
ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಗೆ ಚಾಲನೆ ದೊರೆತಿದೆ. ನಿನ್ನೆ ನಡೆದ (ಫೆ.19) ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದು ನ್ಯೂಝಿಲೆಂಡ್ ಶುಭಾರಂಭ ಮಾಡಿದೆ. ಇದೀಗ ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯವಾಡಲು ಸಜ್ಜಾಗಿದೆ. ಇಂದು (ಫೆ.20) ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ 2ನೇ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಲಿದೆ.
ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬುದೇ ಕುತೂಹಲ. ಏಕೆಂದರೆ ಈ ಮ್ಯಾಚ್ ಬಳಿಕ ಭಾರತ ತಂಡವು ಬದ್ಧವೈರಿ ಪಾಕಿಸ್ತಾನ್ ತಂಡವನ್ನು ಎದುರಿಸಬೇಕಿದೆ. ಹೀಗಾಗಿ ಬಾಂಗ್ಲಾದೇಶ್ ವಿರುದ್ಧದವೇ ಸಮತೋಲಿತ ಪ್ಲೇಯಿಂಗ್ ಇಲೆವೆನ್ ರೂಪಿಸಬೇಕಾದ ಅನಿವಾರ್ಯತೆ ಟೀಮ್ ಇಂಡಿಯಾ ಮುಂದಿದೆ. ಅದರಂತೆ ಮೊದಲ ಪಂದ್ಯದಲ್ಲಿ ಭಾರತ ತಂಡವು 5+3+3 ಯೋಜನೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.
5+3+3 ಪ್ಲ್ಯಾನಿಂಗ್ ಮೂಲಕ ಟೀಮ್ ಇಂಡಿಯಾ ಐವರು ಬ್ಯಾಟರ್ಗಳು, ಮೂವರು ಆಲ್ರೌಂಡರ್ಗಳು ಹಾಗೂ ಮೂವರು ಬೌಲರ್ಗಳನ್ನು ಒಳಗೊಂಡಂತಹ ಪ್ಲೇಯಿಂಗ್ ಇಲೆವೆನ್ ರೂಪಿಸಬಹುದು.
ಅತ್ತ ಮೂವರು ಆಲ್ರೌಂಡರ್ಗಳನ್ನು ಕಣಕ್ಕಿಳಿಸುವುದರೊಂದಿಗೆ ಟೀಮ್ ಇಂಡಿಯಾ ಒಟ್ಟು 6 ಬೌಲರ್ಗಳನ್ನು ಬಳಸಿಕೊಳ್ಳಲು ಪ್ಲ್ಯಾನ್ ರೂಪಿಸಬಹುದು. ಅಲ್ಲದೆ ಐವರು ಬ್ಯಾಟರ್ ಹಾಗೂ ಮೂವರು ಆಲ್ರೌಂಡರ್ಗಳಿರುವುದರಿಂದ 8ನೇ ಕ್ರಮಾಂಕದವರೆಗೆ ಬ್ಯಾಟಿಂಗ್ ಲೈನಪ್ ಅನ್ನು ಹೊಂದಬಹುದು. ಈ ಮೂಲಕ ಟೀಮ್ ಇಂಡಿಯಾ ಬಲಿಷ್ಠ ಪಡೆಯೊಂದಿಗೆ ಬಾಂಗ್ಲಾ ವಿರುದ್ಧ ಕಣಕ್ಕಿಳಿಯುವ ಸಾಧ್ಯತೆಯಿದೆ. ಅದರಂತೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…
ಇದನ್ನೂ ಓದಿ: ಐತಿಹಾಸಿಕ ಸಾಧನೆ: ಟೀಮ್ ಇಂಡಿಯಾದ ವಿಶ್ವ ದಾಖಲೆ ಮುರಿದ ಯುಎಸ್ಎ