Champions Trophy 2025: ಚಾಂಪಿಯನ್ಸ್ ಟ್ರೋಫಿಗೆ 15 ಸದಸ್ಯರ ಪಾಕಿಸ್ತಾನ ತಂಡ ಪ್ರಕಟ
Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ಅಂತಿಮವಾಗಿ ಪಾಕಿಸ್ತಾನ ತಂಡವನ್ನು ಪ್ರಕಟಿಸಲಾಗಿದೆ. ಮೊಹಮ್ಮದ್ ರಿಜ್ವಾನ್ ನಾಯಕತ್ವದಲ್ಲಿ 15 ಸದಸ್ಯರ ಬಲಿಷ್ಠ ತಂಡವನ್ನು ಪಿಸಿಬಿ ಪ್ರಕಟಿಸಿದೆ. ಈ ಮೂಲಕ ಈ ಐಸಿಸಿ ಟೂರ್ನಿಗೆ ಎಲ್ಲಾ 8 ತಂಡಗಳನ್ನು ಪ್ರಕಟಿಸಿದಂತ್ತಾಗಿದೆ. 2017ರಲ್ಲಿ ಪ್ರಶಸ್ತಿ ಗೆದ್ದ ಆಟಗಾರರ ವಿಶೇಷ ವಿಡಿಯೋ ಮೂಲಕ ಪಾಕಿಸ್ತಾನ ಕ್ರಿಕೆಟ್ ಮಂಡಳಿ ತನ್ನ ತಂಡವನ್ನು ಪ್ರಕಟಿಸಿದೆ.

ಚಾಂಪಿಯನ್ಸ್ ಟ್ರೋಫಿ ಸಮೀಪಿಸುತ್ತಿರುವ ಬೆನ್ನಲ್ಲೇ ಆತಿಥೇಯ ಪಾಕಿಸ್ತಾನ, ಈ ಐಸಿಸಿ ಟೂರ್ನಿಗೆ ಕೊನೆಗೂ ತನ್ನ ತಂಡವನ್ನು ಪ್ರಕಟಿಸಿದೆ.ಪಿಸಿಬಿಯ ಆಯ್ಕೆ ಸಮಿತಿಯು ಮೊಹಮ್ಮದ್ ರಿಜ್ವಾನ್ ನಾಯಕತ್ವದಲ್ಲಿ 15 ಸದಸ್ಯರ ತಂಡವನ್ನು ಪ್ರಕಟಿಸಿದ್ದು, ಆಯ್ಕೆಯಾಗಿರುವವರಲ್ಲಿ ಕೆಲವು ಆಟಗಾರರು ಬಹಳ ಸಮಯದ ನಂತರ ತಂಡಕ್ಕೆ ಮರಳಿದ್ದಾರೆ. ಉಳಿದಂತೆ ಆಘಾ ಸಲ್ಮಾನ್ ಅವರನ್ನು ತಂಡದ ಉಪನಾಯಕನನ್ನಾಗಿ ಆಯ್ಕೆ ಮಾಡಲಾಗಿದ್ದು, ಟ್ವೀಟ್ ಮೂಲಕ ವಿವಾದಕ್ಕೀಡಾಗಿದ್ದ ಸ್ಫೋಟಕ ಆರಂಭಿಕ ಆಟಗಾರ ಫಖರ್ ಜಮಾನ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
15 ಸದಸ್ಯರ ಪಾಕ್ ತಂಡ ಪ್ರಕಟ
ಚಾಂಪಿಯನ್ಸ್ ಟ್ರೋಫಿಗೆ ಆತಿಥ್ಯ ವಹಿಸುತ್ತಿರುವ ಪಾಕಿಸ್ತಾನವನ್ನು ಹೊರತುಪಡಿಸಿ ಉಳಿದ 7 ತಂಡಗಳು ಈಗಾಗಲೇ ತಮ್ಮ ತಂಡವನ್ನು ಪ್ರಕಟಿಸಿದ್ದವು. ಆದರೆ ಪಾಕಿಸ್ತಾನ ಮಾತ್ರ ತನ್ನ ತಂಡವನ್ನು ಪ್ರಕಟಿಸಿರಲಿಲ್ಲ. ಮೊದಲ 6 ತಂಡಗಳು ಐಸಿಸಿ ನಿಗದಿಪಡಿಸಿದ ದಿನಾಂಕದೊಳಗೆ ತಮ್ಮ ತಮ್ಮ ತಂಡಗಳನ್ನು ಪ್ರಕಟಿಸಿದ್ದವು. ಆದರೆ ಭಾರತ ಹಾಗೂ ಪಾಕಿಸ್ತಾನ ಮಾತ್ರ ತಂಡ ಪ್ರಕಟಣೆಯನ್ನು