AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಚೆನ್ನೈ ತಂಡಕ್ಕೆ ಬಿಗ್ ಶಾಕ್; ಐಪಿಎಲ್​ನಿಂದ ಹಿಂದೆ ಸರಿದ 16.25 ಕೋಟಿ ಬೆಲೆಯ ಪ್ಲೇಯರ್..!

Ben Stokes out of IPL 2024: ಐಪಿಎಲ್ ವಿಚಾರಕ್ಕೆ ಬರುವುದಾದರೆ, ಬೆನ್ ಸ್ಟೋಕ್ಸ್ ಅವರನ್ನು ಚೆನ್ನೈ ಫ್ರಾಂಚೈಸಿ ಕಳೆದ ಹರಾಜಿನಲ್ಲಿ 16.25 ಕೋಟಿ ರೂಪಾಯಿಗೆ ಖರೀದಿಸಿತ್ತು. ಆದರೆ ಸ್ಟೋಕ್ಸ್​ಗೆ ಪಡೆದ ಹಣಕ್ಕೆ ನ್ಯಾಯ ಒದಗಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಮುಂದಿನ ತಿಂಗಳು ಯುಎಇಯಲ್ಲಿ ನಡೆಯಲ್ಲಿರುವ ಕಿರು ಹರಾಜಿಗೂ ಮುನ್ನ ಸ್ಟೋಕ್ಸ್ ಅವರನ್ನು ತಂಡದಿಂದ ಕೈಬಿಡಲಾಗುತ್ತದೆ ಎಂಬ ಮಾತು ಕೂಡ ಕೇಳಿಬರುತ್ತಿದ್ದವು.

IPL 2024: ಚೆನ್ನೈ ತಂಡಕ್ಕೆ ಬಿಗ್ ಶಾಕ್; ಐಪಿಎಲ್​ನಿಂದ ಹಿಂದೆ ಸರಿದ 16.25 ಕೋಟಿ ಬೆಲೆಯ ಪ್ಲೇಯರ್..!
ಬೆನ್ ಸ್ಟೋಕ್ಸ್
ಪೃಥ್ವಿಶಂಕರ
|

Updated on:Nov 23, 2023 | 6:29 PM

Share

2024 ರ ಐಪಿಎಲ್​ಗೆ (IPL 2024) ಈಗಾಗಲೇ ಸಿದ್ದತೆಗಳು ಆರಂಭವಾಗಿವೆ. ಅದಕ್ಕೆ ಪೂರಕವಾಗಿ ಆಟಗಾರರ ಟ್ರೆಡಿಂಗ್ ಪ್ರಕ್ರಿಯೆ ಕೂಡ ನಡೆಯುತ್ತಿದೆ. ಮುಂದಿನ ತಿಂಗಳು ಅಂದರೆ ಡಿಸೆಂಬರ್ ಮೊದಲ ವಾರದಲ್ಲಿ ಮಿನಿ ಹರಾಜು ನಡೆಸಲು ಬಿಸಿಸಿಐ ಸಿದ್ದವಾಗಿದೆ. ಈ ನಡುವೆ ಐಪಿಎಲ್​ನ ಅತ್ಯಂತ ಯಶಸ್ವಿ ತಂಡವಾದ ಚೆನ್ನೈ ಸೂಪರ್ ಕಿಂಗ್ಸ್​ಗೆ (Chennai Super Kings) ಬಿಗ್ ಶಾಕ್ ಎದುರಾಗಿದೆ. ತಂಡದ ಸ್ಟಾರ್ ಆಟಗಾರ ಹಾಗೂ ಇಂಗ್ಲೆಂಡ್​ನ ಆಲ್​ರೌಂಡರ್ ಬೆನ್ ಸ್ಟೋಕ್ಸ್ (Ben Stokes) ಮುಂದಿನ ಆವೃತ್ತಿಯ ಐಪಿಎಲ್​ನಿಂದ ತಮ್ಮ ಹೆಸರನ್ನು ಹಿಂಪಡೆದಿದ್ದಾರೆ. ಪಾದದ ಗಾಯದಿಂದಾಗಿ ಸ್ಟೋಕ್ ಕಳೆದ ಐಪಿಎಲ್‌ನಲ್ಲಿ ಕೇವಲ 2 ಪಂದ್ಯಗಳನ್ನು ಮಾತ್ರ ಆಡಿದ್ದರು. ಆ ಬಳಿಕ ಸ್ಟೋಕ್ಸ್ ತಂಡದ ಪರ ಕಣಕ್ಕಿಳಿದಿರಲಿಲ್ಲ. ಇದೀಗ ಕೆಲಸದ ಹೊರೆ ನಿರ್ವಾಹಣೆ ಕಾರಣ ನೀಡಿರುವ ಸ್ಟೋಕ್ಸ್ ಮುಂದಿನ ಐಪಿಎಲ್ ಆಡದಿರಲು ನಿರ್ಧರಿಸಿದ್ದಾರೆ. ಹೀಗಿರುವಾಗ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈಗ ಸ್ಟೋಕ್ಸ್ ಅವರನ್ನು ಹರಾಜಿಗೂ ಮುನ್ನ ಬಿಡುಗಡೆ ಮಾಡುತ್ತದೋ ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ.

