Champions Trophy 2025: ಚಾಂಪಿಯನ್ಸ್ ಟ್ರೋಫಿ 2025ರ ಕರಡು ವೇಳಾಪಟ್ಟಿ ಪ್ರಕಟ

Champions Trophy 2025: ಚಾಂಪಿಯನ್ಸ್ ಟ್ರೋಫಿ ಟೂರ್ನಿಯನ್ನು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಆಯೋಜಿಸಲಿದೆ. ಪಾಕ್​ನಲ್ಲಿ ನಡೆಯಲಿರುವ ಈ ಟೂರ್ನಿಯ ಕರಡು ವೇಳಾಪಟ್ಟಿ ಪ್ರಕಟವಾಗಿದ್ದು, ಈ ವೇಳಾಪಟ್ಟಿಯಂತೆ ಟೀಮ್ ಇಂಡಿಯಾದ ಪಂದ್ಯಗಳು ಲಾಹೋರ್​ನಲ್ಲಿ ನಡೆಯಲಿದೆ. ಆದರೆ ಈ ಟೂರ್ನಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ತೆರಳಲಿದೆಯಾ ಎಂಬುದನ್ನು ಇನ್ನಷ್ಟೇ ನಿರ್ಧರಿಸಬೇಕಿದೆ. ಇದೀಗ ಕರಡು ವೇಳಾಪಟ್ಟಿಯನ್ನು ಐಸಿಸಿಗೆ ಕಳುಹಿಸಿರುವ ಪಾಕ್ ಕ್ರಿಕೆಟ್​ ಮಂಡಳಿ ಅನುಮೋದನೆಗಾಗಿ ಕಾಯುತ್ತಿದೆ.

Champions Trophy 2025: ಚಾಂಪಿಯನ್ಸ್ ಟ್ರೋಫಿ 2025ರ ಕರಡು ವೇಳಾಪಟ್ಟಿ ಪ್ರಕಟ
Champions Trophy 2025
Follow us
|

Updated on: Jul 09, 2024 | 8:09 AM

Champions Trophy 2025: ಚಾಂಪಿಯನ್ಸ್ ಟ್ರೋಫಿಯ ಕರಡು ವೇಳಾಪಟ್ಟಿ ಹೊರಬಿದ್ದಿದೆ. ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಆಯೋಜಿಸಲಿರುವ ಈ ಏಕದಿನ ಟೂರ್ನಿಯ ತಾತ್ಕಾಲಿಕ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ಕಳುಹಿಸಲಾಗಿದ್ದು, ಈ ವೇಳಾಪಟ್ಟಿಯಂತೆ ಮುಂಬರುವ ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಶುರುವಾಗಲಿದೆ.  ಈ ಟೂರ್ನಿಯ ಉದ್ಘಾಟನಾ ಪಂದ್ಯವನ್ನು ಕರಾಚಿಯಲ್ಲಿ ಆಯೋಜಿಸಲಾಗುತ್ತಿದ್ದು, ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಭಾರತ ತಂಡವು ಫೆಬ್ರವರಿ 20 ರಂದು ಬಾಂಗ್ಲಾದೇಶ್ ವಿರುದ್ಧ ಕಣಕ್ಕಿಳಿಯುವ ಮೂಲಕ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ ಎಂದು ವರದಿಯಾಗಿದೆ.

8 ತಂಡಗಳು 2 ಗುಂಪು:

ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿದೆ. ಈ ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಇಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಒಂದೇ ಗ್ರೂಪ್​ನಲ್ಲಿರುವುದರಿಂದ ಮೊದಲ ಸುತ್ತಿನಲ್ಲೇ ಮುಖಾಮುಖಿಯಾಗಲಿರುವುದು ಖಚಿತ.

ಅದರಂತೆ ಮಾರ್ಚ್ 1 ರಂದು ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ 11ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಕಣಕ್ಕಿಳಿಯಲಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಲಾಹೋರ್​ನ ಗಡ್ಡಾಫಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಹಾಗೆಯೇ ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದೆ ಎಂದು ವರದಿಯಾಗಿದೆ.

