
ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯ ಶುರುವಾಗಿದೆ. ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಝಿಲೆಂಡ್ ತಂಡ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲು ಬೌಲಿಂಗ್ ಮಾಡಲಿದೆ.
ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಅಂದರೆ ಕಳೆದ ಮ್ಯಾಚ್ನಲ್ಲಿ ಕಣಕ್ಕಿಳಿದ ಆಡುವ ಬಳಗವನ್ನೇ ಈ ಪಂದ್ಯದಲ್ಲೂ ಮುಂದುವರೆಸಲಾಗಿದೆ. ಮತ್ತೊಂದೆಡೆ ನ್ಯೂಝಿಲೆಂಡ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಅದರಂತೆ ಮ್ಯಾಟ್ ಹೆನ್ರಿ ಬದಲಿಗೆ ನಾಥನ್ ಸ್ಮಿತ್ ಕಣಕ್ಕಿಳಿದಿದ್ದಾರೆ.
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ ಮತ್ತು ವರುಣ್ ಚಕ್ರವರ್ತಿ.
ನ್ಯೂಝಿಲೆಂಡ್ ಪ್ಲೇಯಿಂಗ್ 11: ವಿಲ್ ಯಂಗ್, ರಾಚಿನ್ ರವೀಂದ್ರ, ಕೇನ್ ವಿಲಿಯಮ್ಸನ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಕೈಲ್ ಜೇಮಿಸನ್, ವಿಲಿಯಂ ಒರೋಕ್, ನಾಥನ್ ಸ್ಮಿತ್.
ಏಕದಿನ ಕ್ರಿಕೆಟ್ನಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಈವರೆಗೆ 119 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 61 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ನ್ಯೂಝಿಲೆಂಡ್ 50 ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು 7 ಪಂದ್ಯಗಳು ಕಾರಣಾಂತರಗಳಿಂದ ರದ್ದಾದರೆ, 1 ಪಂದ್ಯವು ಟೈ ಆಗಿದೆ.
ಇನ್ನು ಉಭಯ ತಂಡಗಳು ತಟಸ್ಥ ಮೈದಾನದಲ್ಲಿ ಒಟ್ಟು 32 ಬಾರಿ ಮುಖಾಮುಖಿಯಾಗಿವೆ. ಈ ವೇಳೆ 16 ಪಂದ್ಯಗಳಲ್ಲಿ ನ್ಯೂಝಿಲೆಂಡ್ ಗೆದ್ದರೆ, 16 ಪಂದ್ಯಗಳಲ್ಲಿ ಭಾರತ ತಂಡ ಜಯ ಸಾಧಿಸಿದೆ.
ಹಾಗೆಯೇ ಐಸಿಸಿ ಟೂರ್ನಿಗಳಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ಒಟ್ಟು 12 ಬಾರಿ ಮುಖಾಮುಖಿಯಾಗಿದ್ದು, ಈ ವೇಳೆಯೂ ಎರಡು ತಂಡಗಳು ತಲಾ 6 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಅಂದರೆ ಅಂಕಿ ಅಂಶಗಳ ಪ್ರಕಾರ ಉಭಯ ತಂಡಗಳು ಸಮಬಲ ಹೊಂದಿದೆ ಎನ್ನಬಹುದು. ಹೀಗಾಗಿ ಇಂದಿನ ಪಂದ್ಯದಲ್ಲಿ ಎರಡೂ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದಾಗಿದೆ.
ನ್ಯೂಝಿಲೆಂಡ್ ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ವಿಲ್ ಒರೂಕ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ನಾಥನ್ ಸ್ಮಿತ್, ಕೇನ್ ವಿಲಿಯಮ್ಸನ್, ವಿಲ್ ಯಂಗ್, ಜಾಕೋಬ್ ಡಫಿ.
ಇದನ್ನೂ ಓದಿ: ಶರವೇಗದ ಸೆಂಚುರಿ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ ಡೇವಿಡ್ ಮಿಲ್ಲರ್