AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್​ನಲ್ಲಿ ಹೊಸ ಇತಿಹಾಸ ಬರೆದ ಚಾಮರಿ!

ದಾಖಲೆಗಳು ಇರೋದೇ ಮುರಿಯೋಕೆ, ಆದರೆ ಇಲ್ಲೊಬ್ಬರು ಇಡೀ ಕ್ರಿಕೆಟ್ ಇತಿಹಾಸವೇ ತಿರುಗಿ ನೋಡುವಂತಹ ಅಸಾಧ್ಯ ದಾಖಲೆಯೊಂದನ್ನು ಬರೆದಿದ್ದಾರೆ! ಹೌದು, ಏಷ್ಯಾಕಪ್ ಇತಿಹಾಸದಲ್ಲೇ ಯಾರು ಕೂಡ ಮಾಡದ ಐತಿಹಾಸಿಕ ಸಾಧನೆಯನ್ನು ಶ್ರೀಲಂಕಾ ತಂಡದ ನಾಯಕಿ ಚಾಮರಿ ಅಥಾಪತ್ತು ಮಾಡಿದ್ದಾರೆ. ಈ ಸಾಧನೆಯೊಂದಿಗೆ ಭರ್ಜರಿ ದಾಖಲೆಯನ್ನು ನಿರ್ಮಿಸಿದ್ದಾರೆ.

ಏಷ್ಯಾಕಪ್​ನಲ್ಲಿ ಹೊಸ ಇತಿಹಾಸ ಬರೆದ ಚಾಮರಿ!
Chamari AthapaththuImage Credit source: ICC
ಝಾಹಿರ್ ಯೂಸುಫ್
|

Updated on: Sep 03, 2026 | 10:21 AM

Share

ಶ್ರೀಲಂಕಾ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಚಾಮರಿ ಅಥಾಪತ್ತು ಏಷ್ಯಾಕಪ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಇಂಡೋನೇಷ್ಯಾ ವಿರುದ್ಧದ ಮಹಿಳಾ ಟಿ20 ಏಷ್ಯಾ ಕಪ್ ಪಂದ್ಯದಲ್ಲಿ ಕೇವಲ 5 ರನ್ ನೀಡಿ 7 ವಿಕೆಟ್ ಕಬಳಿಸುವ ಮೂಲಕ, ಚಾಮರಿ ಏಷ್ಯಾ ಕಪ್ ಇತಿಹಾಸದಲ್ಲೇ ಈ ಸಾಧನೆ ಮಾಡಿದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ.

ಕೇವಲ 5 ರನ್‌ಗೆ 7 ವಿಕೆಟ್:

ಈ ಪಂಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 124 ರನ್ ಕಲೆಹಾಕಿತು. ಈ ಸುಲಭ ಗುರಿ ಬೆನ್ನತ್ತಿದ ಇಂಡೋನೇಷ್ಯಾ ತಂಡಕ್ಕೆ ಚಾಮರಿ ಅಥಾಪತ್ತು ಸಿಂಹಸ್ವಪ್ನವಾದರು.

ತಮ್ಮ ಆಫ್-ಸ್ಪಿನ್ ಬೌಲಿಂಗ್ ಜಾದೂ ಮೂಲಕ ಎದುರಾಳಿ ಬ್ಯಾಟರ್‌ಗಳನ್ನು ಕಟ್ಟಿಹಾಕಿದ ಚಾಮರಿ ಅಥಾಪತ್ತು ಕೇವಲ 3.3 ಓವರ್‌ಗಳಲ್ಲಿ 5 ರನ್ ನೀಡಿ 7 ವಿಕೆಟ್ ಕಬಳಿಸಿ ಮಿಂಚಿದರು. ಈ ಮೂಲಕ ಇಂಡೋನೇಷ್ಯಾ ತಂಡವನ್ನು ಕೇವಲ 49 ರನ್​ಗಳಿಗೆ ಆಲೌಟ್ ಮಾಡಿ ಶ್ರೀಲಂಕಾ ತಂಡಕ್ಕೆ 75 ರನ್​ಗಳ ಭರ್ಜರಿ ಜಯ ತಂದುಕೊಟ್ಟರು.

ಹ್ಯಾಟ್ರಿಕ್ ಸಾಧನೆ:

ಈ ಪಂದ್ಯದ 19ನೇ ಓವರ್‌ನ ಮೊದಲ ಮೂರು ಎಸೆತಗಳಲ್ಲಿ ಸತತವಾಗಿ 3 ವಿಕೆಟ್ ಕಬಳಿಸುವ ಮೂಲಕ ಚಾಮರಿ ಅಥಾಪತ್ತು ಹ್ಯಾಟ್ರಿಕ್ ಸಾಧನೆಯನ್ನೂ ಕೂಡ ಮಾಡಿದ್ದಾರೆ. ಈ ಮೂಲಕ ಮಹಿಳಾ ಏಷ್ಯಾಕಪ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ 6ನೇ ಬೌಲರ್ ಎನಿಸಿಕೊಂಡಿದ್ದಾರೆ.

