AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GT vs CSK, Qualifier 1: ಐಪಿಎಲ್​ನಲ್ಲಿಂದು ಮೊದಲ ಕ್ವಾಲಿಫೈಯರ್ ಪಂದ್ಯ: ಗುಜರಾತ್-ಚೆನ್ನೈ ನಡುವೆ ಹೈವೋಲ್ಟೇಜ್ ಕದನ

Gujarat vs Chennai: ಐಪಿಎಲ್​ನಲ್ಲಿಂದು ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದ್ದು ಗುಜರಾತ್ ಟೈಟಾನ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ಫೈನಲ್​ಗೆ ಲಗ್ಗೆಯಿಟ್ಟರೆ ಸೋತ ತಂಡ ಎಲಿಮಿನೇಟರ್​ನಲ್ಲಿ ಗೆದ್ದ ಟೀಮ್​ನೊಂದಿಗೆ ಸೆಣೆಸಾಡಲಿದೆ.

GT vs CSK, Qualifier 1: ಐಪಿಎಲ್​ನಲ್ಲಿಂದು ಮೊದಲ ಕ್ವಾಲಿಫೈಯರ್ ಪಂದ್ಯ: ಗುಜರಾತ್-ಚೆನ್ನೈ ನಡುವೆ ಹೈವೋಲ್ಟೇಜ್ ಕದನ
GT vs CSK
Vinay Bhat
|

Updated on: May 23, 2023 | 7:24 AM

Share

ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿ (IPL 2023) ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಲೀಗ್ ಹಂತದ ಎಲ್ಲ ಪಂದ್ಯಗಳು ಮುಕ್ತಾಯಗೊಂಡಿದ್ದು, ಗುಜರಾತ್, ಚೆನ್ನೈ, ಲಖನೌ ಮತ್ತು ಮುಂಬೈ ತಂಡಗಳು ಪ್ಲೇ ಆಫ್​ಗೆ ಕ್ವಾಲಿಫೈ ಆಗಿದೆ. ಇಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಮೊದಲ ಕ್ವಾಲಿಫೈಯರ್ (Qualifier 1) ಪಂದ್ಯ ನಡೆಯಲಿದ್ದು ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ಎಂಎಸ್ ಧೋನಿ ಅವರ ಚೆನ್ನೈ ಸೂಪರ್ ಕಿಂಗ್ಸ್ (GT vs CSK) ಅನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್​ಗೆ ಲಗ್ಗೆಯಿಟ್ಟರೆ ಸೋತ ತಂಡ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ಟೀಮ್​ನೊಂದಿಗೆ ಸೆಣೆಸಾಟ ನಡೆಸಲಿದೆ.

ಗುಜರಾತ್:

ಜಿಟಿ ತಂಡ ಇಡೀ ಟೂರ್ನಿಯಲ್ಲಿ ಭರ್ಜರಿ ಆಟ ಪ್ರದರ್ಶಿಸುತ್ತಾ ಬಂದಿದೆ. ಆಡಿದ 14 ಪಂದ್ಯಗಳ ಪೈಕಿ ಸೋತಿರುವುದು ಕೇವಲ ನಾಲ್ಕು ಪಂದ್ಯ ಮಾತ್ರ. ಹಾರ್ದಿಕ್ ಪಡೆ ಹಿಂದಿನ ಪಂದ್ಯದಲ್ಲಿ ಆರ್​ಸಿಬಿಯನ್ನು ಸೋಲಿಸಿ ಟೂರ್ನಿಯಿಂದ ಹೊರದಬ್ಬಿತ್ತು. ಬ್ಯಾಟಿಂಗ್- ಬೌಲಿಂಗ್ ಎರಡೂ ವಿಭಾಗಗಳಲ್ಲಿ ಬಲಿಷ್ಠವಾಗಿದೆ. ವೃದ್ದಿಮಾನ್ ಸಾಹ ಹಾಗೂ ಶುಭ್​ಮನ್ ಗಿಲ್ ಸ್ಫೋಟಕ ಆರಂಭ ಒದಗಿಸಿದ್ದಾರೆ. ಗಿಲ್ ಅಂತೂ ಬೊಂಬಾಟ್ ಫಾರ್ಮ್​ನಲ್ಲಿದ್ದು ಹಿಂದಿನ ಮ್ಯಾಚ್​ನಲ್ಲಿ ಶತಕ ಸಿಡಿಸಿ ಅಬ್ಬರಿಸಿದ್ದರು. ನಾಯಕ ಹಾರ್ದಿಕ್ ಪಾಂಡ್ಯ, ಡೇವಿಡ್ ಮಿಲ್ಲರ್, ವಿಜಯ್ ಶಂಕರ್ ಹಾಗೂ ರಾಹುಲ್ ತೇವಾಟಿಯ ಮಧ್ಯಮ ಕ್ರಮಾಂಕದಲ್ಲಿ ಉತ್ತಮ ಕೊಡುಗೆ ನೀಡುತ್ತಿದ್ದಾರೆ. ಪಾಂಡ್ಯ ಜೊತೆ ರಶೀದ್ ಖಾನ್ ಆಲ್ರೌಂಡರ್ ಆಗಿ ಕಾಣಿಸಿಕೊಂಡಿದ್ದಾರೆ. ಮೊಹಮ್ಮದ್ ಶಮಿ, ಮೋಹಿತ್ ಶರ್ಮಾ, ಜೋಶ್ವಾ ಲಿಟಲ್ ಹಾಗೂ ನೂರ್ ಅಹ್ಮದ್ ಮಾರಕವಾಗಿದ್ದಾರೆ.

IPL 2023, GT vs CSK Live Streaming: ಕ್ವಾಲಿಫೈಯರ್ 1 ಪಂದ್ಯ ಯಾವಾಗ ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ಪೂರ್ಣ ಮಾಹಿತಿ

ಇದನ್ನೂ ಓದಿ
Image
IPL 2023: ನಮ್ಮದು ಉತ್ತಮ ತಂಡವಾಗಿರಲಿಲ್ಲ: ಫಾಫ್ ಡುಪ್ಲೆಸಿಸ್ ಮನದಾಳದ ಮಾತು
Image
IPL 2023: RCB ಪರ ಒಂದೇ ಒಂದು ಪಂದ್ಯವಾಡದ 6 ಆಟಗಾರರು ಯಾರು ಗೊತ್ತಾ?
Image
IPL 2023: ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೃಷ್ಟಿಯಾಗಲ್ಲಿರುವ ಪ್ರಮುಖ 8 ದಾಖಲೆಗಳಿವು
Image
IPL 2023: RCB ಪರ 3 ವರ್ಷ ಬೆಂಚ್ ಕಾದ ಯುವ ಸ್ಪೋಟಕ ಬ್ಯಾಟರ್

ಚೆನ್ನೈ:

ಸಿಎಸ್​ಕೆ ತಂಡ ಕೂಡ ಬ್ಯಾಟಿಂಗ್- ಬೌಲಿಂಗ್ ಎರಡೂ ವಿಭಾಗಗಳಲ್ಲಿ ಬಲಿಷ್ಠವಾಗಿದೆ. ರುತುರಾಯ್ ಗಾಯಕ್ವಾಡ್, ಡೆವೋನ್ ಕಾನ್ವೆ ಭರ್ಜರಿ ಫಾರ್ಮ್​ನಲ್ಲಿದ್ದು ಅತ್ಯುತ್ತಮ ಆರಂಭ ಒದಗಿಸುತ್ತಿದ್ದಾರೆ. ಅಜಿಂಕ್ಯಾ ರಹಾನೆ ಕೂಡ ಸ್ಫೋಟಕ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಶಿವಂ ದುಬೆ ಪ್ರತಿ ಪಂದ್ಯದಲ್ಲಿ ಅಬ್ಬರಿಸುವ ಮೂಲಕ ಗಮನ ಸೆಳೆದಿದ್ದಾರೆ. ಅಂಬಟಿ ರಾಯುಡು ಹಾಗೂ ಮೊಯೀನ್ ಅಲಿ ಕಡೆಯಿಂದ ನಿರೀಕ್ಷೆಗೆ ತಕ್ಕ ಆಟ ಬರುತ್ತಿಲ್ಲ. ಧೋನಿ ಹಾಗೂ ಜಡೇಜಾ ಫಿನಿಶಿಂಗ್ ಜವಾಬ್ದಾರಿ ಹೊತ್ತಿದ್ದಾರೆ. ಬೌಲಿಂಗ್​ನಲ್ಲಿ ಸಿಎಸ್​ಕೆ ಪರ ತುಶಾರ್ ದೇಶ್​ಪಾಂಡೆ, ಮಹೀಶಾ ತೀಕ್ಷಣ, ಮತೀಶಾ ಪತಿರಾನ, ಆಕಾಶ್ ಸಿಂಗ್ ಇದ್ದು ಜಡೇಜಾ, ಅಲಿ ಸಾಥ್ ನೀಡುತ್ತಿದ್ದಾರೆ.

