AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Champions Trophy 2025: ಸೆಮೀಸ್​ಗೇರಿದ ಭಾರತ- ನ್ಯೂಜಿಲೆಂಡ್‌; ಟೂರ್ನಿಯಿಂದ ಹೊರಬಿದ್ದ ಬಾಂಗ್ಲಾ- ಪಾಕಿಸ್ತಾನ

Champions Trophy 2025: 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ನ್ಯೂಜಿಲೆಂಡ್ ತಂಡ ಬಾಂಗ್ಲಾದೇಶವನ್ನು 5 ವಿಕೆಟ್‌ಗಳಿಂದ ಸೋಲಿಸಿದೆ. ಈ ಗೆಲುವಿನೊಂದಿಗೆ ನ್ಯೂಜಿಲೆಂಡ್ ಸೆಮಿಫೈನಲ್‌ಗೆ ಪ್ರವೇಶಿಸಿದೆ. ಇತ್ತ ಟೀಂ ಇಂಡಿಯಾ ಕೂಡ ಸೆಮೀಸ್​ಗೆ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಈ ಸೋಲಿನೊಂದಿಗೆ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಟೂರ್ನಿಯಿಂದ ಹೊರಬಿದ್ದಿವೆ.

Champions Trophy 2025: ಸೆಮೀಸ್​ಗೇರಿದ ಭಾರತ- ನ್ಯೂಜಿಲೆಂಡ್‌; ಟೂರ್ನಿಯಿಂದ ಹೊರಬಿದ್ದ ಬಾಂಗ್ಲಾ- ಪಾಕಿಸ್ತಾನ
Champions Trophy 2025
ಪೃಥ್ವಿಶಂಕರ
|

Updated on:Mar 02, 2025 | 2:18 PM

Share

2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ನಿನ್ನೆ ಅಂದರೆ ಫೆಬ್ರವರಿ 23 ರಂದು ಭಾರತ ಹಾಗೂ ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಕದನ ನಡೆದಿತ್ತು. ಇಂದು ಕೂಡ ಟೂರ್ನಿಯ ಆರನೇ ಪಂದ್ಯವು ರಾವಲ್ಪಿಂಡಿಯಲ್ಲಿ ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ತಂಡಗಳ ನಡುವೆ ನಡೆಯಿತು. ಮುಂದಿನ ಸುತ್ತಿಗೆ ಅರ್ಹತೆ ಪಡೆಯುವ ದೃಷ್ಟಿಯಿಂದ ಈ ಪಂದ್ಯವೂ ಕೂಡ ಈ ಗುಂಪಿನಲ್ಲಿರುವ 3 ತಂಡಗಳಿಗೆ ಪ್ರಮುಖವಾಗಿತ್ತು. ಇದೀಗ ಈ ಪಂದ್ಯದ ಫಲಿತಾಂಶ ಹೊರಬಿದ್ದಿದ್ದು, ಬಾಂಗ್ಲಾದೇಶವನ್ನು 5 ವಿಕೆಟ್‌ಗಳಿಂದ ಮಣಿಸಿರುವ ನ್ಯೂಜಿಲೆಂಡ್ ತಂಡ ಟೀಂ ಇಂಡಿಯಾದೊಂದಿಗೆ ಸೆಮಿಫೈನಲ್​ಗೇರಿದರೆ, ಇತ್ತ ಸೋತ ಬಾಂಗ್ಲಾದೇಶ ತನ್ನೊಂದಿಗೆ ಆತಿಥೇಯ ಪಾಕಿಸ್ತಾನವನ್ನು ಟೂರ್ನಿಯಿಂದ ಹೊರಗೆ ಕರೆದುಕೊಂಡು ಹೋಗಿದೆ.

