‘ನಾವು ತುಂಬಾ ಒಳ್ಳೆಯ ಜನ’; ಭಾರತ ತಂಡ ಪಾಕಿಸ್ತಾನಕ್ಕೆ ಬರುವಂತೆ ಶೋಯೆಬ್ ಮಲಿಕ್ ಮನವಿ

Champions Trophy 2025: ಎರಡೂ ದೇಶಗಳ ನಡುವೆ ಏನೇ ಭಿನ್ನಾಭಿಪ್ರಾಯಗಳಿದ್ದರೂ ಅದು ಪ್ರತ್ಯೇಕ ಸಮಸ್ಯೆಯಾಗಿದ್ದು, ಪ್ರತ್ಯೇಕವಾಗಿ ಪರಿಹರಿಸಿಕೊಳ್ಳಬೇಕು. ಕ್ರೀಡೆಯಲ್ಲಿ ರಾಜಕೀಯ ಬರಬಾರದು. ಕಳೆದ ವರ್ಷ ಪಾಕಿಸ್ತಾನ ತಂಡ ಭಾರತಕ್ಕೆ ತೆರಳಿದ್ದು, ಇದೀಗ ಭಾರತ ತಂಡಕ್ಕೂ ಇದೊಂದು ಉತ್ತಮ ಅವಕಾಶ. ಹೀಗಾಗಿ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಆಡಲು ಪಾಕಿಸ್ತಾನಕ್ಕೆ ಬರಬೇಕು ಎಂದು ಶೋಯೆಬ್ ಮಲಿಕ್ ಮನವಿ ಮಾಡಿದ್ದಾರೆ.

‘ನಾವು ತುಂಬಾ ಒಳ್ಳೆಯ ಜನ’; ಭಾರತ ತಂಡ ಪಾಕಿಸ್ತಾನಕ್ಕೆ ಬರುವಂತೆ ಶೋಯೆಬ್ ಮಲಿಕ್ ಮನವಿ
ಭಾರತ- ಪಾಕಿಸ್ತಾನ
Follow us
|

Updated on: Jul 26, 2024 | 6:25 PM

2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಪಾಕಿಸ್ತಾನ ಆತಿಥ್ಯವಹಿಸುತ್ತಿದೆ. ಬಹಳ ವರ್ಷಗಳ ನಂತರ ಐಸಿಸಿ ಈವೆಂಟ್​ಗೆ ಪಾಕಿಸ್ತಾನ ಏಕಾಂಗಿಯಾಗಿ ಆತಿಥ್ಯವಹಿಸುತ್ತಿರುವುದರಿಂದ ಈ ಟೂರ್ನಿ ಪಾಕಿಸ್ತಾನದ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ಈ ಟೂರ್ನಿಯಲ್ಲಿ ಪಾಲ್ಗೊಳ್ಳಲು ಟೀಂ ಇಂಡಿಯಾ, ಪಾಕಿಸ್ತಾನಕ್ಕೆ ಹೋಗಲಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಬಿಸಿಸಿಐ ಇದುವರೆಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲವಾದರೂ, ಭಾರತ ಸರ್ಕಾರ ಇದಕ್ಕೆ ಅನುಮತಿ ನೀಡುವ ಸಾಧ್ಯತೆಗಳಿಲ್ಲ. ಇತ್ತ ತನ್ನ ಪಟ್ಟು ಬಿಡದಿರುವ ಪಾಕ್ ಕ್ರಿಕೆಟ್ ಮಂಡಳಿ, ಟೀಂ ಇಂಡಿಯಾ ನಮ್ಮ ದೇಶಕ್ಕೆ ಬರದೆ ಬೇರೆ ದಾರಿಯೇ ಇಲ್ಲ ಎನ್ನುತ್ತಿದೆ. ಇದಕ್ಕೆ ಪೂರಕವಾಗಿ ಹಲವು ಮಾಜಿ ಪಾಕ್ ಕ್ರಿಕೆಟಿಗರು, ಟೀಂ ಇಂಡಿಯಾ ಬರದಿದ್ದರು ಟೂರ್ನಿ ಪಾಕಿಸ್ತಾನದಲ್ಲಿ ನಡೆಯುತ್ತದೆ ಎಂದಿದ್ದಾರೆ. ಏತನ್ಮಧ್ಯೆ, ಪಾಕಿಸ್ತಾನ ತಂಡದ ಮಾಜಿ ನಾಯಕ ಶೋಯೆಬ್ ಮಲಿಕ್, ಟೀಂ ಇಂಡಿಯಾ ಪಂದ್ಯಾವಳಿಯಲ್ಲಿ ಆಡಲು ಪಾಕಿಸ್ತಾನಕ್ಕೆ ಬರುವಂತೆ ಮನವಿ ಮಾಡಿದ್ದಾರೆ.

