IND vs BAN: ಟಾಸ್ ಗೆದ್ದ ಬಾಂಗ್ಲಾದೇಶ್: ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಹೀಗಿದೆ
Champions Trophy 2025 Bangladesh vs India Match: ಏಕದಿನ ಕ್ರಿಕೆಟ್‌ನಲ್ಲಿ ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಒಟ್ಟು 41 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 32 ಬಾರಿ ಜಯ ಸಾಧಿಸಿದರೆ, ಬಾಂಗ್ಲಾದೇಶ್ 8 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಒಂದು ಮ್ಯಾಚ್ ಕಾರಣಾಂತರಗಳಿಂದ ರದ್ದಾಗಿತ್ತು.

ಚಾಂಪಿಯನ್ಸ್ ಟ್ರೋಫಿಯ 2ನೇ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಿದೆ. ದುಬೈನ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಬಾಂಗ್ಲಾದೇಶ್ ತಂಡದ ನಾಯಕ ನಜ್ಮುಲ್ ಹೊಸೈನ್ ಶಾಂತೋ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಭಾರತ ತಂಡ ಮೊದಲು ಬೌಲಿಂಗ್ ಮಾಡಲಿದೆ.
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಬಲಿಷ್ಠ ಪಡೆಯೊಂದಿಗೆ ಕಣಕ್ಕಿಳಿದಿದೆ. ಅದರಂತೆ ಭಾರತ ತಂಡದ ಪ್ಲೇಯಿಂಗ್ ಇಲೆವೆನ್ನಲ್ಲಿ ಐವರು ಬ್ಯಾಟರ್ಗಳು, ಮೂವರು ಆಲ್ರೌಂಡರ್ಗಳು ಹಾಗೂ ಮೂವರು ಪರಿಪೂರ್ಣ ಬೌಲರ್ಗಳಿಗೆ ಸ್ಥಾನ ನೀಡಲಾಗಿದೆ.
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ.
ಬಾಂಗ್ಲಾದೇಶ್ 11: ತಂಝಿದ್ ಹಸನ್, ಸೌಮ್ಯ ಸರ್ಕಾರ್, ನಜ್ಮುಲ್ ಹೊಸೈನ್ ಶಾಂತೋ (ನಾಯಕ), ತೌಹಿದ್ ಹೃದೋಯ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಝ್, ಜೇಕರ್ ಅಲಿ, ರಿಶಾದ್ ಹೊಸೈನ್, ತಂಝಿಮ್ ಹಸನ್ ಸಾಕಿಬ್, ತಸ್ಕಿನ್ ಅಹ್ಮದ್, ಮುಸ್ತಫಿಝುರ್ ರಹಮಾನ್.
ಯಾರು ಬಲಿಷ್ಠ?
ಏಕದಿನ ಕ್ರಿಕೆಟ್‌ನಲ್ಲಿ ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಈವರೆಗೆ ಒಟ್ಟು 41 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 32 ಬಾರಿ ಜಯ ಸಾಧಿಸಿದರೆ, ಬಾಂಗ್ಲಾದೇಶ್ ತಂಡ ಗೆದ್ದಿರುವುದು ಕೇವಲ 8 ಪಂದ್ಯಗಳಲ್ಲಿ ಮಾತ್ರ. ಇನ್ನು ಒಂದು ಮ್ಯಾಚ್ ಕಾರಣಾಂತರಗಳಿಂದ ರದ್ದಾಗಿದೆ. ಈ ಅಂಕಿ ಅಂಶಗಳ ಪ್ರಕಾರ ಇಂದಿನ ಪಂದ್ಯದಲ್ಲೂ ಟೀಮ್ ಇಂಡಿಯಾ ಗೆಲ್ಲುವ ಫೇವರೇಟ್ ಎನಿಸಿಕೊಂಡಿದೆ.
Published On - 2:07 pm, Thu, 20 February 25