ಚಾಂಪಿಯನ್ಸ್​ ಟ್ರೋಫಿಯಿಂದಲೇ ಪಾಕಿಸ್ತಾನವನ್ನು ಕಿಕ್ ಔಟ್ ಮಾಡಲು ಮುಂದಾದ ಐಸಿಸಿ

Champions Trophy 2025: ಭಾರತ ಮತ್ತು ಪಾಕಿಸ್ತಾನ್ ನಡುವಣ ಚಾಂಪಿಯನ್ಸ್ ಟ್ರೋಫಿ ಬಿಕ್ಕಟ್ಟು ಮುಂದುವರೆದಿದೆ. ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ ಆಡಲು ಭಾರತ ಹಿಂದೇಟು ಹಾಕಿದೆ. ಆದರೆ ಅತ್ತ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸುವುದಿಲ್ಲ ಎಂದು ಪಾಕ್ ಕ್ರಿಕೆಟ್ ಮಂಡಳಿ ಪಟ್ಟು ಹಿಡಿದು ಕುಳಿತಿದೆ. ಇದೀಗ ಪಿಸಿಬಿಯ ಪಟ್ಟು ಸಡಿಲಿಕೆ ಐಸಿಸಿ ಹೊಸ ತಂತ್ರದ ಮೊರೆ ಹೋಗಿದೆ.

ಚಾಂಪಿಯನ್ಸ್​ ಟ್ರೋಫಿಯಿಂದಲೇ ಪಾಕಿಸ್ತಾನವನ್ನು ಕಿಕ್ ಔಟ್ ಮಾಡಲು ಮುಂದಾದ ಐಸಿಸಿ
Champions Trophy 2025
Follow us
ಝಾಹಿರ್ ಯೂಸುಫ್
|

Updated on:Nov 30, 2024 | 8:55 AM

ಚಾಂಪಿಯನ್ಸ್ ಟ್ರೋಫಿ 2025 ಅನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸುವಂತೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​​ಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಸೂಚಿಸಿದೆ. ಒಂದು ವೇಳೆ ಈ ಆಯ್ಕೆಯನ್ನು ಒಪ್ಪಿಕೊಳ್ಳದಿದ್ದರೆ ಟೂರ್ನಿಯಿಂದ ಹೊರಗುಳಿಯುವಂತೆ ಐಸಿಸಿ ತಾಕೀತು ಮಾಡಿದೆ ಎಂದು ವರದಿಯಾಗಿದೆ.

ಪಿಟಿಐ ವರದಿ ಪ್ರಕಾರ, ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸುವುದು ಸೂಕ್ತ ಎಂದು ಐಸಿಸಿ ಅಭಿಪ್ರಾಯಟ್ಟಿದೆ. ಆದರೆ ಎರಡು ದೇಶಗಳಲ್ಲಿ ಟೂರ್ನಿಯನ್ನು ಆಯೋಜಿಸಲು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಸಿದ್ಧವಿಲ್ಲ.

ಅತ್ತ ಉಳಿದೆಲ್ಲಾ ಕ್ರಿಕೆಟ್ ಮಂಡಳಿಗಳು ಹೈಬ್ರಿಡ್ ಮಾದರಿಗೆ ಸಮ್ಮತಿ ಸೂಚಿಸಿದರೂ, ಪಿಸಿಬಿ ಮಾತ್ರ ತನ್ನ ನಿಲುವನ್ನು ಬದಲಿಸಿಲ್ಲ. ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಈ ಹಠಮಾರಿ ನಿರ್ಧಾರದಿಂದ ಇದೀಗ ಐಸಿಸಿ ಇಕ್ಕಟ್ಟಿಗೆ ಸಿಲುಕಿದೆ. ಹೀಗಾಗಿಯೇ ಇದೀಗ ಪಾಕಿಸ್ತಾನ್ ತಂಡವನ್ನೇ ಟೂರ್ನಿಯಿಂದ ಹೊರಗಿಟ್ಟು ಸೌತ್ ಆಫ್ರಿಕಾ ಅಥವಾ ಭಾರತದಲ್ಲಿ ಚಾಂಪಿಯನ್ಸ್ ಟ್ರೋಫಿ ಆಯೋಜಿಸುವ ಬಗ್ಗೆ ಕೂಡ ಚಿಂತಿಸಲಾಗಿದೆ ಎಂದು ವರದಿಯಾಗಿದೆ.