ತಡ ಮಾಡಿದ್ದವು. ಆ ಬಳಿಕ ಭಾರತ ಕೂಡ ರೋಹಿತ್ ಶರ್ಮಾ ನಾಯಕತ್ವದಲ್ಲಿ 15 ಸದಸ್ಯರ ತಂಡವನ್ನು ಪ್ರಕಟಿಸಲಾಗಿತ್ತು. ಇದೀಗ 2017ರಲ್ಲಿ ಪ್ರಶಸ್ತಿ ಗೆದ್ದ ಆಟಗಾರರ ವಿಶೇಷ ವಿಡಿಯೋ ಮೂಲಕ ಪಾಕಿಸ್ತಾನ ಕ್ರಿಕೆಟ್ ಮಂಡಳಿ ತನ್ನ ತಂಡವನ್ನು ಪ್ರಕಟಿಸಿದೆ.
Pakistan name ICC Champions Trophy 2025 squad
Details here ➡️ https://t.co/XfswdRVWrO #WeHaveWeWill | #ChampionsTrophy pic.twitter.com/kGA9hJr4dV
— PCB Media (@TheRealPCBMedia) January 31, 2025
ಭಾರತದ ಗುಂಪಿನಲ್ಲಿ ಪಾಕಿಸ್ತಾನ
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಒಂದೇ ಗುಂಪಿನಲ್ಲಿವೆ. ಇವೆರಡನ್ನು ಹೊರತುಪಡಿಸಿ, ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ಕೂಡ ಇದೇ ತಂಡದಲ್ಲಿವೆ. ಫೆಬ್ರವರಿ 19 ರಂದು ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಪಂದ್ಯದೊಂದಿಗೆ ಪಂದ್ಯಾವಳಿಯು ಪ್ರಾರಂಭವಾಗಲಿದೆ. ಇದಾದ ಬಳಿಕ ಪಾಕಿಸ್ತಾನ ತಂಡ ಟೀಂ ಇಂಡಿಯಾವನ್ನು ಎದುರಿಸಲಿದೆ. ಈ ಪಂದ್ಯ ಫೆಬ್ರವರಿ 23 ರಂದು ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.
ಪಾಕಿಸ್ತಾನ ತಂಡ: ಬಾಬರ್ ಆಝಂ, ಫಖರ್ ಜಮಾನ್, ಕಮ್ರಾನ್ ಗುಲಾಮ್, ಸೌದ್ ಶಕೀಲ್, ತಯ್ಯಬ್ ತಾಹಿರ್, ಫಹೀಮ್ ಅಶ್ರಫ್, ಖುಶ್ದಿಲ್ ಶಾ, ಸಲ್ಮಾನ್ ಅಲಿ ಅಘಾ (ಉಪನಾಯಕ), ಮೊಹಮ್ಮದ್ ರಿಜ್ವಾನ್ (ನಾಯಕ), ಉಸ್ಮಾನ್ ಖಾನ್, ಅಬ್ರಾರ್ ಅಹ್ಮದ್, ಹ್ಯಾರಿಸ್ ರೌಫ್, ಮೊಹಮ್ಮದ್ ಹಸ್ನೈನ್, ನಸೀಮ್ ಶಾ, ಶಾಹೀನ್ ಶಾ ಅಫ್ರಿದಿ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:55 pm, Fri, 31 January 25