AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Champions Trophy 2025 Free Live Streaming: ಚಾಂಪಿಯನ್ಸ್ ಟ್ರೋಫಿ 2025 ಎಷ್ಟು ಗಂಟೆಗೆ ಆರಂಭ?, ಉಚಿತವಾಗಿ ಲೈವ್ ವೀಕ್ಷಿಸುವುದು ಹೇಗೆ?: ಇಲ್ಲಿದೆ ಸಂಪೂರ್ಣ ಮಾಹಿತಿ

ಚಾಂಪಿಯನ್ಸ್ ಟ್ರೋಫಿಯ ಉದ್ಘಾಟನಾ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಅಭಿಮಾನಿಗಳಿಗೆ ಒಂದು ಸಿಹಿ ಸುದ್ದಿ ಇದೆ. ಕ್ರಿಕೆಟ್ ಅಭಿಮಾನಿಗಳು ಈಗ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನು ಉಚಿತವಾಗಿ ವೀಕ್ಷಿಸಬಹುದು. 2025 ರ ಚಾಂಪಿಯನ್ಸ್ ಟ್ರೋಫಿಯ ಲೈವ್ ಪಂದ್ಯಗಳನ್ನು ನೀವು ಯಾವಾಗ, ಎಲ್ಲಿ ಮತ್ತು ಹೇಗೆ ಉಚಿತವಾಗಿ ವೀಕ್ಷಿಸಬಹುದು ಎಂಬುದನ್ನು ನಾವು ಹೇಳುತ್ತೇವೆ.

Champions Trophy 2025 Free Live Streaming: ಚಾಂಪಿಯನ್ಸ್ ಟ್ರೋಫಿ 2025 ಎಷ್ಟು ಗಂಟೆಗೆ ಆರಂಭ?, ಉಚಿತವಾಗಿ ಲೈವ್ ವೀಕ್ಷಿಸುವುದು ಹೇಗೆ?: ಇಲ್ಲಿದೆ ಸಂಪೂರ್ಣ ಮಾಹಿತಿ
Champions Trophy 2025 Free Live Streaming
ಪ್ರೀತಿ ಭಟ್​, ಗುಣವಂತೆ
| Edited By: |

Updated on: Feb 19, 2025 | 11:21 AM

Share

Champions Trophy 2025 Free Live Streaming Details: ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಇಂದಿನಿಂದ ಪ್ರಾರಂಭವಾಗುತ್ತಿದೆ. ಆತಿಥೇಯ ಪಾಕಿಸ್ತಾನ ತಂಡವು ಟೂರ್ನಿಯ ಮೊದಲ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು ಎದುರಿಸಲಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ತಂಡದ ಎಲ್ಲ ಪಂದ್ಯಗಳು ದುಬೈನಲ್ಲಿ ನಡೆಯಲಿದ್ದು, ಉಳಿದ ತಂಡಗಳು 1996 ರ ವಿಶ್ವಕಪ್ ನಂತರ ಮೊದಲ ಐಸಿಸಿ ಟೂರ್ನಮೆಂಟ್ ನಡೆಯುತ್ತಿರುವ ಪಾಕಿಸ್ತಾನದಲ್ಲಿ ಆಡಲಿವೆ.

ಚಾಂಪಿಯನ್ಸ್ ಟ್ರೋಫಿಯ ಉದ್ಘಾಟನಾ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಅಭಿಮಾನಿಗಳಿಗೆ ಒಂದು ಸಿಹಿ ಸುದ್ದಿ ಇದೆ. ಕ್ರಿಕೆಟ್ ಅಭಿಮಾನಿಗಳು ಈಗ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನು ಉಚಿತವಾಗಿ ವೀಕ್ಷಿಸಬಹುದು. 2025 ರ ಚಾಂಪಿಯನ್ಸ್ ಟ್ರೋಫಿಯ ಲೈವ್ ಪಂದ್ಯಗಳನ್ನು ನೀವು ಯಾವಾಗ, ಎಲ್ಲಿ ಮತ್ತು ಹೇಗೆ ಉಚಿತವಾಗಿ ವೀಕ್ಷಿಸಬಹುದು ಎಂಬುದನ್ನು ನಾವು ಹೇಳುತ್ತೇವೆ.

ಚಾಂಪಿಯನ್ಸ್ ಟ್ರೋಫಿ 2025 ಟಿವಿಯಲ್ಲಿ ಪಂದ್ಯಗಳನ್ನು ಎಲ್ಲಿ ವೀಕ್ಷಿಸಬಹುದು?

ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಭಾರತದಾದ್ಯಂತ ಬಹು ಭಾಷೆಗಳಲ್ಲಿ ಪಂದ್ಯಗಳನ್ನು ಪ್ರಸಾರ ಮಾಡಲಿದೆ.

ಚಾಂಪಿಯನ್ಸ್ ಟ್ರೋಫಿ 2025 ಇಂಟರ್ನೆಟ್‌ ಮೂಲಕ ಎಲ್ಲಿ ವೀಕ್ಷಿಸಬಹುದು?