ಐಪಿಎಲ್​ನಿಂದ ಹಿಂದೆ ಸರಿದ ಸ್ಟೋಕ್ಸ್

32 ವರ್ಷದ ಸ್ಟಾರ್ ಆಲ್ ರೌಂಡರ್ ಬೆನ್ ಸ್ಟೋಕ್ಸ್ ಐಪಿಎಲ್ 2024 ರಿಂದ ತಮ್ಮ ಹೆಸರನ್ನು ಹಿಂಪಡೆದಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ಪತ್ರಿಕಾ ಪ್ರಕಟಣೆಯ ಮೂಲಕ ಅಭಿಮಾನಿಗಳಿಗೆ ಈ ಮಾಹಿತಿಯನ್ನು ನೀಡಿದೆ. ಬೆನ್ ಸ್ಟೋಕ್ಸ್ ತಮ್ಮ ಕೆಲಸದ ಹೊರೆಯನ್ನು ನಿರ್ವಹಿಸಲು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಐಪಿಎಲ್‌ಗೆ ಮೊದಲು, ಅವರು ಭಾರತದಲ್ಲಿ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಬೇಕು. ನಂತರ ಟಿ20 ವಿಶ್ವಕಪ್ ಕೂಡ ಜೂನ್ 2024 ರಲ್ಲಿ ನಡೆಯಲಿದೆ. ಹೀಗಾಗಿ ಸ್ಟೋಕ್ಸ್ ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

ಇಂಗ್ಲೆಂಡ್​ಗೆ ಆನೆ ಬಲ: ನಿವೃತ್ತಿ ಹಿಂಪಡೆದ ಬೆನ್ ಸ್ಟೋಕ್ಸ್

ಬೆನ್ ಸ್ಟೋಕ್ಸ್​ಗೆ ಶಸ್ತ್ರಚಿಕಿತ್ಸೆ

ಪ್ರಸ್ತುತ ಮೊಣಕಾಲಿನ ಗಾಯದಿಂದ ಬಳಲುತ್ತಿರುವ ಬೆನ್ ಸ್ಟೋಕ್ಸ್ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂಬ ಸುದ್ದಿ ಕೂಡ ಕೇಳಿಬರುತ್ತಿದೆ. ಇತ್ತೀಚೆಗೆ ಏಕದಿನ ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ಪರ ಆಡಿದ ಸ್ಟೋಕ್ಸ್​ ವಿಶೇಷವಾದ ಪ್ರದರ್ಶನವನ್ನೇನೂ ನೀಡಲಿಲ್ಲ. ಇದೀಗ ಜನವರಿ 24ರಿಂದ ಆರಂಭವಾಗಲಿರುವ ಭಾರತ ವಿರುದ್ಧದ ಐದು ಟೆಸ್ಟ್‌ಗಳ ಸರಣಿಗೆ ಫಿಟ್ ಆಗಲು ಸ್ಟೋಕ್ಸ್ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ.

16.25 ಕೋಟಿ ಪಡೆದಿದ್ದ ಸ್ಟೋಕ್ಸ್

ಇನ್ನು ಐಪಿಎಲ್ ವಿಚಾರಕ್ಕೆ ಬರುವುದಾದರೆ, ಬೆನ್ ಸ್ಟೋಕ್ಸ್ ಅವರನ್ನು ಚೆನ್ನೈ ಫ್ರಾಂಚೈಸಿ ಕಳೆದ ಹರಾಜಿನಲ್ಲಿ 16.25 ಕೋಟಿ ರೂಪಾಯಿಗೆ ಖರೀದಿಸಿತ್ತು. ಆದರೆ ಸ್ಟೋಕ್ಸ್​ಗೆ ಪಡೆದ ಹಣಕ್ಕೆ ನ್ಯಾಯ ಒದಗಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಮುಂದಿನ ತಿಂಗಳು ಯುಎಇಯಲ್ಲಿ ನಡೆಯಲ್ಲಿರುವ ಕಿರು ಹರಾಜಿಗೂ ಮುನ್ನ ಸ್ಟೋಕ್ಸ್ ಅವರನ್ನು ತಂಡದಿಂದ ಕೈಬಿಡಲಾಗುತ್ತದೆ ಎಂಬ ಮಾತು ಕೂಡ ಕೇಳಿಬರುತ್ತಿದ್ದವು. ಇದೀಗ ಸ್ಟೋಕ್ಸ್ ಅವರೇ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.

ಬೆನ್ ಸ್ಟೋಕ್ಸ್ ಐಪಿಎಲ್ ವೃತ್ತಿಜೀವನ

ಬೆನ್ ಸ್ಟೋಕ್ಸ್ ಐಪಿಎಲ್‌ನಲ್ಲಿ ಇದುವರೆಗೆ 45 ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ 2 ಅರ್ಧ ಶತಕ ಮತ್ತು 2 ಶತಕ ಸೇರಿದಂತೆ 935 ರನ್ ಗಳಿಸಿದ್ದಾರೆ. ಹಾಗೆಯೇ 28 ವಿಕೆಟ್‌ಗಳನ್ನು ಪಡೆದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:27 pm, Thu, 23 November 23

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್