Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈನಲ್ ಪಂದ್ಯವೇ ಕೊನೆ… ಭಾನುವಾರ ರೋಹಿತ್ ಶರ್ಮಾ ಅವರ ಭವಿಷ್ಯ ನಿರ್ಧಾರ

Champions Trophy 2025: ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ 4 ಇನಿಂಗ್ಸ್ ಆಡಿರುವ ರೋಹಿತ್ ಶರ್ಮಾ 97 ಎಸೆತಗಳನ್ನು ಎದುರಿಸಿ ಕಲೆಹಾಕಿರುವುದು ಕೇವಲ 104 ರನ್​ಗಳು ಮಾತ್ರ. ಇತ್ತ ಕಳಪೆ ಫಾರ್ಮ್​ನಲ್ಲಿರುವ ರೋಹಿತ್ ಶರ್ಮಾ ಅವರಿಗೆ ತಮ್ಮ ಸಾಮರ್ಥ್ಯವನ್ನು ತೆರೆದಿಡಲು ಕೊನೆಯ ಅವಕಾಶ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ. ಈ ಪಂದ್ಯವೇ ಹಿಟ್​ಮ್ಯಾನ್ ಪಾಲಿಗೆ ಕೊನೆಯಾದರೂ ಅಚ್ಚರಿಪಡಬೇಕಿಲ್ಲ.

ಫೈನಲ್ ಪಂದ್ಯವೇ ಕೊನೆ... ಭಾನುವಾರ ರೋಹಿತ್ ಶರ್ಮಾ ಅವರ ಭವಿಷ್ಯ ನಿರ್ಧಾರ
Rohit Sharma
Follow us
ಝಾಹಿರ್ ಯೂಸುಫ್
|

Updated on: Mar 08, 2025 | 7:30 AM

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಕ್ರಿಕೆಟ್ ಭವಿಷ್ಯ ಭಾನುವಾರ ನಿರ್ಧಾರವಾಗಲಿದೆ. ಮಾರ್ಚ್ 9 ರಂದು ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ ಮಾತ್ರ ಹಿಟ್​ಮ್ಯಾನ್ ಟೀಮ್ ಇಂಡಿಯಾ ಜೊತೆ ಮುಂದುವರೆಯುವ ಸಾಧ್ಯತೆಯಿದೆ. ಇಲ್ಲದಿದ್ದರೆ ನ್ಯೂಝಿಲೆಂಡ್ ವಿರುದ್ಧದ ಪಂದ್ಯವೇ ರೋಹಿತ್ ಶರ್ಮಾ ಅವರ ಕೊನೆಯ ಏಕದಿನ ಪಂದ್ಯವಾಗಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

2027ರ ಏಕದಿನ ವಿಶ್ವಕಪ್​ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ತರಲು ಚಿಂತಿಸಿದೆ. ಅದರಂತೆ ಚಾಂಪಿಯನ್ಸ್ ಟ್ರೋಫಿಯ ಮುಕ್ತಾಯದ ಬೆನ್ನಲ್ಲೇ ಭಾರತ ಏಕದಿನ ತಂಡಕ್ಕೆ ಮೇಜರ್ ಸರ್ಜರಿಯಾಗುವುದು ಖಚಿತ.

ಅದರಲ್ಲೂ ಮುಂಬರುವ ಏಕದಿನ ಸರಣಿಗೂ ಮುನ್ನ ಹೊಸ ನಾಯಕನನ್ನು ಆಯ್ಕೆ ಮಾಡುವ ಬಗ್ಗೆ ಚರ್ಚಿಸಲಾಗಿದೆ. ಇದೇ ಕಾರಣದಿಂದಾಗಿ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಗೆ ಯುವ ಆಟಗಾರ ಶುಭ್​ಮನ್ ಗಿಲ್ ಅವರನ್ನು ಉಪನಾಯಕನಾಗಿ ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ
Image
ವಿರಾಟ್ ಕೊಹ್ಲಿಗೆ 100 ಕೋಟಿ ರೂ: ಶುಭ್​ಮನ್ ಗಿಲ್​ಗೆ ಎಷ್ಟು?
Image
VIDEO: ಅಳುತ್ತಿದ್ದ ಅಭಿಮಾನಿಯನ್ನು ಸಮಾಧಾನ ಮಾಡಿದ ಕೆಎಲ್ ರಾಹುಲ್
Image
ನಾನು ಹೊಡೀತಿದ್ದೆ ಅಲ್ವಾ... ವಿರಾಟ್ ಕೊಹ್ಲಿ ಮುಂದೆ ಕೆಎಲ್ ರಾಹುಲ್ ಹತಾಶೆ
Image
Virat Kohli: ಮಾಸ್ಟರ್ ಚೇಸ್ ಮಾಸ್ಟರ್​ನ ವಿಶ್ವ ದಾಖಲೆ

ಪ್ರಸ್ತುತ ತಂಡದ ನಾಯಕ ರೋಹಿತ್ ಶರ್ಮಾ ಅವರ ವಯಸ್ಸು 37 ವರ್ಷ. ಅವರು ಇನ್ನೆರಡು ವರ್ಷ ಭಾರತ ತಂಡದಲ್ಲಿರುವುದು ಅನುಮಾನ. ಅದರಲ್ಲೂ 39ನೇ ವಯಸ್ಸಿನಲ್ಲಿ ಅವರು 2027 ಏಕದಿನ ವಿಶ್ವಕಪ್ ಆಡುವುದು ಡೌಟ್ ಎಂದೇ ಹೇಳಬಹುದು. ಆದರೆ ಅದುವರೆಗೆ ಅವರನ್ನು ಮುಂದುವರೆಸಬೇಕಿದ್ದರೆ ಚಾಂಪಿಯನ್ಸ್ ಟ್ರೋಫಿ ಫೈನಲ್​ ಪಂದ್ಯ ನಿರ್ಣಾಯಕ.

ಒಂದು ವೇಳೆ ಭಾನುವಾರ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ನ್ಯೂಝಿಲೆಂಡ್ ವಿರುದ್ಧ ಭಾರತ ತಂಡ ಗೆದ್ದರೆ ರೋಹಿತ್ ಶರ್ಮಾ ಅವರ ನಿವೃತ್ತಿ ಮತ್ತಷ್ಟು ಮುಂದಕ್ಕೆ ಹೋಗಬಹುದು. ಅಥವಾ ಅವರು ತಮ್ಮ ಏಕದಿನ ನಿವೃತ್ತಿಯನ್ನು ಪ್ರಕಟಿಸಬಹುದು. ಇತ್ತ ಆಯ್ಕೆ ಸಮಿತಿಯು ರೋಹಿತ್ ಶರ್ಮಾ ಅವರ ಮೇಲೆ ಮೃದು ಧೋರಣೆ ತಳೆಯಬೇಕಿದ್ದರೆ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಗೆಲ್ಲಲೇಬೇಕು.

ಒಂದು ವೇಳೆ ಟೀಮ್ ಇಂಡಿಯಾ ಫೈನಲ್​ನಲ್ಲಿ ಸೋತರೆ ರೋಹಿತ್ ಶರ್ಮಾ ಅವರನ್ನು ಏಕದಿನ ತಂಡದಿಂದ ಕೈ ಬಿಡುವುದು ಖಚಿತ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಹೀಗಾಗಿ ಭಾನುವಾರ ದುಭೈನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ಅಂತಿಮ ಹಣಾಹಣಿಯು ಟೀಮ್ ಇಂಡಿಯಾದಲ್ಲಿ ರೋಹಿತ್ ಶರ್ಮಾ ಅವರ ಭವಿಷ್ಯವನ್ನು ನಿರ್ಧರಿಸಲಿದೆ ಎಂದೇ ಹೇಳಬಹುದು.

ಇದನ್ನೂ ಓದಿ: ಶರವೇಗದ ಸೆಂಚುರಿ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ ಡೇವಿಡ್ ಮಿಲ್ಲರ್

ಇನ್ನು ಭಾನುವಾರ ಚಾಂಪಿಯನ್ಸ್ ಟ್ರೋಫಿ ಎತ್ತಿ ಹಿಡಿಯುವ ಮೂಲಕ ರೋಹಿತ್ ಶರ್ಮಾ ನಿವೃತ್ತಿ ಘೋಷಿಸಿದರೂ ಅಚ್ಚರಿಪಡಬೇಕಿಲ್ಲ. ಏಕೆಂದರೆ ಈ ಹಿಂದೆ ಟಿ20 ವಿಶ್ವಕಪ್ ಗೆದ್ದ ಬಳಿಕ ರೋಹಿತ್ ಶರ್ಮಾ ಚುಟುಕು ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಹಾಗಾಗಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದ  ಬಳಿಕ 37 ವರ್ಷದ ರೋಹಿತ್ ಶರ್ಮಾ ದಿಢೀರ್ ನಿವೃತ್ತಿ ಘೋಷಿಸುತ್ತಾರಾ ಎಂಬುದನ್ನು ಸಹ ಕಾದು ನೋಡಬೇಕಿದೆ.

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