ಪಿಸಿಬಿಗೆ ಸಂಕಷ್ಟ:

ಪಾಕಿಸ್ತಾನದಲ್ಲೇ ಸಂಪೂರ್ಣ ಟೂರ್ನಿ ಆಯೋಜಿಸುವುದಾಗಿ ಪಟ್ಟು ಹಿಡಿದು ಕುಳಿತಿರುವ ಪಾಕಿಸ್ತಾನ್ ತಂತ್ರಕ್ಕೆ ಇದೀಗ ಐಸಿಸಿ ಪ್ರತಿತಂತ್ರ ಹೆಣೆದಿರುವುದು ಇದೀಗ ಪಿಸಿಬಿ ಚಿಂತೆಯನ್ನು ಹೆಚ್ಚಿಸಿದೆ. ಏಕೆಂದರೆ ಇದೀಗ ಹೈಬ್ರಿಡ್ ಮಾದರಿಗೆ ಒಪ್ಪಿಗೆ ಸೂಚಿಸದಿದ್ದರೆ, ಟೂರ್ನಿಯ ಆಯೋಜನೆಯ ಹಕ್ಕು ಕೈ ತಪ್ಪುವುದಲ್ಲದೇ, ಇಡೀ ಟೂರ್ನಿಯಿಂದ ಪಾಕಿಸ್ತಾನ್ ತಂಡ ಹೊರಬೀಳುವ ಸಾಧ್ಯತೆಯಿದೆ.

ಹೀಗಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಮುಂದಿರುವುದು ಒಂದೇ ಆಯ್ಕೆ. ಅದುವೇ ಹೈಬ್ರಿಡ್ ಮಾದರಿಯಲ್ಲಿ ಚಾಂಪಿಯನ್ಸ್ ಟ್ರೋಫಿಯನ್ನು ಆಯೋಜಿಸುವುದು. ಈ ಆಯ್ಕೆಯನ್ನು ಒಪ್ಪಿಕೊಳ್ಳದಿದ್ದರೆ ಟೂರ್ನಿಯಿಂದ ಹೊರಗುಳಿಯುವಂತೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಗೆ ಐಸಿಸಿ ಖಡಕ್ ಸೂಚನೆ ನೀಡಿದೆ. ಅದರಂತೆ ಮುಂಬರುವ ಚಾಂಪಿಯನ್ಸ್ ಟ್ರೋಫಿ ಹೈಬ್ರಿಡ್ ಮಾದರಿಯಲ್ಲಿ ನಡೆಯುವುದು ಬಹುತೇಕ ಖಚಿತ.

ಇನ್ನು 2025 ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಪಾಕಿಸ್ತಾನ್ ಮತ್ತು ಯುಎಇ ನಲ್ಲಿ ನಡೆಯುವ ಸಾಧ್ಯತೆ ಹೆಚ್ಚಿದೆ. ಇಲ್ಲಿ ಟೂರ್ನಿಯ ಬಹುತೇಕ ಪಂದ್ಯಗಳು ಪಾಕಿಸ್ತಾನದಲ್ಲೇ ನಡೆಯಲಿದೆ. ಆದರೆ ಭಾರತದ ಪಂದ್ಯಗಳಿಗೆ ದುಬೈನ ಇಂಟರ್​​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: 120 ವರ್ಷಗಳ ಬಳಿಕ ಟೆಸ್ಟ್​ನಲ್ಲಿ ಮಿಂಚಿನ ದಾಳಿ

ಹಾಗೆಯೇ ಭಾರತ ತಂಡ ಸೆಮಿಫೈನಲ್ ಮತ್ತು ಫೈನಲ್​​ಗೆ ಪ್ರವೇಶಿಸಿದರೂ, ಆ ಪಂದ್ಯಗಳನ್ನು ದುಬೈನಲ್ಲೇ ಆಯೋಜಿಸಬೇಕಾದ ಅನಿವಾರ್ಯತೆ ಪಿಸಿಬಿಗೆ ಬರಲಿದೆ. ಹೀಗಾಗಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಫೈನಲ್ ಮ್ಯಾಚ್ ಎಲ್ಲಿ ನಡೆಯಲಿದೆ ಎಂಬುದು ಭಾರತ ತಂಡದ ಫಲಿತಾಂಶದ ಮೇಲೆ ನಿರ್ಧಾರವಾಗಲಿದೆ.

ಚಾಂಪಿಯನ್ಸ್ ಟ್ರೋಫಿಗೆ ಅರ್ಹತೆ ಪಡೆದಿರುವ ತಂಡಗಳು:

  1. ಭಾರತ
  2. ಪಾಕಿಸ್ತಾನ್
  3. ಬಾಂಗ್ಲಾದೇಶ್
  4. ನ್ಯೂಝಿಲೆಂಡ್
  5. ಆಸ್ಟ್ರೇಲಿಯಾ
  6. ಇಂಗ್ಲೆಂಡ್
  7. ಸೌತ್ ಆಫ್ರಿಕಾ
  8. ಅಫ್ಘಾನಿಸ್ತಾನ್.