ಚಾಂಪಿಯನ್ಸ್ ಟ್ರೋಫಿ ತಂಡಗಳು:

ಗ್ರೂಪ್-A

  1. ಭಾರತ
  2. ಪಾಕಿಸ್ತಾನ್
  3. ಬಾಂಗ್ಲಾದೇಶ್
  4. ನ್ಯೂಝಿಲೆಂಡ್

ಇದನ್ನೂ ಓದಿ: Team India: ಕೊನೆಯ 10 ಓವರ್​ಗಳಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ

ಗ್ರೂಪ್-B

  1. ಆಸ್ಟ್ರೇಲಿಯಾ
  2. ಇಂಗ್ಲೆಂಡ್
  3. ಸೌತ್ ಆಫ್ರಿಕಾ
  4. ಅಫ್ಘಾನಿಸ್ತಾನ್.

ಚಾಂಪಿಯನ್ಸ್ ಟ್ರೋಫಿ ಕರಡು ವೇಳಾಪಟ್ಟಿ ಈ ಕೆಳಗಿನಂತಿದೆ:

ದಿನಾಂಕ ಮುಖಾಮುಖಿ ಸ್ಥಳ
ಫೆಬ್ರವರಿ, 19  ಪಾಕಿಸ್ತಾನ್ vs ನ್ಯೂಝಿಲೆಂಡ್ ಕರಾಚಿ
ಫೆಬ್ರವರಿ, 20 ಬಾಂಗ್ಲಾದೇಶ್ vs ಭಾರತ ಲಾಹೋರ್
ಫೆಬ್ರವರಿ, 21 ಅಫ್ಘಾನಿಸ್ತಾನ್ vs ಸೌತ್ ಆಫ್ರಿಕಾ ಕರಾಚಿ
ಫೆಬ್ರವರಿ, 22 ಆಸ್ಟ್ರೇಲಿಯಾ vs ಇಂಗ್ಲೆಂಡ್ ಲಾಹೋರ್
ಫೆಬ್ರವರಿ, 23 ನ್ಯೂಝಿಲೆಂಡ್ vs ಭಾರತ ಲಾಹೋರ್
ಫೆಬ್ರವರಿ, 24 ಪಾಕಿಸ್ತಾನ್ vs ಬಾಂಗ್ಲಾದೇಶ ರಾವಲ್ಪಿಂಡಿ
ಫೆಬ್ರವರಿ, 25 ಅಫ್ಘಾನಿಸ್ತಾನ್​ vs ಇಂಗ್ಲೆಂಡ್ ಲಾಹೋರ್
ಫೆಬ್ರವರಿ, 26 ಆಸ್ಟ್ರೇಲಿಯಾ vs ಸೌತ್ ಆಫ್ರಿಕಾ ರಾವಲ್ಪಿಂಡಿ
ಫೆಬ್ರವರಿ, 27 ಬಾಂಗ್ಲಾದೇಶ್ vs ನ್ಯೂಝಿಲೆಂಡ್ ಲಾಹೋರ್
ಫೆಬ್ರವರಿ, 28 ಅಫ್ಘಾನಿಸ್ತಾನ್ vs ಆಸ್ಟ್ರೇಲಿಯಾ ರಾವಲ್ಪಿಂಡಿ
ಮಾರ್ಚ್, 1 ಪಾಕಿಸ್ತಾನ್ vs ಭಾರತ ಲಾಹೋರ್
ಮಾರ್ಚ್, 2 ಸೌತ್ ಆಫ್ರಿಕಾ vs ಇಂಗ್ಲೆಂಡ್ ರಾವಲ್ಪಿಂಡಿ
ಮಾರ್ಚ್, 5 ಸೆಮಿಫೈನ್-1 ಕರಾಚಿ
ಮಾರ್ಚ್, 6 ಸೆಮಿಫೈನಲ್-2 ರಾವಲ್ಪಿಂಡಿ
ಮಾರ್ಚ್, 9 ಫೈನಲ್ ಪಂದ್ಯ ಲಾಹೋರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