PCB – BCCI ನಡುವೆ ಒಪ್ಪಂದ: ಚಾಂಪಿಯನ್ಸ್​​ ಟ್ರೋಫಿ ನಡೆಯುವುದೆಲ್ಲಿ ಎಂಬುದು ಬಹಿರಂಗ

Champions Trophy 2025: ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಒಟ್ಟು 8 ತಂಢಗಳು ಕಣಕ್ಕಿಳಿಯಲಿದೆ. ಈ ತಂಡಗಳನ್ನು ಎರಡು ಗ್ರೂಪ್​ಗಳಾಗಿ ವಿಂಗಡಿಸಲಾಗಿದ್ದು, ಮೊದಲ ಸುತ್ತಿನಲ್ಲಿ ಆಯಾ ಗ್ರೂಪ್​ಗಳಲ್ಲಿನ ತಂಡಗಳ ನಡುವೆ ಪಂದ್ಯಗಳು ನಡೆಯಲಿದೆ. ಇಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಒಂದೇ ಗ್ರೂಪ್​ನಲ್ಲಿದ್ದು, ಅದರಂತೆ ಮೊದಲ ಸುತ್ತಿನಲ್ಲೇ ಉಭಯ ತಂಡಗಳು ಮುಖಾಮುಖಿಯಾಗಲಿದೆ.

PCB - BCCI ನಡುವೆ ಒಪ್ಪಂದ: ಚಾಂಪಿಯನ್ಸ್​​ ಟ್ರೋಫಿ ನಡೆಯುವುದೆಲ್ಲಿ ಎಂಬುದು ಬಹಿರಂಗ
IND vs PAK
Follow us
ಝಾಹಿರ್ ಯೂಸುಫ್
|

Updated on: Nov 28, 2024 | 9:21 AM

2025ರ ಚಾಂಪಿಯನ್ಸ್ ಟ್ರೋಫಿ ಚರ್ಚೆ ಮುಂದುವರೆದಿದೆ. ಒಂದೆಡೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲ್ಲ ಎಂದರೆ, ಮತ್ತೊಂದೆಡೆ ಭಾರತೀಯ ಕ್ರಿಕೆಟ್ ಮಂಡಳಿ ಪಾಕ್​​​ನಲ್ಲಿ ಟೂರ್ನಿ ಆಡಲು ನಿರಾಕರಿಸಿದೆ. ಹೀಗಾಗಿಯೇ ಮುಂಬರುವ ಚಾಂಪಿಯನ್ಸ್ ಟ್ರೋಫಿ ಎಲ್ಲಿ ನಡೆಯಲಿದೆ ಪ್ರಶ್ನೆಯೊಂದು ಹುಟ್ಟಿಕೊಂಡಿತ್ತು. ಈ ಪ್ರಶ್ನೆಗೆ ಇದೀಗ ಪಾಕಿಸ್ತಾನ್ ತಂಡದ ಮಾಜಿ ಆಟಗಾರ ರಶೀದ್ ಲತೀಫ್ ಉತ್ತರ ನೀಡಿದ್ದಾರೆ

ಪಾಕಿಸ್ತಾನದ ಮಾಜಿ ನಾಯಕ ರಶೀದ್ ಲತೀಫ್ ಪ್ರಕಾರ, ಚಾಂಪಿಯನ್ಸ್ ಟ್ರೋಫಿ 2025 ಅನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಗುತ್ತದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ), ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ನಡುವೆ ಈಗಾಗಲೇ ಒಪ್ಪಂದವಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಒಪ್ಪಂದದ ಪ್ರಕಾರ, ಪಾಕಿಸ್ತಾನದಲ್ಲೇ ಚಾಂಪಿಯನ್ಸ್​ ಟ್ರೋಫಿ ನಡೆಯಲಿದೆ. ಆದರೆ ಭಾರತದ ಪಂದ್ಯಗಳನ್ನು ದುಬೈನಲ್ಲಿ ಆಡಲಾಗುತ್ತದೆ. ಅದರಂತೆ ಟೀಮ್ ಇಂಡಿಯಾದ ಎಲ್ಲಾ ಪಂದ್ಯಗಳಿಗೆ ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ ಎಂದು ಅವರು ಖಾಸಗಿ ಚಾನೆಲ್​ ಮೂಲಕ ಬಹಿರಂಗಪಡಿಸಿದ್ದಾರೆ.

ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯು ಈಗಾಗಲೇ  ಹೈಬ್ರಿಡ್ ಮಾದರಿಗೆ ಒಪ್ಪಿಗೆ ಸೂಚಿಸಿದೆ. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಆಯೋಜನೆಯ ಹಕ್ಕು ಕೈ ತಪ್ಪದಂತೆ ನೋಡಿಕೊಂಡಿದೆ. ಹೀಗಾಗಿ ಭಾರತ ತಂಡ ಪಾಕ್​​ಗೆ ಬಂದು ಆಡುವುದಿಲ್ಲ. ಬದಲಾಗಿ ದುಬೈಗೆ ತೆರಳಲಿದೆ. ಇನ್ನು ಭಾರತದ ವಿರುದ್ಧದ ಪಂದ್ಯಗಳಿಗಾಗಿ ಪಾಕಿಸ್ತಾನ್ ಸೇರಿದಂತೆ ಕೆಲ ತಂಡಗಳು ದುಬೈಗೆ ತೆರಳಲಿದೆ ಎಂದು ರಶೀದ್ ಲತೀಫ್ ತಿಳಿಸಿದ್ದಾರೆ.