ಜಿಯೋ ಹಾಟ್‌ಸ್ಟಾರ್ ಭಾರತದಲ್ಲಿ ಚಾಂಪಿಯನ್ಸ್ ಟ್ರೋಫಿ 2025 ಪಂದ್ಯಗಳನ್ನು ನೇರ ಪ್ರಸಾರ ಮಾಡಲಿದೆ.

ವಿದೇಶದಲ್ಲಿ ಸ್ಟ್ರೀಮಿಂಗ್:

ಪಾಕಿಸ್ತಾನ – ಪಿಟಿವಿ ಮತ್ತು ಟೆನ್ ಸ್ಪೋರ್ಟ್ಸ್, ನೇರ ಪ್ರಸಾರ: ಮೈಕೊ ಮತ್ತು ತಮಾಶಾ

ಬಾಂಗ್ಲಾದೇಶ – ನಾಗೋರಿಕ್ ಟಿವಿ ಮತ್ತು ಟಿ ಸ್ಪೋರ್ಟ್ಸ್; ಲೈವ್ ಸ್ಟ್ರೀಮಿಂಗ್ – ಟಾಫಿ

ಯುಎಇ- ಕ್ರಿಕ್ ಲೈಫ್ ಮ್ಯಾಕ್ಸ್ ಮತ್ತು ಕ್ರಿಕ್ ಲೈಫ್ ಮ್ಯಾಕ್ಸ್ 2; ಲೈವ್ ಸ್ಟ್ರೀಮಿಂಗ್: STARZPLAY

ಯುಕೆ – ಸ್ಕೈ ಸ್ಪೋರ್ಟ್ಸ್; ಲೈವ್ ಸ್ಟ್ರೀಮಿಂಗ್ – ಸ್ಕೈಗೋ ನೌ, ಸ್ಕೈ ಸ್ಪೋರ್ಟ್ಸ್ ಅಪ್ಲಿಕೇಶನ್

ಯುಎಸ್ಎ ಮತ್ತು ಕೆನಡಾ – ವಿಲ್ಲೋಟಿವಿ

ಆಸ್ಟ್ರೇಲಿಯಾ: ಅಮೆಜಾನ್

ನ್ಯೂಜಿಲೆಂಡ್: ಸ್ಕೈ ಸ್ಪೋರ್ಟ್ NZ

ಶ್ರೀಲಂಕಾ – ಮಹಾರಾಜ TVl ಲೈವ್ ಸ್ಟ್ರೀಮಿಂಗ್ – Sirasa

ಕೆರಿಬಿಯನ್ – ಇಎಸ್‌ಪಿಎನ್ ಕೆರಿಬಿಯನ್; ಲೈವ್ ಸ್ಟ್ರೀಮಿಂಗ್ – ಇಎಸ್‌ಪಿಎನ್ ಪ್ಲೇ

PAK vs NZ: ಚಾಂಪಿಯನ್ ಟ್ರೋಫಿಗೆ ಇಂದು ಚಾಲನೆ: ಉದ್ಘಾಟನಾ ಪಂದ್ಯದಲ್ಲಿ ಪಾಕ್-ನ್ಯೂಝಿಲೆಂಡ್ ಮುಖಾಮುಖಿ

2025 ರ ಚಾಂಪಿಯನ್ಸ್ ಟ್ರೋಫಿ ಸ್ಥಳಗಳು:

ರಾಷ್ಟ್ರೀಯ ಕ್ರೀಡಾಂಗಣ, ಕರಾಚಿ

ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ, ದುಬೈ

ಗಡಾಫಿ ಕ್ರೀಡಾಂಗಣ, ಲಾಹೋರ್

ರಾವಲ್ಪಿಂಡಿ ಕ್ರಿಕೆಟ್ ಸ್ಟೇಡಿಯಂ, ರಾವಲ್ಪಿಂಡಿ

ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು ಯಾವ ಸಮಯದಲ್ಲಿ ಪ್ರಾರಂಭವಾಗುತ್ತವೆ?

ಚಾಂಪಿಯನ್ಸ್ ಟ್ರೋಫಿ 2025ರ ಎಲ್ಲ ಪಂದ್ಯಗಳು ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 2:30 ಕ್ಕೆ ಪ್ರಾರಂಭವಾಗಲಿವೆ. ಟಾಸ್ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ.

ಚಾಂಪಿಯನ್ಸ್ ಟ್ರೋಫಿ 2025ರ ಎಲ್ಲ ತಂಡಗಳು:

ಭಾರತ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್. ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.

ಪಾಕಿಸ್ತಾನ: ಮೊಹಮ್ಮದ್ ರಿಝ್ವಾನ್ (ನಾಯಕ), ಬಾಬರ್ ಆಝಂ, ಫಖರ್ ಝಮಾನ್, ಕಮ್ರಾನ್ ಗುಲಾಮ್, ಸೌದ್ ಶಕೀಲ್, ತಯ್ಯಬ್ ತಾಹಿರ್, ಫಹೀಮ್ ಅಶ್ರಫ್, ಖುಶ್ದಿಲ್ ಶಾ, ಸಲ್ಮಾನ್ ಅಲಿ ಅಘಾ, ಉಸ್ಮಾನ್ ಖಾನ್, ಅಬ್ರಾರ್ ಅಹ್ಮದ್, ಹ್ಯಾರಿಸ್ ರೌಫ್, ಮೊಹಮ್ಮದ್ ಹಸ್ನೈನ್, ನಸೀಮ್ ಶಾ, ಶಾಹಿನ್ ಶಾ ಅಫ್ರಿದಿ.