ನಾವು ತುಂಬಾ ಒಳ್ಳೆಯ ಜನ; ಮಲಿಕ್

ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಮಲಿಕ್ ಟೀಂ ಇಂಡಿಯಾ, ಪಾಕಿಸ್ತಾನಕ್ಕೆ ಬರುವಂತೆ ಮನವಿ ಮಾಡಿದ್ದಾರೆ. ಶೋಯೆಬ್ ಮಲಿಕ್, ‘ಎರಡೂ ದೇಶಗಳ ನಡುವೆ ಏನೇ ಭಿನ್ನಾಭಿಪ್ರಾಯಗಳಿದ್ದರೂ ಅದು ಪ್ರತ್ಯೇಕ ಸಮಸ್ಯೆಯಾಗಿದ್ದು, ಪ್ರತ್ಯೇಕವಾಗಿ ಪರಿಹರಿಸಿಕೊಳ್ಳಬೇಕು. ಕ್ರೀಡೆಯಲ್ಲಿ ರಾಜಕೀಯ ಬರಬಾರದು. ಕಳೆದ ವರ್ಷ ಪಾಕಿಸ್ತಾನ ತಂಡ ಭಾರತಕ್ಕೆ ತೆರಳಿದ್ದು, ಇದೀಗ ಭಾರತ ತಂಡಕ್ಕೂ ಇದೊಂದು ಉತ್ತಮ ಅವಕಾಶ. ಭಾರತ ತಂಡದಲ್ಲಿ ಪಾಕಿಸ್ತಾನದಲ್ಲಿ ಆಡದ ಅನೇಕ ಆಟಗಾರರಿದ್ದಾರೆ. ಆದ್ದರಿಂದ ಈ ಪ್ರವಾಸ ಅವರಿಗೆ ಉತ್ತಮ ಅವಕಾಶ ಎಂದು ನಾನು ಭಾವಿಸುತ್ತೇನೆ. ನಾವು ತುಂಬಾ ಒಳ್ಳೆಯ ಜನ, ಅತಿಥಿಗಳಿಗೆ ಆತಿಥ್ಯ ನೀಡುವುದು ಹೇಗೆ ಎಂಬುದು ನಮಗೆ ತುಂಬಾ ಚೆನ್ನಾಗಿ ಗೊತ್ತು. ಆದ್ದರಿಂದ ಭಾರತ ತಂಡವು ಪಾಕಿಸ್ತಾನಕ್ಕೆ ಖಂಡಿತವಾಗಿಯೂ ಬರಲಿದೆ ಎಂದು ನನಗೆ ಖಾತ್ರಿಯಿದೆ’ ಎಂದಿದ್ದಾರೆ.

ಐಸಿಸಿ ಮೇಲೆ ಎಲ್ಲ ಜವಬ್ದಾರಿ

ಪಿಟಿಐ ವರದಿ ಪ್ರಕಾರ, ಶ್ರೀಲಂಕಾದಲ್ಲಿ ನಡೆದ ಐಸಿಸಿ ವಾರ್ಷಿಕ ಸಭೆಯಲ್ಲಿ ಚಾಂಪಿಯನ್ಸ್ ಟ್ರೋಫಿ ಬಗ್ಗೆ ಚರ್ಚಿಸಲಾಗಿಲ್ಲ. ಈ ಟೂರ್ನಿಗಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ತನ್ನ ತಯಾರಿಯಲ್ಲಿ ನಿರತವಾಗಿದೆ. ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಬರುವಂತೆ ಮನವೊಲಿಸುವ ಕೆಲಸವನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಐಸಿಸಿಗೆ ಬಿಟ್ಟಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ ಸಿದ್ಧಪಡಿಸಿ ಐಸಿಸಿಗೆ ಕಳುಹಿಸಿರುವ ಈ ಟೂರ್ನಿಯ ಕರಡು ಪ್ರತಿಯಲ್ಲಿ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬಂದರೆ ಭದ್ರತಾ ಕಾರಣಗಳಿಂದಾಗಿ ಲಾಹೋರ್‌ನಲ್ಲಿ ಮಾತ್ರ ಎಲ್ಲಾ ಪಂದ್ಯಗಳನ್ನು ನಡೆಸಲಾಗುವುದು ಎಂದು ಸ್ಪಷ್ಟವಾಗಿ ಹೇಳಲಾಗಿದೆ. ಭಾರತ ಸೆಮಿಫೈನಲ್ ಮತ್ತು ಫೈನಲ್ ತಲುಪಿದರೂ ಭಾರತದ ಪಂದ್ಯಗಳು ಲಾಹೋರ್‌ನಲ್ಲಿ ನಡೆಯಲಿವೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಕರಡು ಪ್ರಕಾರ, ಪಂದ್ಯಾವಳಿಯಲ್ಲಿ ಭಾರತ-ಪಾಕಿಸ್ತಾನ ಪಂದ್ಯವನ್ನು ಮಾರ್ಚ್ 1 ರಂದು ನಡೆಸಲು ಪ್ರಸ್ತಾಪಿಸಲಾಗಿದೆ.

ಭಾರತದ ಆಯ್ಕೆಗಳೇನು?

ಈ ಟೂರ್ನಿಯಲ್ಲಿ ಪಾಲ್ಗೊಳ್ಳಲು ಭಾರತ ತಂಡ ಪಾಕಿಸ್ತಾನಕ್ಕೆ ಭೇಟಿ ನೀಡುವ ಸಾಧ್ಯತೆ ಕಡಿಮೆ. ಟೀಂ ಇಂಡಿಯಾ ಹೈಬ್ರಿಡ್ ಮಾದರಿಯಲ್ಲಿ ಈ ಟೂರ್ನಿಯನ್ನು ಆಡಬಹುದು. ಅದರಂತೆ ಟೀಂ ಇಂಡಿಯಾದ ಎಲ್ಲಾ ಪಂದ್ಯಗಳನ್ನು ಯುಎಇ ಅಥವಾ ಶ್ರೀಲಂಕಾದಲ್ಲಿ ನಡೆಸಬಹುದಾಗಿದೆ. ಇದಲ್ಲದೆ, ಟೀಂ ಇಂಡಿಯಾ ಚಾಂಪಿಯನ್ಸ್ ಟ್ರೋಫಿಯನ್ನು ಆಡಲು ನಿರಾಕರಿಸುವ ಆಯ್ಕೆಯನ್ನು ಹೊಂದಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್