ಟೂರ್ನಿಯಿಂದ ಹೊರಬಿದ್ದ ಪಾಕ್

ವಾಸ್ತವವಾಗಿ 2025 ರ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ಸ್ಪರ್ಧೆಯಲ್ಲಿ ಉಳಿಯಲು ಪಾಕಿಸ್ತಾನಕ್ಕೆ ಬಾಂಗ್ಲಾದೇಶ ಹಾಗೂ ನ್ಯೂಜಿಲೆಂಡ್ ನಡುವಿನ ಪಂದ್ಯದ ಫಲಿತಾಂಶ ಬಾಂಗ್ಲಾದೇಶದ ಪರವಾಗಿ ಬರಬೇಕಿತ್ತು. ಆದರೆ ಈ ಪಂದ್ಯದಲ್ಲಿ ನ್ಯೂಜಿಲೆಂಡ್‌ ಗೆಲುವು ಸಾಧಿಸುವ ಮೂಲಕ ಪಾಕಿಸ್ತಾನದ ಭರವಸೆಯನ್ನು ಹುಸಿಗೊಳಿಸಿತು. ತನ್ನ ಹಾಲಿ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳುವ ನಿರೀಕ್ಷೆಯೊಂದಿಗೆ ಈ ಟೂರ್ನಿಗೆ ಆತಿಥ್ಯವಹಿಸಿದ್ದ ಪಾಕಿಸ್ತಾನ ತಂಡಕ್ಕೆ ಇದು ದೊಡ್ಡ ಹೊಡೆತವಾಗಿದೆ.

ಭಾರತ- ಕಿವೀಸ್ ಸೆಮೀಸ್​ಗೆ

ಪಾಕಿಸ್ತಾನದ ಜೊತೆಗೆ ಬಾಂಗ್ಲಾದೇಶ ತಂಡವೂ ಸೆಮಿಫೈನಲ್ ರೇಸ್‌ನಿಂದ ಹೊರಬಿದ್ದಿದೆ. ಈ ಎರಡೂ ತಂಡಗಳು ಈ ಟೂರ್ನಿಯಲ್ಲಿ ಇದುವರೆಗೆ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲ. ಪಾಕಿಸ್ತಾನ ತನ್ನ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲನ್ನು ಅನುಭವಿಸಿದರೆ, ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಸೋತಿತು. ಮತ್ತೊಂದೆಡೆ, ಬಾಂಗ್ಲಾದೇಶ ತಂಡವು ನ್ಯೂಜಿಲೆಂಡ್‌ಗಿಂತ ಮೊದಲು ಭಾರತ ತಂಡದ ವಿರುದ್ಧದ ಪಂದ್ಯವನ್ನು ಸೋತಿತ್ತು. ಈಗ ಈ ಎರಡೂ ತಂಡಗಳು ಗುಂಪು ಹಂತದಲ್ಲಿ ತಮ್ಮ ಕೊನೆಯ ಪಂದ್ಯವನ್ನು ಪರಸ್ಪರ ವಿರುದ್ಧ ಆಡಲಿವೆ. ಇದು ಪಾಯಿಂಟ್ ಟೇಬಲ್ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.

ಗೆಲುವಿನ ಶತಕ ಬಾರಿಸಿದ ರಚಿನ್ ರವೀಂದ್ರ

ಈ ಪಂದ್ಯದಲ್ಲಿ, ನ್ಯೂಜಿಲೆಂಡ್ ತಂಡವು ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ತಂಡವು 50 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 236 ರನ್‌ಗಳನ್ನು ಮಾತ್ರ ಗಳಿಸಲು ಶಕ್ತವಾಯಿತು. ತಂಡದ ಪರ ನಜ್ಮುಲ್ ಹುಸೇನ್ ಶಾಂಟೋ ಅತಿ ಹೆಚ್ಚು 77 ರನ್ ಗಳಿಸಿದರು. ಅವರನ್ನು ಹೊರತುಪಡಿಸಿ, ಬೇರೆ ಯಾವುದೇ ಆಟಗಾರ 50 ರನ್‌ಗಳ ಗಡಿಯನ್ನು ಮುಟ್ಟಲು ಸಾಧ್ಯವಾಗಲಿಲ್ಲ. 237 ರನ್‌ಗಳ ಗುರಿಯನ್ನು ಬೆನ್ನಟ್ಟಲು ಬಂದ ನ್ಯೂಜಿಲೆಂಡ್ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಕೇವಲ 72 ರನ್‌ಗಳಿಗೆ 3 ವಿಕೆಟ್‌ಗಳನ್ನು ಕಳೆದುಕೊಂಡಿತು. ಇದಾದ ನಂತರ, ರಚಿನ್ ರವೀಂದ್ರ ಅದ್ಭುತ ಬ್ಯಾಟಿಂಗ್ ಮಾಡಿ ಶತಕ ಗಳಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ನ್ಯೂಜಿಲೆಂಡ್ 46.1 ಓವರ್‌ಗಳಲ್ಲಿ 5 ವಿಕೆಟ್‌ಗಳನ್ನು ಕಳೆದುಕೊಂಡು ಗುರಿ ತಲುಪಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:22 pm, Mon, 24 February 25

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು