IND vs NZ: ಮೂರನೇ ಬಾರಿ ಫೈನಲ್ ಮುಖಾಮುಖಿ: ಈ ಸಲ ಕಪ್ ಯಾರಿಗೆ?

New Zealand vs India: ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 249 ರನ್ ಕಲೆಹಾಕಿದರೆ, ನ್ಯೂಝಿಲೆಂಡ್ 205 ರನ್​ಗಳಿಗೆ ಆಲೌಟ್ ಆಗಿತ್ತು. ಈ ಮೂಲಕ ಭಾರತ ತಂಡ 44 ರನ್​ಗಳ ಜಯ ಸಾಧಿಸಿತ್ತು. ಇದೀಗ ಉಭಯ ತಂಡಗಳು ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಲು ಸಜ್ಜಾಗಿದೆ.

IND vs NZ: ಮೂರನೇ ಬಾರಿ ಫೈನಲ್ ಮುಖಾಮುಖಿ: ಈ ಸಲ ಕಪ್ ಯಾರಿಗೆ?
Ind Vs Nz

Updated on: Mar 06, 2025 | 6:25 AM

ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಮಾರ್ಚ್​ 9 ರಂದು ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಮೊದಲ ಸೆಮಿಫೈನಲ್​ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿ ಟೀಮ್ ಇಂಡಿಯಾ ಫೈನಲ್​ಗೇರಿದರೆ, ಅತ್ತ ದ್ವಿತೀಯ ಸೆಮಿಫೈನಲ್​ನಲ್ಲಿ ಸೌತ್ ಆಫ್ರಿಕಾ ತಂಡಕ್ಕೆ ಸೋಲುಣಿಸಿ ನ್ಯೂಝಿಲೆಂಡ್ ಫೈನಲ್ ಫೈಟ್​ಗೆ ಎಂಟ್ರಿ ಕೊಟ್ಟಿದೆ.

ವಿಶೇಷ ಎಂದರೆ ಉಭಯ ತಂಡಗಳು ಐಸಿಸಿ ಟೂರ್ನಿಯಲ್ಲಿ ಫೈನಲ್​ನಲ್ಲಿ ಮುಖಾಮುಖಿಯಾಗುತ್ತಿರುವುದು ಇದು ಮೂರನೇ ಬಾರಿ. ಈ ಹಿಂದಿನ ಎರಡೂ ಫೈನಲ್​ಗಳಲ್ಲೂ ಕಿವೀಸ್ ಪಡೆ ಭಾರತದ ವಿರುದ್ಧ ಜಯ ಸಾಧಿಸಿತ್ತು.

  • 2000 ರಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮೊದಲ ಬಾರಿ ಭಾರತ ಮತ್ತು ನ್ಯೂಝಿಲೆಂಡ್ ಮುಖಾಮುಖಿಯಾಗಿತ್ತು. ಈ ವೇಳೆ ಟೀಮ್ ಇಂಡಿಯಾವನ್ನು 4 ವಿಕೆಟ್​ಗಳಿಂದ ಸೋಲಿಸಿ ನ್ಯೂಝಿಲೆಂಡ್ ಚೊಚ್ಚಲ ಐಸಿಸಿ ಟ್ರೋಫಿ ಮುಡಿಗೇರಿಸಿಕೊಂಡಿತ್ತು.
  • ಇದಾದ ಬಳಿಕ ಉಭಯ ತಂಡಗಳು ಫೈನಲ್​ನಲ್ಲಿ ಮುಖಾಮುಖಿಯಾಗಿದ್ದು 2021ರ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ನ ಅಂತಿಮ ಪಂದ್ಯದಲ್ಲಿ. ಈ ಮ್ಯಾಚ್​ನಲ್ಲಿ ಭಾರತ ತಂಡಕ್ಕೆ 8 ವಿಕೆಟ್​ಗಳ ಸೋಲುಣಿಸಿ ನ್ಯೂಝಿಲೆಂಡ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

ಇದೀಗ ಮೂರನೇ ಬಾರಿಗೆ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಫೈನಲ್​ ಫೈಟ್​​ಗೆ ಸಜ್ಜಾಗಿದೆ. ಅದರಂತೆ ಮಾರ್ಚ್ 9 ರಂದು ದುಬೈನ ಇಂಟರ್​​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಉಭಯ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಎರಡು ಫೈನಲ್ ಸೋಲುಗಳಿಗೆ ಟೀಮ್ ಇಂಡಿಯಾ ಸೇಡು ತೀರಿಸಿಕೊಳ್ಳಲಿದೆಯಾ ಅಥವಾ ನ್ಯೂಝಿಲೆಂಡ್ ಹ್ಯಾಟ್ರಿಕ್ ಫೈನಲ್ ಜಯ ಸಾಧಿಸಲಿದೆಯಾ ಕಾದು ನೋಡಬೇಕಿದೆ.

ಇದನ್ನೂ ಓದಿ
ವಿರಾಟ್ ಕೊಹ್ಲಿಗೆ 100 ಕೋಟಿ ರೂ: ಶುಭ್​ಮನ್ ಗಿಲ್​ಗೆ ಎಷ್ಟು?
VIDEO: ಅಳುತ್ತಿದ್ದ ಅಭಿಮಾನಿಯನ್ನು ಸಮಾಧಾನ ಮಾಡಿದ ಕೆಎಲ್ ರಾಹುಲ್
ನಾನು ಹೊಡೀತಿದ್ದೆ ಅಲ್ವಾ... ವಿರಾಟ್ ಕೊಹ್ಲಿ ಮುಂದೆ ಕೆಎಲ್ ರಾಹುಲ್ ಹತಾಶೆ
Virat Kohli: ಮಾಸ್ಟರ್ ಚೇಸ್ ಮಾಸ್ಟರ್​ನ ವಿಶ್ವ ದಾಖಲೆ

ನ್ಯೂಝಿಲೆಂಡ್ ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ವಿಲ್ ಒರೂಕ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ನಾಥನ್ ಸ್ಮಿತ್, ಕೇನ್ ವಿಲಿಯಮ್ಸನ್, ವಿಲ್ ಯಂಗ್, ಜಾಕೋಬ್ ಡಫಿ.

ಇದನ್ನೂ ಓದಿ: Virat Kohli: ಮಾಸ್ಟರ್ ಚೇಸ್ ಮಾಸ್ಟರ್​ನ ವಿಶ್ವ ದಾಖಲೆ

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್. ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.

Loading...
Unable to load recommendations.
Follow Us