AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಕಣಕ್ಕಿಳಿಯುತ್ತಿದ್ದಂತೆ ವಿಶೇಷ ದಾಖಲೆ ಬರೆದ ವಿರಾಟ್ ಕೊಹ್ಲಿ

Champions Trophy 2025: ಚಾಂಪಿಯನ್ಸ್ ಟ್ರೋಫಿಯ ಕೊನೆಯ ಲೀಗ್ ಮ್ಯಾಚ್​ನಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಸೆಮಿಫೈನಲ್​ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಇನ್ನೂ ಸೋಲುವ ತಂಡದ ಎದುರಾಳಿಯಾಗಿ ಸೌತ್ ಆಫ್ರಿಕಾ ತಂಡ ಕಾಣಿಸಿಕೊಳ್ಳಲಿದೆ. ಹೀಗಾಗಿ ಇಂದಿನ ಪಂದ್ಯದ ಫಲಿತಾಂಶ ಟೀಮ್ ಇಂಡಿಯಾದ ಸೆಮಿಫೈನಲ್ ಎದುರಾಳಿ ಯಾರೆಂಬುದನ್ನು ನಿರ್ಧರಿಸಲಿದೆ.

IND vs NZ: ಕಣಕ್ಕಿಳಿಯುತ್ತಿದ್ದಂತೆ ವಿಶೇಷ ದಾಖಲೆ ಬರೆದ ವಿರಾಟ್ ಕೊಹ್ಲಿ
Virat Kohli
ಝಾಹಿರ್ ಯೂಸುಫ್
|

Updated on: Mar 02, 2025 | 2:03 PM

Share

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಹೆಸರಿಗೆ ಹೊಸ ದಾಖಲೆ ಸೇರ್ಪಡೆಯಾಗಿದೆ. ಅದು ಕೂಡ ವಿಶ್ವ ಕ್ರಿಕೆಟ್​ನಲ್ಲಿ ಕೇವಲ 21 ಆಟಗಾರರು ಮಾಡಿದ ವಿಶೇಷ ದಾಖಲೆಯನ್ನು ಬರೆಯುವ ಮೂಲಕ. ಅಂದರೆ ಏಕದಿನ ಕ್ರಿಕೆಟ್​ನಲ್ಲಿ ಕೇವಲ 21 ಆಟಗಾರರು ಮಾತ್ರ 300 ಕ್ಕೂ ಅಧಿಕ ಪಂದ್ಯಗಳನ್ನಾಡಿದ್ದಾರೆ. ಈ ಪಟ್ಟಿಗೆ ಹೊಸ ಸೇರ್ಪಡೆ ವಿರಾಟ್ ಕೊಹ್ಲಿ. ದುಬೈನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುತ್ತಿದ್ದಂತೆ ಕಿಂಗ್ ಕೊಹ್ಲಿ ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಅಲ್ಲದೆ ಈ ಸಾಧನೆ ಮಾಡಿದ ಭಾರತದ 7ನೇ ಆಟಗಾರ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್, ಮಹೇಂದ್ರ ಸಿಂಗ್ ಧೋನಿ, ರಾಹುಲ್ ದ್ರಾವಿಡ್, ಮೊಹಮ್ಮದ್ ಅಝರುದ್ದೀನ್, ಸೌರವ್ ಗಂಗೂಲಿ ಮತ್ತು ಯುವರಾಜ್ ಸಿಂಗ್ ಮಾತ್ರ ಟೀಮ್ ಇಂಡಿಯಾ ಪರ 300 ಕ್ಕೂ ಹೆಚ್ಚು ಏಕದಿನ ಪಂದ್ಯಗಳನ್ನಾಡಿದ್ದಾರೆ.

ಇದೀಗ ನ್ಯೂಝಿಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ ಕೂಡ ಈ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಭಾರತದ ಪರ ಈವರೆಗೆ 300 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ವಿರಾಟ್ ಕೊಹ್ಲಿ 287* ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 15078* ಎಸೆತಗಳನ್ನು ಎದುರಿಸಿ ಒಟ್ಟು 14085* ರನ್ ಕಲೆಹಾಕಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವದ 3ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದನ್ನೂ ಓದಿ
Image
ಟೀಮ್ ಇಂಡಿಯಾಗೆ ಹೊಸ ಚಿಂತೆ ಶುರು: ಅಭ್ಯಾಸಕ್ಕೆ ಇಬ್ಬರು ಆಟಗಾರರು ಗೈರು..!
Image
ICC ODI Rankings: ಟಾಪ್-10 ನಲ್ಲಿ ಟೀಮ್ ಇಂಡಿಯಾದ ನಾಲ್ವರು ಬ್ಯಾಟರ್​ಗಳು
Image
ಎಲ್ಲರೂ ಶತಕ ಬಾರಿಸಿದ್ರು... ಪಾಕಿಸ್ತಾನ್ ಬ್ಯಾಟರ್​ಗಳಿಗೆ ನಾಚಿಕೆಗೇಡು..!
Image
IPL 2025: ಐಪಿಎಲ್​ನಲ್ಲೂ ಟೀಮ್ ಇಂಡಿಯಾಗೆ ಟೆಸ್ಟ್​

ಹಾಗೆಯೇ 300* ಏಕದಿನ ಮ್ಯಾಚ್​ಗಳ 296* ಇನಿಂಗ್ಸ್​ಗಳಲ್ಲಿ ಫೀಲ್ಡಿಂಗ್ ಮಾಡಿರುವ ವಿರಾಟ್ ಕೊಹ್ಲಿ ಒಟ್ಟು 158 ಕ್ಯಾಚ್​ಗಳನ್ನು ಹಿಡಿದಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ಭಾರತದ ಪರ ಅತೀ ಹೆಚ್ಚು ಕ್ಯಾಚ್​ಗಳನ್ನು ಹಿಡಿದ ಫೀಲ್ಡರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇದೀಗ ಟೀಮ್ ಇಂಡಿಯಾದ ಬೆಸ್ಟ್ ಫೀಲ್ಡರ್ ಎನಿಸಿಕೊಂಡಿರುವ ವಿರಾಟ್ ಕೊಹ್ಲಿ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ 3 ಕ್ಯಾಚ್ ಹಿಡಿದರೆ ಈ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಲಿದ್ದಾರೆ. ಅಂದರೆ ಕಿವೀಸ್ ವಿರುದ್ಧದ ಪಂದ್ಯದಲ್ಲಿ ಕಿಂಗ್ ಕೊಹ್ಲಿಗೆ ಮತ್ತೊಂದು ಭರ್ಜರಿ ದಾಖಲೆ ನಿರ್ಮಿಸುವ ಅವಕಾಶ ಕೂಡ ಇದೆ.

ಇದನ್ನೂ ಓದಿ: ICC ODI Rankings: ಟಾಪ್-10 ನಲ್ಲಿ ಟೀಮ್ ಇಂಡಿಯಾದ ನಾಲ್ವರು ಬ್ಯಾಟರ್​ಗಳು

ಇನ್ನು ಏಕದಿನ ಕ್ರಿಕೆಟ್​ ಇತಿಹಾಸದಲ್ಲಿ ಅತ್ಯಧಿಕ ಪಂದ್ಯಗಳನ್ನಾಡಿದ ವಿಶ್ವ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. 1989 ರಿಂದ 2012 ರವರೆಗೆ ಸಚಿನ್ ತೆಂಡೂಲ್ಕರ್ ಒಟ್ಟು 463 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 452 ಇನಿಂಗ್ಸ್ ಆಡಿರುವ ಅವರು 18426 ರನ್​ ಕಲೆಹಾಕಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.