Champions Trophy 2025: ಟೀಮ್ ಇಂಡಿಯಾದ 3+2 ಪಂದ್ಯಗಳು ಸ್ಥಳಾಂತರ..!

Champions Trophy 2025: ಚಾಂಪಿಯನ್ಸ್ ಟ್ರೋಫಿ 2025ರ ಆಯೋಜನೆಯ ಹಕ್ಕು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಕೈಯಲ್ಲಿದೆ. ಆದರೆ ಪಾಕ್​​ನಲ್ಲಿ ಚಾಂಪಿಯನ್ಸ್​​ ಟ್ರೋಫಿ ಪಂದ್ಯಗಳನ್ನಾಡಲು ಬಿಸಿಸಿಐ ನಿರಾಕರಿಸಿದೆ. ಹೀಗಾಗಿ ಇದೀಗ ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ಐಸಿಸಿ ಮುಂದಾಗಿದೆ.

Champions Trophy 2025: ಟೀಮ್ ಇಂಡಿಯಾದ 3+2 ಪಂದ್ಯಗಳು ಸ್ಥಳಾಂತರ..!
Team India
Follow us
ಝಾಹಿರ್ ಯೂಸುಫ್
|

Updated on: Dec 09, 2024 | 9:24 AM

ಚಾಂಪಿಯನ್ಸ್ ಟ್ರೋಫಿ 2025 ಹೈಬ್ರಿಡ್ ಮಾದರಿಯಲ್ಲಿ ನಡೆಯುವುದು ಬಹುತೇಕ ಖಚಿತವಾಗಿದೆ. ಅದರಂತೆ ಟೀಮ್ ಇಂಡಿಯಾ ಪಂದ್ಯಗಳು ದುಬೈನಲ್ಲಿ ನಡೆದರೆ, ಉಳಿದ ಮ್ಯಾಚ್​​ಗಳಿಗೆ ಪಾಕಿಸ್ತಾನ್ ಆತಿಥ್ಯವಹಿಸಲಿದೆ. ಇದಕ್ಕಾಗಿ ಹೊಸ ವೇಳಾಪಟ್ಟಿಯನ್ನು ಸಿದ್ಧಪಡಿಸಿಕೊಳ್ಳುವಂತೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಗೆ ಐಸಿಸಿ ಸೂಚಿಸಿದೆ.

ಈಗಾಗಲೇ ಕರಡು ವೇಳಾಪಟ್ಟಿ ಸಿದ್ಧಗೊಂಡಿದ್ದು, ಅದರಂತೆ ಭಾರತ ತಂಡದ 3 ಪಂದ್ಯಗಳು ದುಬೈನಲ್ಲಿ ಆಯೋಜನೆಗೊಳ್ಳುವುದು ಖಚಿತವಾಗಿದೆ. ಇದರ ಜೊತೆಗೆ ಮತ್ತೆರಡು ಪಂದ್ಯಗಳು ಕೂಡ ಸೇರ್ಪಡೆಯಾಗಬಹುದು.

ಅಂದರೆ ಭಾರತ ತಂಡದ ಲೀಗ್ ಹಂತದ ಮೂರು ಪಂದ್ಯಗಳು ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಜರುಗಲಿದೆ. ಒಂದು ವೇಳೆ ಟೀಮ್ ಇಂಡಿಯಾ ಸೆಮಿಫೈನಲ್​​ಗೆ ಪ್ರವೇಶಿಸಿದರೆ ಆ ಪಂದ್ಯವನ್ನು ಸಹ ದುಬೈನಲ್ಲೇ ಆಡಲಾಗುತ್ತದೆ.

ಹಾಗೆಯೇ ಟೀಮ್ ಇಂಡಿಯಾ ಫೈನಲ್​​ಗೆ ತಲುಪಿದರೆ ಅಂತಿಮ ಹಣಾಹಣಿ ಕೂಡ ದುಬೈನಲ್ಲೇ ಆಯೋಜಿಸಲು ಐಸಿಸಿ ಸೂಚಿಸಿದೆ. ಅದರಂತೆ ಭಾರತ ತಂಡದ 3+2 ಪಂದ್ಯಗಳು ದುಬೈನಲ್ಲಿ ಜರುಗುವುದು ಖಚಿತವಾಗಿದೆ.

