AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Champions Trophy 2025: ಭಾರತ- ಆಸೀಸ್ ಸೆಮೀಸ್ ಪಂದ್ಯ ರದ್ದಾದರೆ ಯಾವ ತಂಡ ಫೈನಲ್​ಗೇರಲಿದೆ?

Champions Trophy 2025: 2025ರ ಚಾಂಪಿಯನ್ಸ್ ಟ್ರೋಫಿಯ ನಾಕೌಟ್ ಹಂತ ಪ್ರಾರಂಭವಾಗಿದೆ. ಭಾರತ-ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ-ನ್ಯೂಜಿಲೆಂಡ್ ಸೆಮಿಫೈನಲ್ ಪಂದ್ಯಗಳಿಗೆ ಮೀಸಲು ದಿನಗಳನ್ನು ನಿಗದಿಪಡಿಸಲಾಗಿದೆ. ಮಳೆಯಿಂದ ಪಂದ್ಯ ರದ್ದಾದರೆ, ಗುಂಪು ಹಂತದಲ್ಲಿ ಅಗ್ರಸ್ಥಾನದ ತಂಡ (ಭಾರತ ಮತ್ತು ದಕ್ಷಿಣ ಆಫ್ರಿಕಾ) ಫೈನಲ್‌ಗೆ ಪ್ರವೇಶ ಪಡೆಯುತ್ತದೆ.

Champions Trophy 2025: ಭಾರತ- ಆಸೀಸ್ ಸೆಮೀಸ್ ಪಂದ್ಯ ರದ್ದಾದರೆ ಯಾವ ತಂಡ ಫೈನಲ್​ಗೇರಲಿದೆ?
Champions Trophy 2025
ಪೃಥ್ವಿಶಂಕರ
|

Updated on:Mar 03, 2025 | 4:58 PM

Share

2025 ರ ಚಾಂಪಿಯನ್ಸ್ ಟ್ರೋಫಿಯ (Champions Trophy 2025) ಲೀಗ್ ಹಂತ ಮುಕ್ತಾಯವಾಗಿದೆ. ಇದೀಗ ಫೆಬ್ರವರಿ 4 ರಿಂದ ನಾಕೌಟ್ ಪಂದ್ಯಗಳು ಪ್ರಾರಂಭವಾಗಲಿವೆ. ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾ (India vs Australia) ತಂಡಗಳ ನಡುವೆ ನಡೆಯಲಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ದುಬೈನ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಆದರೆ ದೊಡ್ಡ ಪ್ರಶ್ನೆಯೆಂದರೆ, ಎರಡೂ ತಂಡಗಳ ನಡುವೆ ನಡೆಯಲಿರುವ ಸೆಮಿಫೈನಲ್ ಪಂದ್ಯ ಮಳೆಯಿಂದಾಗಿ ರದ್ದಾದರೆ, ಯಾವ ತಂಡ ಫೈನಲ್ ತಲುಪುತ್ತದೆ ಮತ್ತು ಈ ಬಾರಿ ನಾಕೌಟ್ ಪಂದ್ಯಗಳಿಗೆ ಐಸಿಸಿ ಯಾವ ನಿಯಮಗಳನ್ನು ಮಾಡಿದೆ ಎಂಬುದು.

ಭಾರತ-ಆಸ್ಟ್ರೇಲಿಯಾ ಪಂದ್ಯ ರದ್ದಾದರೆ ಏನಾಗುತ್ತದೆ?

ಚಾಂಪಿಯನ್ಸ್ ಟ್ರೋಫಿಯಲ್ಲಿ ಮಳೆ ಮತ್ತು ಆಸ್ಟ್ರೇಲಿಯಾ ತಂಡಕ್ಕೆ ಅವಿನಾಭಾವ ಸಂಬಂಧವಿದೆ. ಕಳೆದ ಎರಡು ಆವೃತ್ತಿಗಳಲ್ಲಿ ಆಸ್ಟ್ರೇಲಿಯಾ ತಂಡದ 3 ಪಂದ್ಯಗಳು ಮಳೆಯಿಂದ ರದ್ದಾಗಿದ್ದವು. ಈ ಬಾರಿಯೂ ಮಳೆಯಿಂದಾಗಿ ಆಸ್ಟ್ರೇಲಿಯಾ ಒಂದು ಪಂದ್ಯವನ್ನು ಆಡಲು ಸಾಧ್ಯವಾಗಲಿಲ್ಲ. ಇಂತಹ ಪರಿಸ್ಥಿತಿಯಲ್ಲಿ, ಸೆಮಿಫೈನಲ್‌ನಲ್ಲೂ ಇದೇ ರೀತಿಯ ಘಟನೆ ನಡೆದರೆ, ಯಾವ ತಂಡ ಫೈನಲ್​ಗೇರುತ್ತದೆ ಎಂಬ ಪ್ರಶ್ನೆ ಅಭಿಮಾನಿಗಳ ಮನಸ್ಸಿನಲ್ಲಿ ಮೂಡಿದೆ. ಅದಕ್ಕೆಲ್ಲ ಉತ್ತರ ಇಲ್ಲಿದೆ.