ಗುಜರಾತ್ ಟೈಟಾನ್ಸ್: ವೃದ್ಧಿಮಾನ್ ಸಹಾ, ಶುಭ್​ಮನ್ ಗಿಲ್, ಹಾರ್ದಿಕ್ ಪಾಂಡ್ಯ (ನಾಯಕ), ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತೇವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ನೂರ್ ಅಹ್ಮದ್, ಜೋಶ್ವಾ ಲಿಟಲ್, ಮೋಹಿತ್ ಶರ್ಮಾ, ಸಾಯಿ ಸುದರ್ಶನ್, ಶ್ರೀಕರ್ ಭರತ್, ಶಿವಂ ಮಾವಿ, ರವಿಶ್ರೀನಿವಾಸನ್ ಸಾಯಿ ಕಿಶೋರ್, ಜಯಂತ್ ಯಾದವ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಪ್ರದೀಪ್ ಸಾಂಗ್ವಾನ್, ಮ್ಯಾಥ್ಯೂ ವೇಡ್, ದಾಸುನ್ ಶಾನಕ, ಓಡನ್ ಸ್ಮಿತ್, ದರ್ಶನ್ ನಲ್ಕಂಡೆ, ಉರ್ವಿಲ್ ಪಟೇಲ್.

ಚೆನ್ನೈ ಸೂಪರ್ ಕಿಂಗ್ಸ್: ಡೆವೊನ್ ಕಾನ್ವೇ, ರುತುರಾಜ್ ಗಾಯಕ್ವಾಡ್, ಅಜಿಂಕ್ಯ ರಹಾನೆ, ಶಿವಂ ದುಬೆ, ಅಂಬಟಿ ರಾಯುಡು, ಮೊಯೀನ್ ಅಲಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ), ಮಹೀಶ್ ತೀಕ್ಷಣ, ತುಷಾರ್ ದೇಶಪಾಂಡೆ, ಮತೀಶ ಪತಿರಾನ, ಆಕಾಶ್ ಸಿಂಗ್, ಡ್ವೈನ್ ಪ್ರಿಟೋರಿಯಸ್, ಸುಭ್ರಾಂಶು ಸೇನಾಪತಿ, ಶೇಕ್ ರಶೀದ್, ಆರ್ ಎಸ್ ಹಂಗರ್ಗೇಕರ್, ಮಿಚೆಲ್ ಸ್ಯಾಂಟ್ನರ್, ಬೆನ್ ಸ್ಟೋಕ್ಸ್, ಅಜಯ್ ಜಾದವ್ ಮಂಡಲ್, ಪ್ರಶಾಂತ್ ಸೋಲಂಕಿ, ಸಿಮರ್ಜೀತ್ ಸಿಂಗ್, ದೀಪಕ್ ಚಾಹರ್, ಭಗತ್ ವರ್ಮಾ, ನಿಶಾಂತ್ ಸಿಂಧು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