ಹಾಗೆಯೇ ಈ ಒಪ್ಪಂದದ ಪ್ರಕಾರ, ಭಾರತ ತಂಡವು ಸೆಮಿಫೈನಲ್​​ಗೆ ಪ್ರವೇಶಿಸಿದರೆ ಆ ಪಂದ್ಯ ಕೂಡ ದುಬೈನಲ್ಲೇ ನಡೆಯಲಿದೆ. ಇನ್ನು ಟೀಮ್ ಇಂಡಿಯಾ ಫೈನಲ್​​ಗೆ ಬಂದರೆ ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿಯ ಅಂತಿಮ ಪಂದ್ಯ ನಡೆಯುವುದಿಲ್ಲ ಎಂದು ಪಾಕ್ ತಂಡದ ಮಾಜಿ ನಾಯಕ ತಿಳಿಸಿದ್ದಾರೆ.

ಪ್ರಸ್ತುತ ಮಾಹಿತಿ ಪ್ರಕಾರ ಚಾಂಪಿಯನ್ಸ್ ಟ್ರೋಫಿಯು ಫೆಬ್ರವರಿ 19 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದೆ. ಉದ್ಘಾಟನಾ ಪಂದ್ಯವನ್ನು ಕರಾಚಿಯಲ್ಲಿ ಆಯೋಜಿಸಲಾಗುತ್ತಿದ್ದು, ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಹಾಗೆಯೇ ಭಾರತ ತಂಡವು ಫೆಬ್ರವರಿ 20 ರಂದು ಬಾಂಗ್ಲಾದೇಶ್ ವಿರುದ್ಧ ಕಣಕ್ಕಿಳಿಯುವ ಮೂಲಕ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ ಎಂದು ವರದಿಯಾಗಿದೆ.

ಚಾಂಪಿಯನ್ಸ್ ಟ್ರೋಫಿ ತಂಡಗಳು:

ಗ್ರೂಪ್-A

  1. ಭಾರತ
  2. ಪಾಕಿಸ್ತಾನ್
  3. ಬಾಂಗ್ಲಾದೇಶ್
  4. ನ್ಯೂಝಿಲೆಂಡ್

ಇದನ್ನೂ ಓದಿ: Team India: ಕೊನೆಯ 10 ಓವರ್​ಗಳಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ

ಗ್ರೂಪ್-B

  1. ಆಸ್ಟ್ರೇಲಿಯಾ
  2. ಇಂಗ್ಲೆಂಡ್
  3. ಸೌತ್ ಆಫ್ರಿಕಾ
  4. ಅಫ್ಘಾನಿಸ್ತಾನ್.
ಊಟ ಮಾಡುವಾಗ ಮಾತನಾಡಬಾರದು ಯಾಕೆ? ಇಲ್ಲಿದೆ ಆಧ್ಯಾತ್ಮಿಕ ಹಿನ್ನೆಲೆ
ಊಟ ಮಾಡುವಾಗ ಮಾತನಾಡಬಾರದು ಯಾಕೆ? ಇಲ್ಲಿದೆ ಆಧ್ಯಾತ್ಮಿಕ ಹಿನ್ನೆಲೆ
ದಿನ ಭವಿಷ್ಯ: ಗುರು ಅನುಗ್ರಹದ ಈ ದಿನ ಯಾವ ರಾಶಿವರಿಗೆಲ್ಲ ಶುಭ ಫಲ ನೋಡಿ
ದಿನ ಭವಿಷ್ಯ: ಗುರು ಅನುಗ್ರಹದ ಈ ದಿನ ಯಾವ ರಾಶಿವರಿಗೆಲ್ಲ ಶುಭ ಫಲ ನೋಡಿ
ಬಾಗಲಕೋಟೆಯಲ್ಲಿ ರಸ್ತೆ ಮೇಲೆ ಅಡುಗೆ ಮಾಡಿ ನೇಕಾರರಿಂದ ಪ್ರತಿಭಟನೆ
ಬಾಗಲಕೋಟೆಯಲ್ಲಿ ರಸ್ತೆ ಮೇಲೆ ಅಡುಗೆ ಮಾಡಿ ನೇಕಾರರಿಂದ ಪ್ರತಿಭಟನೆ
ನನಗೆ ಎಲ್ಲ ಧರ್ಮವೂ ಒಂದೇ, ಓಲೈಕೆ ಮಾಡುವವನಲ್ಲ; ಸಿಎಂ ಸಿದ್ದರಾಮಯ್ಯ
ನನಗೆ ಎಲ್ಲ ಧರ್ಮವೂ ಒಂದೇ, ಓಲೈಕೆ ಮಾಡುವವನಲ್ಲ; ಸಿಎಂ ಸಿದ್ದರಾಮಯ್ಯ
ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