ಏಷ್ಯಾಕಪ್ ಇತಿಹಾಸದಲ್ಲೇ ಮೊದಲು!

ಪುರುಷರ ಅಥವಾ ಮಹಿಳಾ ಏಷ್ಯಾಕಪ್ ಇತಿಹಾಸದಲ್ಲಿ ಈವರೆಗೆ ಯಾವುದೇ ಬೌಲರ್​ ಒಂದೇ ಪಂದ್ಯದಲ್ಲಿ 7 ವಿಕೆಟ್ ಪಡೆದಿರಲಿಲ್ಲ. ಇದೀಗ 7 ವಿಕೆಟ್ ಉರುಳಿಸಿ ಚಾಮರಿ ಅಥಾಪತ್ತು ಈ ಸಾಧನೆ ಮಾಡಿದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ.

ಹಾಗೆಯೇ ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 7 ವಿಕೆಟ್ ಪಡೆದ ಶ್ರೀಲಂಕಾದ ಮೊದಲ ಬೌಲರ್ ಎಂಬ ಕೀರ್ತಿಗೂ ಪಾತ್ರರಾಗಿದ್ದಾರೆ.

ಇದನ್ನೂ ಓದಿ: ಟೀಮ್ ಇಂಡಿಯಾದ ಐವರು ವೇಗಿಗಳ ಶಾರ್ಟ್ ಲಿಸ್ಟ್ ರೆಡಿ!

ಭರ್ಜರಿ ದಾಖಲೆ:

ಏಷ್ಯಾಕಪ್ ಇತಿಹಾಸದಲ್ಲೇ (ಏಕದಿನ ಮತ್ತು ಟಿ20) ಪಂದ್ಯವೊಂದರಲ್ಲಿ 7 ವಿಕೆಟ್ ಪಡೆದ ಮೊದಲ ಹಾಗೂ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಬೌಲರ್​ ಎಂಬ ಹೆಗ್ಗಳಿಕೆಯನ್ನು ಚಾಮರಿ ಅಥಾಪತ್ತು ತಮ್ಮದಾಗಿಸಿಕೊಂಡಿದ್ದಾರೆ. ಏಷ್ಯಾಕಪ್ ಇತಿಹಾಸದಲ್ಲೇ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಬೌಲರ್​ಗಳ ಪಟ್ಟಿ ಈ ಕೆಳಗಿನಂತಿದೆ…
ಬೌಲರ್ ಬೌಲಿಂಗ್ ಪ್ರದರ್ಶನ ಏಷ್ಯಾಕಪ್ ಟೂರ್ನಿ ಪಂದ್ಯ ವರ್ಷ
ಚಾಮರಿ ಅಥಾಪತ್ತು (ಶ್ರೀಲಂಕಾ) 7 ವಿಕೆಟ್ / 5 ರನ್ ಮಹಿಳಾ ಟಿ20 ಟೂರ್ನಿ ಶ್ರೀಲಂಕಾ vs ಇಂಡೋನೇಷ್ಯಾ 2026
ಅಜಂತಾ ಮೆಂಡಿಸ್ (ಶ್ರೀಲಂಕಾ) 6 ವಿಕೆಟ್ / 13 ರನ್ ಪುರುಷರ ಏಕದಿನ ಟೂರ್ನಿ ಶ್ರೀಲಂಕಾ vs ಭಾರತ 2008
ಮೊಹಮ್ಮದ್ ಸಿರಾಜ್ (ಭಾರತ) 6 ವಿಕೆಟ್ / 21 ರನ್ ಪುರುಷರ ಏಕದಿನ ಟೂರ್ನಿ ಭಾರತ vs ಶ್ರೀಲಂಕಾ 2023
ಜವೇರಿಯಾ ಖಾನ್ (ಪಾಕಿಸ್ತಾನ್) 6 ವಿಕೆಟ್ / 25 ರನ್ ಮಹಿಳಾ ಏಕದಿನ ಟೂರ್ನಿ ಪಾಕಿಸ್ತಾನ್ vs ಬಾಂಗ್ಲಾದೇಶ್ 2008
ಭುವನೇಶ್ವರ್ ಕುಮಾರ್ (ಭಾರತ) 5 ವಿಕೆಟ್ / 4 ರನ್ ಪುರುಷರ ಟಿ20 ಟೂರ್ನಿ ಭಾರತ vs ಅಫ್ಘಾನಿಸ್ತಾನ್ 2022
Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