Published On - 8:54 am, Sat, 30 November 24

ಶಾಸ್ತ್ರದ ಪ್ರಕಾರ ಬಾಳೆ ಎಲೆ ಊಟ ಹೇಗೆ ಮಾಡಬೇಕು? ವಿಡಿಯೋ ನೋಡಿ
ಶಾಸ್ತ್ರದ ಪ್ರಕಾರ ಬಾಳೆ ಎಲೆ ಊಟ ಹೇಗೆ ಮಾಡಬೇಕು? ವಿಡಿಯೋ ನೋಡಿ
Horoscope: ಈ ರಾಶಿಯವರಿಗೆ ಇಂದು ಕಂಕಣ ಭಾಗ್ಯ ಕೂಡಿ ಬರಲಿದೆ
Horoscope: ಈ ರಾಶಿಯವರಿಗೆ ಇಂದು ಕಂಕಣ ಭಾಗ್ಯ ಕೂಡಿ ಬರಲಿದೆ
ರಾತ್ರಿ ಬಾರ್​ಗೆ ಕನ್ನ ಹಾಕಿ 2 ಆಲ್ಕೋಹಾಲ್ ಬಾಟಲಿಯನ್ನು ಕದ್ದ ಕಳ್ಳ!
ರಾತ್ರಿ ಬಾರ್​ಗೆ ಕನ್ನ ಹಾಕಿ 2 ಆಲ್ಕೋಹಾಲ್ ಬಾಟಲಿಯನ್ನು ಕದ್ದ ಕಳ್ಳ!
ರಂಗಾಯಣ ರಘು ಪಾತ್ರಕ್ಕೆ ಹೊಸ ಭಾಷೆ ಸೃಷ್ಟಿ ಮಾಡಿದ ಯೋಗರಾಜ್​ ಭಟ್
ರಂಗಾಯಣ ರಘು ಪಾತ್ರಕ್ಕೆ ಹೊಸ ಭಾಷೆ ಸೃಷ್ಟಿ ಮಾಡಿದ ಯೋಗರಾಜ್​ ಭಟ್
ಸಿಎಂ, ಡಿಸಿಎಂ ಸಿಡಬ್ಲ್ಯೂಸಿ ಸಭೆಯಲ್ಲಿ ಪಾಲ್ಗೊಳ್ಳಲು ಹೋಗಿದ್ದಾರೆ: ಜಮೀರ್
ಸಿಎಂ, ಡಿಸಿಎಂ ಸಿಡಬ್ಲ್ಯೂಸಿ ಸಭೆಯಲ್ಲಿ ಪಾಲ್ಗೊಳ್ಳಲು ಹೋಗಿದ್ದಾರೆ: ಜಮೀರ್
ನಂಜನಗೂಡು ಶ್ರೀಕಂಠೇಶ್ವರ ಕೋಟಿ ಒಡೆಯ, ನಾಲ್ಕೈದು ದೇಶ ಕರೆನ್ಸಿ ಪತ್ತೆ!
ನಂಜನಗೂಡು ಶ್ರೀಕಂಠೇಶ್ವರ ಕೋಟಿ ಒಡೆಯ, ನಾಲ್ಕೈದು ದೇಶ ಕರೆನ್ಸಿ ಪತ್ತೆ!
ಶೋಷಿತ ಸಮುದಾಯಗಳ ಒಕ್ಕೂಟ ಮತ್ತು ಕೆಪಿಸಿಸಿ ಸಂಯುಕ್ತ ಆಶ್ರಯದಲ್ಲಿ ಸಮಾವೇಶ
ಶೋಷಿತ ಸಮುದಾಯಗಳ ಒಕ್ಕೂಟ ಮತ್ತು ಕೆಪಿಸಿಸಿ ಸಂಯುಕ್ತ ಆಶ್ರಯದಲ್ಲಿ ಸಮಾವೇಶ
ಸಿದ್ದರಾಮಯ್ಯ ಸರ್ಕಾರಕ್ಕೆ ಹಿಂದೂಗಳನ್ನು ಕಂಡರಾಗಲ್ಲ, ಅಲರ್ಜಿ: ಅಶೋಕ
ಸಿದ್ದರಾಮಯ್ಯ ಸರ್ಕಾರಕ್ಕೆ ಹಿಂದೂಗಳನ್ನು ಕಂಡರಾಗಲ್ಲ, ಅಲರ್ಜಿ: ಅಶೋಕ
ಬಾಯ್ಮುಚ್ಚಿಕೊಂಡಿರುವಂತೆ ಬಸನಗೌಡ ಯತ್ನಾಳ್​ರನ್ನು ಎಚ್ಚರಿಸಿದ ರೇಣುಕಾಚಾರ್ಯ
ಬಾಯ್ಮುಚ್ಚಿಕೊಂಡಿರುವಂತೆ ಬಸನಗೌಡ ಯತ್ನಾಳ್​ರನ್ನು ಎಚ್ಚರಿಸಿದ ರೇಣುಕಾಚಾರ್ಯ
ಅಂಗವಿಕಲರ ಅನುದಾನ ಗ್ಯಾರಂಟಿಗಳಿಗೆ ಬಳಕೆ: ಸರ್ಕಾರದ ವಿರುದ್ಧ ಮತ್ತೊಂದು ಆರೋಪ
ಅಂಗವಿಕಲರ ಅನುದಾನ ಗ್ಯಾರಂಟಿಗಳಿಗೆ ಬಳಕೆ: ಸರ್ಕಾರದ ವಿರುದ್ಧ ಮತ್ತೊಂದು ಆರೋಪ