ದಕ್ಷಿಣ ಆಫ್ರಿಕಾ: ಟೆಂಬಾ ಬವುಮಾ (ನಾಯಕ), ಟೋನಿ ಡಿ ಝೋರ್ಝಿ, ಮಾರ್ಕೊ ಯಾನ್ಸೆನ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಲುಂಗಿ ಎನ್‌ಗಿಡಿ, ಕಗಿಸೊ ರಬಾಡಾ, ರಿಯಾನ್ ರಿಕೆಲ್ಟನ್, ತಬ್ರೇಝ್ ಶಮ್ಸಿ, ಟ್ರಿಸ್ಟಾನ್ ಸ್ಟಬ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್​, ಕಾರ್ಬಿನ್ ಬಾಷ್.

ನ್ಯೂಝಿಲೆಂಡ್: ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ವಿಲ್ ಒರೂಕ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ನಾಥನ್ ಸ್ಮಿತ್, ಕೇನ್ ವಿಲಿಯಮ್ಸನ್, ವಿಲ್ ಯಂಗ್, ಜಾಕೋಬ್ ಡಫಿ.

ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಟಾಮ್ ಬ್ಯಾಂಟನ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸ್, ಬೆನ್ ಡಕೆಟ್, ಜೇಮೀ ಓವರ್ಟನ್, ಜೇಮೀ ಸ್ಮಿತ್, ಲಿಯಾಮ್ ಲಿವಿಂಗ್​ಸ್ಟೋನ್, ಆದಿಲ್ ರಶೀದ್, ಜೋ ರೂಟ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.

ಅಫ್ಘಾನಿಸ್ತಾನ: ಹಶ್ಮತುಲ್ಲಾ ಶಾಹಿದಿ (ನಾಯಕ), ಇಬ್ರಾಹಿಂ ಜದ್ರಾನ್, ರಹಮಾನುಲ್ಲಾ ಗುರ್ಬಾಜ್, ಸೇದಿಕುಲ್ಲಾ ಅಟಲ್, ರಹಮತ್ ಷಾ, ಇಕ್ರಮ್ ಅಲಿಖಿಲ್, ಗುಲ್ಬದಿನ್ ನೈಬ್, ಅಜ್ಮತುಲ್ಲಾ ಒಮರ್ಜಾಯ್, ಮೊಹಮ್ಮದ್ ನಬಿ, ರಶೀದ್ ಖಾನ್, ನಂಗ್ಯಾಲ್ ಖರೋತಿ, ನೂರ್ ಅಹ್ಮದ್, ನೂರ್ ಅಹ್ಮದ್, ಫಝಲ್​ಹಕ್ ಫಾರೂಖಿ, ಫಾರಿದ್ ಮಲಿಕ್, ನವೀದ್ ಝದ್ರಾನ್.

ಆಸ್ಟ್ರೇಲಿಯಾ: ಸ್ಟೀವ್ ಸ್ಮಿತ್ (ನಾಯಕ), ಶಾನ್ ಅಬಾಟ್, ಅಲೆಕ್ಸ್ ಕ್ಯಾರಿ, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಆರೋನ್ ಹಾರ್ಡಿ, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಾರ್ನಸ್ ಲಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಮ್ಯಾಥ್ಯೂ ಶಾರ್ಟ್, ಆ್ಯಡಂ ಝಂಪಾ.

ಬಾಂಗ್ಲಾದೇಶ: ನಜ್ಮುಲ್ ಹೊಸೈನ್ ಶಾಂತೊ (ನಾಯಕ), ಸೌಮ್ಯ ಸರ್ಕಾರ್, ತಂಝಿದ್ ಹಸನ್, ತೌಹಿದ್ ಹೃದಯೊಯ್, ಮುಶ್ಫಿಕರ್ ರಹೀಮ್, ಎಂಡಿ ಮಹ್ಮದ್ ಉಲ್ಲಾ, ಜೇಕರ್ ಅಲಿ ಅನಿಕ್, ಮೆಹಿದಿ ಹಸನ್ ಮಿರಾಜ್, ರಿಶಾದ್ ಹೊಸೈನ್, ತಸ್ಕಿನ್ ಅಹ್ಮದ್, ಮುಸ್ತಫಿಜುರ್ ರಹಮಾನ್, ತಸ್ಕಿನ್ ಅಹ್ಮದ್, ಪರ್ವೆಜ್ ನಸ್ಸಾನ್, ತಸ್ಕಿನ್ ಎ. ಸಾಕಿಬ್, ನಹಿದ್ ರಾಣಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