ಇಲ್ಲಿ ಟೀಮ್ ಇಂಡಿಯಾ ಬಾಂಗ್ಲಾದೇಶ್, ನ್ಯೂಝಿಲೆಂಡ್ ಹಾಗೂ ಪಾಕಿಸ್ತಾನ್ ವಿರುದ್ಧ ಲೀಗ್ ಹಂತದ ಪಂದ್ಯಗಳನ್ನಾಡಲಾಗಿದೆ. ಕರುಡು ವೇಳಾಪಟ್ಟಿ ಪ್ರಕಾರ ಭಾರತ ತಂಡವು ಫೆಬ್ರವರಿ 20 ರಂದು ಬಾಂಗ್ಲಾದೇಶ್ ವಿರುದ್ಧ ಕಣಕ್ಕಿಳಿಯುವ ಮೂಲಕ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ.

ಇನ್ನು ಫೆಬ್ರವರಿ 23 ರಂದು ಜರುಗರಲಿರುವ ಮತ್ತೊಂದು ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ಮುಖಾಮುಖಿಯಾಗಲಿದೆ. ಹಾಗೆಯೇ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯವು ಮಾರ್ಚ್ 1 ರಂದು ನಡೆಯುವ ಸಾಧ್ಯತೆಯಿದೆ. ಈ ಎಲ್ಲಾ ಪಂದ್ಯಗಳಿಗೆ ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಪಾಕಿಸ್ತಾನದಲ್ಲಿ ಎಷ್ಟು ಪಂದ್ಯ?

ಟೀಮ್ ಇಂಡಿಯಾದ ಮೂರು ಲೀಗ್ ಪಂದ್ಯಗಳನ್ನು ಹೊರತುಪಡಿಸಿ ಉಳಿದ ಮ್ಯಾಚ್​ಗಳು ಪಾಕಿಸ್ತಾನದಲ್ಲೇ ನಡೆಯಲಿದೆ. ಅದರಂತೆ ಒಂದು ಸೆಮಿಫೈನಲ್ ಸೇರಿದಂತೆ 10 ಪಂದ್ಯಗಳಿಗೆ ಪಾಕಿಸ್ತಾನ್ ಆತಿಥ್ಯವಹಿಸಲಿದೆ. ಒಂದು ವೇಳೆ ಟೀಮ್ ಇಂಡಿಯಾ ಸೆಮಿಫೈನಲ್ ಹಾಗೂ ಫೈನಲ್​ಗೆ ಪ್ರವೇಶಿಸದೇ ಇದ್ದರೆ, ಆ  ಪಂದ್ಯಗಳೂ ಕೂಡ ಪಾಕ್​​ನಲ್ಲೇ ಜರುಗಲಿದೆ.

ಈ ಪಂದ್ಯಗಳಿಗಾಗಿ ಪಾಕಿಸ್ತಾನ್ ಮೂರು ಸ್ಟೇಡಿಯಂಗಳನ್ನು ನಿಗದಿ ಮಾಡಿಕೊಂಡಿದ್ದು, ಅದರಂತೆ ಲಾಹೋರ್, ರಾವಲ್ಪಿಂಡಿ ಹಾಗೂ ಕರಾಚಿಯಲ್ಲಿ ಚಾಂಪಿಯನ್ಸ್ ಟ್ರೋಫಿ ಮ್ಯಾಚ್​ಗಳು ಆಯೋಜನೆಗೊಳ್ಳಲಿದೆ.

ಚಾಂಪಿಯನ್ಸ್ ಟ್ರೋಫಿ ತಂಡಗಳು:

ಗ್ರೂಪ್-A

  1. ಭಾರತ
  2. ಪಾಕಿಸ್ತಾನ್
  3. ಬಾಂಗ್ಲಾದೇಶ್
  4. ನ್ಯೂಝಿಲೆಂಡ್

ಇದನ್ನೂ ಓದಿ: Team India: ಕೊನೆಯ 10 ಓವರ್​ಗಳಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ

ಗ್ರೂಪ್-B

  1. ಆಸ್ಟ್ರೇಲಿಯಾ
  2. ಇಂಗ್ಲೆಂಡ್
  3. ಸೌತ್ ಆಫ್ರಿಕಾ
  4. ಅಫ್ಘಾನಿಸ್ತಾನ್.
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