ಈ ಬಾರಿ ಐಸಿಸಿ, ಎರಡೂ ಸೆಮಿಫೈನಲ್ ಪಂದ್ಯಗಳಿಗೆ ಮೀಸಲು ದಿನವನ್ನು ನಿಗದಿಪಡಿಸಿದೆ. ಆದರೆ ನಿಗದಿತ ದಿನಾಂಕದಂದೇ ಆಟವನ್ನು ಮುಗಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುವುದು. ಇದು ಸಾಧ್ಯವಾಗದಿದ್ದರೆ, ಮೀಸಲು ದಿನದಂದು ಪಂದ್ಯವನ್ನು ಪೂರ್ಣಗೊಳಿಸಲಾಗುತ್ತದೆ.

ಅಂದರೆ ಮಾರ್ಚ್ 4 ರಂದು ಭಾರತ-ಆಸ್ಟ್ರೇಲಿಯಾ ಸೆಮಿಫೈನಲ್ ಪಂದ್ಯ ಪೂರ್ಣಗೊಳ್ಳದಿದ್ದರೆ, ಮಾರ್ಚ್ 5 ರಂದು ಪಂದ್ಯವನ್ನು ಮುಂದುವರೆಸಲಾಗುತ್ತದೆ. ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ, ಗುರಿ ಬೆನ್ನಟ್ಟುವ ತಂಡವು ಫಲಿತಾಂಶವನ್ನು ಪಡೆಯಲು ಕನಿಷ್ಠ 25 ಓವರ್‌ಗಳನ್ನು ಆಡಬೇಕಾಗುತ್ತದೆ. ಆದರೆ ಮೀಸಲು ದಿನದಂದು ಪಂದ್ಯದ ಫಲಿತಾಂಶ ನಿರ್ಧಾರವಾಗದಿದ್ದರೆ, ಗುಂಪು ಹಂತದಲ್ಲಿ ಅಗ್ರಸ್ಥಾನದಲ್ಲಿರುವ ತಂಡ ಫೈನಲ್ ತಲುಪುತ್ತದೆ. ಈ ನಿಯಮದ ಪ್ರಕಾರ ಭಾರತ ತಂಡ ಗುಂಪು ಹಂತದಲ್ಲಿ ಅಗ್ರಸ್ಥಾನದಲ್ಲಿರುವ ಕಾರಣ, ಸೆಮಿಫೈನಲ್‌ ಪಂದ್ಯವು ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡರೆ, ಭಾರತ ಫೈನಲ್​ಗೇರಲಿದೆ.

ಇದನ್ನೂ ಓದಿ: Champions Trophy 2025: ಭಾರತದ ಸೆಮೀಸ್ ಎದುರಾಳಿ ಯಾರು? ಯಾವಾಗ ನಡೆಯಲಿದೆ ಈ ಪಂದ್ಯ?

ದಕ್ಷಿಣ ಆಫ್ರಿಕಾ-ನ್ಯೂಜಿಲೆಂಡ್ ಪಂದ್ಯಕ್ಕೂ ಮೀಸಲು ದಿನ

2025 ರ ಚಾಂಪಿಯನ್ಸ್ ಟ್ರೋಫಿಯ ಎರಡನೇ ಸೆಮಿಫೈನಲ್ ಪಂದ್ಯವು ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆಯಲಿದೆ. ಈ ಎರಡೂ ತಂಡಗಳು ಲಾಹೋರ್‌ನ ಗಡಾಫಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯಕ್ಕೆ ಮಾರ್ಚ್ 6 ಅನ್ನು ಮೀಸಲು ದಿನವನ್ನಾಗಿ ಇರಿಸಲಾಗಿದೆ. ಈ ಪಂದ್ಯವೂ ಫಲಿತಾಂಶ ಬರದಿದ್ದರೆ ದಕ್ಷಿಣ ಆಫ್ರಿಕಾ ತಂಡ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಏಕೆಂದರೆ ದಕ್ಷಿಣ ಆಫ್ರಿಕಾ ಬಿ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಹೀಗಾಗಿ ಸೆಮಿಫೈನಲ್‌ ಪಂದ್ಯಗಳು ರದ್ದಾದರೆ, ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ಟೂರ್ನಿಯಿಂದ ಹೊರಬೀಳಲಿವೆ. ಅಂತಿಮವಾಗಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ಫೈನಲ್ ಆಡಲಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:55 pm, Mon, 3 March 25

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್