ ಬ್ಯಾಟ್ಸ್‌ಮನ್: ಕೇನ್ ವಿಲಿಯಮ್ಸನ್ (ನ್ಯೂಝಿಲೆಂಡ್)
  • ವರ್ಷದ ಪುರುಷರ ಏಕದಿನ ಬೌಲರ್: ಮ್ಯಾಟ್ ಹೆನ್ರಿ (ನ್ಯೂಝಿಲೆಂಡ್)
  • ವರ್ಷದ ಮಹಿಳಾ ಬ್ಯಾಟ್ಸ್‌ಮನ್: ಸ್ಮೃತಿ ಮಂಧಾನ (ಭಾರತ)
  • ವರ್ಷದ ಮಹಿಳಾ ಬೌಲರ್: ದೀಪ್ತಿ ಶರ್ಮಾ (ಭಾರತ)
  • ವರ್ಷದ ಉದಯೋನ್ಮುಖ ಆಟಗಾರ: ಅಂಗ್‌ಕ್ರಿಶ್ ರಘುವಂಶಿ (ಭಾರತ)
  • ವರ್ಷದ ಅತ್ಯುತ್ತಮ ನಾಯಕ ಪ್ರಶಸ್ತಿ: ಟೆಂಬಾ ಬವುಮಾ (ಸೌತ್ ಆಫ್ರಿಕಾ)
  • ವರ್ಷದ ಪುರುಷರ ಟೆಸ್ಟ್ ಬೌಲರ್: ಪ್ರಭಾತ್ ಜಯಸೂರ್ಯ (ಶ್ರೀಲಂಕಾ)
  • ವರ್ಷದ ಪುರುಷರ ಟೆಸ್ಟ್ ಕ್ರಿಕೆಟಿಗ: ಹ್ಯಾರಿ ಬ್ರೂಕ್ (ಇಂಗ್ಲೆಂಡ್)
  •  ವರ್ಷದ ದೇಶೀಯ ಕ್ರಿಕೆಟಿಗ: ಹರ್ಷ್ ದುಬೆ (ಭಾರತ)

Published On - 8:03 am, Wed, 8 October 25

ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ನಡೆದ ಸ್ಫೋಟದ ಹೊಸ ವಿಡಿಯೋ ವೈರಲ್
ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ನಡೆದ ಸ್ಫೋಟದ ಹೊಸ ವಿಡಿಯೋ ವೈರಲ್
ದಾರಿ ಬಿಡುವ ವಿಚಾರಕ್ಕೆ ಬಸ್- ಆಟೋ ಚಾಲಕ ಹೊಡೆದಾಟ, ವಿಡಿಯೋ ನೋಡಿ
ದಾರಿ ಬಿಡುವ ವಿಚಾರಕ್ಕೆ ಬಸ್- ಆಟೋ ಚಾಲಕ ಹೊಡೆದಾಟ, ವಿಡಿಯೋ ನೋಡಿ
ಬಾಲ್ಕನಿಯಲ್ಲಿ ಬಟ್ಟೆ ಒಣಗಿಸುವಾಗ ಕಾಲು ಜಾರಿ ಕೆಳಗೆ ಬಿದ್ದ ಮಹಿಳೆ
ಬಾಲ್ಕನಿಯಲ್ಲಿ ಬಟ್ಟೆ ಒಣಗಿಸುವಾಗ ಕಾಲು ಜಾರಿ ಕೆಳಗೆ ಬಿದ್ದ ಮಹಿಳೆ
ನಾಳೆ ವರ್ಷದ ಮೊದಲ ಸೂರ್ಯಗ್ರಹಣ: ಯಾವ ರಾಶಿಗೆ ಶುಭ? ಯಾರಿಗೆ ಅಶುಭ?
ನಾಳೆ ವರ್ಷದ ಮೊದಲ ಸೂರ್ಯಗ್ರಹಣ: ಯಾವ ರಾಶಿಗೆ ಶುಭ? ಯಾರಿಗೆ ಅಶುಭ?
‘ಬಿಲ್ಲ ರಂಗ ಬಾಷ’ ತಡ ಆಗ್ತಿರೋದಕ್ಕೆ ರಿಯಲ್ ಕಾರಣ ತಿಳಿಸಿದ ಕಿಚ್ಚ ಸುದೀಪ್
‘ಬಿಲ್ಲ ರಂಗ ಬಾಷ’ ತಡ ಆಗ್ತಿರೋದಕ್ಕೆ ರಿಯಲ್ ಕಾರಣ ತಿಳಿಸಿದ ಕಿಚ್ಚ ಸುದೀಪ್
ಜೈಲಿನಲ್ಲಿ ದರ್ಶನ್ ನೋಡಿ ಖುಷಿಯಿಂದ ವಾಪಸ್ ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ನೋಡಿ ಖುಷಿಯಿಂದ ವಾಪಸ್ ಹೊರಟ ವಿಜಯಲಕ್ಷ್ಮಿ
ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು
ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್